Connect with us

    LATEST NEWS

    ಮುಂಬಯಿ: ಕೋವಿಡ್  ಆಸ್ಪತ್ರೆಯಲ್ಲಿ ಅಗ್ನಿ ದುರಂತ ತುರ್ತು ನಿಗಾ ಘಟಕದಲ್ಲಿದ್ದ 13 ಮಂದಿ ಸಜೀವ ದಹನ..!

    Published

    on

    ಮುಂಬಯಿ: ಮುಂಬೈನ ವಿರಾರ್‌ ವಿಜಯ ವಲ್ಲಭ್‌ ಕೋವಿಡ್‌ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವ ವಿಜಯ ವಲ್ಲಭ್ ಕೋವಿಡ್-19 ಆಸ್ಪತ್ರೆಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 13 ಮಂದಿ ಸಜೀವ ದಹನವಾಗಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾ ವಿಪತ್ತು ನಿಯಂತ್ರಣ ವಿಭಾಗದ ಮುಖ್ಯಸ್ಥ ವಿವೇಕಾನಂದ್ ಕದಂ ಅವರು, ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಅಗ್ನಿ ದುರಂತ ಸಂಭವಿಸಿದೆ. ಆಸ್ಪತ್ರೆಯ ಐಸಿಯು ಎಸಿ ಘಟಕದಲ್ಲಿ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿದೆ. ಈ ವೇಳೆ ಐಸಿಯುವಿನಲ್ಲಿ ಹಲವು ರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಎಂದು ಹೇಳಿದ್ದಾರೆ.ಆಸ್ಪತ್ರೆಯ ವೈದ್ಯ ದಿಲೀಪ್ ಶಾ ಎಂಬುವವರು ಪ್ರತಿಕ್ರಿಯೆ ನೀಡಿ, ಘಟನೆಯಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ, ಅಗ್ನಿ ಅವಘಡ ಸಂಭವಿಸುತ್ತಿದ್ದಂತೆಯೇ ಆಸ್ಪತ್ರೆಯಲ್ಲಿದ್ದ ಗಂಭೀರ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದವರು ಸೇರಿ ಒಟ್ಟು 21 ಮಂದಿ ರೋಗಿಗಳನ್ನು ಇತರೆ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

    ಈ ನಡುವೆ ದುರ್ಘಟನೆ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಪಾಲ್ಘರ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಹಲವು ರೋಗಿಗಳು ಸಾವನ್ನಪ್ಪಿದ್ದು, ಘಟನೆ ಅತ್ಯಂತ ಬೇಸರ ತರಿಸಿದೆ. ಮೃತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ.

    ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ. ಮುಂಬೈನ ವಿರಾರ್ ವಿಜಯ ವಲ್ಲಭ್ ಕೋವಿಡ್-19 ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡ ಘಟನೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಶುಕ್ರವಾರ ತನಿಖೆಗೆ ಆದೇಶಿಸಿದ್ದಾರೆ.

    ಮಹಾರಾಷ್ಟ್ರ ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದ್ದು, ವಿಜಯ ವಲ್ಲಭ್ ಕೋವಿಡ್-19 ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡ ಸಂಬಂಧ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ತನಿಖೆಗೆ ಆದೇಶಿಸಿದ್ದಾರೆಂದು ತಿಳಿಸಿದೆ.

    LATEST NEWS

    ಮತ್ತೆ ತಾಯಿ ಮಡಿಲು ಸೇರಿದ ಅಪಹರಣಕ್ಕೊಳಗಾಗಿದ್ದ ನವಜಾತ ಶಿಶು; ಇಬ್ಬರು ಕಳ್ಳಿಯರು ಅರೆಸ್ಟ್

    Published

    on

    ಮಂಗಳೂರು/ಕಲಬುರಗಿ : ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಅಪಹರಣಕ್ಕೊಳಗಾಗಿದ್ದ ನವಜಾತ ಶಿಶುವನ್ನು 36 ಗಂಟೆಗಳಲ್ಲಿ ರಕ್ಷಿಸಿ, ಮತ್ತೆ ತಾಯಿಯ ಮಡಿಲು ಸೇರಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಗುವನ್ನು ಅಪಹರಣ ಮಾಡಿದ್ದ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ. ಹೆಚ್.ನಸ್ರೀನ್ ಮತ್ತು ಫಾತೀಮಾ ಬಂಧಿತ ಆರೋಪಿಗಳು.

