Friday, July 1, 2022

ಪ್ರಿಯತಮೆಯನ್ನು ಕೊಂದು ಕೊಳವೆಬಾವಿಯಲ್ಲಿ ಹೂತುಹಾಕಿದ

ಕೊಪ್ಪಳ: ಇಲ್ಲಿನ ಯಲಬುರ್ಗಾ ತಾಲ್ಲೂಕಿನ ಗ್ರಾಮವೊಂದರಲ್ಲಿ ಯುವತಿಯನ್ನು ಆಕೆಯ ಪ್ರಿಯಕರನೇ ಕೊಲೆ ಮಾಡಿ ಕೊಳವೆ ಬಾವಿಯಲ್ಲಿ ಮೃತದೇಹ ಹೂತು ಹಾಕಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಯಲಬುರ್ಗಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮೃತ ಯುವತಿಯ ಸಂಬಂಧಿಯೇ ಆಗಿರುವ ಯುವಕ ಆಕೆಯನ್ನು ಮನೆಯಲ್ಲಿ ಇಟ್ಟುಕೊಂಡಿದ್ದ. ಇನ್ನೆರಡು ತಿಂಗಳಲ್ಲಿ 18 ವರ್ಷ ಪೂರ್ಣವಾದ ನಂತರ ಆಕೆಯನ್ನು ಮದುವೆಯಾಗಲು ಸಿದ್ಧತೆ ನಡೆಸಿದ್ದ. ಈ ನಡುವೆ ಇಬ್ಬರ ನಡುವೆ ಜಗಳವಾಗುತ್ತಿತ್ತು ಎನ್ನಲಾಗಿದೆ. 15 ದಿನಗಳ ಹಿಂದೆ ಜಗಳ ವಿಕೋಪಕ್ಕೆ ತಿರುಗಿ ಆಕೆಯನ್ನು ಕೊಲೆ ಮಾಡಿದ್ದಾನೆ. ಬಳಿಕ ಮೃತದೇಹವನ್ನು ಕೆರೆ ಸಮೀಪದ ಜಮೀನೊಂದರ ವಿಫಲ ಕೊಳವೆಬಾವಿಯಲ್ಲಿ ಹೂತು ಹಾಕಿದ್ದಾನೆ. ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ವಿಫಲ ಕೊಳವೆ ಬಾವಿಯಲ್ಲಿ ಹೂತು ಹಾಕಿದ್ದ ಮೃತದೇಹವನ್ನು ಜೆಸಿಬಿಯಿಂದ ಹೊರ ತೆಗೆಯಲಾಗಿದೆ ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here

Hot Topics

ಪುತ್ತೂರಿನಲ್ಲಿ ಸ್ವಿಫ್ಟ್ ಮತ್ತು ಓಮ್ನಿ ಕಾರು ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಸ್ವಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ...

ಸುಳ್ಯ: ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ-ಸ್ತಬ್ಧರಾದ ಜನ

ಸುಳ್ಯ: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ನಿನ್ನೆ ತಡರಾತ್ರಿ 1.15ಕ್ಕೆ ಭಾರಿ ಶಬ್ದದೊಂದಿಗೆ ಮತ್ತೆ ಭೂಮಿ ಕಂಪಿಸಿದ ಅನುಭವ ಆಗಿದೆ.ಸುಳ್ಯದ ಸಂಪಾಜೆ, ಚೆಂಬು, ಕಲ್ಲುಗುಂಡಿ ಗಡಿಭಾಗ ಹಾಗೂ ಕೊಡಗಿನ ಗಡಿಭಾಗಗಳು...

ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದರಿಂದ ಮನನೊಂದು ಪಿಯುಸಿ ವಿದ್ಯಾರ್ಥಿನಿ ಜೀವಾಂತ್ಯ

ಉಡುಪಿ: ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಮತ್ತೆ ಅನುತ್ತೀರ್ಣಳಾಗಿದ್ದರಿಂದ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದಲ್ಲಿ ನಿನ್ನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಾನಸ (17)...