Connect with us

LATEST NEWS

ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಂ ಯುವತಿಯರು ಧರ್ಮದ ಚೌಕಟ್ಟು ಮೀರುವಂತಿಲ್ಲ: MDF ವಾರ್ನಿಂಗ್

Published

on

ಮಂಗಳೂರು: ಇತ್ತೀಚೆಗೆ ಮುಸ್ಲಿಂ ಸಂಘಟನೆಯೊಂದು ಸಾಮಾಜಿಕ ತಾಣಗಳಲ್ಲಿ ನೈತಿಕ ಪೊಲೀಸ್ ಗಿರಿಯ ಬೆದರಿಕೆ ಒಡ್ಡಿದ್ದು ಅಷ್ಟೇ ಅಲ್ಲದೆ ವಾಟ್ಸಾಪ್ ಗ್ರೂಪ್ ಮೇಲೆ ಕಣ್ಣಿಟ್ಟಿದ್ದು ಇದರ ಬಗ್ಗೆ ನಿಖರವಾದ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ.


ಮುಸ್ಲಿಂ ಡಿಫೆನ್ಸ್ ಫೋರ್ಸ್ ಸಂಘಟನೆ ವಾಟ್ಸಾಪ್ ಗ್ರೂಪ್ ರಚಿಸಿ ಹಿಜಾಬ್, ಬುರ್ಖಾ ಧರಿಸಿ ಹೊರಬರುವ ಯುವತಿಯರ ಮೇಲೆ ನಿಗೂಢವಾಗಿ ಕಾರ್ಯಾಚರಿಸುತ್ತಿದೆ ಎನ್ನಲಾಗಿದೆ. ಮುಸ್ಲಿಂ ಸಂಘಟನೆಯೊಂದರಿಂದ ಮಂಗಳೂರಿನಲ್ಲಿ ಹವಾ ಸೃಷ್ಟಿಸಲು ಸೋಶಿಯಲ್ ಮೀಡಿಯಾವನ್ನು ಬಳಸಿಕೊಳ್ಳಲಾಗುತ್ತಿದೆ.

ಬುರ್ಖಾ ಧರಿಸಿ ಹಿಂದೂ ಯುವಕರೊಂದಿಗೆ ಪಾರ್ಕ್, ಮಾಲ್, ಥೇಟರ್ ಸುತ್ತುವ ಯುವತಿಯರನ್ನು ಟಾರ್ಗೆಟ್ ಮಾಡಿ ಅವರಿಗೆ (ಎಂಡಿಎಫ್) ಬೆದರಿಕೆ ಹಾಕಿದೆ.

ಹಿಜಾಬ್, ಬುರ್ಖಾ ಧರಿಸಿ ಹೊರ ಬರುವ ಯುವತಿಯರ ಮೇಲೆ ಎಂಡಿಎಫ್ ಕಣ್ಣಿಡುತ್ತಿದೆ. ಸಂಘಟನೆಗಳು ಮುಸ್ಲಿಂ ನೈತಿಕ ಪೊಲೀಸ್ ಗಿರಿ ನಡೆಸಲು ಮುಂದಾಗಿದ್ದು, ಬುರ್ಖಾ ಧರಿಸಿ ಅಸಭ್ಯವಾಗಿ ವರ್ತಿಸುವ ಯುವತಿಯರನ್ನು ಟಾರ್ಗೆಟ್ ಮಾಡುತ್ತಿದೆ. ಈ ಯುವತಿಯರ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಎಚ್ಚರಿಕೆಯ ಸಂದೇಶವನ್ನು ಹರಿಬಿಡಲಾಗಿದೆ.

ಸಿಟಿ ಸೆಂಟರ್‌ನ ಕಾರ್ ಪಾರ್ಕಿಂಗ್ ಮಾಡುವ ಸ್ಥಳದಲ್ಲಿ ಬುರ್ಖಾ ಹಾಕಿಕೊಂಡು ನಿಮ್ಮ ಅಸಭ್ಯ ವರ್ತನೆಗಳನ್ನು ಕಂಡು ನಮ್ಮ ಕಾರ್ಯಕರ್ತರು ಬುದ್ಧಿ ಮಾತು ಹೇಳಿ ಪೋಷಕರಿಗೂ ತಿಳಿಸಿ ಎಚ್ಚರಿಕೆಯನ್ನು ಕೊಟ್ಟಿದ್ದೇವೆ. ಆದ್ದರಿಂದ ಇನ್ನೂ ಮುಂದೆ ಇಂತಹ ಅಹಿತಕರ ಘಟನೆ ನಮ್ಮ ಕಾರ್ಯಕರ್ತರ ಕಣ್ಣಿಗೆ ಬಿದ್ದರೆ, ಧರ್ಮದೇಟು ಕೊಟ್ಟು ಯಾವುದೇ ಮುಲಾಜಿಲ್ಲದೆ ಕಾರ್ಯ ನಿರ್ವಹಿಸಲಿದ್ದೇವೆ.

