LATEST NEWS
Mumbai: ಚೀನಾ ಪ್ರಜೆಯನ್ನು ರಕ್ಷಣೆ ಮಾಡಿದ ಭಾರತೀಯ ಕೋಸ್ಟ್ ಗಾರ್ಡ್..!
ಭಾರತೀಯ ಕೋಸ್ಟ್ ಗಾರ್ಡ್ ಅಧಿಕಾರಿಗಳು ಅತ್ಯಂತ ಸಾಹಸಮಯ ರಕ್ಷಣಾ ಕಾರ್ಯಾಚರಣೆಯಲ್ಲಿ ಅರಬ್ಬಿ ಸಮುದ್ರದಲ್ಲಿ ಪನಾಮಾ ಧ್ವಜ ಹೊಂದಿದ್ದ ಸಂಶೋಧನಾ ಹಡಗಿನಿಂದ ತುರ್ತು ವೈದ್ಯಕೀಯ ನೆರವಿನ ಅಗತ್ಯವಿದ್ದ ಚೀನಾದ ಪ್ರಜೆಯನ್ನು ರಕ್ಷಿಸಿದ್ದಾರೆ.
ಮುಂಬೈ: ಭಾರತೀಯ ಕೋಸ್ಟ್ ಗಾರ್ಡ್ ಅಧಿಕಾರಿಗಳು ಅತ್ಯಂತ ಸಾಹಸಮಯ ರಕ್ಷಣಾ ಕಾರ್ಯಾಚರಣೆಯಲ್ಲಿ ಅರಬ್ಬಿ ಸಮುದ್ರದಲ್ಲಿ ಪನಾಮಾ ಧ್ವಜ ಹೊಂದಿದ್ದ ಸಂಶೋಧನಾ ಹಡಗಿನಿಂದ ತುರ್ತು ವೈದ್ಯಕೀಯ ನೆರವಿನ ಅಗತ್ಯವಿದ್ದ ಚೀನಾದ ಪ್ರಜೆಯನ್ನು ರಕ್ಷಿಸಿದ್ದಾರೆ.
ಆಗಸ್ಟ್ 16-17ರಂದು ಮುಂಬಯಿನಿಂದ ಸುಮಾರು 200 ಕಿಲೋ ಮೀಟರ್ ದೂರದಲ್ಲಿ ಅರಬ್ಬಿ ಸಮುದ್ರದಲ್ಲಿ ಪನಾಮಾ ಧ್ವಜದ ಸಂಶೋಧನಾ ಹಡಗಿನಲ್ಲಿದ್ದ ಚೀನಾ ಪ್ರಜೆ ಯಿನ್ ವೈಗ್ಯಾಂಗ್ ಅವರಿಗೆ ಎದೆ ನೋವು ಹಾಗೂ ಹೃದಯಾಘಾತದ ಲಕ್ಷಣ ಕಾಣಿಸಿಕೊಂಡಿತ್ತು.
ಅವರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯತೆ ಇದೆ ಎಂದು ಮುಂಬಯಿನ ಸಮುದ್ರ ರಕ್ಷಣಾ ಸಮನ್ವಯ ಕೇಂದ್ರಕ್ಕೆ ಮಾಹಿತಿ ರವಾನಿಸಲಾಗಿತ್ತು.
ತುರ್ತಾಗಿ ಸ್ಪಂದಿಸಿದ ಮುಂಬಯಿನ ಕೋಸ್ಟ್ ಗಾರ್ಡ್ ಆಧಿಕಾರಿಗಳು ಸುಧಾರಿತ ಲಘು ಹೆಲಿಕಾಪ್ಟರ್- ಎಎಲ್ಎಚ್ ಮೂಲಕ ಚೀನಾ ಪ್ರಜೆಯನ್ನು ರಕ್ಷಿಸಿದ್ದಾರೆ.
ಈ ಸಂಬಂಧ ರಕ್ಷಣಾ ಕಾರ್ಯಾಚರಣೆಯ ವಿಡಿಯೊವನ್ನು ಭಾರತೀಯ ಕೋಸ್ಟ್ ಗಾರ್ಡ್ ಹಂಚಿಕೊಂಡಿದೆ.
ಕತ್ತಲು ಕವಿದ ವಾತಾವರಣ, ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲೂ ತುರ್ತು ವೈದ್ಯಕೀಯ ನೆರವಿಗಾಗಿ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿ ನಡೆಸಲಾಗಿದೆ ಎಂದು ಭಾರತೀಯ ಕೋಸ್ಟ್ ಗಾರ್ಡ್ ತಿಳಿಸಿದೆ.
DAKSHINA KANNADA
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆ
ಮಂಗಳೂರು: ಮಂಗಳೂರು ಸೊಬೆಸ್ಟಿಯನ್ ಹಾಲ್ ನಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ.
ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಉಪಾಧ್ಯಕ್ಷರಾಗಿ ರಮೇಶ್ ಕಲಾ ಶ್ರೀ ಮಂಗಳೂರು, ಜಯಕರ್ ಸುವರ್ಣ ಉಡುಪಿ, ಜೊತೆ ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಮುಲ್ಕಿ, ಹೆರಿಕ್ ಡಿಸೋಜ ಬ್ರಹ್ಮಾವರ, ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್ ಕಾಪು, ರಮೇಶ್ ಹೊಸಬೆಟ್ಟು ಸುರತ್ಕಲ್, ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಮೂಡಬಿದ್ರಿ, ಕ್ರೀಡಾ ಕಾರ್ಯದರ್ಶಿ ರಂಜಿತ್ ಕುಂದಾಪುರ, ಭಾರದ್ವಾಜ್ ಬೆಳ್ತಂಗಡಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ್ ಉಳ್ಳಾಲ ಮಾಧ್ಯಮ ಕಾರ್ಯದರ್ಶಿ ಹರೀಶ್ ರಾವ್ ಆಯ್ಕೆಯಾಗಿದ್ದಾರೆ.
