Connect with us

    DAKSHINA KANNADA

    300 ಕೋಟಿ ವಂಚನೆ..!ಮಥುರಾ ಕೃಷ್ಣ ದೇವಸ್ಥಾನದಲ್ಲಿದ್ದ ಆರೋಪಿಯ ಬಂಧನ..!

    Published

    on

    ಮಂಗಳೂರು/ಮುಂಬೈ : ಮಥುರಾ ಕೃಷ್ಣ ಗೋಪಾಲ ದೇವಸ್ಥಾನದ ವೃಂದಾವನದ ಮಹಾಂತ ಎಂದು ಜನರನ್ನು ವಂಚಿಸಿ 300 ಕೋಟಿ ರೂಪಾಯಿ ಪಂಗನಾಮ ಹಾಕಿದ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಮಥುರಾ ಪೊಲೀಸರ ಜೊತೆ ಜಂಟಿ ಕಾರ್ಯಾಚರಣೆಯಲ್ಲಿ ಮಂಹಾಂತನ ಸೋಗಿನಲ್ಲಿದ್ದ ಆರೋಪಿ ವಿಶ್ವನಾಥ ಶಿಂಧೆಯನ್ನು ಬಂಧಿಸಲಾಗಿದೆ.

    ಮಹಾರಾಷ್ಟ್ರದ ಬೀಡ್ ಜಿಲ್ಲೆಯ ನಿವಾಸಿಯಾಗಿದ್ದ ವಿಶ್ವನಾಥ ಶಿಂಧೆ, ಜಿಜಾವು ಮಾಸಾಹೇಬ್‌ ಮಲ್ಟಿ ಸ್ಟೇಟ್ ಬ್ಯಾಂಕ್‌ ನ ಠೇವಣಿದಾರರಿಗೆ 300 ಕೋಟಿ ವಂಚಿಸಿ ತಲೆಮರೆಸಿಕೊಂಡಿದ್ದ. ಈ ನಕಲಿ ಮಹಾಂತ ಶಿಂಧೆಗಾಗಿ ಅನೇಖ ದಿನದಿಂದ ಬೀಡ್ ಪೊಲೀಸರು ಹುಡುಕಾಟ ನಡೆಸಿದ್ದರು. ಈ ವೇಳೆ ಉತ್ತರ ಪ್ರದೇಶದ ಮಥುರಾ ಕೃಷ್ಣ ಗೋಪಾಲ ದೇವಸ್ಥಾನದಲ್ಲಿ ಇದ್ದಾನೆ ಎಂಬ ಸುಳಿವು ಸಿಕ್ಕಿತ್ತು. ಮಥುರಾದ ಶಿವಾಜಿನಗರ ಪೊಲೀಸರ ಸಹಾಯ ಪಡೆದ ಬೀಡ್ ಪೊಲೀಸರು ದೇವಸ್ಥಾನಕ್ಕೆ ದಾಳಿ ನಡೆಸಿದ್ದು ಈ ವೇಳೆ ಕೊಠಡಿಯೊಂದರಲ್ಲಿ ವಿಶ್ವನಾಥ ಶಿಂಧೆ ಅಡಗಿ ಕುಳಿತಿದ್ದ. ಆತ ಬಂಧನದ ಬಳಿಕ ಮಥುರಾ ನ್ಯಾಯಾಲಯಕ್ಕೆ ಹಾಜರು ಪಡಿಸಿ ಬಳಿಕ ಟ್ರಾನ್ಸಿಟ್ ವಾರೆಂಟ್ ಪಡೆದುಕೊಂಡು ಆರೋಪಿಯನ್ನು ಮುಂಬೈಗೆ ಕರೆತರಲಾಗಿದೆ. ಆರೋಪಿಯು ಈ ಹಿಂದೆ ಕೂಡಾ ಅಪರಾಧ ಪ್ರಕರಣದಲ್ಲಿ ಆರೋಪಿಯಾಗಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

    DAKSHINA KANNADA

    ಅಕ್ರಮ ಮರಳುಗಾರಿಕೆಯ ವಿರುದ್ಧ ಸಿಡಿದೆದ್ದ ಮಂಗಳೂರಿಗರು..! ಬೃಹತ್ ಪ್ರತಿಭಟನೆ..!