    ಸೋಮವಾರ(ನ.25)ಮುಂಜಾನೆ ಮಹಿಳೆಯರಿಬ್ಬರು ಜಿಮ್ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗದಲ್ಲಿ ನವಜಾತ ಶಿಶುವನ್ನು ಅಪಹರಿಸಿ ಪರಾರಿಯಾಗಿದ್ದರು. ಈ ಘಟನೆ ರಾಜ್ಯದ್ಯಂತ ಭಾರಿ ಸುದ್ದಿಯಾಗಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸುವ ಮೂಲಕ ಪೊಲೀಸರು ಕಳ್ಳಿಯರನ್ನು ಬಂಧಿಸಿದ್ದಾರೆ.

    ನರ್ಸ್ ವೇಷದಲ್ಲಿ ಬಂದಿದ್ದ ಕಳ್ಳಿಯರು :

    ಕಸ್ತೂರಿ ಎಂಬವರು ಸೋಮವಾರ ನಸುಕಿನ ಜಾವ 4 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ತಾಯಿ ಮಗು ಆರೋಗ್ಯವಾಗಿದ್ದರು. ಆದರೆ, ನರ್ಸ್ ವೇಷದಲ್ಲಿ ಬಂದ ಮಹಿಳೆಯರು, ರಕ್ತ ಪರೀಕ್ಷೆ ಮಾಡಬೇಕು, ಮಗುವನ್ನು ಕರೆ ತನ್ನಿ ಎಂದು ಹೇಳಿದ್ದಾರೆ. ಇದನ್ನು ನಂಬಿ ಕಸ್ತೂರಿ ಅವರ ಸಂಬಂಧಿ ರಕ್ತ ತಪಾಸಣೆಗಾಗಿ ಮಗುವಿನೊಂದಿಗೆ ಹೋಗಿದ್ದರು. ಈ ವೇಳೆ ಮಹಿಳೆಯರು ಮಗುವನ್ನು ನಮಗೆ ಕೊಡಿ ಎಂದಿದ್ದಾರೆ. ಅದರಂತೆ ಮಹಿಳೆ ಮಗುವನ್ನು ಅವರಿಗೆ ಕೊಟ್ಟಿದ್ದಾರೆ. ಮಗು ಪಡೆದ ಕಳ್ಳಿಯರು ಅಲ್ಲಿಂದ ಕಾಲ್ಕಿತ್ತಿದ್ದಾರೆ.

    ಇದನ್ನೂ ಓದಿ : ಬೆಚ್ಚಿ ಬೀಳಿಸಿದ ಯುವತಿ ಕೊ*ಲೆ ಪ್ರಕರಣ; ಪ್ರೇಯಸಿಯ ಶ*ವದೊಂದಿಗೆ ಒಂದು ದಿನ ಕಳೆದಿದ್ದ ಯುವಕ!
    ಈ ಬಗ್ಗೆ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ, ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    Continue Reading

    International news

    ನೀವು ಕೂಡ ಕ್ರಿಕೆಟ್ ಅಂಪೈರ್ ಆಗಬಹುದು; ಲಕ್ಷ ಲಕ್ಷ ಸಂಬಳ !

