Connect with us

LATEST NEWS

ನಗ ನಗದಿನ ಆಸೆಗೆ ಇಬ್ಬರ ಬರ್ಬರ ಕೊಲೆ: ಆರೋಪಿ ಪೊಲೀಸರ ವಶಕ್ಕೆ..!

Published

on

ಬೆಂಗಳೂರು: ಇತ್ತೀಚೆಗೆ ಅಂದ್ರೆ ಎಪ್ರಿಲ್ 7ರಂದು ಜೆಪಿ ನಗರದ ಮನೆಯಲ್ಲಿನ ವಯಸ್ಸಾದ ಮಹಿಳೆ ಹಾಗೂ ಓರ್ವ ವ್ಯಕ್ತಿಯನ್ನು ಚಿನ್ನಾಭರಣ ಮತ್ತು ನಗ ನಗದು ದೋಚುವ ಸಲುವಾಗಿ ಕೊಲೆಗೈದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಇಬ್ಬರನ್ನೂ ಚಾಕುವಿನಿಂದ ಇರಿದು ಕೊಲೆಗೈದಿದ್ದ ಆರೋಪಿ ಮಂಜುನಾಥ್ ಮನೆಯಲ್ಲಿದ್ದ ಸಿಸಿ ಟಿವಿಯ ಡಿವಿಆರ್, ಬೆಲೆ ಬಾಳುವ ವಸ್ತುಗಳು ಹಾಗೂ ಎಲೆಕ್ಟ್ರಾನಿಕ್ ವಸ್ತುಗಳನ್ನು ಹೊತ್ತೊಯ್ದಿದ್ದ.

ಮಾರನೇ ದಿನ ಕೆಲಸದಾಕೆ ಬಂದಾಗಲೇ ಕೊಲೆ ನಡೆದಿರುವುದು ಬೆಳಕಿಗೆ ಬಂದಿತ್ತು. ಮಮತಾ ಬಸು ಹಾಗೂ ದೇವಭದ್ರ ಎಂಬಿಬ್ಬರು ಬರ್ಬರ ಹತ್ಯೆಗೀಡಾದ ದುರ್ದೈವಿಗಳು.

ಕೊಲೆ ಪ್ರಕರಣದಲ್ಲಿ ಆರೋಪಿ ಯಾವುದೇ ಕುರುಹುಗಳನ್ನು ಬಿಟ್ಟಿಲ್ಲವಾದ್ದರಿಂದ ಈ ಪ್ರಕರಣ ಸಾಕಷ್ಟು ಕುತೂಹಲ ಕೆರಳಿಸಿತ್ತು. ಆದರೆ ಪೊಲೀಸರು ಕೊನೆಗೂ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಜುನಾಥ್ ಎಂಬಾತನೇ ಬಂಧಿತ ಆರೋಪಿ. ಆರೋಪಿಯನ್ನು ಬಂಧಿಸುವ ಮುನ್ನ ಆತ ಪೊಲೀಸರ ಮೇಲೆ ಹಲ್ಲೆಗೆ ಪ್ರಯತ್ನ ಪಟ್ಟಿದ್ದರಿಂದ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಬಳಿಕ ಆತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

DAKSHINA KANNADA

ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ

Published

on

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.

ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ  ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.

ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.

Continue Reading

DAKSHINA KANNADA

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ

Published

on

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮೊದಲನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದಲೇ ಆರಂಭಗೊಂಡಿದೆ.

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇದಾಗಿದ್ದು, ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನವಾಗಿದೆ. ಮತದಾರರು ತಮ್ಮ ತಮ್ಮ ಮತ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಶಾಂತಿಯುತವಾಗಿ ಮತದಾನ ಮಾಡುತ್ತಿದ್ದಾರೆ.

ಅದರಂತೆ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ-ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದ್ದು ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

Continue Reading

LATEST NEWS

Trending