Monday, January 24, 2022

ರೈತರು ಸಮಗ್ರ ಕೃಷಿ ಮಾಡಿದರೆ ನಷ್ಟವಿಲ್ಲ: ಡಾ.ಪ್ರಸನ್ನ ಕುಮಾರ್‌ ಟಿ.ಜಿ

ಮಂಗಳೂರು: ವರ್ಷದಿಂದ ವರ್ಷಕ್ಕೆ ರೈತರ ಆದಾಯದಲ್ಲಿ ವ್ಯತ್ಯಾಸ ಕಾಣುತ್ತಿದೆ. ಆದ್ದರಿಂದ ರೈತರು ಸಮಗ್ರ ಕೃಷಿ ನಡೆಸಬೇಕು.

ಇದರಿಂದ ನಷ್ಟ ಇರುವುದಿಲ್ಲ ಎಂದು ದಕ್ಷಿಣ ಕನ್ನಡದ ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಪ್ರಸನ್ನ ಕುಮಾರ್‌ ಟಿ.ಜಿ ಅವರು ಹೇಳಿದ್ದಾರೆ.


ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೆನರಾ ಅಭಿವೃದ್ಧಿ ಮತ್ತು ಶಾಂತಿ ಸಂಸ್ಥೆ ಮಂಗಳೂರು ಇದರ ಸಹಯೋಗದೊಂದಿಗೆ ನಡೆದ ‘ಸಮಗ್ರ ಕೃಷಿ ಪದ್ದತಿಯಲ್ಲಿ ಜಾನುವಾರುಗಳ ಪಾತ್ರ ಮತ್ತು ರೈತರ ಆದಾಯ ದ್ವಿಗುಣಗೊಳಿಸುವುದರ ಬಗ್ಗೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,

ಭಾರತ ಕೃಷಿಪ್ರಧಾನ ರಾಷ್ಟ್ರದಲ್ಲಿ 60 ರಿಂದ 70 ಶೇಕಡಾ ರೈತರು ಕೃಷಿ ಆದಾಯ ಪಡೆಯುತ್ತಿದ್ದಾರೆ. ಆದರೆ ಇತ್ತೀಚಿನ ವರ್ಷದಲ್ಲಿ ಆದಾಯ ಹೆಚ್ಚು ಕಡಿಮೆಯಾಗುತ್ತಿದೆ.

ಆದ್ದರಿಂದ ರೈತರು ಸಮಗ್ರ ಕೃಷಿ ನಡೆಸಬೇಕು. ಸಮಗ್ರ ಕೃಷಿ ಎಂದರೆ ಹಲವು ಕೃಷಿಯನ್ನು ಒಂದೇ ಪ್ರದೇಶದಲ್ಲಿ ಮಾಡುವುದು.

ಉದಾಹರಣೆಗೆ ಹಂದಿ, ಕೋಳಿ, ಆಡು ಸಾಕಣಿಕೆ ಜೊತೆ ಹುಲ್ಲು ಕೃಷಿ ಮಾಡುವುದು ಆಗಿದೆ. ಇದರಿಂದ ನಷ್ಟ ಇರುವುದಿಲ್ಲ. ಜೊತೆಗೆ ವರ್ಷದಿಂದ ವರ್ಷಕ್ಕೆ ಆದಾಯ ಹೆಚ್ಚಾಗುತ್ತದೆ.

ಪೌಷ್ಟಿಕ ಆಹಾರ ಸಿಗುತ್ತದೆ. ಉದ್ಯೋಗ ಸೃಷ್ಠಿಯಾಗುತ್ತದೆ ಎಂದರು.

ಕೆ.ವಿ.ಕೆ ದ.ಕ ಇದರ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರಾದ ಡಾ.ಟಿ.ಜೆ ರಮೇಶ ಅಧ್ಯಕ್ಷತೆ ವಹಿಸಿದ್ದರು. ಸಿಓಡಿಪಿ ಸಂಸ್ಥೆಯ ಲಿನೆಟ್‌, ಡಾ.ಶಿವಕುಮಾರ ಆರ್‌, ಡಾ. ಚೇತನ್‌ ಎನ್‌ ಇದ್ದರು.

Hot Topics

ನೇತಾಜಿ ಸುಭಾಸ್ ಚಂದ್ರ ಬೋಸ್ ಜನ್ಮ ದಿನದ ಪ್ರಯುಕ್ತ ರಕ್ತದಾನ ಶಿಬಿರ

ಮಂಗಳೂರು: ಸ್ವಾತಂತ್ರ ಸೇನಾನಿ ನೇತಾಜಿ ಸುಭಾಸ್ ಚಂದ್ರ ಬೋಸ್ 125 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ಮತ್ತು ಬಿರುವೆರ್ ಕುಡ್ಲ(ರಿ) ನೇತೃತ್ವದಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ...

ಮಲಗಿದ್ದ ಅತ್ತೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಸೊಸೆ

ಚಿತ್ರದುರ್ಗ: ಅತ್ತೆ-ಸೊಸೆ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರೋ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ನಡೆದಿದೆ.ರುದ್ರಮ್ಮ(60) ಹತ್ಯೆಗೀಡಾದ ದುರ್ದೈವಿಯಾಗಿದ್ದು, ಆರೋಪಿ ಸೊಸೆ ಮುದ್ದಕ್ಕ (38)ಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ಅತ್ತೆ-ಸೊಸೆ ನಡುವೆ ಹೊಂದಾಣಿಕೆ...

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ ಕಾರ್ಯಕ್ರಮ ಸುರತ್ಕಲ್ ಗೋವಿಂದದಾದ ಕಾಲೇಜಿನಲ್ಲಿ ಜರಗಿತು‌. ಅಕಾಡಮಿಯ ಅಧ್ಯಕ್ಷ ಡಾ. ಜಿ.ಎಲ್.ಹೆಗಡೆ ಅಧ್ಯಕ್ಷತೆ ವಹಿಸಿದ್ದರು.ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ,ಶಾಸಕ ಡಾ.ವೈ.ಭರತ್...