    Published

    on

    ಮಂಗಳೂರು : ಭಾರತದಲ್ಲಿ ಕ್ರಿಕೆಟ್ ಗೆ ಎಷ್ಟು ಕ್ರೇಜ್ ಇದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಬಾಲ್ಯದಲ್ಲಿ ಕ್ರಿಕೆಟ್ ಆಡುವ ಪ್ರತಿಯೊಬ್ಬರು ಕೂಡ ಭಾರತದ ಪರ ಆಡುವ ಕನಸನ್ನು ಕಾಣುತ್ತಾರೆ. ಆದರೆ ಎಲ್ಲರಿಗೂ ಇದು ಸಾಧ್ಯವಾಗುವುದಿಲ್ಲ. ಆದರೆ ನಿಮ್ಮ ಕನಸು ಈಡೇರದಿದ್ದರೂ ನೀವು ಅಂಪೈರ್ ಆಗುವ ಮೂಲಕ ನಿಮ್ಮ ಕನಸನ್ನು ಸಾಕಾರಗೊಳಿಸಬಹುದು.


    ಕೆಲವೇ ಕೆಲವು ಜನರಿಗೆ ಮಾತ್ರ ಅಂಪೈರ್ ಆಗುವುದು ಹೇಗೆಂದು ಗೊತ್ತಿದೆ. ಕ್ರಿಕೆಟ್ ಅಂಪೈರ್ ಆಗಲು ಕೆಲವೊಂದು ಪ್ರಕ್ರಿಯೆಗಳಿವೆ. ಕ್ರಿಕೆಟ್ ಕೌಶಲ್ಯವನ್ನು ಮಾತ್ರವಲ್ಲದೇ ದೈಹಿಕ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಕೂಡ ಮುಖ್ಯವಾಗಿರುತ್ತದೆ.

    ಅಂಪೈರ್ ಆಗಲು ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ ?
    ಸ್ಥಳೀಯ ಮಟ್ಟದಲ್ಲಿ ನಡೆಯುವ ಪಂದ್ಯಗಳಲ್ಲಿ ಅಂಪೈರಿಂಗ್ ಮಾಡಬೇಕು. ಆ ಮೂಲಕ ಅಂಪೈರಿಂಗ್ ಮಾಡುವ ಅನುಭವವನ್ನು ಪಡೆದುಕೊಳ್ಳಬೇಕು. ಇಲ್ಲಿ ಸಿಗುವ ಅನುಭವ ಅಂಪೈರ್ ವಿಭಾಗದಲ್ಲಿ ನಿಮ್ಮನ್ನು ಎತ್ತರ ಮಟ್ಟಕ್ಕೆ ಕೊಂಡೊಯ್ಯಲು ಸಹಾಯ ಮಾಡುತ್ತದೆ. ನಂತರ ಕ್ರಿಕೆಟ್ ಅಂಪೈರ್ ಆಗಲು ಬಯಸಿದ ಅಭ್ಯರ್ಥಿಗಳು ತಮಗೆ ಸಂಬಂಧಿತ ‘ರಾಜ್ಯ ಕ್ರಿಕೆಟ್ ಸಂಸ್ಥೆ’ಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಇದಕ್ಕಾಗಿ ಸ್ಥಳೀಯ ಪಂದ್ಯಗಳಲ್ಲಿ ಅನುಭವ ಪಡೆಯುವುದು ಮುಖ್ಯವಾಗಿದೆ.

