Wednesday, June 16, 2021

ಕರಾವಳಿಯಲ್ಲಿ ಎಲ್ಲೆಡೆ ಇಂದು ಈದುಲ್ ಫಿತ್ರ್ – ಮನೆಯಲ್ಲೇ ಪ್ರಾರ್ಥನೆ, ಶುಭಾಷಯಗಳ ವಿನಿಮಯ..!

ಮಂಗಳೂರು :  ರಂಝಾನ್ ಉಪವಾಸ ವೃತಾಚರಣೆ ಕೊನೆಗೊಂಡ ಹಿನ್ನೆಲೆ ಇಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಸ್ಲಿಮ್ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನ ಆಚರಿಸುತ್ತಿದ್ದಾರೆ.

ಕೊರೊನಾ ಕಾರಣದಿಂದಾಗಿ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಿರ್ಬಂಧಿಸಲ್ಪಟ್ಟ ಹಿನ್ನೆಲೆ ಮನೆಯಲ್ಲಿಯೇ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು.

ಕುಟುಂಬಿಕರ ಜೊತೆಗೂಡಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಪರಸ್ಪರ ಶುಭಾಷಯವನ್ನ ವಿನಿಮಯ ಮಾಡಿಕೊಂಡರು.

ಲಾಕ್ಡೌನ್ ನಿಂದಾಗಿ ಈದ್ ಹಬ್ಬದ ಶಾಪಿಂಗ್ ನಿಂದ ದೂರವುಳಿದಿದ್ದ ಮುಸ್ಲಿಮರು, ಜಿಲ್ಲಾ ಖಾಝಿ ಅವರ ಕರೆಯಂತೆ ಸರಳವಾಗಿ ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

ಕೊರೊನಾ ಮುಕ್ತ ಭಾರತಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆಯೂ ಈಗಾಗಲೇ ಧಾರ್ಮಿಕ ನಾಯಕರು ಕರೆ ನೀಡಿದ್ದಾರೆ.

ಶಾಸಕ ಖಾದರ್ ಮನೆಯಲ್ಲೂ ಸರಳ ಈದ್ : ಇನ್ನು ರಾಜ್ಯಾದ್ಯಂತ ಲಾಕ್ಡೌನ್ ಹಿನ್ನೆಲೆಯಲ್ಲಿ ಮಂಗಳೂರು ಶಾಸಕ ಯುಟಿ ಖಾದರ್ ಸರಳವಾಗಿ ತಮ್ಮ ಮನೆಯಲ್ಲೇ ಈದುಲ್ ಪಿತರ್ ಹಬ್ಬ ಆಚರಿಸಿಕೊಂಡರು.
ತಮ್ಮ ಕಟುಂಬದ ಸದಸ್ಯರು, ಬಂಧುಗಳು ಮತ್ತು ಹಿತೈಷಿಗಳ‌ ಜೊತೆ ಮನೆಯಲ್ಲೇ ಈದ್ ನಮಾಝ್ ನಿರ್ವಹಿಸಿದರು. ಬಳಿಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...