ಮಂಗಳೂರು:ಕಳೆದ 5 ದಶಕಗಳಿಂದ ಸಾಹಿತ್ಯ ಮತ್ತು ಬರಹ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆಗೈದ ಮುಮ್ತಾಜ್ ಬೇಗಂ ಅನಾರೋಗ್ಯದಿಂದಾಗಿ ಇಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಅವರಿಗೆ 73 ವರ್ಷ ವಯಸ್ಸಾಗಿತ್ತು. ಮೂಲತಃ ಬೆಳಪು ಮಿಲಿಟರಿ ಕಾಲೋನಿ ನಿವಾಸಿಯಾಗಿರುವ ಮುಮ್ತಾಝ್ ಪ್ರಸ್ತುತ ಗುಜರಾತ್ ನಲ್ಲಿ ವೈದ್ಯೆಯಾಗಿರುವ ಮಗಳ ಜೊತೆಗಿದ್ದರು.
300ಕ್ಕೂ ಹೆಚ್ಚು ಸಣ್ಣಕಥೆಗಳನ್ನು ರಚಿಸಿರುವ ಹೆಗ್ಗಳಿಕೆ ಈಕೆಗಿದೆ ಅವರು ಬರೆದಿದ್ದ ಸೂರ್ಯಾಸ್ತ ಪುಸ್ತಕದ ಬಿಡುಗಡೆಗಾಗಿ ಕೆಲ ದಿನಗಳ ಹಿಂದೆ ಮಂಗಳೂರಿಗೆ ಆಗಮಿಸಿದ್ದರು.
ಈ ವೇಳೆ ಅವರು ಕೋವಿಡ್ ಪಾಸಿಟಿವ್ ಗೆ ಸಿಲುಕಿ ಆಸ್ಪತ್ರೆಗೆ ದಾಖಲಾಗಿದ್ರು. ಆದ್ರೆ ಇಂದು ಚಿಕಿತ್ಸೆ ಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.