ಆದ್ದರಿಂದ ಪೋಷಕರೆ ನಿಮ್ಮ-ನಿಮ್ಮ ಮಕ್ಕಳ ಚಲನವಲನಗಳನ್ನು ಪರಿಶೀಲನೆ ಮಾಡಿ ಕಾಲೇಜ್‍ಗೆ ಎಷ್ಟು ಗಂಟೆಗೆ ತಲುಪುತ್ತಾಳೆ, ಕಾಲೇಜಿನಿಂದ ಮನೆಗೆ ಎಷ್ಟು ಗಂಟೆಗೆ ತಲುಪುತ್ತಾಳೆ ಎಂದು ಗಮನಿಸಿ ಎಂಬ ಮುಸ್ಲಿಂ ಯುವತಿಯರ ಮೇಲೆ ನಿಯಂತ್ರಣ ಹೇರುವಂತಹ ಪೋಸ್‍ಗಳನ್ನು ಎಂಡಿಎಫ್ ಹಾಕುತ್ತಿದೆ.

ಈ ಹಿನ್ನೆಲೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಡಿಸಿಪಿ ಹರಿರಾಂ ಶಂಕರ್ ನೇತತ್ವದಲ್ಲಿ 6 ಪೊಲೀಸ್ ಅಧಿಕಾರಿಗಳ ತಂಡ ರಚಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ‘ಇತ್ತೀಚೆಗೆ ಮುಸ್ಲಿಂ ಢಿಫೆನ್ಸ್ ಫೋರ್ಸ್ ಎಂಬ ವಾಟ್ಸಾಪ್ ಗ್ರೂಪ್ ರಚಿಸಲಾಗಿದ್ದು ಅದರಲ್ಲಿ ಮತೀಯತೆಯ ಆಧಾರದಲ್ಲಿ ಕೆಲವು ವಿಷಯಗಳನ್ನು ಹರಿಯಬಿಡಲಾಗುತ್ತಿದೆ.

ಮುಖ್ಯವಾಗಿ ಮುಸ್ಲಿಂ ಹೆಣ್ಣು ಮಕ್ಕಳಿಗೆ ಕಟ್ಟೆಚ್ಚರ ನೀಡುವುದು, ಮಾಲ್‌ಗಳಲ್ಲಿ ತಿರುಗಾಡುವ ಮಕ್ಕಳ ಪೋಷಕರಿಗೆ ಎಚ್ಚರಿಕೆ ನೀಡುವುದು, ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ತೆಗೆದರೆ ಅಂಥವರ ವಿರುದ್ಧ ನಾವು ಕಠಿಣ ಕ್ರಮಗಳನ್ನು ಅನುಸರಿಸುತ್ತೇವೆ ಎಂಬ ಅನೇಕ ಮೆಸೇಜ್‌ಗಳು ಗುಂಪಿನಲ್ಲಿದೆ ಎನ್ನಲಾಗಿದೆ.

ಈ ಬಗ್ಗೆ ನಿಗಾ ಇಡಲು, ಸಾಮಾಜಿಕ ಜಾಲತಾಣಗಳನ್ನು ನಿಯಂತ್ರಿಸಲೆಂದೇ ಓರ್ವ ಅಧಿಕಾರಿ ಜೊತೆ 6 ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸ್ ಕಮಿಷನರ್ ಹೇಳಿದ್ದಾರೆ.

 

 

Click to comment

Leave a Reply

Your email address will not be published. Required fields are marked *

DAKSHINA KANNADA

ಪತಿ ಇನ್ನಿಲ್ಲ ಅನ್ನೋ ಸುದ್ದಿ ಗೊತ್ತಾಗಿ ಮತದಾನದ ಕೊನೆ ಆಸೆ ತೀರಿಸಿದ ಪತ್ನಿ.‌.!

Published

on

ಮಂಗಳೂರು : ಅವರ ಪತಿ ಆಸ್ಪತ್ರೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ. ಅದೇ ದಿನ ರಾಜ್ಯದಲ್ಲಿ ಎರಡನೇ ಹಂತದ ಮತದಾನ ಕೂಡಾ ನಡೆದಿದೆ. ಆಕೆಗೆ ಪತಿ ಇನ್ನಿಲ್ಲ ಅನ್ನೋ ವಿಚಾರವನ್ನು ಯಾರೋ ತಿಳಿಸಿದ್ದಾರೆ. ಆದ್ರೆ ಆಕೆ ಪತಿಯ ಕೊನೆ ಆಸೆ ಈಡೇರಿಸಿದ ಬಳಿಕ ಪತಿಯ ಅಂತಿಮ ದರ್ಶನ ಪಡೆದಿದ್ದಾರೆ‌.

