Connect with us

    DAKSHINA KANNADA

    ಫಾಝಿಲ್, ಮಸೂದ್ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ ಘೋಷಿಸಿದ ಮುಸ್ಲೀಂ ಸೆಂಟ್ರಲ್ ಕಮಿಟಿ..!

    Published

    on

    ಮಂಗಳೂರು : ಕೆಲ ದಿನಗಳ ಹಿಂದೆ ಕೊಲೆಯಾದ ಸುರತ್ಕಲ್ ನ ಫಾಝಿಲ್ ಮತ್ತು ಬೆಳ್ಳಾರೆ ಮಸೂದ್ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ ಮುಸ್ಲಿಂ ಸೆಂಟ್ರಲ್ ಕಮಿಟಿ ಘೋಷಣೆ ಮಾಡಿದೆ.

    ಕಮಿಟಿ ಅಧ್ಯಕ್ಷರಾದ ಕೆ.ಎಸ್. ಮೊಹಮ್ಮದ್ ಮಸೂದ್‌ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮೃತ ಬೆಳ್ಳಾರೆಯ ಮುಹಮ್ಮದ್ ಮಸೂದ್ ಮತ್ತು ಸುರತ್ಕಲ್ ಮಂಗಳಪೇಟೆಯ ಮುಹಮ್ಮದ್ ಫಾಝಿಲ್ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ ನೀಡಲು ಸಭೆ ಒಮ್ಮತದಿಂದ ನಿರ್ಧರಿಸಿತು.

    ಜಿಲ್ಲೆಯಲ್ಲಿ ನಡೆದ ಮೂರು ಅಮಾಯಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೇವಲ ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಮನೆಗೆ ಸಿಎಂ ಬೊಮ್ಮಾಯಿ ಭೇಟಿ ನೀಡಿ 25 ಲಕ್ಷ ರೂ. ಪರಿಹಾರ ನೀಡಿರುವುದನ್ನು ಮತ್ತು ಉಳಿದ ಇಬ್ಬರು ಅಮಾಯಕ ಮುಸ್ಲಿಮರ ಮನೆಗೆ ಭೇಟಿ ನೀಡದ ಸಿಎಂ ಅಮಾನವೀಯ ನಡೆಗೆ ಸಭೆಯಲ್ಲಿ ಖಂಡನೆ ವ್ಯಕ್ತವಾಯಿತು.

    ಸಭೆಯಲ್ಲಿ ರಾಜ್ಯ ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್, ಮಾಜಿ ಶಾಸಕ ಮೊಯ್ದಿನ್ ಬಾವಾ, ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷರಾದ ಹಾಜಿ ಇಬ್ರಾಹಿಂ ಕೋಡಿಜಾಲ್, ಹಾಜಿ ಬಿ.ಎಂ. ಮುಮ್ತಾಝ್ ಅಲಿ, ಕೆ. ಅಶ್ರಫ್, ಹನೀಫ್ ಹಾಜಿ ಬಂದರ್, ಸೈಯದ್ ಅಹ್ಮದ್ ಬಾಷಾ ತಂಙಳ್ ಮತ್ತಿತರರು ಉಪಸ್ಥಿತರಿದ್ದರು.

    DAKSHINA KANNADA

    ಕಟಪಾಡಿಯಲ್ಲಿ ವಾಹನಗಳ ಸರಣಿ ಅಪಘಾತ; ವಾಹನಗಳು ಜಖಂ

    Published

    on

    ಕಟಪಾಡಿ: ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್‌ನಲ್ಲಿ ಅ.17 ರ ಗುರುವಾರ ಸರಣಿ ಅಪಘಾತ ಸಂಭವಿಸಿದೆ.


    ತಾಂತ್ರಿಕ ತೊಂದರೆಯಿಂದ ಟ್ಯಾಂಕ್‌ವೊಂದು ಕಾರು, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತದ ಪರಿಣಾಮ ಕಟಪಾಡಿ ಜಂಕ್ಷನ್‌ನ ಸಿಸಿ ಕ್ಯಾಮರಾ ಸಹಿತ ವಾಹನಗಳು ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ವಾಹನಗಳು ಉಡುಪಿಯತ್ತ ತೆರಳುತ್ತಿದ್ದವು ಎಂದು ತಿಳಿದು ಬಂದಿದೆ. ಪವಾಡ ಸದೃಶವಾಗಿ ಕಾರಿನಲ್ಲಿದ್ದರೂ, ದ್ವಿಚಕ್ರ ವಾಹನ ಸವಾರ ಅಪಾಯದಿಂದ ಪಾರಾಗಿದ್ದಾರೆ. ಕಾರು ಜಖಂಗೊಂಡಿದ್ದು, ಟ್ಯಾಂಕರ್ ಸುಮಾರು ದೂರ ಚಲಿಸಿ ಮತ್ತೆ ನಿಂತಿದೆ.


    ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

    Continue Reading

    BELTHANGADY

    ಅಪ್ರಾಪ್ತ ಬಾಲಕಿಗೆ ಕಿರುಕುಳ; ಆರೋಪಿ ಅರೇಸ್ಟ್

    Published

    on

    ಬೆಳ್ತಂಗಡಿ: ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕೊಂಡು ಬಂದು ಮೊಬೈಲ್ ನಂಬರ್ ಕೇಳುವ ಮೂಲಕ ಆಕೆಗೆ ಕಿರುಕುಳ ನೀಡುತ್ತಿದ್ದ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

    ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಪುಲ್ಲಾಯಿ ಎನ್ನುವಲ್ಲಿ ಈ ಘಟನೆ ನಡೆದಿದೆ.

    ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ನಿವಾಸಿ, ಹುಲ್ಲು ಕಟಾವು ಯಂತ್ರದ ಮೆಕ್ಯಾನಿಕ್‌ ಆಗಿರುವ ಜುಮಾರ್‌ (24) ಬಂಧಿತ ಆರೋಪಿ. ಸಂಬಂಧಿ ಹಾಗೂ ನೆರೆಯ ವಿದ್ಯಾರ್ಥಿನಿಯೊಂದಿಗೆ ಬಾಲಕಿ ಕಾಲೇಜಿಗೆ ಹೋಗುತ್ತಿರುವ ವೇಳೆ ಕಳೆದ ಐದು ದಿನಗಳಿಂದ ಆರೋಪಿಯು ಬೈಕಿನಲ್ಲಿ ಹಿಂಬಾಲಿಸಿಕೊಂಡು ಹೋಗುತ್ತಿದ್ದ.

    ಬೈಕ್‌ನಲ್ಲಿ ಜೊತೆಯಾಗಿ ಬರುವಂತೆ ಒತ್ತಾಯಿಸಿದ್ದು ಮಾತ್ರವಲ್ಲದೆ, ಮೊಬೈಲ್‌ ನಂಬರ್ ಕೊಡುವಂತೆ ಕೇಳಿಕೊಳ್ಳುತ್ತಿದ್ದ.

    ಅಂತೆಯೇ ಅ. 15ರಂದು ಬೆಳಗ್ಗೆ 7.45 ಗಂಟೆಗೆ ಎಂದಿನಂತೆ ಕಾಲೇಜಿಗೆ ಹೋಗುತ್ತಿದ್ದ ವೇಳೆ ಅತ ಬೈಕ್‌ ಅನ್ನು ಚಲಾಯಿಸಿಕೊಂಡು ಮುಂದಕ್ಕೆ ಹೋಗಿ ವಾಪಸು ಹಿಂದಕ್ಕೆ ತಿರುಗಿಸಿಕೊಂಡು ಬಂದು ತೊಂದರೆ ನೀಡಿದ್ದಾಗಿ ಆರೋಪಿಸಲಾಗಿದೆ.

    ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ವೇಣೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    DAKSHINA KANNADA

    ವಿಧಾನ ಪರಿಷತ್‌ ಉಪ ಚುನಾವಣೆ: ದ.ಕ. ಜಿಲ್ಲಾದ್ಯಂತ ಮದ್ಯ ನಿಷೇಧ

    Published

    on

    ಮಂಗಳೂರು: ಕರ್ನಾಟಕ ವಿಧಾನ ಪರಿಷತ್‌ಗೆ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಅ.19ರಂದು ಸಂಜೆ 4ರಿಂದ ಅ.21ರ ಸಂಜೆ 4ರವರೆಗೆ ಹಾಗೂ ಮತ ಎಣಿಕೆಯ ದಿನವಾದ ಅ.24ರಂದು ಬೆಳಗ್ಗೆ 6ರಿಂದ ಸಂಜೆ 6 ರವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

    Continue Reading

    LATEST NEWS

    Trending