Connect with us

BELTHANGADY

ಮುಸ್ಲಿಮರ ಓಟು ಬೇಡವೆಂದ ಬೆಳ್ತಂಗಡಿ ಶಾಸಕರಿಗೆ ‘ಟೋಪಿ-ಶಾಲು’ ಕಳುಹಿಸಿದ ಶೇಖರ ಲಾಯಿಲ

Published

on

ಬೆಳ್ತಂಗಡಿ: “ಮುಸ್ಲಿಮರ ಓಟು ನನಗೆ ಬೇಡ” ಎಂದು ಹೇಳಿಕೆ ನೀಡಿ ಇದೀಗ ಅಲ್ಪಸಂಖ್ಯಾತ ಸಮಾವೇಶ ಹಾಗೂ ಸಾಧಕರ ಸನ್ಮಾನದಲ್ಲಿ ಭಾಗವಹಿಸುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾಗೆ ಹಸಿರು ಶಾಲು, ಮುಸ್ಲಿಂರ ಟೋಪಿ ಹಾಗೂ ಬಿಳಿ ಕರವಸ್ತ್ರವನ್ನು ಸಿಪಿಐಎಂ ಸದಸ್ಯ ಶೇಖರ್‌ ಲಾಯಿಲ ಕೋರಿಯರ್‌ ಮಾಡಿದ್ದಾರೆ.


ಹಸಿರು ಶಾಲು, ಮುಸ್ಲಿಂರ ಟೋಪಿ ಹಾಗೂ ಬಿಳಿ ಕರವಸ್ತ್ರದ ಜೊತೆಗೆ ಒಂದು ಪತ್ರವನ್ನು ಕೋರಿಯರ್‌ ಮೂಲಕ ಕಳುಹಿಸಿ “ತಾವು ಇತ್ತೀಚೆಗೆ ಅಂಡಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾವ್ಯ ಗ್ರಾಮದ ಗುಜ್ಜಿಟ್ಟು ಎಂಬಲ್ಲಿ ಶನೀಶ್ವರ ಪೂಜೆಯ ಧಾರ್ಮಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಾ

“ಸಂಘ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸೂಚಿಸಿದರೆ ನನಗೆ ಮುಸ್ಲಿಮರ (ಬ್ಯಾರಿಗಳ) ಮತ ಬೇಡವೆಂದು ಗರ್ವದಿಂದ, ತಾಕತ್ತಿನಿಂದ ಹೇಳುತ್ತೇನೆ ಎಂದು” ಬಹಿರಂಗವಾಗಿ ಹೇಳಿರುತ್ತೀರಿ.

ಆದರೆ ಪ್ರಧಾನಿ ನರೇಂದ್ರ ಮೋದಿಯವರ ಎಂಟು ವರ್ಷದ ಆಡಳಿತದ ವಿಚಾರವಾಗಿ ಅಲ್ಪ ಸಂಖ್ಯಾತರ ಸಮಾವೇಶವನ್ನು ನಡೆಸುವ ಮೂಲಕ ತಾವು ಮುಸ್ಲಿಮರೂ ಸೇರಿದಂತೆ ಅಲ್ಪ ಸಂಖ್ಯಾತರನ್ನು ಓಲೈಕೆ ಮಾಡುವ ನೀಚತನದ ರಾಜಕೀಯ ನಡೆಸುತ್ತಿದ್ದಿರಿ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ.

ತಮ್ಮ ಇಬ್ಬಗೆಯ ನೀತಿಯನ್ನು ವಿರೋಧಿಸುತ್ತ ಮುಂದಿನ ದಿನಗಳಲ್ಲಿ ಭಾರತದ ಸರ್ವಧರ್ಮಗಳ ಜನರನ್ನು ಯಾವುದೇ ಬೇಧಬಾವ ಇಲ್ಲದಂತೆ ಸಮಾನವಾಗಿ ನೋಡಬೇಕು,

ಮೂಲಕ ನಾಡಿನ ಸೌಹಾರ್ದತೆಯನ್ನು ಎತ್ತಿ ಹಿಡಿಯುವ ಮೂಲಕ ದೇಶದ ಸಂವಿಧಾನವನ್ನು ಗೌರವಿಸಬೇಕೆಂದು ನನ್ನ ಮನವಿ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.


ಜೂ.22ರಂದು ಮೋದಿ ಆಡಳಿತದ 8ನೇ ಸಂಭ್ರಮಾಚರಣೆ ಪ್ರಯುಕ್ತ ಬೆಳ್ತಂಗಡಿ ಮಂಡಲ ಬಿಜೆಪಿ ಹಾಗೂ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಅಲ್ಪಸಂಖ್ಯಾತ ಬಂಧುಗಳ ಸಮಾವೇಶ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಶಾಸಕರು ಅಧಿಕೃತವಾಗಿ ಭಾಗವಹಿಸಲಿದ್ದಾರೆ. ಸದ್ಯ ಈ ಕೋರಿಯರ್‌ ಶಾಸಕರ ಕಚೇರಿಗೆ ತಲುಪಿದ್ದು, ಶಾಸಕರು ಸ್ವೀಕರಿಸಿದ್ದಾರೆ.

BELTHANGADY

ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

Published

on

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.

gangadhar

ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

gangadhar

ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು  ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

Continue Reading

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

LATEST NEWS

Trending