Connect with us

    BANTWAL

    ಹೈಕೋರ್ಟ್‌ ಕೃಪಕಟಾಕ್ಷ: ಬಂಟ್ವಾಳದ 81ರ ಅಪರಾಧಿಗೆ 2 ವರ್ಷದ ಶಿಕ್ಷೆ ಮೂರೇ ದಿನ

    Published

    on

    ಮಂಗಳೂರು: ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪ್ರಕರಣವೊಂದರಲ್ಲಿ 81 ವರ್ಷದ ಅಪರಾಧಿಗೆ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಎರಡು ವರ್ಷ ಜೈಲು ಶಿಕ್ಷೆಯನ್ನು ಮೂರು ದಿನಕ್ಕೆ ಇಳಿಸಿ ಹೈಕೋರ್ಟ್‌ ಆದೇಶಿಸಿದೆ.

    ಜೊತೆಗೆ ಅಪರಾಧಿಗೆ ಸ್ಥಳೀಯ ಅಂಗನವಾಡಿ ಕೇಂದ್ರದಲ್ಲಿ ಒಂದು ವರ್ಷ ಸ್ವಯಂ ಸೇವಕನಾಗಿ ಕೆಲಸ ಮಾಡುವ ಶಿಕ್ಷೆ ವಿಧಿಸಿದೆ.


    ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಐತಪ್ಪ ನಾಯ್ಕ ಎಂಬುವವರು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಹೈಕೋರ್ಟ್‌ ನ್ಯಾಯಮೂರ್ತಿ ಆರ್ ನಟರಾಜ್ ಅವರ ನೇತೃತ್ವದ ಏಕಸದಸ್ಯ ಪೀಠ ಮಾನ್ಯ ಮಾಡಿದೆ.

    ಪ್ರಕರಣದ ಹಿನ್ನೆಲೆ: 2008ರಲ್ಲಿ ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಆರೋಪದಲ್ಲಿ ಐತಪ್ಪ ನಾಯ್ಕ ವಿರುದ್ಧ ಪ್ರಕರಣ ದಾಖಲಾಗಿತ್ತು.

    ಈ ಬಗ್ಗೆ ವಿಚಾರಣೆ ನಡೆಸಿದ್ದ ಬಂಟ್ವಾಳದ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರು 2012ರ 7 ರಂದು ತೀರ್ಪು ನೀಡಿ ಐತಪ್ಪ ನಾಯ್ಕನಿಗೆ ಮೂರು ದಿನ ಜೈಲು ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿತ್ತು.

    ಇದರ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ್ದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಐತಪ್ಪ ನಾಯ್ಕನ ಶಿಕ್ಷೆಯ ಪ್ರಮಾಣವನ್ನು ಎರಡು ವರ್ಷಕ್ಕೆ ಹೆಚ್ಚಳ ಮಾಡಿ, ಐದು ಸಾವಿರ ರೂಪಾಯಿ ದಂಡ ವಿಧಿಸಿ, 2014ರ ಜುಲೈ 21ರಂದು ಆದೇಶಿಸಿತ್ತು.
    ಈ ಆದೇಶವನ್ನು ಮತ್ತೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಆಗ ಆತನ ಆಧಾರ್ ಪ್ರತಿಯಲ್ಲಿರುವ ಜನ್ಮ ದಿನಾಂಕದಿಂದ ಅವರು 1942ರ ಏಪ್ರಿಲ್‌ 1ರಂದು ಜನಿಸಿದ್ದಾರೆ ಎನ್ನುವುದು ತಿಳಿದುಬಂದಿದೆ. ಪ್ರಕರಣದಲ್ಲಿ ಅರ್ಜಿದಾರನ ವಯಸ್ಸನ್ನು ಪ್ರಮುಖವಾಗಿ ಪರಿಗಣಿಸಬೇಕಿದೆ. ಜತೆಗೆ, ಮಕ್ಕಳಿಲ್ಲದ ವೃದ್ದನೇ ತನ್ನ ಪತ್ನಿಯನ್ನೂ ನೋಡಿಕೊಳ್ಳಬೇಕಿದೆ.

    ಸಿವಿಲ್ ನ್ಯಾಯಾಲಯ ನೀಡಿದ್ದ ಮೂರು ದಿನ ಜೈಲು ಶಿಕ್ಷೆಯನ್ನು ಆತ ಈಗಾಗಲೇ ಅನುಭವಿಸಿದ್ದು, ದಂಡವನ್ನೂ ಪಾವತಿಸಿದ್ದಾರೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ, ವಿಚಾರಣಾಧೀನ ನ್ಯಾಯಾಲಯ ನೀಡಿದ್ದ ಶಿಕ್ಷೆಯ ಪ್ರಮಾಣವನ್ನು ಮಾರ್ಪಾಡು ಮಾಡಲಾಗುತ್ತಿದೆ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ.

    ಸದ್ಯ ಅರ್ಜಿದಾರರಿಗೆ ಕರೋಪಾಡಿ ಗ್ರಾಮದ ಮಿತ್ತನಡ್ಕ ಅಂಗನವಾಡಿ ಕೇಂದ್ರದಲ್ಲಿ ಯಾವುದೇ ವೇತನ ನಿರೀಕ್ಷಿಸದೆ ಒಂದು ವರ್ಷ ಸೇವೆ ಸಲ್ಲಿಸುವಂತೆ ಆದೇಶಿಸಿದೆ.

    BANTWAL

    ಕಲ್ಲಡ್ಕದಲ್ಲಿ ಸರ್ವೀಸ್ ರಸ್ತೆಗೆ ಡಾಮರು

    Published

    on

    ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.

    ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    Continue Reading

    BANTWAL

    ಮಂಗಳೂರು: ಯುವತಿ ವಿಚಾರದಲ್ಲಿ ಯುವಕನಿಗೆ ಥಳಿತ; ಆರೋಪಿಗಳು ಅರೆಸ್ಟ್

    Published

    on

    ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್‌ ಸಪ್ವಾನ್( 25), ಮಹಮ್ಮದ್‌ ರಿಜ್ವಾನ್‌ (25), ಇರ್ಪಾನ್‍(27), ಅನೀಸ್‍ ಅಹಮ್ಮದ್‍ (19), ನಾಸೀರ್‍ (27), ಇಬ್ರಾಹಿಂ, ಶಾಕೀರ್‍ (18)ನನ್ನು ಬಂಧಿಸಲಾಗಿದೆ.

    ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್‍ ಮುಸ್ತಾಫ್‍ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.

     

    ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ

     

    ಮಹಮ್ಮದ್‍ ಮುಸ್ತಾಫ್‍ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್‍ ಮುಸ್ತಾಫ್‍ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.

    Continue Reading

    BANTWAL

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕ ಆತ್ಮಹ*ತ್ಯೆ

    Published

    on

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.

    ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.

    ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    LATEST NEWS

    Trending