ಈ ಚುನಾವಣಾ ಪ್ರಕ್ರಿಯೆಯನ್ನು ಎಸ್ ಕೆಪಿಎ ಯ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ್ ಅವರು ನಡೆಸಿಕೊಟ್ಟರು.
DAKSHINA KANNADA
ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನ-ಇಬ್ಬರು ಅರೆಸ್ಟ್..!
ಉಳ್ಳಾಲ: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಯನ್ನು ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಹೊರವಲಯದ ಉಳ್ಳಾಲ ಸಮೀಪದ ಸಿಗ್ರೌಂಡ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ತಿಕಟ್ಟೆ ಆಝಾದನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪುರ ದ ಸಮೀರ್ ಎಂಬವರನ್ನು ಬಂಧಿಸಲಾಗಿದೆ.
ಈ ಇಬ್ಬರು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ 14ಗ್ರಾಂ ಎಂಡಿಎಂಎ ಮಾರಾಟ ಮಾಡಲು ಯತ್ನಿಸುವ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಗಳನ್ನು ಬಂಧಿಸಿ, 14 ಗ್ರಾಂ ಎಂಡಿಎಂಎ ಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಳೆದ ಎರಡು ದಿನಗಳ ಹಿಂದಷ್ಟೇ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಬಳಿಯಿಂದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.
ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ, ಪಿಎಸ್ಐ ಶೀತಲ್ ಹಾಗೂ ಸಿಬ್ಬಂದಿಗಳಾದ ರಂಜಿತ್, ಅಕ್ಬರ್, ಅಶೋಕ್, ಮಂಜು, ವೆಂಕಟೇಶ್ ಭಾಗವಹಿಸಿದ್ದರು.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.
bangalore
‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿ ರಿಲೀಸ್ ಡೇಟ್ ಚೇಂಜ್…!
ರಕ್ಷಿತ್ ಶೆಟ್ಟಿ ನಟನೆಯ ಸಪ್ತ ಸಾಗರದಾಚೆ ಎಲ್ಲೋ ಸಿನೆಮಾದ ಸೈಡ್ ಬಿ ಅಕ್ಟೋಬರ್ 20ರ ಬದಲಿಗೆ ಅಕ್ಟೋಬರ್ 27ರಂದು ರಿಲೀಸ್ ಆಗಲಿದೆ.
ರಕ್ಷಿತ್ ಶೆಟ್ಟಿ ನಟಿಸಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತೆಲುಗಿನಲ್ಲೂ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದ್ದು ಚಿತ್ರತಂಡ ಮೊದಲೇ ಘೋಷಿಸಿದಂತೆ ಅಕ್ಟೋಬರ್ 20ಕ್ಕೆ ಬಿಡುಗಡೆ ಆಗಬೇಕಿತ್ತು.
ಆದ್ರೆ ಅಕ್ಟೋಬರ್ 20ಕ್ಕೆ ಸಪ್ತ ಸಾಗರದಾಚೆ ಸಿನೆಮಾ ರಿಲೀಸ್ ಆಗುತ್ತಿಲ್ಲ.
ಸೈಡ್ ಬಿ ಪಾರ್ಟ್ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದರು. ಭಾರೀ ಬಜೆಟ್ ಚಿತ್ರಗಳು, ಸ್ಟಾರ್ ನಟರ ಚಿತ್ರಗಳು, ಪರಭಾಷೆಯ ಚಿತ್ರಗಳ ಹಾವಳಿಯಿಂದಾಗಿ ಚಿತ್ರ ಬಿಡುಗಡೆಯ ದಿನಾಂಕ ಬದಲಾಗಿದೆ.
ಹೀಗಾಗಿ ಚಿತ್ರತಂಡ ಅಕ್ಟೋಬರ್ 27ಕ್ಕೆ ಪಾರ್ಟ್ ಬಿ ರಿಲೀಸ್ ಮಾಡುವ ಘೋಷಣೆಯನ್ನು ಮಾಡಿದೆ.
ಹೌದು ..ಅಕ್ಟೋಬರ್ 20ರ ಬದಲಿಗೆ ಅಕ್ಟೋಬರ್ 27ರಂದು ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ’ ರಿಲೀಸ್ ಆಗಲಿದೆ.
ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ತೆಲುಗು ನೆಲದಲ್ಲೂ ಸದ್ದು ಮಾಡಿದೆ. ಸ್ಯಾಂಡಲ್‌ವುಡ್‌ನಲ್ಲಿ ಕಮಾಲ್ ಮಾಡಿದ ಈ ಸಿನಿಮಾ, ಈಗ ತೆಲುಗಿನಲ್ಲೂ ಅತ್ಯುತ್ತಮ ಪ್ರತಿಕ್ರಿಯೆನ್ನು ಕಂಡಿದೆ.
ಹೇಮಂತ್ ನಿರ್ದೇಶಿಸಿದ ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದಾರೆ. ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದಾರೆ.
ಫೈನಲಿ ಜನ ಕಾತುರದಿಂದ ಕಾಯುತ್ತಿರುವ ಸಪ್ತ ಸಾಗರದಾಚೆ ಸಿನೆಮಾದ ಪಾರ್ಟ್ ಬಿ ಅಕ್ಟೋಬರ್ 27ರಂದು ಅದ್ದೂರಿಯಾಗಿ ಬಿಡುಗಡೆಗೆ ಸಿದ್ದವಾಗಿದೆ.
- bangalore6 days ago
ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?
- bengaluru5 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA5 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ
- DAKSHINA KANNADA4 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!