LATEST NEWS
ಆರ್ಟಿಐ ಕಾರ್ಯಕರ್ತನ ಕೈ-ಕಾಲು ಕಟ್ ಮಾಡಿದ ದುಷ್ಕರ್ಮಿಗಳು
ಬೆಂಗಳೂರು: ಆರ್.ಟಿ.ಐ ಕಾರ್ಯಕರ್ತನೊಬ್ಬನ ಮೇಲೆ ದುಷ್ಕರ್ಮಿಗಳು ಭೀಕರವಾಗಿ ದಾಳಿ ನಡೆಸಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಬೆಂಗಳೂರು ಹೊರವಲಯದ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇತ್ತೀಚೆಗೆ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿದ್ದ ವೆಂಕಟೇಶ್ ಸರ್ಕಾರದ ಗಮನಕ್ಕೆ ತರುವ ಪ್ರಯತ್ನದಲ್ಲಿದ್ದರು. ಈ ಮಧ್ಯೆ ದುಷ್ಕರ್ಮಿಗಳು ಭೀಕರವಾಗಿ ದಾಳಿ ನಡೆಸಿದ್ದಾರೆ.
ತಾವರೆಕೆರೆಯ ನಿವಾಸಿಯಾಗಿರುವ ವೆಂಕಟೇಶ್ ಅವರು ನಿನ್ನೆ ಬೆಳಗ್ಗೆ 11 ಗಂಟೆ ಸುಮಾರಿಗೆ ತಮ್ಮ ಬೈಕ್ನಲ್ಲಿ ಮನೆಯಿಂದ ಹೊರಬಂದಿದ್ದಾರೆ. ಈ ವೇಳೆ ಹಿಂಬದಿಯಿಂದ ನಾಲ್ಕು ಬೈಕ್ನಲ್ಲಿ ಬಂದ ಎಂಟು ಮಂದಿ ದುಷ್ಕರ್ಮಿಗಳು ವೆಂಕಟೇಶ್ರನ್ನ ಹಿಂಬಾಲಿಸಿದ್ದಾರೆ. ತಾವರೆಕೆರೆ ಪೊಲೀಸ್ ಠಾಣೆ ಎದುರಿನ ರಸ್ತೆಯಲ್ಲಿ ಪಾಸ್ ಆಗುತ್ತಿದ್ದಂತೆ, ದುಷ್ಕರ್ಮಿಗಳು ಅಡ್ಡಗಟ್ಟಿ ಲಾಂಗು, ಮಚ್ಚಿನಿಂದ ಭೀಕರ ದಾಳಿ ನಡೆಸಿದ್ದಾರೆ. ಪರಿಣಾಮ, ವೆಂಕಟೇಶ್ ಬಲಗೈನ ಮುಂಗೈ ಹಾಗೂ ಒಂದು ಕಾಲು ಕಟ್ ಆಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಸ್ತೆ ಕಾಮಗಾರಿ ನಡೆಸದೇ, ಹಣ ಮಂಜೂರು ಮಾಡಿಸಿಕೊಂಡು ಲೂಟಿ ಮಾಡ್ತಿದ್ದ ಕಂಟ್ರಾಕ್ಟರ್ಗಳ ಭ್ರಷ್ಟಾಚಾರಚನ್ನ ಬಯಲಿಗೆಳೆದಿದ್ರು. ಇದರಿಂದ ತಾವರೆಕೆರೆ ಪಂಚಾಯಿತಿ ವ್ಯಾಪ್ತಿಯ ಕಂಟ್ರಾಕ್ಟರ್ಗಳಿಂದ ಅನೇಕ ಬಾರಿ ಬೆದರಿಕೆಗಳು ಬಂದಿದ್ದವು ಎನ್ನಲಾಗಿದೆ. ಇದ್ಯಾವುದಕ್ಕೂ ಕ್ಯಾರೆ ಎನ್ನದ ವೆಂಕಟೇಶ್ ಅವರು ಭ್ರಷ್ಟಾಚಾರದ ವಿರುದ್ಧ ತಮ್ಮ ಹೋರಾಟವನ್ನು ಮುಂದುವರಿಸಿದ್ದರು.