    Published

    on

    ಮಂಗಳೂರು :  ಅಕ್ರಮ ಮರಳು ದಂಧೆಯ ವಿರುದ್ಧ ಮಂಗಳೂರಿನ ಜನರ ಆಕ್ರೋಶ ಮುಗಿಲು ಮುಟ್ಟಿದೆ ಅನ್ನೋದಿಕ್ಕೆ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಸಾಕ್ಷಿಯಾಗಿದೆ. ಪಾವೂರು ಉಳಿಯ, ಉಳ್ಳಾಲ ಪೊಯ್ಯೆ ಮೊದಲಾದ ದ್ವೀಪ ಪ್ರದೇಶಗಳಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ವಿರುದ್ಧ ಜನರು ತಿರುಗಿ ಬಿದ್ದಿದ್ದಾರೆ.

    ಮರಳು ಮಾಫಿಯಾದಿಂದ ದ್ವೀಪಗಳು ನಾಶವಾಗುತ್ತಿದೆ ಅಂತ ಹಲವಾರು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಹಲವಾರು ಪ್ರತಿಭಟನೆಗಳನ್ನೂ ಕೂಡಾ ನಡೆಸಲಾಗಿತ್ತು. ಆದ್ರೆ ಇದ್ಯಾವುದಕ್ಕೂ ಜಗ್ಗದ ಅಕ್ರಮ ದಂಧೆಕೋರರು ಎಗ್ಗಿಲ್ಲದೆ ಅಕ್ರಮ ಮರಳುಗಾರಿಕೆ ನಡೆಸಿದ್ದರು. ಜಿಲ್ಲಾಡಳಿತ , ಗಣಿ ಇಲಾಖೆ ಕೂಡಾ ಇದಕ್ಕೂ ನಮಗೂ ಸಂಬಂಧವೇ ಇಲ್ಲ ಎಂಬ ರೀತಿ ವರ್ತಿಸಿತ್ತು. ಇದೀಗ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತಕ್ಕ ಪಾಠ ಕಲಿಸಲು ಜನರೇ ಮುಂದಾಗಿದ್ದು, ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಜನರು ಅಕ್ರಮ ಮರಳುಗಾರಿಕೆಯ ವಿರುದ್ಧ ಸಿಡಿದೆದ್ದಿದ್ದಾರೆ.

    ಈ ಹೋರಾಟ ಕೇವಲ ದ್ವೀಪ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರಿಸದೆ ಜಿಲ್ಲೆಯ ಎಲ್ಲೆಡೆ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ವಿರುದ್ಧದ ಹೋರಾಟವಾಗಿದೆ. ಜಿಲ್ಲಾಡಳಿತ, ಹಾಗೂ ಜಿಲ್ಲೆಯ ಎರಡೂ ಪ್ರಭಲ ರಾಜಕೀಯ ಪಕ್ಷಗಳು ಈ ಅಕ್ರಮದಲ್ಲಿ ಭಾಗಿಯಾದವರನ್ನು ರಕ್ಷಣೆ ಮಾಡಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಇನ್ನೂ ಅಕ್ರಮ ಮರಳುಗಾರಿಕೆ ನಡೆದಲ್ಲಿ ಪೊಲೀಸ್ ಠಾಣೆಯ ಮುಂಬಾಗದಲ್ಲಿ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನೂ ಪ್ರತಿಭಟನೆಯಲ್ಲಿ ನೀಡಲಾಗಿದೆ. ಮಂಗಳೂರು ಕ್ಯಾಥೋಲಿಕ್ ಸಭಾ, ಸಮಾನ ಮನಸ್ಕ ಸಂಘಟನೆ ಹಾಗೂ ಜಾತಿ, ಧರ್ಮ, ಪಕ್ಷಾತೀತ ನಿಲುವಿನ ಜನರ ಜೊತೆ ಸೇರಿ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು.