    ಇದನ್ನೂ ಓದಿ: ತಂದೆ-ತಾಯಿಯನ್ನು ಕೂಡಿ ಹಾಕಿ ಮಗಳು ಪ್ರಿಯಕರನೊಂದಿಗೆ ಪರಾರಿ !!
    ನೀವು ರಾಜ್ಯ ಕ್ರಿಕೆಟ್ ಸಂಸ್ಥೆಯೊಂದಿಗೆ ನೀವು ಸಾಕಷ್ಟು ಅನುಭವ ಪಡೆದ ನಂತರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ನಡೆಸುವ ಹಂತ-1 ಪರೀಕ್ಷೆಗೆ ಹೆಸರನ್ನು ಕಳುಹಿಸಲಾಗುತ್ತದೆ. ನಂತರ ಮೂರು ದಿನಗಳ ಕಾಲ ಬಿಸಿಸಿಐ ತರಬೇತಿ ನೀಡುತ್ತದೆ. ನಾಲ್ಕನೇ ದಿನ ಲಿಖಿತ ಪರೀಕ್ಷೆ ನಡೆಸುತ್ತದೆ. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಬಿಸಿಸಿಐ ಶಾರ್ಟ್ ಲಿಸ್ಟ್ ಮಾಡುತ್ತದೆ.
    ಬಿಸಿಸಿಐ ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ವಿಶೇಷ ತರಬೇತಿಗೆ ಕರೆಯುತ್ತದೆ. ಅಲ್ಲಿ ಆಟದ ನಿಯಮಗಳು ಮತ್ತು ಇತರೆ ಪ್ರಮುಖ ವಿಷಯಗಳ ಬಗ್ಗೆ ತರಬೇತಿ ನೀಡುತ್ತದೆ. ನಂತರ ಅಭ್ಯರ್ಥಿಗಳು ಪ್ರಾಯೋಗಿಕ ಹಾಗೂ ಮೌಖಿಕ ಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ. ಈ ಎಲ್ಲಾ ಹಂತದ ಪರೀಕ್ಷೆಗಳಲ್ಲಿ ಯಶಸ್ವಿಯಾದರೆ ಮಾತ್ರ ಹಂತ-2 ಪರೀಕ್ಷೆಗೆ ಅರ್ಹರಾಗುತ್ತೀರಿ.

    ಎರಡನೇ ಹಂತದ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ವೈದ್ಯಕೀಯ ಪರೀಕ್ಷೆ ನಡೆಸುತ್ತದೆ. ಇದರಲ್ಲಿ ದೈಹಿಕ ಸಾಮರ್ಥ್ಯವನ್ನು ಪರಿಶೀಲಿಸಲಾಗುತ್ತದೆ. ಎಲ್ಲಾ ಹಂತಗಳನ್ನು ಯಶಸ್ವಿಯಾಗಿ ಮುಗಿಸಿದ ನಂತರ ಬಿಸಿಸಿಐ ನಿಮ್ಮನ್ನು ಅಂಪೈರ್ ಎಂದು ಪ್ರಕಟಿಸುತ್ತದೆ. ಈ ಎಲ್ಲಾ ಪ್ರಕ್ರಿಯೆಯನ್ನು ಅನುಸರಿಸುವ ಮೂಲಕ ನೀವು ಅರ್ಹ ಕ್ರಿಕೆಟ್ ಅಂಪೈರ್ ಆಗಬಹುದು. ವಿವಿಧ ಹಂತಗಳಲ್ಲಿ ಪಂದ್ಯಗಳನ್ನು ನಿರ್ವಹಿಸಬಹುದು.

    ಅಂಪೈರ್ ಗೆ ಸಿಗುವ ಸಂಬಳ ಎಷ್ಟು :
    ಅಂಪೈರ್ ಗಳ ವೇತನವು ಅವರ ದರ್ಜೆ, ಅನುಭವ ಮತ್ತು ಹಿರಿತನದ ಮೇಲೆ ಅವಲಂಬಿತವಾಗಿರುತ್ತದೆ. ಬಿಸಿಸಿಐನ ವರದಿಗಳ ಪ್ರಕಾರ ಎ+ ಮತ್ತು ಎ ಗ್ರೇಡ್ ಅಂಪೈರ್ ಗಳು ದೇಶಿಯ ಪಂದ್ಯಗಳಿಗೆ ದಿನಕ್ಕೆ 40,000 ರೂಪಾಯಿ ಪಡೆಯುತ್ತಾರೆ. ಬಿ ಮತ್ತು ಸಿ ದರ್ಜೆಯ ಅಂಪೈರ್ ಗಳಿಗೆ ದಿನಕ್ಕೆ 30,000 ರೂಪಾಯಿ ನೀಡಲಾಗುತ್ತದೆ.
    ಅಂಪೈರ್ ನ ದಾಖಲೆ ಉತ್ತಮವಾಗಿದ್ದರೆ ಅವರನ್ನು ಐಸಿಸಿ ಪ್ಯಾನಲ್ ಗೆ ಸೇರಿಸಬಹುದು. ಐಸಿಸಿಯು ಪ್ರತಿ ಪಂದ್ಯಕ್ಕೆ 1.50 ರಿಂದ 2.20 ಲಕ್ಷ ರೂಪಾಯಿ ನೀಡುತ್ತದೆ. ವಾರ್ಷಿಕವಾಗಿ 75 ಲಕ್ಷಕ್ಕಿಂತ ಹೆಚ್ಚಾಗಿರುತ್ತದೆ.
    ನಿಮಗೆ ಕ್ರಿಕೆಟ್ ನಲ್ಲಿ ಆಸಕ್ತಿ ಇದ್ದು, ಟೀಂ ಇಂಡಿಯಾದಲ್ಲಿ ಆಡಲು ಅವಕಾಶ ವಂಚಿತರಾದರೆ, ನಿಮಗೆ ಅಂಪೈರ್ ವೃತ್ತಿಯನ್ನು ಆಯ್ದುಕೊಳ್ಳಬಹುದು.

