Connect with us

LATEST NEWS

40 ಜನರೊಂದಿಗೆ ಬಿಜೆಪಿಗೆ ಬರಲು ಡಿಕೆಶಿ ಕಾಯುತ್ತಿದ್ದಾರೆ : ಸ್ಫೋಟಕ ಹೇಳಿಕೆ ನೀಡಿದ ಮುನಿರತ್ನ!

Published

on

ಬೆಂಗಳೂರು : ಡಿಕೆ ಶಿವ‌ಕುಮಾರ್‌ ಅವರು 40 ಶಾಸಕರ ಜೊತೆ ಬಿಜೆಪಿಗೆ ಬರಲು ಕಾಯುತ್ತಿದ್ದಾರೆ ಎಂದು ಆರ್‌ಆರ್‌ ನಗರದ ಬಿಜೆಪಿ ಶಾಸಕ ಮುನಿರತ್ನ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಈ ಮೂಲಕ ಬಿಜೆಪಿಯವರನ್ನು ಮುನಿರತ್ನ ಕಾಂಗ್ರೆಸ್‌ಗೆ ಕಳುಹಿಸುತ್ತಿದ್ದಾರೆ ಎಂಬ ಆರೋಪಕ್ಕೆ ಅವರು ಈ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.

ನಾನೇ ಬಿಜೆಪಿಯವರನ್ನು ಕಾಂಗ್ರೆಸ್‌ಗೆ ಕಳಿಸುತ್ತೇನೆ ಎಂದು ಹೇಳುತ್ತಿದ್ದಾರೆ. ಅದು ನನ್ನ ಗಮನಕ್ಕೆ ಬಂದಿದೆ. ಆದರೆ, ಡಿಕೆ ಶಿವಕುಮಾರ್‌ ಅವರೇ 40 ಶಾಸಕರ ಜೊತೆ ಬಿಜೆಪಿಗೆ ಬರಲು ತಯಾರಾಗಿ ಕಾಯುತ್ತಿದ್ದಾರೆ. ನಾವು ಬಾಗಿಲು ತೆಗೆದರೆ ಒಳಗೆ ಬಂದುಬಿಡ್ತಾರೆ. ಆದರೆ, ನಾವು ಬಾಗಿಲು ತೆಗೆಯುತ್ತಿಲ್ಲ. ನಾವು ನಮ್ಮವರನ್ನು ಕಾಂಗ್ರೆಸ್‌ಗೆ ಕಳುಹಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.

ಅಲ್ಲಿಯೇ ಇರಲಿ :

ಕಾಂಗ್ರೆಸ್‌ನಲ್ಲಿ 4 ಉಪ ಮುಖ್ಯಮಂತ್ರಿಗಳನ್ನು ಕೇಳುತ್ತಿದ್ದಾರೆ. ಅಲ್ಲಿರುವುದರ ಬದಲು ನಮ್ಮ ಜೊತೆ ಬರೋದು ತುಂಬಾ ಬೆಸ್ಟ್‌ ಎಂದು ಅವರು ತೀರ್ಮಾನಿಸಿದ್ದಾರೆ. ನಾವು ಬಾಗಿಲು ತೆರೆಯದೇ ಇರುವುದಕ್ಕೆ ಅವರು ಬರುತ್ತಿಲ್ಲ. ಸದ್ಯ ಅಲ್ಲಿಯೇ ಇರಲಿ ಎಂದಿದ್ದಾರೆ.

ಬಹಿರಂಗ ಚರ್ಚೆಗೆ ಬರಲಿ :
ಆರ್‌ಆರ್‌ ನಗರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿ ಒಳ ಹಾಕಿಸುವ ಪ್ರಯತ್ನ ನಡೆಯುತ್ತಿದೆ ಎಂಬುದಕ್ಕೆ ಅವರು ಪ್ರತಿಕ್ರಿಯೆ ನೀಡಿ ಮಾತನಾಡಿ, ಎಲ್ಲಿ ಕೇಸ್‌ ಹಾಕ್ಸಿದೀನಿ ಎಂದು ಹೇಳಲಿ, ಒಂದು ವೇದಿಕೆ ಸೃಷ್ಟಿಸಿ ಬಹಿರಂಗ ಚರ್ಚೆಗೆ ಬರಲಿ ಎಂದು ಹೇಳಿದರು.
ಕನಕಪುರದಲ್ಲಿ ಕೇಸ್‌ ಹಾಕಿಸುವುದು ಇವರಿಗೆ ರೂಢಿ, ನಮಗಲ್ಲ, ಕೇಸ್‌ಗಳನ್ನು ಹಾಕುವುದು, ಬೆದರಿಸುವುದು, ಅವರನ್ನು ಹಿಡಿತದಲ್ಲಿ ಇಟ್ಟುಕೊಳ್ಳುವುದು. ಅದು ಇವರಿಗೆ ಸೇರಿದ್ದು, ನಮ್ಮ ಕೆಲಸವಲ್ಲ ಎಂದು ಅವರು ಡಿಕೆ ಬ್ರದರ್ಸ್ ವಿರುದ್ಧ ಕಿಡಿಕಾರಿದ್ದಾರೆ.

