Connect with us

DAKSHINA KANNADA

ಉಡುಪಿಯಲ್ಲಿ ಅಮಾನುಷವಾಗಿ ನಾಲ್ವರ ಕೊಂದ ಹಂತಕ ಅರೆಸ್ಟ್

Published

on

ಉಡುಪಿ : ಉಡುಪಿಯ ನೇಜಾರು ಸಮೀಪ ತಾಯಿ ಮತ್ತು ಮೂವರು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ಆರೋಪಿಯನ್ನು ಬೆಳಗಾವಿಯಲ್ಲಿ ಪೊಲೀಸರು ಮಂಗಳವಾರ ಬಂಧಿಸಿರುವುದಾಗಿ ವರದಿಯಾಗಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ 35 ವರ್ಷ ಪ್ರಾಯದ ಪ್ರವೀಣ್ ಅರುಣ್‌ ಚೌಗಲೆ ಎಂಬಾತನನ್ನು ವಶಕ್ಕೆ ಪಡೆದಿದ್ದು, ಆತ ಮಹಾರಾಷ್ಟ್ರದ ಸಾಂಗ್ಲಿ ಮೂಲದವನು ಎಂದು ತಿಳಿದು ಬಂದಿದೆ.

ಆರೋಪಿ ಅರುಣ್ ಬೆಳಗಾವಿಯಲ್ಲಿ ಇರುವ ಬಗ್ಗೆ ಮಾಹಿತಿ ಉಡುಪಿ ಡಿವೈಎಸ್ಪಿ ನೇತೃತ್ವದ ತಂಡಕ್ಕೆ ಸುಳಿವು ಸಿಕ್ಕಿದ್ದು ಅದರಂತೆ ಈ ಮಾಹಿತಿಯನ್ನು ಬೆಳಗಾವಿ ಪೊಲೀಸರಿಗೆ ನೀಡಲಾಗಿತ್ತು. ಆರೋಪಿ ಅರುಣ್ ಮನೆಯೊಂದರಲ್ಲಿ ಇರುವುದು ಖಚಿತವಾಗಿತ್ತು. ಅದರಂತೆ ತತ್‌ಕ್ಷಣವೇ ಬೆಳಗಾವಿ ಪೊಲೀಸರು ಮಫ್ತಿಯಲ್ಲಿ ಮನೆ ಸುತ್ತುವರಿದಿದ್ದರು. ಇತ್ತ ಉಡುಪಿಯಿಂದ ಹೊರಟಿದ್ದ ತಂಡವೂ ಕುಡಚಿ ತಲುಪಿ ಬೆಳಗಾವಿ ಮತ್ತು ಉಡುಪಿ ಪೊಲೀಸರಿಂದ ಜಂಟಿ ಕಾರ್ಯಾಚರಣೆಯೊಂದಿಗೆ ಆರೋಪಿಯನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭಿಸಿದೆ. ಬೆಳಗಾವಿಯಿಂದ ಬೇರೆಡೆ ತೆರಳಲು ಸಜ್ಜಾಗಿದ್ದ ಆರೋಪಿ ಅರುಣ್ ಚೌಗಲೆಯನ್ನು ಪೊಲೀಸರು ವಶಕ್ಕೆ ಪಡೆದು ಉಡುಪಿಗೆ ಕರೆತರುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಂಧನದ ಬಗ್ಗೆ ಉಡುಪಿ ಜಿಲ್ಲಾ ಪೊಲೀಸರು ಇನ್ನಷ್ಟೇ ಧೃಢಿಕರಿಸ ಬೇಕಾಗಿದೆ.ಕಳೆದ ಭಾನುವಾರ ಉಡುಪಿ ಸಮೀಪದ ನೇಜಾರು ಬಳಿಯ ತೃಪ್ತಿ ಲೇ ಔಟ್ ನಲ್ಲಿ ಮನೆಯೊಂದಕ್ಕೆ ನುಗ್ಗಿದ್ದ ದುಷ್ಕರ್ಮಿಯೋರ್ವ ತಾಯಿ ಹಾಗೂ ಮೂವರು ಮಕ್ಕಳನ್ನು ಬರ್ಬರವಾಗಿ ಇರಿದು ಹತ್ಯೆ ಮಾಡಿ, ಪರಾರಿಯಾಗಿದ್ದ. ಈ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಘಟನೆಯಲ್ಲಿ ಮನೆಯ ಯಜಮಾನಿ ಹಸೀನಾ ಹಾಗೂ ಅವರ ಮಕ್ಕಳಾದ ಅಫ್ನಾನ್ (23), ಅಯ್ನಾಝ್ (21), ಅಸೀಮ್ (14) ಕೊಲೆಯಾದವರು. ಘಟನೆಯಲ್ಲಿ ಮನೆಯ ಯಜಮಾನ ನೂರ್ ಮೊಹಮ್ಮದ್ ಅವರ ಚಿಕ್ಕಮ್ಮ ಹಾಜಿರಾ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಈಗ ಚೇತರಿಸಿಕೊಂಡಿದ್ದು, ನಿನ್ನೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಆರೋಪಿ ಪ್ರವೀಣ್ ಅರುಣ್ ಚೌಗಲೆ ಕುಡಚಿ ಮೂಲಕ ಮಹಾರಾಷ್ಟ್ರ  ಅಥವಾ ಆಂಧ್ರಪ್ರದೇಶಕ್ಕೆ ಪರಾರಿಯಾಗಲು ಹೊಂಚು ಹಾಕಿದ್ದ ಎನ್ನಲಾಗಿದೆ.  ರಾಯಭಾಗದ ಕುಡಚಿಯಲ್ಲಿ ಮೊಬೈಲ್‌ ಆನ್ ಮಾಡಿದಾಗ ಕಾರ್ಯಾಚರಣೆ ನಡೆಸಿದ ಉಡುಪಿಯ ಪೊಲೀಸರ ತಂಡ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಆರೋಪಿ ಈ ಹಿಂದೆ ಸಿಐಎಸ್‌ಎಫ್‌ ಸಿಬಂದಿಯಾಗಿ ಹಾಗೂ ಬಳಿಕ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಕ್ಯಾಬಿನ್‌ ಸಿಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ. ಮಾಹಿತಿಗಳ ಪ್ರಕಾರ ಘಟನೆಯ ಬಳಿಕ ಲಭ್ಯವಿದ್ದ ಸಿಸಿಟಿವಿ ಸಾಕ್ಷ್ಯಗಳನ್ನು ಪರಿಶೀಲಿಸಿದ್ದ ಪೊಲೀಸರು ಆರೋಪಿಯ ನಡಿಗೆ ಶೈಲಿಯನ್ನು ಸೂಕ್ಷ್ಮವಾಗಿ ಗಮನಿಸಿದ್ದರು. ಇದು ಆತ ರಕ್ಷಣಾ ಇಲಾಖೆಗಳಿಗೆ ಸಂಬಂಧಿಸಿದ ವ್ಯಕ್ತಿ ಎಂಬ ಸುಳಿವು ನೀಡಿತ್ತು. ಬಳಿಕ ಆರೋಪಿ, ಅರುಣ್ ಚೌಗಲೆ ಬೆನ್ನುಬಿದ್ದ ಪೊಲೀಸರು, ಆತನನ್ನು ಬೆಳಗಾವಿಯ ಕುಡಚಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾದರು ಎನ್ನಲಾಗಿದೆ.

