Monday, July 4, 2022

ಮೈಸೂರು ಅತ್ಯಾಚಾರ ಪ್ರಕರಣದಲ್ಲಿ ಓರ್ವ ಅಪ್ರಾಪ್ತ ಬಾಲಕ ವಶಕ್ಕೆ

ಮೈಸೂರು: ಅತ್ಯಾಚಾರ ಪ್ರಕರಣದಲ್ಲಿ ಒರ್ವ ಬಾಲಾಪರಾಧಿ ಇರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ಲಭ್ಯವಾಗಿದೆ. ಎಂದು ಡಿಜಿ & ಐಜಿಪಿ ಪ್ರವೀಣ್​ ಸೂದ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.


ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರನ್ನು ಬಂಧಿಸಿದ್ದು, ಕಾರ್ಮಿಕರಾಗಿರುವ ಇವರು ತಮಿಳುನಾಡಿನ ಮೂಲದವರು ಎಂದು ಮಾಹಿತಿ ನೀಡಿದ್ದಾರೆ.

ಈ ಪ್ರಕರಣದಲ್ಲಿ 5 ಜನರನ್ನು ಬಂಧಿಸಲಾಗಿದೆ. ಎಲ್ಲರೂ ತಿರುಪುರ ಮೂಲದವರು. ಆಗಾಗ ಮೈಸೂರು ನಗರಕ್ಕೆ ಬರುತ್ತಿದ್ದರು.

7ನೇ ತರಗತಿ 8 ತರಗತಿ ಓದಿದ ಇವರೆಲ್ಲರೂ ಕಾರ್ಮಿಕರಾಗಿದ್ದಾರೆ. ಡ್ರೈವರ್​, ಕಾರ್ಪೆಂಟರ್​ ಸೇರಿದಂತೆ ಬೇರೆ ಬೇರೆ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಅದರಲ್ಲಿ ಒಬ್ಬ ಬಾಲಕ 17 ವರ್ಷದವನಿದ್ದಾನೆ ಎನ್ನುವುದು ಪ್ರಾಥಮಿಕ ಮಾಹಿತಿಯಲ್ಲಿ ಲಭ್ಯವಾಗಿದೆ. ಆದರೆ, ಅದು ಇನ್ನೂ ಖಚಿತವಾಗಬೇಕಿದೆ ಎಂದು ಹೇಳಿದ್ದಾರೆ.
ಇದರಲ್ಲಿ ಓರ್ವ ಬಾಲಾಪರಾಧಿ ಇದ್ದರೂ ಈ ಹಿಂದಿನ ಪ್ರಕರಣಗಳಂತೆ ಆಗುವುದಿಲ್ಲ. ಏಕೆಂದರೆ, ಬಾಲಕಾಯ್ದೆಯಲ್ಲೂ ಬದಲಾಗಿದೆ. ಗಂಭೀರ ಪ್ರಕರಣದಲ್ಲಿ 16 ವರ್ಷ ಆಗಿದ್ದರೆ ನ್ಯಾಯಾಲಯದಲ್ಲಿ ವಿಚಾರಣೆ ಆಗಲಿದೆ.

6 ಆರೋಪಿಗಳ ಪೈಕಿ ಓರ್ವ ತಲೆಮರೆಸಿಕೊಂಡಿದ್ದಾನೆ. ಇವರೆಲ್ಲರೂ ಕೆಲಸಕ್ಕೆ ಮೈಸೂರಿಗೆ ಬಂದಿದ್ದು, ವಾಪಸ್ಸು ಹೋಗುವಾಗ ಕುಡಿದು ಪಾರ್ಟಿ ಮಾಡುತ್ತಿದ್ದರು ಎಂದು ಗೊತ್ತಾಗಿದೆ. ವೈಜ್ಞಾನಿಕ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳ ಬಂಧನವಾಗಿದೆ.

ಪ್ರಕರಣ ಭೇದಿಸಿದ ಪೊಲೀಸರಿಗೆ 5 ಲಕ್ಷ ರೂ. ಬಹುಮಾನ ಘೋಷಿಸುತ್ತೇವೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮುಂದಿನ 30-40 ವರ್ಷಗಳು ಬಿಜೆಪಿ ಯುಗ: ಅಮಿತ್‌ ಶಾ

ಹೈದರಾಬಾದ್‌: ಮುಂದಿನ 30-40 ವರ್ಷಗಳು ಬಿಜೆಪಿ ಯುಗವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಹೇಳಿದ್ದಾರೆ.ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅಮಿತ್‌ ಶಾ, ಬಿಜೆಪಿಯ ಅಭಿವೃದ್ಧಿ...

ಅಕ್ರಮ ಗೋಸಾಗಾಟ ತಡೆಯಲು ಖಡಕ್‌ ಖಾಕಿಗೆ ಖಡಕ್‌ ಸೂಚನೆ ಕೊಟ್ಟ ಶಾಸಕ ಕಾಮತ್‌

ಮಂಗಳೂರು: ನಗರದಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋವಧೆ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್‌ ಕಾಮತ್ ಸೂಚನೆ ನೀಡಿದ್ದಾರೆ.ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾದರೂ ಅಕ್ರಮವಾಗಿ ಗೋಹತ್ಯೆ...

ಮಂಗಳೂರಿನ ‘ಕದ್ರಿ‌ ರೋಲರ್ಸ್ ಸ್ಕೇಟಿಂಗ್ ಕ್ಲಬ್’ ಅಧ್ಯಕ್ಷರಾಗಿ ಡಾ.ರಾಜೇಶ್ ಹುಕ್ಕೇರಿ ಆಯ್ಕೆ

ಮಂಗಳೂರು: ಮಂಗಳೂರಿನಲ್ಲಿ‌ ನೂತನವಾಗಿ "ಕದ್ರಿ‌ ರೋಲರ್ಸ್ ಸ್ಕೇಟಿಂಗ್ ಕ್ಲಬ್(ರಿ)" ಆರಂಭಗೊಂಡಿದ್ದು, ಇದರ ಸ್ಥಾಪಕಾಧ್ಯಕ್ಷರಾಗಿ ಡಾ.ರಾಜೇಶ್ ಹುಕ್ಕೇರಿ ಆಯ್ಕೆಯಾಗಿದ್ದಾರೆ.ನಗರದ ಕೆಪಿಟಿ‌ ಸರ್ಕಲ್ ನ ಬಳಿಯ ಕದ್ರಿ ಪಾರ್ಕ್ ನಲ್ಲಿರುವ "ಅನಘಾಸ್ ಸ್ಕೇಟಿಂಗ್ ಅಕಾಡೆಮಿ"ಯಲ್ಲಿ ಇತ್ತೀಚೆಗೆ...