Monday, May 17, 2021

ಕುಡಿದ ಮತ್ತಿನಲ್ಲಿ ಇಬ್ಬರು ಪುಟ್ಟ ಮಕ್ಕಳು ಸೇರಿದಂತೆ ನಾಲ್ವರನ್ನು ಕೊಲೆ ಮಾಡಿದ ಕಿರಾತಕ

ಮೈಸೂರು : ಕುಡಿದ ಮತ್ತಿನಲ್ಲಿ ಮನೆಯಲ್ಲಿ ಮಲಗಿದ್ದ ಪತ್ನಿ, ಇಬ್ಬರು ಪುಟ್ಟ ಮಕ್ಕಳು ಹಾಗೂ ಅತ್ತೆಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೇಗೌಡನಹುಂಡಿ ಗ್ರಾಮದಲ್ಲಿ ನಿನ್ನೆರಾತ್ರಿ ಈ ದುರ್ಘಟನೆ ನಡೆದಿದೆ.

ಮಣಿಕಂಠಸ್ವಾಮಿಯ ಅತ್ತೆ ಕೆಂಪಾಜಮ್ಮ(60), ಪತ್ನಿ ಗಂಗಾ(28), ಮಕ್ಕಳಾದ ರೋಹಿತ್(4) ಮತ್ತು ಸಾಮ್ರಾಟ್(2) ಮೃತ ದುರ್ದೈವಿಗಳು. ಈ ನಾಲ್ವರನ್ನು ಮಣಿಕಂಠಸ್ವಾಮಿಯೇ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದಾನೆ ಎನ್ನಲಾಗಿದೆ. ಅದರಲ್ಲಿ ಮೃತ ಗಂಗಾ ಗರ್ಭಿಣಿಯಾಗಿದ್ದಳು.

ಗಾರೆ ಕೆಲಸ ಮಾಡಿಕೊಂಡಿದ್ದ ಮಣಿಕಂಠಸ್ವಾಮಿಗೆ ಕುಡಿತದ ಚಟ ಇತ್ತು. ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ ಈತ, ಕುಡಿದ ಅಮಲಿನಲ್ಲಿ ಅತ್ತೆ, ಹೆಂಡತಿ, ಇಬ್ಬರು ಮಕ್ಕಳ ತಲೆಯನ್ನು ಕಬ್ಬಿಣದ ರಾಡಿನಿಂದ ಹೊಡೆದು ಹಲ್ಲೆ ಮಾಡಿದ್ದಾನೆ. ತೀವ್ರ ರಕ್ತಸ್ರಾವವಾಗಿ ನಾಲ್ವರು ಮಲಗಿದ್ದಲ್ಲೇ ಕೊನೆಯುಸಿರೆಳೆದಿದ್ದಾರೆ. ಆರೋಪಿ ಮಣಿಕಂಠಸ್ವಾಮಿ ತಲೆ ಮರೆಸಿಕೊಂಡಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಸರಗೂರು ಪಿಎಸ್ಐ ದಿವ್ಯಾ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...