Click to comment

Leave a Reply

Your email address will not be published. Required fields are marked *

BANTWAL

ಬೈಕ್‌ಗಳು ಪರಸ್ಪರ ಮು*ಖಾಮು*ಖಿ ; ಬಾಲಕಿ ಸಾ*ವು

Published

on

ಬಂಟ್ವಾಳ: ಬೈಕ್ ಗಳ ನಡುವೆ ಭೀ*ಕರ ಅ*ಪಘಾ*ತ ಸಂಭವಿಸಿ ಬೈಕ್ ನಲ್ಲಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃ*ತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಿನ್ನೆ (ಜ.14) ರಾತ್ರಿ ನಡೆದಿದೆ.

ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃ*ತ ಬಾಲಕಿ ಎಂದು ಗುರುತಿಸಲಾಗಿದೆ.

ಬಾಲಕಿಯ ತಂದೆ ಬೈಕ್ ಚಾಲಕ ಅಬ್ದುಲ್ ರಹಮಾನ್ ಕೂಡ ಗಾ*ಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಇದನ್ನೂ ಓದಿ : ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ

 

ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿ.ಸಿ ರೋಡಿನ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿ*ಕ್ಕಿ ಹೊಡೆದಿದ್ದಾನೆ. ರಂಜಿತ್ ಗೆ ಕೂಡ ಗಾ*ಯವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.

