DAKSHINA KANNADA
ಮುಸ್ಲಿಂ ಸಮುದಾಯದ ಮುಖಂಡರಿಂದ ಇಂದಿನ ಶಾಂತಿ ಸಭೆಗೆ ಬಹಿಷ್ಕಾರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದು ಕರೆದಿರುವ ಶಾಂತಿ ಸಭೆಗೆ ಮುಸ್ಲಿಂ ಸಮುದಾಯದ ಮುಖಂಡರು ಬಹಿಷ್ಕಾರ ಹಾಕಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು 11 ಗಂಟೆಗೆ ಎಲ್ಲಾ ಸಮುದಾಯದ ಮುಖಂಡರಿಗೆ ಮತ್ತು ಸಂಘಸಂಸ್ಥೆಗಳ ನಾಯಕರ ಜೊತೆ ಶಾಂತಿ ಸಭೆಗೆ ಆಹ್ವಾನ ನೀಡಲಾಗಿತ್ತು. ಆದರೆ ಮುಖ್ಯಮಂತ್ರಿ ತಾರತಮ್ಯ ನೀತಿಯನ್ನು ಖಂಡಿಸಿ ಇಂದಿನ ಸಭೆಗೆ ಬಹಿಷ್ಕಾರ ಹಾಕಲಾಗಿದೆ.
ಮುಸ್ಲಿಂ ಸೆಂಟ್ರಲ್ ಕಮಿಟಿ, ಎಸ್ಕೆಎಸ್ಎಸ್ಎಫ್, ಪಿಎಫ್ಐ, ಜಮಾತೆ ಇಸ್ಲಾಮ್ ಸೇರಿ ಹಲವು ಮುಸ್ಲಿಂ ಸಂಘಟನೆಗಳು ಬಹಿಷ್ಕಾರ ಹಾಕಿವೆ.
ಜಿಲ್ಲಾಧಿಕಾರಿಗಳ ಮೇಲೆ ನಮಗೆ ಅಪಾರ ಗೌರವಿವೆ. ಆದರೆ ರಾಜ್ಯದ ಮುಖ್ಯಮಂತ್ರಿಗಳು ಜಿಲ್ಲೆಗೆ ಬಂದ ವೇಳೆ ತಾರತಮ್ಯ ನೀತಿ ತೋರಿದ್ದಾರೆ. ಜೊತೆಗೆ ಸೌಜನ್ಯಕ್ಕಾದರೂ ಮುಸ್ಲಿಂ ಮುಖಂಡರನ್ನು ವಿಶ್ವಾಸ ತೆಗೆದುಕೊಂಡಿಲ್ಲ. ಒಂದು ವೇಳೆ ವೇಳೆ ಸಿಎಂ ಭೇಟಿ ವೇಳೆ ಶಾಂತಿ ಸಭೆ ಕರೆದಿದ್ದರೆ ನಾವು ಪಾಲ್ಗೊಳ್ಳುತ್ತಿದ್ದೆವು.
ಕೆ. ಅಶ್ರಫ್, ಮುಸ್ಲಿಂ ಒಕ್ಕೂಟದ ಅಧ್ಯಕ್ಷ
ಈ ಸಭೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವ, ಮಂಗಳೂರು ನಗರ ಪೊಲೀಸ್ ಕಮೀಷನರ್, ಜಿಲ್ಲಾ ಎಸ್ಪಿ, ಜಿ.ಪ.ಸಿಇಒ ಸೇರಿ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಸಭೆಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
DAKSHINA KANNADA
ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ
ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.