ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!
ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ.
ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು ಗುರುತಿಸಲಾಗಿದ್ದು, ಇವರು ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದು ಅಪರಾದ ಹಿನ್ನಲೆಯನ್ನು ಹೊಂದಿದ್ದರು ಎಂದು ಹೇಳಲಾಗಿದೆ.
ಎರಡು ಕಾರುಗಳಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳ ತಂಡವೊಂದು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿ ಕತ್ತನ್ನು ಕತ್ತರಿಸಿ ಕೊಲೆ ಮಾಡಿದೆ. ಸ್ಥಳಕ್ಕೆ ಹಿರಿಯಡ್ಕ ಪೊಲೀಸ್ ಠಾಣಾ ಸಿಬ್ಬಂದಿಗಳು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.