ಅ*ಪಘಾ*ತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ಜ*ಖಂಗೊಂಡಿದೆ. ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಎಸ್.ಐ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

DAKSHINA KANNADA

ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ

Published

on

ಮಂಗಳೂರು : ನಗರದ ಜೈಲಿನಲ್ಲಿ ಕೈದಿಗಳು ಜೈಲು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹ*ಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

ಮಂಗಳೂರಿನ ಜಿಲ್ಲಾ ಕಾರಾಗೃಹದ ‘ಎ’ ಬ್ಲಾಕ್‌ನ ಸೆಲ್‌ಗಳಲ್ಲಿ ನಿಷೇಧಿತ ವಸ್ತುಗಳಿರುವ ಶಂಕೆಯ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಜೈಲು ಸಿಬಂದಿ ತಪಾಸಣೆಗೆ ತೆರಳಿದ್ದರು. ಈ ವೇಳೆ ವಿಚಾರಣಾಧೀನ ಕೈದಿಗಳು ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

 

ಇದನ್ನೂ ಓದಿ : ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ

 

ಜೈಲಿನಲ್ಲಿ ಮೊಬೈಲ್, ಗಾಂಜಾ ಮೊದಲಾದ ನಿಷೇಧಿತ ವಸ್ತುಗಳಿರುವ ಶಂಕೆಯಿಂದ ಜೈಲು ಅಧೀಕ್ಷಕ ಎಂ.ಎಚ್.ಆಶೇಖಾನ್ ನೇತೃತ್ವದಲ್ಲಿ ತಪಾಸಣೆಗೆ ಮುಂದಾಗಿದ್ದರು. ಆಗ ಪಾತ್ರೆ ಮತ್ತಿತರ ವಸ್ತುಗಳಿಂದ ವಿಚಾರಣಾ ಕೈದಿಗಳು ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೆ ಅ*ವಾಚ್ಯ ಶಬ್ದಗಳಿಂದ ಬೈ*ದು ಬೆದರಿಕೆ ಒಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಬರ್ಕೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

Continue Reading

DAKSHINA KANNADA

ರಾಜ್ಯದ 6 ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಎಲ್ಲೆಲ್ಲಿ?

Published

on

ಮಂಗಳೂರು/ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಮಳೆಯಾಗಿದ್ದು, ಕೆಲವೆಡೆ ಮಳೆಗಾಲದಂತೆ ಜೋರಾಗಿ ಮಳೆಯಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಕನ್ನಡ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸಾಧಾರಣ ಮಳೆ ಆಗಿದ್ದು, ಇನ್ನೂ ಮುಂದಿನ 2 ದಿನ ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಮೊರಿನ್ ಪ್ರದೇಶ ಮತ್ತು ನೆರೆಹೊರೆಗಳಲ್ಲಿ ಚಂಡಮಾರುತದ ಪರಿಚಲನೆಯು ಈಗ ಅಗ್ನೇಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಸಮಭಾಜಕ ವೃತ್ತದ ಹಿಂದೂ ಮಹಾಸಾಗರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ. ಎತ್ತರದಲ್ಲಿದೆ. ಇದರಿಂದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆ

ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ?
ಹಾಸನ, ಚಾಮರಾಜನಗರ, ಕೊಡಗು, ಮೈಸೂರು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ಇನ್ನು ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಂಜು ಬೀಳುವ ಸಾಧ್ಯತೆ ಇದೆ. ಜನವರಿ 20 ರವರೆಗೂ ಇದೇ ಹವಾಮಾನ ಮುಂದುವರಿಯಲಿದೆ.

ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ಹಾಗೂ ನೆರೆಯ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿ.ಸೆ ಮತ್ತು 20 ಡಿ. ಸೆ ಇರುವ ಸಾಧ್ಯತೆ ಇದ್ದು, ನಾಳೆಯೂ ಹೀಗೆ ಇರಲಿದೆ.

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸೋಮವಾರ ಹಗುರ ಮಳೆಯಾಗಿದೆ. ವಿಜಯಪುರದಲ್ಲಿ ಕನಿಷ್ಠ ತಾಪಮಾನ 14.6 ಡಿ. ಸೆ ಹಾಗೂ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಗರಿಷ್ಠ ತಾಪಮಾನ 32.8 ಡಿ. ಸೆ ದಾಖಲಾಗಿದೆ. ಇನ್ನು ಬೆಂಗಳೂರಿನಲ್ಲಿ ಇನ್ನೆರಡು ದಿನ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಮುಂದುವರಿಯುವ ಸಾಧ್ಯತೆ ಇದೆ.

Continue Reading

LATEST NEWS

Trending

Exit mobile version