Thursday, August 11, 2022

ಮೈಸೂರು ಶೀತಲ ಸಮರ : ರೋಹಿಣಿ ಸಿಂಧೂರಿ ವಿರುದ್ಧ ಕತ್ತಿ ಮಸೆದ ಪಾಲಿಕೆ ಆಯುಕ್ತೆ ಶಿಲ್ಪಾ ರಾಜೀನಾಮೆ..!

ಮೈಸೂರು: ಮೈಸೂರಿನಲ್ಲಿ ಅಧಿಕಾರಿಗಳ ಮುಸುಕಿನ ಗುದ್ದಾಟ ಇದೀಗ ಅಖಾಡಕ್ಕೆ ಬಂದು ನಿಂತಿದೆ. ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಶಿಲ್ಪಾ ನಾಗ್‌ ಅವರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಆಕ್ರೋಶ ಹೊರಹಾಕಿದ್ದು, ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಇಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಶಿಲ್ಪಾ ನಾಗ್‌, ‘ಇಂತಹ ಉಸಿರುಗಟ್ಟಿಸುವ ವಾತಾವರಣದಲ್ಲಿ ನನಗೆ ಕರ್ತವ್ಯ ನಿರ್ವಹಿಸಲು ಆಗುತ್ತಿಲ್ಲ. ಪಾಲಿಕೆ ಅಯುಕ್ತರ ಹುದ್ದೆಗೆ ಮಾತ್ರವಲ್ಲ, ಐಎಎಸ್‌ ಹುದ್ದೆಗೂ ರಾಜೀನಾಮೆ ನೀಡುತ್ತಿದ್ದೇನೆ.

ರಾಜೀನಾಮೆ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕಳುಹಿಸುತ್ತೇನೆ’ ಎಂದರು. ಜಿಲ್ಲಾಧಿಕಾರಿ ವಿರುದ್ಧ ಹಲವು ಆರೋಪಗಳನ್ನು ಮಾಡಿದ ಅವರು ಸುದ್ದಿಗೋಷ್ಠಿಯಲ್ಲಿ ಕಣ್ಣೀರು ಹಾಕಿದರು.

ಜಿಲ್ಲಾಧಿಕಾರಿ ಅವರು ತುಂಬಾ ಚೀಪ್ ಮೆಂಟಾಲಿಟಿ ಇರುವ ಅಧಿಕಾರಿ, ಇಂತಹವರು ಮೈಸೂರಿನಂಥ ಜಿಲ್ಲೆಯಲ್ಲಿ ಇರಬಾರದು. ಅವರು ಏಕೆ ಈ ರೀತಿ ಹಠ ಮಾಡುತ್ತಿದ್ದಾರೋ ಗೊತ್ತಿಲ್ಲ, ನನ್ನ ಮೇಲೆ ದ್ವೇಷ ಇದ್ದರೆ ಸಾಧಿಸಲಿ. ನನ್ನ ವಿರುದ್ಧ ವೈಯಕ್ತಿಕ ದ್ವೇಷ ಇಟ್ಟುಕೊಂಡು ಮೈಸೂರು ನಗರ ಹಾಗೂ ಇಲ್ಲಿನ ಜನರನ್ನು ಬಲಿಪಶು ಮಾಡಬೇಡಿ ಎಂದು ಕಣ್ಣೀರು ಹಾಕಿದ್ದಾರೆ.

 ಶಿಲ್ಪನಾಗ್ ಕಾಲಿಗೆ ಬಿದ್ದ ಭದ್ರತಾ ಸಿಬ್ಬಂದಿ

ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಪಾಲಿಕೆ ಕಚೇರಿಯಿಂದ ಹೊರ ಹೋಗುತ್ತಿದ್ದ ವೇಳೆ ಪಾಲಿಕೆ ಭದ್ರತಾ ಸಿಬ್ಬಂದಿಯೊಬ್ಬರು ಶಿಲ್ಪನಾಗ್ ಕಾಲಿಗೆ ಬಿದ್ದು, ಹೋಗಬೇಡಿ ಎಂದು ಮನವಿ ಮಾಡಿದ ಪ್ರಸ‌ಂಗ ನಡೆಯಿತು.

ಗುರುವಾರ ಪಾಲಿಕೆ ಗೇಟ್ ಮುಂಭಾಗ ಈ ಮನಕಲಕುವ ಘಟನೆ ನಡೆದಿದೆ. ರಾಜೀನಾಮೆ‌ ಘೋಷಿಸಿ ಪಾಲಿಕೆಯಿಂದ ಹೊರ‌ ನಡೆಯುತ್ತಿದ್ದಾಗ ಓಡೋಡಿ ಬಂದ ಸೆಕ್ಯೂರಿಟಿ ಗಾರ್ಡ್ ಕಾಲಿಗೆ ಬಿದ್ದಿದ್ದಾನೆ.

ತಕ್ಷಣ ಸ್ಪಂದಿಸಿದ ಶಿಲ್ಪನಾಗ್ ಕೈ ಮುಗಿದು ಹೊರಟಿದ್ದಾರೆ.