DAKSHINA KANNADA

ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

Published

on

ನ್ಯೂಯಾರ್ಕ್‌ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್‌ಗಳನ್ನು ದಾಟಿ, ಹಂಪ್‌ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್‌ನ ಆನಂದ್ ಜಿಲ್ಲೆಯ ರೇಖಾಬೆನ್‌ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್‌ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.

 

ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.


ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್‌ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

Continue Reading

FILM

PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!

Published

on

ಬೆಂಗಳೂರು : ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ಧಾರಾವಾಹಿ ‘ಗೀತಾ’. ಈ ಧಾರಾವಾಹಿಯ ನಾಯಕ ‘ವಿಜಯ್’ ಅಂದ್ರೆ ಧನುಷ್ ಗೌಡ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ. ಅವರ ವಿವಾಹ ಶುಕ್ರವಾರ ಅದ್ದೂರಿಯಾಗಿ ನೆರವೇರಿತು.


ಧನುಷ್ ಗೌಡ ಅವರು ಸಂಜನಾ ಎಂಬವರ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ಸಂಜನಾ ಧನುಷ್ ಅತ್ತೆಯ ಮಗಳಾಗಿದ್ದು, ಇದು ಅರೆಂಜ್ಡ್ ಮ್ಯಾರೇಜ್ ಆಗಿದೆ.


ಇನ್ನು ಮದುವೆಯಲ್ಲಿ ಕುಟುಂಬದವರು, ಆಪ್ತರು, ಸ್ನೇಹಿತರು ಉಪಸ್ಥಿತರಿದ್ದರು.

ಧನುಷ್ ಅವರು ಆರತಕ್ಷತೆ ಕಾರ್ಯಕ್ರಮವೂ ಅದ್ದೂರಿಯಾಗಿ ನಡೆದಿದೆ.

ಧನುಷ್ ಅವರ ಮದುವೆ, ಆರತಕ್ಷತೆ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಪಾಲ್ಗೊಂಡಿದ್ದರು. 

ಇದನ್ನೂ ಓದಿ : ಮೇಕಪ್ ರೂಂನಲ್ಲಿ ಕೂಡಿ ಹಾಕಿದ್ರು…ಆಮೇಲೆ…ನಿರ್ಮಾಪಕನಿಂದಾದ ಕರಾಳ ಅನುಭವ ಬಿಚ್ಚಿಟ್ಟ ಖ್ಯಾತ ಕಿರುತೆರೆ ನಟಿ!

ಭವ್ಯಾ ಗೌಡ, ಮೌನ ಗುಡ್ಡೇಮನೆ, ರಿತ್ವಿಕ್ ಕೃಪಾಕರ್, ಸೇರಿ ಅನೇಕ ಕಿರುತೆರೆ ಹಿರಿತೆರೆ ತಾರೆಯರು ಆಗಮಿಸಿದ್ದರು.

 

ಮದುವೆ ಸಂಭ್ರಮದ ನಡುವೆಯೂ ಧನುಷ್ ವೋಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಮಾದರಿಯಾಗಿದ್ದಾರೆ. ಧನುಷ್ ನಡೆಗೆ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

 

 

Continue Reading

DAKSHINA KANNADA

ದೆಹಲಿಯ ರಾಣಾ ಪ್ರತಾಪ್ ನಗರದ ಜಿನ ಬಸದಿ 24ತೀರ್ಥಂಕರ ಪಂಚ ಕಲ್ಯಾಣ; ಮೂಡುಬಿದಿರೆ ಸ್ವಾಮೀಜಿ ಭಾಗಿ

Published

on

ನವದೆಹಲಿ : ದೆಹಲಿಯ ರಾಣಾ ಪ್ರತಾಪ್ ನಗರ ದ ಜಿನ ಬಸದಿ 24ತೀರ್ಥಂಕರ ಪಂಚ ಕಲ್ಯಾಣವು ರಾಷ್ಟ್ರ ಸಂತ 108 ಉಪಾಧ್ಯಾಯ ಗುಪ್ತಿ ಸಾಗರ ಮುನಿ ರಾಜ್ ಮಾರ್ಗದರ್ಶನ ಪಾವನ ಸಾನ್ನಿಧ್ಯ ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯ ವರ್ಯ ಮಹಾ ಸ್ವಾಮೀಜಿ ಗೌರವ ಉಪಸ್ಥಿತಿಯಲ್ಲಿ ಧಾರ್ಮಿಕ ವಿಧಿವಿಧಾನಗಳು ಜರುಗಿತು.

