Sunday, May 16, 2021

ಖ್ಯಾತ ಬಹುಭಾಷಾ ನಟಿ ಮಾಲಾಶ್ರೀ ಪತಿ ನಿರ್ಮಾಪಕ ರಾಮು ಕೋವಿಡ್ ಸೋಂಕಿಗೆ ಬಲಿ..!

ಬೆಂಗಳೂರು: ಖ್ಯಾತ ಚಲನ ಚಿತ್ರ ನಟಿ ಮಾಲಾಶ್ರೀ ಪತಿ ರಾಮು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಒಂದು ವಾರದ ಹಿಂದೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ರಾಮು ಅವರಿಗೆ ಮನೆಯಲ್ಲೇ ಐಸೋಲೇಶನ್ ಮಾಡಲಾಗಿತ್ತು.

ಆದರೆ ಮೂರು ದಿನಗಳ ಹಿಂದೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ರಾಮು ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ರಾಮು ಸಾವನ್ನಪ್ಪಿದ್ದಾರೆಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.ನಿರ್ಮಾಪಕ ರಾಮು ಅವರು ಕೋಟ್ಯಾಂತರ ರೂಪಾಯಿ ಬಜೆಟ್ಟಿನ ಚಿತ್ರಗಳನ್ನೇ ನಿರ್ಮಿಸುತ್ತಿದ್ದರು.

ಅವರ ಖ್ಯಾತ ಚಿತ್ರಗಳೆಂದರೆ ಲಾಕಪ್ ಡೆತ್, ಎಕೆ-47, ಕಲಾಸಿಪಾಳ್ಯ, ಸಿಬಿಐ ದುರ್ಗಾ ಹೀಗೆ ಬಹಳಷ್ಟು ಚಿತ್ರಗಳನ್ನು ನಿರ್ಮಿಸಿದ್ದ ರಾಮು ನಟಿ ಮಾಲಾಶ್ರೀಯನ್ನು ಮದುವೆಯಾದ ಬಳಿಕವೇ ರಾಮು ಪ್ರಸಿದ್ಧಿ ಪಡೆದಿದ್ದರು.

ನಿರ್ಮಾಪಕ ರಾಮು ಅವರು ಪತ್ನಿ ಮಾಲಾಶ್ರೀ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಪತಿ ಸಾರಥ್ಯದಲ್ಲಿ ಮಾಲಾಶ್ರೀ ಅವರು ಹಲವು ಚಿತ್ರಗಳನ್ನು ನಿರ್ಮಿಸಿದ್ದರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...