ಸ್ಥಳಕ್ಕೆ ರಾಮನಗರ ಎಸ್.ಪಿ ಗಿರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ದುಷ್ಕೃತ್ಯ ಸಂಪೂರ್ಣ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ನಿಟ್ಟಿನಲ್ಲಿ ತನಿಖೆ ಶುರುವಾಗಿದೆ. ಪ್ರಕರಣದ ಸಂಬಂಧ ಐಪಿಸಿ 307 ಕೊಲೆಯತ್ನ ಅಡಿ ಕೇಸ್ ದಾಖಲಿಸಿಕೊಂಡಿರೋ ತಾವರೆಕೆರೆ ಪೊಲೀಸರು 3 ತಂಡಗಳಾಗಿ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.
DAKSHINA KANNADA
ಬೆಂ*ಕಿಗೆ ಆಹುತಿಯಾದ ಹಡಗಿನಿಂದ ಅಪಾಯವಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸ್ಪಷ್ಟನೆ
ಮಂಗಳೂರು : ಮಂಗಳೂರು ಕರಾವಳಿಯ ಸಮುದ್ರದಲ್ಲಿ ಬೆಂ*ಕಿಗೆ ಆಹುತಿಯಾದ ವಿದೇಶಿ ಹಡಗಿನಿಂದ ಮಂಗಳೂರು ಕರಾವಳಿಗೆ ಯಾವುದೇ ಆತಂಕ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.
ಜುಲೈ 19 ರಂದು ಗುಜರಾತ್ನಿಂದ ಕೊಲೊಂಬೋಕ್ಕೆ ತೆರಳುತ್ತಿದ್ದ ಸರಕು ಸಾಗಟದ ಹಡುಗು ಬೆಂ*ಕಿಗೆ ಆಹುತಿಯಾಗಿತ್ತು. ತಕ್ಷಣ ಕೋಸ್ಟ್ಗಾರ್ಡ್ ತಂಡ ನಿರಂತರ ನಲುವತ್ತು ಗಂಟೆ ಪ್ರಯತ್ನ ನಡೆಸಿ ಬೆಂಕಿ ನಂದಿಸುವ ಕೆಲಸವಾಗಿತ್ತು. ಬಳಿಕ ಹಡಗನ್ನು ಮಂಗಳೂರು ಕರಾವಳಿಯ 30 ನಾಟಿಕಲ್ ದೂರದಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ತೈಲ ಸೋರಿಕೆ ಆಗುವ ಆತಂಕವನ್ನು ಹಲವರು ವ್ಯಕ್ತಪಡಿಸಿದ್ದರು.
ಇದನ್ನೂ ಓದಿ : 5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಹಡಗು ಮುಳುಗಡೆಯಾಗುವ ಭೀತಿ ಇದ್ದು ಹಾಗಾದಲ್ಲಿ ಹಡಗಿನಲ್ಲಿರುವ ತೈಲ ಸೋರಿಕೆ ಆಗಬಹುದು ಎಂದು ಸುದ್ದಿಯಾಗಿತ್ತು. ಆದ್ರೆ, ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಅಂತಹ ಯಾವುದೇ ಅಪಾಯ ಇಲ್ಲ ಎಂದು ಹೇಳಿದ್ದಾರೆ. ಅಂತಹ ಅವ*ಘಡ ನಡೆದಲ್ಲಿ ಅದನ್ನು ಎದುರಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ಕೋಸ್ಟ್ಗಾರ್ಡ್ ಮತ್ತು ಕರಾವಳಿ ಕಾವಲು ಪಡೆ ಸನ್ನದ್ಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
kerala
5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.
ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.
ಆನ್ ಲೈನ್ ಗೇಮಿಂಗ್ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?
ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್ಲೈನ್ ಗೇಮಿಂಗ್ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