Thursday, September 29, 2022

ಸುಳ್ಯದ ಕಳಂಜದಲ್ಲಿ ಮುಸ್ಲೀಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ..! ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹ

ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಸಮೀಪದ ಕಳಂಜ ಎಂಬಲ್ಲಿ ಮುಸ್ಲಿಂ ಯುವಕನ ಮೇಲೆ ಗೂಂಡಾಗಳ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.

ಹಲ್ಲೆಗೊಳಗಾದ ಯುವಕನನ್ನು ಮಸೂದ್ (21) ಎಂದು ಗುರುತ್ತಿಸಲಾಗಿದ್ದು ಮಂಗಳೂರು ಆಸ್ಪತ್ರೆಗೆ ಸೇರಿಸಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆರೋಪಿಗಳ ಶೀಘ್ರ ಬಂಧನಕ್ಕೆ ಸಾರ್ವಜನಿಕರಿಂದ ಪೋಲೀಸ್ ಇಲಾಖೆಗೆ ಒತ್ತಾಯ ಕೇಳಿ ಬಂದಿದೆ.

ಮುಸ್ಲಿಂ ಯುವಕನ ಕೊಲೆಯತ್ನ,ಆರೋಪಿಗಳನ್ನು ಕೂಡಲೇ ಬಂಧಿಸಲು ಎಸ್‌ಡಿಪಿಐ ಆಗ್ರಹ :

ಇನ್ನು ಕಳಂಜದಲ್ಲಿ ಅಮಾಯಕ ಮುಸ್ಲಿಂ ಯುವಕನನ್ನು ದುಷ್ಕರ್ಮಿಗಳು ಕ್ಷುಲ್ಲಕ ವಿಚಾರವನ್ನು ಮುಂದಿಟ್ಟು ಮಾರಣಾಂತಿಕವಾಗಿ ಗುಂಪು ಹಲ್ಲೆ ಮಾಡಿ ಕೊಲೆಯತ್ನ ನಡೆಸಿದ ಘಟನೆಯನ್ನು ಎಸ್‌ಡಿಪಿಐ ಸುಳ್ಯ ವಿಧಾನ ಸಭಾ ಸಮಿತಿ ತೀವ್ರವಾಗಿ ಖಂಡಿಸಿದ್ದು  ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದೆ.

ಶಾಂತವಾಗಿರುವ ಸುಳ್ಯ ತಾಲೂಕಿನಲ್ಲಿ ಈ ರೀತಿಯ ಗುಂಪು ಹಲ್ಲೆ ನಡೆಸಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿರುವ ದುಷ್ಕರ್ಮಿಗಳನ್ನು ಪೊಲೀಸ್ ಇಲಾಖೆ ಕೂಡಲೇ ಕೊಲೆಯತ್ನ ಪ್ರಕರಣ ದಾಖಲಿಸಿ ಬಂಧಿಸಬೇಕು ಇಲ್ಲದಿದ್ದಲ್ಲಿ ಪಕ್ಷ ಇದರ ವಿರುದ್ಧವಾಗಿ ಹೋರಾಟ ನಡೆಸಲಿದೆ ಎಂದು ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಇಕ್ಬಾಲ್ ಬೆಳ್ಳಾರೆ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಉಡುಪಿ: ಮೀನುಗಾರಿಕಾ ಜೆಟ್ಟಿ ಕುಸಿತ-ಅವೈಜ್ಞಾನಿಕ ಕಾಮಗಾರಿ ವಿರುದ್ಧ ಮೀನುಗಾರರ ಆರೋಪ

ಉಡುಪಿ: ಮೀನುಗಾರಿಕಾ ಬಂದರು ಪ್ರದೇಶದಲ್ಲಿ ನೂತನ ಜೆಟ್ಟಿ ನಿರ್ಮಾಣವಾಗುತ್ತಿರುವ ತಾಣದಲ್ಲಿ 150 ಮೀಟರಿಗೂ ಅಧಿಕ ಉದ್ಧದ ಮೀನುಗಾರಿಕಾ ಜೆಟ್ಟಿ ಕುಸಿತವಾದ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ಇಂದು ನಡೆದಿದೆ.ಇದರಿಂದ ಮೀನುಗಾರರು ಸಂಕಷ್ಟ ಎದುರಿಸುವಂತಾಗಿದೆ....

ತುಳು ಭಾಷೆಗೆ ಸ್ಥಾನಮಾನ: ನವರಾತ್ರಿ ಮುಗಿದ ಕೂಡಲೇ ಮೀಟಿಂಗ್

ಮಂಗಳೂರು: ಮಂಗಳೂರಿನ ಸರಕಾರಿ ಕಛೇರಿ ಹಾಗೂ ಬಸ್ಸುಗಳಲ್ಲಿ ಕನ್ನಡ ಕಡ್ಡಾಯ ಮಾಡಿ ತುಳು ಭಾಷೆಯ ಮೇಲೆ ಸವಾರಿ ಮಾಡಿದ್ದಲ್ಲದೆ ದ.ಕ ಜಿಲ್ಲೆ ಸೇರಿ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ ಎಂದು ಸಚಿವ ಸುನೀಲ್ ಕುಮಾರ್‌ರವರು...

ಮಂಗಳೂರು: ಮಾರ್ನಮಿಕಟ್ಟೆ ದೇವಿ ಪ್ರತ್ಯಂಗಿರಾ ಕ್ಷೇತ್ರದಲ್ಲಿ ಶರನ್ನವರಾತ್ರಿ ಸಂಭ್ರಮ, ದುರ್ಗಾ ನಮಸ್ಕಾರ ಪೂಜೆ

ಮಂಗಳೂರು: ಕರಾವಳಿಯಲ್ಲೀಗ ನವರಾತ್ರಿ ಸಂಭ್ರಮ. ದೇವಿ ದೇಗುಲಗಳಲ್ಲಿ ವಿಶೇಷ ಪೂಜಾ ಕಾರ್ಯಗಳನ್ನು ನೆರವೇರಿಸಲಾಗುತ್ತಿದೆ.ಕಾರಣಿಕದ ಶಕ್ತಿಗೆ ಮನೆಮತಾಗಿರುವ ಹಾಗೂ ದೇವಿಯ ಸನ್ನಿಧಾನಕ್ಕೆ ಬಂದು ಪ್ರಾರ್ಥಿಸಿ ಹರಕೆ ಹೇಳಿದವರ ಇಷ್ಟಾರ್ಥಗಳನ್ನು ಈಡೇರಿಸುತ್ತಿರುವಂತಹ ಮಂಗಳೂರು ಮಾರ್ನಮಿಕಟ್ಟೆಯ ತಾಯಿ...