    Continue Reading

    LATEST NEWS

    ಸರಕಾರಿ ಕೆಲಸದ ಹುಡುಗನೇ ಬೇಕೆಂದು ಮಂಟಪದಲ್ಲೇ ವರನನ್ನು ತಿರಸ್ಕರಿಸಿದ ವಧು !!

    Published

    on

    ಮಂಗಳೂರು/ಉತ್ರರ ಪ್ರದೇಶ: ತಾವು ಮದುವೆಯಾಗುವ ಹುಡುಗ ಹ್ಯಾಂಡ್ಸಮ್‌ ಆಗಿರ್ಬೇಕು, ಉತ್ತಮ ಸಂಬಳವನ್ನು ಪಡೆಯುವ ಉದ್ಯೋಗದಲ್ಲಿರಬೇಕು ಎಂದು ಹೆಚ್ಚಿನ ಹುಡುಗಿಯರು ಬಯಸುತ್ತಾರೆ. ಇನ್ನೂ ಕೆಲವರು ಹುಡುಗ ಹೇಗಿದ್ದರೂ ಪರವಾಗಿಲ್ಲ ಆದರೆ ಅವನಿಗೆ ಸರ್ಕಾರಿ ಕೆಲಸ ಇದ್ರೆ ಸಾಕಪ್ಪಾ ಎನ್ನುತ್ತಾರೆ. ಅದೇ ರೀತಿಯ ಘಟನೆಯೊಂದು ಉತ್ರರ ಪ್ರದೇಶದ ಫರೂಕಾಬಾದ್‌ನಲ್ಲಿ ನಡೆದಿದೆ.

    ಯುವತಿಯೊಬ್ಬಳು ತನಗೆ ಸರ್ಕಾರಿ ಕೆಲಸದಲ್ಲಿರುವ ಗಂಡನೇ ಬೇಕೆಂದು ಮದುವೆ ಮಂಟಪದಲ್ಲಿಯೇ ಖಾಸಗಿ ಕಂಪೆನಿಯಲ್ಲಿ ತಿಂಗಳಿಗೆ 1.2 ಲಕ್ಷ ಸಂಬಳ ಗಳಿಸುವ ವರನನ್ನು ತಿರಸ್ಕರಿಸಿ, ಆಗಬೇಕಿದ್ದ ಮದುವೆಯನ್ನೇ ಮುರಿದಿದ್ದಾಳೆ. ಸಂಪ್ರದಾಯಬದ್ಧವಾಗಿ ವರ ಮಾಲೆಯನ್ನು ವಿನಿಯಮ ಮಾಡಿಕೊಂಡ ಬಳಿಕ ವರ ಸರ್ಕಾರಿ ಕೆಲಸದಲ್ಲಿಲ್ಲ ಎಂಬ ವಿಚಾರ ತಿಳಿದು ವಧು ಮದುವೆಯಾಗುವುದಿಲ್ಲ ಎಂದಿದ್ದಾಳೆ.

