Sunday, December 4, 2022

ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರಿಂದ 410ನೇ ಮೈಸೂರು ದಸರಾಕ್ಕೆ ವಿದ್ಯುಕ್ತ ಚಾಲನೆ

ಮೈಸೂರು: ವಿಶ್ವವಿಖ್ಯಾತ, ನಾಡಿನ ಹೆಮ್ಮೆಯ ‘ಮೈಸೂರು ದಸರಾ -2021’ರ ಮಹೋತ್ಸವಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು 410ನೇ ನಾಡಹಬ್ಬ ದಸರಾ ಹಬ್ಬಕ್ಕೆ ಗುರುವಾರ ಚಾಲನೆ ನೀಡಿದರು.


ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ದೀಪಾ ಬೆಳಗುವ ಮೂಲಕ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.
ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆಯೊಂದಿಗೆ ಬೆಳಗ್ಗೆ 8.15ರಿಂದ 8.45ರ ಸಲ್ಲುವ ಶುಭ ಮುಹೂರ್ತದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ದಸರಾಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಸಚಿವರಾದ ಎಸ್.ಟಿ.ಸೋಮಶೇಖರ್, ಆರ್.ಅಶೋಕ್, ಬಿ.ಸಿ.ಪಾಟೀಲ್ ಮತ್ತಿತರರಿದ್ದರು.
ಸಂಜೆ 6ಕ್ಕೆ ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.
ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರಿಗಿದು ಮೊದಲ ದಸರಾ ಆಗಿದೆ. ಈ ಬಾರಿ ಬಸವರಾಜ ಬೊಮ್ಮಾಯಿ ಅವರಿಗೆ ಆ ಅವಕಾಶ ಸಿಗುತ್ತಿರುವುದು ವಿಶೇಷ. ಎಚ್‌.ಡಿ.ದೇವೇಗೌಡ-ಎಚ್‌.ಡಿ.ಕುಮಾರಸ್ವಾಮಿ ಅವರ ನಂತರ ಈ ರೀತಿ ತಂದೆ-ಮಗನಿಗೆ ಜಂಬೂ ಸವಾರಿ ಉದ್ಘಾಟಿಸುವ ಅದೃಷ್ಟ ಒದಗಿದೆ.

LEAVE A REPLY

Please enter your comment!
Please enter your name here

Hot Topics