Monday, January 24, 2022

ಈ ಪುಟ್ಟ ಬಾಲಕಿಯ ಅಮೂಲ್ಯ ಫೋನ್ ಕಳೆದು ಹೋಗಿದೆ..! ಪ್ಲೀಸ್ ಹುಡುಕಿ ಕೊಡಿ..

ಮಂಗಳೂರು : ನನ್ನ ಜೀವನದ ಅಮೂಲ್ಯ ಜೀವವಾಗಿದ್ದ ತಾಯಿ ಹೋಗಿಬಿಟ್ಟರು. ಅವರ ನೆನಪಿಗಾಗಿ  ಇರುವುದು ಅಮೂಲ್ಯ ಫೋಟೋಗಳು. ಆ ಮೊಬೈಲ್‌ ಕಳೆದು ಹೋಗಿದೆ.

ದಯವಿಟ್ಟು ಮೊಬೈಲ್ ಕೊಡಿಸಿಕೊಡಿ” ಎಂದು ಬಾಲಕಿ ಮಾಡಿರುವ ವಿಡಿಯೋ ವೈರಲ್ ಆಗಿದೆ. ಕೊಡಗು ಜಿಲ್ಲೆಯ ಕುಶಾಲನಗರದ ನಿವಾಸಿ ಪುಟ್ಟ ಬಾಲಕಿ ಹೃತಿಕ್ಷಳಿಗೆ ಮತ್ತು ಅವಳ ತಂದೆ-ತಾಯಿಗೆ ಕೊರೊನಾ ಸೋಂಕು ತಗುಲಿತ್ತು.

ಮಗಳು ಮತ್ತು ದಿನಗೂಲಿ ನೌಕರರಾದ ತಂದೆ ಮನೆಯಲ್ಲೇ ಕ್ವಾರಂಟೈನ್‌ ಆಗಿ ಚಿಕಿತ್ಸೆ ಪಡೆದರು. ತಾಯಿಯನ್ನು ಮಡಿಕೇರಿ ಕೋವಿಡ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಮೇ 16 ರಂದು ಚಿಕಿತ್ಸೆ ಫಲಿಸದೆ ಆಕೆಯ ತಾಯಿ ಮೃತಪಟ್ಟರು.

ಆ ವೇಳೆ ತಾಯಿಯ ಜೊತೆಗಿದ್ದ ಮೊಬೈಲ್ ವಾಪಸ್ ಸಿಕ್ಕಿರಲಿಲ್ಲ.ಆ ಮೊಬೈಲ್​ನಲ್ಲಿ ತನ್ನ ತಾಯಿಯ ಫೋಟೋಗಳು ಮತ್ತು ಇತರ ನೆನಪುಗಳು ಇವೆ ಎಂಬ ಕಾರಣಕ್ಕೆ ಇದೀಗ ಹೃತಿಕ್ಷ ಅದನ್ನು ವಾಪಸ್​ ಪಡೆಯುವ ಕಾತರದಲ್ಲಿದ್ದಾಳೆ.

ಇದಕ್ಕಾಗಿ ಜಿಲ್ಲಾಧಿಕಾರಿಗಳಿಗೆ, ಶಾಸಕರಿಗೆ ಮತ್ತು ಮಡಿಕೇರಿ ಕೋವಿಡ್ ಆಸ್ಪತ್ರೆಯ ಸಿಬ್ಬಂದಿಗೆ ಬಹಿರಂಗ ಪತ್ರವೊಂದನ್ನು ಬರೆದಿದ್ದಾಳೆ.

“ನಾನು ತಾಯಿಯನ್ನು ಕಳೆದುಕೊಂಡು ತಬ್ಬಲಿಯಾಗಿದ್ದೇನೆ. ನನ್ನ ತಾಯಿಯ ನೆನಪುಗಳು ಆ ಮೊಬೈಲ್‌ನಲ್ಲಿರುತ್ತದೆ. ಆದ್ದರಿಂದ ಯಾರಾದರೂ ತೆಗೆದುಕೊಂಡಿದ್ದರೆ ಅಥವಾ ಯಾರಿಗಾದರೂ ಸಿಕ್ಕಿದ್ದರೆ ದಯವಿಟ್ಟು ಈ ತಬ್ಬಲಿಗೆ ಅದನ್ನು ತಲುಪಿಸಿ” ಎಂದು ಸಾರ್ವಜನಿಕವಾಗಿ ಮನವಿ ಮಾಡಿದ್ದಾಳೆ.