3 ಅಡಿ ಎತ್ತರ ದ ಪಂಚಲೋಹದ ಇಪ್ಪತ್ತನಾಲ್ಕು ತೀರ್ಥಂಕರ ಹಾಗೂ ವಿವಿಧ ಜಿನ ಬಿಂಬಗಳ ಸ್ಥಾಪನೆ ಬೆಳಿಗ್ಗೆ 7.30 ರಿಂದ 9.00ರ ವರೆಗೆ ಮೋಕ್ಷ ಕಲ್ಯಾಣ ಪೂಜೆ, ದೆಹಲಿ ವಿಶ್ವವಿದ್ಯಾಲಯ ಸ್ಪೋರ್ಟ್ಸ್ ಕ್ಲಬ್ ಸಭಾಂಗಣ ಹಾಗೂ ಮೆರವಣಿಗೆ ಮೂಲಕ ಮೂರ್ತಿ 3 ಕಿ.ಮೀ ದೂರದ ಬಸದಿಗೆ ತೆರಳಿ ಬೆಳಿಗ್ಗೆ 11.00ರಿಂದ ಮಧ್ಯಾಹ್ನ 1 ಗಂಟೆ ವರೆಗೂ ಮೂರ್ತಿ ಸ್ಥಾಪನೆ ದೆಹಲಿ ರಾಣಾ ಪತ್ ನಗರ ಬಸದಿಯಲ್ಲಿ ಜರುಗಿತು.


ಬಳಿಕ ಧಾರ್ಮಿಕ ಸಭೆಯಲ್ಲಿ ಧರ್ಮೋಪದೇಶ ನೀಡಿದ ಮೂಡುಬಿದಿರೆ ಸ್ವಾಮೀಜಿ, ಜಿನ ಬಿಂಬ ಸ್ಥಾಪನೆಯಿಂದ ಆತ್ಮ ಕಲ್ಯಾಣ ಹಾಗೂ ಪರ ಕಲ್ಯಾಣವಾಗುವುದು ಜನ ಸಂಸ್ಕೃತಿ ಸಂಸ್ಕಾರ ಧರ್ಮದಿಂದ ಸಾಧ್ಯ ಎಂದು ನುಡಿದರು. ಈ ಸಂದರ್ಭ ಸುಂದರ ಜಿನಾಲಯ ಸ್ಥಾಪನೆಗೆ ಕಾರಣರಾದ ದಾನಿಗಳನ್ನು ಗೌರವಿಸಲಾಯಿತು.


ರಾಷ್ಟ್ರ ಸಂತ 108 ಗುಪ್ತಿ ಸಾಗರ ಮುನಿ ರಾಜ್ ಮೂಡು ಬಿದಿರೆ ಶ್ರೀಗಳವರಿಗೆ ಶಾಸ್ತ್ರ ಸ್ಮರಣಿಕೆ ನೀಡಿದರು. ಬಳಿಕ ದೆಹಲಿ ಗ್ರೀನ್ ಪಾರ್ಕ್ ಬಸದಿಯಲ್ಲಿ ಉಪಸ್ಥಿತರಿದ್ದ 108 ರಾಷ್ಟ್ರ ಸಂತ ಆಚಾರ್ಯ ಪ್ರಾಗ್ಯ ಸಾಗರ ಮುನಿಮಹಾರಾಜ್, ಮೂಡುಬಿದಿರೆ ಶ್ರೀಗಳಿಗೆ ಗೌರವಾನ್ವಿತ ಪ್ರಧಾನಮಂತ್ರಿಗಳಿಂದ ಭಗವಾನ್ ಮಹಾವೀರ ಜನ್ಮ ಕಲ್ಯಾಣದಂದು ನಿರ್ವಾಣ ವರ್ಷ 2550ರ ಅಂಗವಾಗಿ ಬಿಡುಗಡೆಗೊಳಿಸಿದ ರೂ. 100 ರ ನಾಣ್ಯ ಹಾಗೂ ಅಂಚೆ ಇಲಾಖೆ ಬಿಡುಗಡೆಗೊಳಿಸಿದ ಪಾವಪುರಿ ಸಿದ್ದ ಕ್ಷೇತ್ರ ಫಸ್ಟ್ ಡೇ ಕವರ್ ನೀಡಿ ಹರಸಿ ಆಶೀರ್ವಾದ ಮಾಡಿದರು.

ಇದನ್ನೂ ಓದಿ : ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ!

ಈ ಸಂದರ್ಭ ಮೂಡುಬಿದಿರೆ ಸ್ವಾಮೀಜಿ ಈ ವರ್ಷ ಪೂರ್ತಿ ಆಚಾರ್ಯ ಶಾಂತಿ ಸಾಗರ ಆಚಾರ್ಯ ಶತಾಬ್ದಿ ವರ್ಷ ಹಾಗೂ ಭಗವಾನ್ ಮಹಾವೀರ ಸ್ವಾಮಿ ನಿರ್ವಾಣ ಕಲ್ಯಾಣ ವಿವಿಧೆಡೆ ಆಚರಿಸಲು ಸಂಕಲ್ಪ ಮಾಡಿದರು.

Continue Reading

LATEST NEWS

Trending