    Continue Reading

    DAKSHINA KANNADA

    ಬೈಕ್‌ಗಳ ನಡುವೆ ಭೀ*ಕರ ಅಪ*ಘಾತ; ಬಸ್ ಹರಿದು ಸವಾರ ಸಾ*ವು

    Published

    on

    ಮಂಗಳೂರು : ಕುಲಶೇಖರ ಸೇಕ್ರೇಡ್ ಹಾರ್ಟ್ ಶಾಲೆ ಬಳಿ ಇಂದು (ಸೆ.27) ಬೆಳಿಗ್ಗೆ ಭೀ*ಕರ ರಸ್ತೆ ಅಪ*ಘಾತ ಸಂಭವಿಸಿ, ಬೈಕ್ ಸವಾರ ಮೃತ*ಪಟ್ಟಿದ್ದಾನೆ. ಚಂದನ್ (20) ಮೃ*ತ ಬೈಕ್ ಸವಾರ.


    ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಚಂದನ್ ರಸ್ತೆಗೆ ಬಿದ್ದಿದ್ದಾನೆ. ಈ ವೇಳೆ ಬಸ್ಸೊಂದು ಆತನ ಮೇಲೆ ಹರಿದಿದೆ. ಪರಿಣಾಮ ಆತ ಸ್ಥಳದಲ್ಲೇ ಮೃ*ತಪಟ್ಟಿದ್ದಾನೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

    Continue Reading

    DAKSHINA KANNADA

    ಪಂಜುರ್ಲಿ ದೈವದ ವೇಷ ಧರಿಸಿ ಅಸಭ್ಯ ನೃತ್ಯ ಆರೋಪ: ಜೈ ತುಳುನಾಡು ಸಂಘಟನೆಯಿಂದ ದೂರು

    Published

    on

    ಇತ್ತೀಚೆಗೆ ಸಾರ್ವಜನಿಕವಾಗಿ ತುಳುನಾಡ ದೈವಗಳ ಅವಹೇಳನ ನಡೆಯುತ್ತಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

    ಕೆಲ ದಿನಗಳ ಹಿಂದೆ ಬೆಂಗಳೂರಿನ ಡ್ಯಾನ್ಸ್ ಅಕಾಡೆಮಿಯೊಂದರಲ್ಲಿ ಪಂಜುರ್ಲಿ ದೈವದ ವೇಷ ಹಾಕಿ ನರ್ತಿಸಿದ್ದೂ ಅಲ್ಲದೆ ಆಕ್ಷೇಪ ವ್ಯಕ್ತಪಡಿಸಿದ್ದ ಕರಾವಳಿ ಯುವಕರನ್ನ ಸಭಾಂಗಣದಿಂದ ಹೊರ ಹಾಕಲಾಗಿತ್ತು. ಇದಾದ ಬಳಿಕ ಗಣೇಶೋತ್ಸವದಲ್ಲೂ ಇಂತಹದೇ ಘಟನೆ ಮರುಕಳಿಸಿತ್ತು. ಮತ್ತಿಕೆರೆ ಯಲ್ಲಮ್ಮ ದೇವಸ್ಥಾನದ ಅರ್ಚಕ ವೆಂಕಟೇಶ್ ಎಂಬವರು ದೈವದ ವೇಷ ಧರಿಸಿ ಅಸಭ್ಯವಾಗಿ ನೃತ್ಯ ಮಾಡಿದ್ದರು. ಇದಕ್ಕೂ ಕೂಡಾ ಸ್ಥಳೀಯವಾಗಿದ್ದ ಕರಾವಳಿಯ ಯುವಕರ ವಿರೋಧ ವ್ಯಕ್ತಪಡಿಸಿದ್ದರು.

    ಇದೀಗ ಜೈ ತುಳುನಾಡು ಎಂಬ ಸಂಘಟನೆ ಯಶವಂತರ ಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದೆ. ಮತ್ತಿಕೆರೆ ಯಲ್ಲಮ್ಮ ದೇವಸ್ಥಾನದ ಅರ್ಚಕರು ಉದ್ದೇಶ ಪೂರ್ವಕವಾಗಿ ತುಳುನಾಡ ದೈವಗಳಿಗೆ ಅಪಚಾರ ಮಾಡಿದ್ದು, ದೈವಾರಾಧಕರಾದ ನಮ್ಮ ಭಾವನೆಗೆ ದಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇನ್ನು ಮುಂದೆ ಇಂತಹ ದೈವದ ಅವಹೇಳನ ಪುನಾರಾವರ್ತನೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

    Continue Reading

    LATEST NEWS

    Trending