“ಒಳ್ಳೆಯ ಅಧಿಕಾರಿಗೆ ಈ ರೀತಿಯ ಸಮಸ್ಯೆ ಆಗಬಾರದು. ದಯವಿಟ್ಟು ಈ ನಿರ್ಧಾರ ವಾಪಸ್ ತೆಗೆದುಕೊಳ್ಳಿ” ಎಂದು ಸೆಕ್ಯೂರಿಟಿ ಗಾರ್ಡ್ ಗೋಪಾಲ ಗೌಡ ಮನವಿ ಮಾಡಿದರಲ್ಲದೆ, ಪ್ಲೀಸ್ ಮನಸ್ಸು ಬದಲಿಸಿ ಎಂದು ಕೇಳಿಕೊಂಡರು.

ಪಾಲಿಕೆ ಆಯುಕ್ತ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮೈಸೂರಿನಲ್ಲಿ ಶಿಲ್ಪನಾಗ್ ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನವೇ ಶುರುವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಶಿಲ್ಪನಾಗ್ ಬೆಂಬಲಕ್ಕೆ ನಿಂತ ಜನ, ಟ್ವಿಟ್ಟರ್, ವಾಟ್ಸಪ್, ಫೇಸ್ ಬುಕ್ ಮೂಲಕ ಬೆಂಬಲ ನೀಡಿದ್ದಾರೆ. ಐ ಸ್ಟ್ಯಾಂಡ್ ವಿತ್ ಅವರ್ ಕಮಿಷನರ್ ಎಂಬ ಹ್ಯಾಷ್‌ಟ್ಯಾಗ್ ಮೂಲಕ ಶಿಲ್ಪನಾಗ್ ಉಳಿಸಿಕೊಳ್ಳಲು ಅಭಿಯಾನ ಶುರುವಾಗಿದೆ.

‘ಶಿಲ್ಪಾ ನಾಗ್’ ರಾಜೀನಾಮೆಯನ್ನು ಅಂಗೀಕಾರ ಮಾಡುವುದಕ್ಕೆ ಬಿಡುವುದಿಲ್ಲ : ಸಚಿವ ಎಸ್.ಟಿ ಸೋಮಶೇಖರ್

ಶಿಲ್ಪಾ ನಾಗ್ ಅವರು ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ, ಅಂತಹ ನಿಷ್ಟಾವಂತ ಅಧಿಕಾರಿ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ಅಂಗೀಕಾರ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ. ಶಿಲ್ಪಾ ನಾಗ್ ಅವರ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ಮಾಡಿಸೋದಿಲ್ಲ, ಅವರ ಲಿಮಿಟ್ ನಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ ಎಂದರು. ಈ ವಿಚಾರವನ್ನು ಸಿಎಂ ಗಮನಕ್ಕೆ ತಂದಿದ್ದೇವೆ. ನಾಳೆ ಸಿ ಎಸ್ ರವಿಕುಮಾರ್ ಮೈಸೂರಿಗೆ ತೆರಳಿ ರಿವ್ಯೂ ಮಾಡಲಿದ್ದಾರೆ, ಯಾವುದೇ ಸಮಸ್ಯೆ ಇದ್ದರೂ ಪರಿಹಾರ ಮಾಡುತ್ತೇವೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಸ್ವಾತಂತ್ರ್ಯ ಸಂಭ್ರಮಕ್ಕೆ ಅಹಿತಕರ ಘಟನೆ ಆಗದಂತೆ ದ.ಕದಲ್ಲಿ ಟೈಟ್ ಸೆಕ್ಯೂರಿಟಿ

ಮಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತೋತ್ಸವಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸಿದ್ಧತೆಗಳು ಭರದಿಂದ ನಡೆಯುತ್ತಿದ್ದು, ಇನ್ನೊಂದೆಡೆ ಪೊಲೀಸರು ಬಂದೋಬಸ್ತು ಬಿಗಿಗೊಳಿಸಿದ್ದಾರೆ.ಯಾವುದೇ ಸಂಭಾವ್ಯ ಅಹಿತಕರ ಘಟನೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸರು ಬಿಗಿ ಕಣ್ಗಾವಲು ಇರಿಸಿದ್ದಾರೆ. ಜಿಲ್ಲಾದ್ಯಂತ ಪ್ರಮುಖ...

ಟಿ.ವಿ ನೋಡಲು ಬರುತ್ತಿದ್ದ ಯುವತಿಗೆ ಲೈಂಗಿಕ ದೌರ್ಜನ್ಯ-ವ್ಯಕ್ತಿ ಬಂಧನ

ತೀರ್ಥಹಳ್ಳಿ: ಟಿ.ವಿ ನೋಡಲು ಬರುತ್ತಿದ್ದ ಪಕ್ಕದ ಮನೆಯ ಯುವತಿಗೆ ಲೈಂಗಿಕ ದೌರ್ಜನ್ಯ ನೀಡಿ ಗರ್ಭವತಿಯನ್ನಾಗಿ ಮಾಡಿದ ಆರೋಪದ ಅಡಿಯಲ್ಲಿ ಶಿವಮೊಗ್ಗದ ತೀರ್ಥ ಹಳ್ಳಿಯಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.ಮುರುಳೀಧರ್ ಭಟ್ ಬಂಧನಕ್ಕೊಳಗಾದ ವ್ಯಕ್ತಿ.ತೀರ್ಥಹಳ್ಳಿಯ ನಾಲೂರಿನಲ್ಲಿ...

ಬೆಳ್ತಂಗಡಿ: ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು,ತೆಂಕಕಾರಂದೂರು ಇದರ ವತಿಯಿಂದ ನಡೆಯುವ 35 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್  ಬಳಂಜದಲ್ಲಿ ...