ಪುತ್ತೂರು: ಆಸ್ತಿ ವಿಚಾರದಲ್ಲಿ ವ್ಯಕ್ತಿಯೋರ್ವನನ್ನು ಕಡಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ದೇವಸ್ಯ ಎಂಬಲ್ಲಿ ಈ ಘಟನೆ ನಡೆದಿದೆ.
ರೆಖ್ಯ ದೇವಸ್ಯ ನಿವಾಸಿ ಸಾಂತಪ್ಪ ಗೌಡ (40) ಕೊಲೆಯಾದ ದುರ್ದೈವಿ. ಜಮೀನು ಕುರಿತಾದ ವಾಜ್ಯಕ್ಕೆ ಸಂಬಂಧಿಸಿ ಈ ಕೊಲೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.
ಧರ್ಮಸ್ಥಳ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.