    ಬ್ರೋಕರ್ ಮಾತು ನಂಬಿದ್ದ ಯುವತಿ :

    ವರದಿಗಳ ಪ್ರಕಾರ, ವಧುವಿನ ಕುಟುಂಬವು ಛತ್ತೀಸ್‌ಗಢದ ಬಲರಾಮ್‌ಪುರದ ಹುಡುಗನೊಂದಿಗೆ ಮದುವೆಯನ್ನು ಏರ್ಪಡಿಸಿದ್ದರು. ಮದುವೆ ಬ್ರೋಕರ್‌ ‘ಹುಡುಗ ಸರ್ಕಾರಿ ಇಂಜಿನಿಯರ್‌, ಆತನ ಹೆಸರಲ್ಲಿ ಆರು ನಿವೇಶನಗಳಿವೆ ಜೊತೆಗೆ ಕೃಷಿ ಭೂಮಿಯೂ ಕೂಡಾ ಇದೆ’ ಎಂದು ಹೇಳಿ ಮದುವೆಗೆ ಒಪ್ಪಿಸಿದ್ದರು. ವಾಸ್ತವದಲ್ಲಿ ಹುಡುಗನ ಕುಟುಂಬ ಕನೌಜ್‌ನ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಜೊತೆಗೆ ವರನಿಗೆ ಯಾವುದೇ ಸರ್ಕಾರಿ ಕೆಲಸ ಕೂಡಾ ಇರಲಿಲ್ಲ ಬದಲಾಗಿ ಆತ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸದಲ್ಲಿದ್ದ.

    ಮಂಟಪದಲ್ಲೇ ಮುರಿದು ಬಿದ್ದ ಮದುವೆ :

    ಮದುವೆಯ ದಿನ ವರ ಮಾಲೆಯನ್ನು ವಿನಿಮಯ ಮಾಡಿಕೊಂಡ ಬಳಿಕ ವಧುವಿಗೆ ಈ ಸತ್ಯ ತಿಳಿದಿದ್ದು, ‘ನನಗೆ ಈ ಹುಡುಗ ಬೇಡ’ ಎಂದು ಮದುವೆಯನ್ನು ನಿರಾಕರಿಸಿದ್ದಾಳೆ. ನಂತರ ಎರಡೂ ಕುಟುಂಬದವರು ವಧುವಿನ ಮನವೊಲಿಸಲು ಪ್ರಯತ್ನಿಸಿದರೂ ಆಕೆ ‘ನನಗೆ ಈತ ಬೇಡ್ವೇ ಬೇಡಾ’ ಎಂದು ಪಟ್ಟು ಹಿಡಿದಿದ್ದಾಳೆ. ಅಷ್ಟೇ ಅಲ್ಲದೆ ವರ ತನ್ನ ಸ್ಯಾಲರಿ ಸ್ಲಿಪ್‌ ತೋರಿಸಿ ‘ನೋಡು. ನನಗೆ ಸರ್ಕಾರಿ ಕೆಲಸ ಇಲ್ಲಂದ್ರೆ ಏನಂತೆ ನಾನು ತಿಂಗಳಿಗೆ 1.2 ಲಕ್ಷ ಸಂಪಾದನೆ ಮಾಡುತ್ತೇನೆ’ ಎಂದು ಹೇಳಿದ್ದಾನೆ. ಇವರ ಯಾವ ಮಾತಿಗೂ ಬಗ್ಗದ ವಧು ‘ನಾನು ಮದುವೆಯಾದ್ರೆ ಸರ್ಕಾರಿ ಕೆಲಸದ ಹುಡುಗನನ್ನೇ’ ಎಂದು ಹೇಳಿದ್ದಾಳೆ.

    ಬಳಿಕ ಎರಡೂ ಕುಟುಂಬದವರು ಮಾತುಕತೆ ನಡೆಸಿ ಮದುವೆಗಾದ ಖರ್ಚನ್ನು ಸಮಪಾಲು ಮಾಡೋಣ ಎಂಬ ಒಪ್ಪಂದಕ್ಕೆ ಬಂದು ಮದುವೆಯನ್ನು ನಿಲ್ಲಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಪೊಲೀಸ್‌ ದೂರು ದಾಖಲಾಗಿಲ್ಲ.

    Continue Reading

    LATEST NEWS

    Trending