ಇದು ಮತದಾನ ಮಾಡದೇ ಇರುವವರಿಗೆ ಇವರೊಂದು ಪಾಠವಾಗಿದೆ. ಮಂಗಳವಾರ ರಾಜ್ಯದಲ್ಲಿ ನಡೆದ ಎರಡನೇ ಹಂತದ ಮತದಾನದಲ್ಲಿ ನಡೆದ ಘಟನೆ ಇದು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೊಪ್ಪ ಪಂಚಾಯತ್ ವ್ಯಾಪ್ತಿಯಲ್ಲಿ ಇದು ನಡೆದಿದೆ. ಇಲ್ಲಿನ ಆಡುಗೋಡಿನ ಕಲಾವತಿ ವೆಂಕಟೇಶ್ ಇವರ ಪತಿ ವೆಂಕಟೇಶ್ ಚುನಾವಣೆಯ ದಿನ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ  ಇಹಲೋಕ ತ್ಯಜಿಸಿದ್ದಾರೆ.  ಇನ್ನೇನು ಓಟು ಹಾಕಲು ಹೋಗಬೇಕು ಅನ್ನೋ ಅಷ್ಟರಲ್ಲಿ ಪತಿ ಇಹಲೋಕ ತ್ಯಜಿಸಿದ ಮಾಹಿತಿ ಪತ್ನಿ ಕಲಾವತಿಗೆ ಬಂದಿದೆ. ಆದ್ರೆ ಕಲಾವತಿ ಅವರು ಈ ವೇಳೆ ತಮ್ಮ ಅಮೂಲ್ಯ ಮತ ಚಲಾಯಿಸಿ, ಬಳಿಕ ಪತಿಯ ದೇಹವನ್ನು ನೋಡಲು ತೆರಳಿದ್ದಾರೆ.

ಪತಿ ಒಂದು ಪಕ್ಷದ ಅಭಿಮಾನಿಯಾಗಿದ್ದು ,ಆ ಪಕ್ಷದ ನಾಯಕನನ್ನು ಯಾವಾಗಲು ಜಪಿಸ್ತಾ ಇದ್ರು ಹಾಗಾಗಿ ಪತಿಯ ಕೊ‌‌ನೆಯ ಆಸೆಯಾಗಿ ಅವರ ಪ್ರೀಯಪಟ್ಟವರಿಗೆ ಮತ ಚಲಾಯಿಸಿದೆ ಅಂತ ಕಲಾವತಿ ಹೇಳಿಕೊಂಡಿದ್ದಾರೆ.

Continue Reading

DAKSHINA KANNADA

ಪ್ರಜ್ವಲ್‌ ಅಶ್ಲೀಲ್ ವಿಡಿಯೋ ಡಿಲೀಟ್ ಮಾಡಿ..! ಎಸ್‌ಐಟಿ ವಾರ್ನಿಂಗ್..!

Published

on

ಮಂಗಳೂರು : ಸದ್ಯ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಕರಣ ಬೆಂಬತ್ತಿರುವ ಎಸ್ ಐ ಟಿ ಖಡಕ್ ವಾರ್ನ್ ಮಾಡಿದೆ. ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡದಂತೆ ಹೇಳಿದೆ. ಅಷ್ಟೇ ಅಲ್ಲದೆ, ಅಶ್ಲೀಲ ವಿಡಿಯೋ ಮೊಬೈಲ್ ನಲ್ಲಿ ಸ್ಟೋರ್ ಮಾಡಿಕೊಂಡಿದ್ದರೆ, ಒಂದು ವೇಳೆ ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೇ, ಯಾವುದೇ ಅಶ್ಲೀಲ ವೀಡಿಯೋ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಇದ್ದರೆ ಅದರ ರಚನಕಾರರು ನೀವು ಎಂದು ಪರಿಗಣಿಸಿ ಕ್ರಿಮಿನಲ್ ಕೇಸ್ ಬೀಳುತ್ತದೆ. ಆದ್ದರಿಂದ, ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

BANTWAL

ಸಾಲದ ಶೂಲಕ್ಕೆ ಜೀವಾಂತ್ಯಗೊಳಿಸಿದ ಯುವಕ…!

Published

on

ಮಂಗಳೂರು : ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ‌ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲೊಂದರಲ್ಲಿ ರೂಂ ಮಾಡಿದ್ದ. ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಮಂಗಖವಾರ ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಸ್ಪಂದಿಸಿರಲಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ವಲ್ ಮೃ*ತದೇಹದ ಪತ್ತೆಯಾಗಿದೆ.


ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ನೋವಿನಲ್ಲೂ ಇದ್ದ ಎಂದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending