Tuesday, October 19, 2021

ರೈತರ ಮೇಲೆ ದಾಳಿ ಖಂಡಿಸಿ ಇಂದು ಮಹಾರಾಷ್ಟ್ರ ಬಂದ್​: ಒತ್ತಾಯಪೂರ್ವಕ ಅಂಗಡಿ ಬಂದ್‌ ಮಾಡಿಸದಂತೆ ಶಿವಸೇನೆಗೆ ಬಿಜೆಪಿ ಎಚ್ಚರಿಕೆ

ಮುಂಬೈ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ರೈತರ ಮೇಲೆ ನಡೆದ ಈ ದಾಳಿಯನ್ನು ವಿರೋಧಿಸಿ ಇಂದು ಮಹಾರಾಷ್ಟ್ರ ಬಂದ್​ಗೆ ಕರೆ ನೀಡಲಾಗಿದೆ.

ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ಇಂದು ಮಹಾರಾಷ್ಟ್ರದಲ್ಲಿ ಸಂಪೂರ್ಣ ಬಂದ್​ ಘೋಷಿಸಿದೆ.

ಇಲ್ಲಿನ ಅಂಗಡಿಗಳು, ಶಾಲಾ ಕಾಲೇಜುಗಳು ಬಂದ್ ಆಗಿದ್ದು, ಹಲವು ಸಂಘಟನೆಗಳು ಕೂಡ ಬಂದ್​ಗೆ ಬೆಂಬಲ ನೀಡಿವೆ.
ಮಹಾರಾಷ್ಟ್ರದ ಶಿವಸೇನೆ, ಕಾಂಗ್ರೆಸ್, ಎನ್​ಸಿಪಿಯನ್ನೊಳಗೊಂಡ ಮಹಾ ವಿಕಾಸ್ ಅಘಾಡಿ ಸರ್ಕಾರ ಬಂದ್​ಗೆ ಕರೆ ನೀಡಿದ್ದು, ಅಗತ್ಯ ಸೇವೆಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ.

ಮೆಡಿಕಲ್ ಶಾಪ್, ಹಾಲಿನ ಅಂಗಡಿ ಸೇರಿ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅಂಗಡಿ, ಮಾರುಕಟ್ಟೆಯನ್ನು ಮುಚ್ಚಲಾಗಿದೆ.

ಬಂದ್​ನಿಂದ ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಸರ್ಕಾರದಿಂದ 500 ಗೃಹ ರಕ್ಷಕ ದಳ, 3 ಎಸ್​ಆರ್​ಪಿಎಫ್ ತಂಡ ಮತ್ತು 700 ಇತರೆ ಪಡೆಗಳನ್ನು ನಿಯೋಜನೆ ಮಾಡಲಾಗಿದೆ. ಕೆಲವೇ ಕೆಲವು ರೈಲುಗಳು ಮಾತ್ರ ಸಂಚರಿಸುತ್ತಿವೆ.

ಮಹಾರಾಷ್ಟ್ರದ 2000ಕ್ಕೂ ಹೆಚ್ಚು ಹಣ್ಣು, ತರಕಾರಿ, ಹೂವು ಮಾರಾಟಗಾರರು ಬಂದ್​ಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಒತ್ತಾಯಪೂರ್ವಕವಾಗಿ ಅಂಗಡಿಗಳನ್ನು ಬಂದ್ ಮಾಡಿಸಬಾರದು ಎಂದು ಶಿವಸೇನೆ ಸರ್ಕಾರಕ್ಕೆ ಬಿಜೆಪಿ ಎಚ್ಚರಿಕೆ ನೀಡಿದೆ.

ಒಂದುವೇಳೆ ಒತ್ತಾಯದಿಂದ ಅಂಗಡಿಗಳನ್ನು ಮುಚ್ಚಿಸಿದರೆ ಬಿಜೆಪಿ ಕಾರ್ಯಕರ್ತರು ಸುಮ್ಮನಿರುವುದಿಲ್ಲ ಎಂದು ಬಿಜೆಪಿ ಶಾಸಕ ನಿತೇಶ್ ರಾಣೆ ಟ್ವೀಟ್​ನಲ್ಲಿ ಎಚ್ಚರಿಕೆ ನೀಡಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...