ಮಡಿಕೇರಿಯ ಕೋವಿಡ್‌ ಆಸ್ಪತ್ರೆಯಲ್ಲಿ ಈ ಮೊಬೈಲ್‌ ಅಲ್ಲದೆ ಇನ್ನೂ ಅನೇಕರ ಮೊಬೈಲ್‌ ಕಳವಾಗಿದೆ. ರೋಗಿಗಳು ಮೃತಪಟ್ಟರೆ ಅವರ ಬೆಲೆಬಾಳುವ ವಸ್ತುಗಳು ಅವರಿಗೆ ಸಿಗುತ್ತಿಲ್ಲ.

ಅಮೂಲ್ಯ ಜೀವವೇ ಹೋದ ಮೇಲೆ ಮೊಬೈಲ್‌ ಇದ್ದು ಏನು ಎಂದು ರೋಗಿಗಳ ಸಂಬಂಧಿಕರು ನಿರಾಸಕ್ತಿ ವಹಿಸುತ್ತಿದ್ದಾರೆ.ಇದರಿಂದಾಗಿ ಕಳ್ಳರಿಗೆ ಮತ್ತೆ ಮತ್ತೆ ಕದಿಯಲು ಪ್ರೋತ್ಸಾಹ ನೀಡಿದಂತಾಗಿದೆ.

ಈ ಬಾಲಕಿಯ ಮೊಬೈಲ್‌ ಕುರಿತಾದ ದೂರು ವೈರಲ್‌ ಆಗಿರುವುದರಿಂದ ಪೊಲೀಸರು ತನಿಖೆ ನಡೆಸುತ್ತಿದ್ದು, ಮೊಬೈಲ್‌ ಹುಡುಕಿಸಿಕೊಡುವುದಾಗಿ ಜಿಲ್ಲಾಡಳಿತ ಭರವಸೆ ನೀಡಿದೆ.

Hot Topics

ನಾಪತ್ತೆಯಾಗಿದ್ದ ಬಸ್ ಮಾಲಕ ಶವವಾಗಿ ಪತ್ತೆ: ಸಾಲದಿಂದ ಬೇಸತ್ತು ಆತ್ಮಹತ್ಯೆ ಶಂಕೆ

ಶಿವಮೊಗ್ಗ: ಶನಿವಾರದಂದು ನಾಪತ್ತೆಯಾಗಿದ್ದ ಸಾಗರದ ಪ್ರಕಾಶ್ ಟ್ರಾವೆಲ್ಸ್​ನ ಮಾಲೀಕ ಇಂದು ಶವವಾಗಿ ಪತ್ತೆಯಾಗಿದ್ದಾರೆ.ಹೊಸನಗರ ತಾಲೂಕಿನ ಪಟಗುಪ್ಪೆ ಸೇತುವೆ ಬಳಿ ಶನಿವಾರದಂದು ಅವರ ಕಾರು ಹಾಗೂ ಮೊಬೈಲ್ ಪತ್ತೆಯಾಗಿತ್ತು. ಅನುಮಾನಗೊಂಡು ಪಟಗುಪ್ಪ ಸೇತುವೆ ಬಳಿ...

ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿದ ಬಿಜೆಪಿ ಮುಖಂಡರು

ಬಂಟ್ವಾಳ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಇಂದು ಹಿರಿಯ ಮುಖಂಡರಾದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರ ಬಂಟ್ವಾಳದ ನಿವಾಸಕ್ಕೆ ಭೇಟಿ ಮಾಡಿ ಅವರ ಆರ್ಶೀವಾದ ಪಡೆದರು.ಈ ವೇಳೆ ರಾಜ್ಯ...

‘ಸುಳ್ಳುಗಳ ಮೂಲಕ ನಾರಾಯಣಗುರುವಿಗೆ ಮಾಡಿದ ಅಪಚಾರವನ್ನು ಮುಚ್ಚಿಟ್ಟುಕೊಳ್ಳಲಾಗದು’

ಮಂಗಳೂರು: ಸುಳ್ಳುಗಳ ಮೂಲಕ ಸಾಮಾಜಿಕ ಸುಧಾರಣೆಯ ಹರಿಕಾರ  ನಾರಾಯಣ ಗುರು ಅವರಿಗೆ ಮಾಡಿದ ಅಪಚಾರವನ್ನು ಬಿಜೆಪಿ ಮುಚ್ಚಿಟ್ಟುಕೊಳ್ಳಲಾಗದು ಎಂದು ಸಿಪಿಐಎಂ ಹೇಳಿದೆ.ಕೇರಳ ರಾಜ್ಯ ಸರಕಾರ ಸೂಚಿಸಿದ ನಾರಾಯಣಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ...