HomeLATEST NEWSಡೆತ್‌ನೋಟ್‌ ಬರೆದಿಟ್ಟು ಯುವತಿ ಆತ್ಮಹತ್ಯೆ ಪ್ರಕರಣ: ಎಎಸ್​​ಐ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್‌

ಡೆತ್‌ನೋಟ್‌ ಬರೆದಿಟ್ಟು ಯುವತಿ ಆತ್ಮಹತ್ಯೆ ಪ್ರಕರಣ: ಎಎಸ್​​ಐ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್‌

ಮೈಸೂರು: ಡೆತ್​​ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್​​ಐ ಸೇರಿದಂತೆ 8 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.


ಯುವತಿ ಆತ್ಮಹತ್ಯೆಗೂ ಮುನ್ನಾ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದು, ಪೊಲೀಸರು ಆಕೆಗೆ ಸರಿಯಾಗಿ ಸ್ಪಂದಿಸಿರಲಿಲ್ಲ ಎಂಬ ಆರೋಪ ಕೇಳಿಬಂದಿತ್ತು.

ಹುಲ್ಲಹಳ್ಳಿ ಪೊಲೀಸ್ ಠಾಣೆಯ ಎಎಸ್​​​ಐ ಶಿವರಾಜು ಕರ್ತವ್ಯ ಲೋಪ ಎಸಗಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ನಂಜನಗೂಡು ಠಾಣೆಯ ವೃತ್ತ ನಿರೀಕ್ಷಕರು ನೀಡಿದ ವರದಿ ಆಧಾರದ ಮೇಲೆ ಸುರೇಶ್, ಗುರುಮಲ್ಲು, ಲೋಕೇಶ್, ಜಡೆ ಮಲ್ಲಯ್ಯ, ಮಲ್ಲಿಕಾರ್ಜುನಯ್ಯ, ಗೌರಮ್ಮ, ರಾಜಮ್ಮ ಸೇರಿ ಎಎಸ್​​ಐ ಶಿವರಾಜು ವಿರುದ್ಧ ಎಫ್ಐಆರ್ ದಾಖಲಾಗಿದೆ‌.

ಘಟನೆ ವಿವರ
ನಂಜನಗೂಡು ತಾಲೂಕು ಚೆನ್ನಪಟ್ಟಣ ಗ್ರಾಮದ ಯುವತಿ ಶೋಭಾ ಎಂಬಾಕೆಯನ್ನು, ಅದೇ ಗ್ರಾಮದ ಲೋಕೇಶ್ ಎಂಬಾತ 5 ವರ್ಷಗಳಿಂದ ಪ್ರೀತಿಸುತ್ತಿದ್ದ. ಮದುವೆ ಆಗುವುದಾಗಿ ನಂಬಿಸಿದ ಲೋಕೇಶ್ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ.

ಈ ಮಧ್ಯೆ ಸುರೇಶ್ ಎಂಬಾತ ಆಕೆಯ ಜೊತೆ ಮಾತನಾಡಿ ಮಧ್ಯಪ್ರವೇಶಿಸಿದ್ದಕ್ಕೆ ಲೋಕೇಶ್, ಯುವತಿಯಿಂದ ದೂರಾಗಿದ್ದಾನೆ ಎನ್ನಲಾಗಿದೆ.
ಕಳೆದ 5 ವರ್ಷದಿಂದ ಪ್ರೀತಿಸುತ್ತಿದ್ದ ಲೋಕೇಶ್ ನಂತರ ಬೆಂಗಳೂರಿನಲ್ಲಿ ಸೆಟಲ್ ಆಗಿ ಮೋಸ ಮಾಡಿದ್ದಾನೆ. ನ್ಯಾಯ ಒದಗಿಸುವಂತೆ ಮೃತ ಯುವತಿಯ ಮನೆಯವರು ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ.

ದೂರು ಕೊಟ್ಟ ನಂತರ ಲೋಕೇಶ್ ತನ್ನ ಪ್ರಿಯತಮೆಯ ಮನೆಗೆ ಬಂದು ಗಲಾಟೆ ಮಾಡಿದ್ದಾನೆ. ಇದರಿಂದ ನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಳು.
ಮನೆಯವರು ಆಕೆಯ ಅಂತ್ಯಕ್ರಿಯೆ ನೆರವೇರಿಸಿ 11 ದಿನಗಳ ಕಾರ್ಯ ಮಾಡಿದ ನಂತರ ಮನೆ ಸ್ವಚ್ಛ ಮಾಡುವಾಗ ಆಕೆ ಬರೆದ ಡೆತ್​ನೋಟ್ ದೊರಕಿತ್ತು.

ಲೋಕೇಶ್ ವಂಚಿಸಿದ್ದು, ಸುರೇಶ್ ಹೆದರಿಸಿದ ವಿಚಾರವನ್ನು ಡೆತ್​ನೋಟ್​ನಲ್ಲಿ ಉಲ್ಲೇಖಿಸಿದ್ದಳು. ತನ್ನ ಸಾವಿಗೆ ಲೋಕೇಶ್ ಕಾರಣವೆಂದು ಡೆತ್‌ನೋಟ್‌ನಲ್ಲಿ ಬರೆದಿರುವ ಯುವತಿ,

ಲೋಕೇಶ್‌ಗೆ ಜೈಲು ಶಿಕ್ಷೆ ನೀಡಬೇಕು, ಆತನನ್ನು ಗಲ್ಲಿಗೆ ಏರಿಸಬೇಕೆಂದು ಮನವಿ ಮಾಡಿದ್ದಳು.

Latest articles

ಕೆಲಸ ಇಲ್ಲದವನು ಎಂದು ಬೈಯುತ್ತಿದ್ದ ಅಜ್ಜಿಯನ್ನು ಕೊಂದು ಸುಟ್ಟು ಹಾಕಿದ ಕಿರಾತಕ ಮೊಮ್ಮಗ

ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು...

ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...

ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!

ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು...

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು...