bangalore
ಬಾರ್ಡರ್ ಹೊಲಿಯಲು ಕೊಟ್ಟ ಸೀರೆಗೆ ಬೆಂಕಿ: ಕೋರ್ಟ್ ಮೆಟ್ಟಿಲೇರಿ ಪರಿಹಾರ ಪಡೆದ ಜಡ್ಜ್ ಪತ್ನಿ
Published
3 years agoon
By
Adminಬೆಂಗಳೂರು: ಬಾರ್ಡರ್ ಹೊಲಿಯಲು ಕೊಟ್ಟಿದ್ದ ದುಬಾರಿ ಬೆಲೆಯ ಮೈಸೂರು ಸಿಲ್ಕ್ ಸೀರೆಗೆ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ನಿವೃತ್ತ ಜಿಲ್ಲಾ ನ್ಯಾಯಾಧೀಶನ ಪತ್ನಿ ಕೋರ್ಟ್ ಮೆಟ್ಟಿಲೇರಿದ್ದು,
ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ 31,975 ರೂಪಾಯಿ ಹಾನಿ ಮತ್ತು ವ್ಯಾಜ್ಯದ ವೆಚ್ಚವನ್ನು ಭರಿಸುವಂತೆ ಅಂಗಡಿ ಮಾಲೀಕರಿಗೆ ಸೂಚನೆ ನೀಡಿರುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ.
ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಂ.ಎಸ್. ಈವಾನಿ ಅವರ ಪತ್ನಿ ಮಂಗಳಾ ಅವರ ಸೀರೆಯ ಬೆಲೆ 21,975 ರೂಪಾಯಿ ಆಗಿದ್ದು ಅದನ್ನು ಹಾನಿಗೊಳಿಸಿದ್ದಕ್ಕೆ ರೂ.5000, ಹಾಗೂ ದಾವೆ ವೆಚ್ಚ ರೂ.5000 ಸೇರಿದಂತೆ ಒಟ್ಟು 31,975 ಪಾವತಿ ಮಾಡುವಂತೆ ಆಯೋಗವು ದಿವೇನ ಕೌಚರ್’ ನ ಎನ್.ಸಿ.ದಿವ್ಯಾ ಅವರಿಗೆ ಸೂಚನೆ ನೀಡಿದೆ.
ವಿಚಾರಣೆ ವೇಳೆ ನ್ಯಾಯಧೀಶರ ಪತ್ನಿ 2019ರ ಆಗಸ್ಟ್ ತಿಂಗಳಿನಲ್ಲಿ ಸೀರೆ ಖರೀದಿ ಮಾಡಿದ್ದ 21975 ರೂಪಾಯಿ ಮೊತ್ತದ ರಶೀದಿಯನ್ನು ಹಾಗೂ 2019ರ ಅಕ್ಟೋಬರ್ ತಿಂಗಳಿನಲ್ಲಿ ಸೀರೆಯ ಬಾರ್ಡರ್ ಹೊಲಿಯಲು ಹಾಕಿದ್ದ ರಶೀದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಆದರೆ, ದಿವ್ಯಾ ಅವರು ದೂರುದಾರರಿಂದ ರೇಷ್ಮೆ ಸೀರೆ ಪಡೆದುಕೊಂಡಿದ್ದು, ಬಿಡುವಿಲ್ಲದ ಕಾರಣ ಅದನ್ನು ತೆರೆಯದೆ ಬೇರೆ ಬಟ್ಟೆಯೊಂದಿಗೆ ಇಡಲಾಗಿತ್ತು.
ಹೊಲಿಯಲು ತೆಗೆದಾಗ ಸೀರೆಯಲ್ಲಿ ಬೆಂಕಿ ಬಿದ್ದಿರುವ ಚುಕ್ಕೆಗಳು ಕಂಡು ಬಂದಿತ್ತು. ಕೂಡಲೇ ಸಿಬ್ಬಂದಿ ಮಂಗಳಾ ಅವರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದರು ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ಮಾತನಾಡಿದ ಆಯೋಗದ ಅಧ್ಯಕ್ಷ ಎಚ್.ಆರ್.ಶ್ರೀನಿವಾಸ್ ಮತ್ತು ಸದಸ್ಯೆ ಎಸ್.ಎಂ.ಶರಾವತಿ “ಎರಡೂವರೆ ತಿಂಗಳ ಅಂತರದಲ್ಲಿ ಸೀರೆಯನ್ನು ನೀಡಲಾಗಿದೆ.
ಸೀರೆ ದುಬಾರಿ ಬೆಲೆ ಹಾಗೂ ಬ್ರಾಂಡೆಡ್ ಸೀರೆಯಾಗಿದ್ದು, ಎರಡು ಸ್ಥಳಗಳಲ್ಲಿ ಸೀರೆ ಸುಟ್ಟಿದ್ದರೆ, ಅದನ್ನು ಧರಿಸಲಾಗುವುದಿಲ್ಲ ಮತ್ತು ಅದು ನಿಷ್ಪ್ರಯೋಜಕವಾಗಿರುತ್ತದೆ. ಹೀಗಾಗಿ ದೂರುದಾರರಿಗೆ ಪರಿಹಾರ ನೀಡಬೇಕು” ಎಂದು ಅವರು ಆದೇಶಿಸಿದರು.
ಅದೇ ರೀತಿ ಆಯೋಗವು ಕೂಡ ಹೊಲಿಯಲು ಸ್ವೀಕರಿಸಿದ ವಸ್ತುಗಳ ಸ್ಥಿತಿಯನ್ನು ಪರಿಶೀಲಿಸುವುದು ದಿವ್ಯಾ ಅವರ ಕರ್ತವ್ಯವಾಗಿತ್ತು.
ಆ ಸಮಯದಲ್ಲಿ ಹಾನಿಯ ಬಗ್ಗೆ ಗಮನ ಹರಿಸದಿರುವುದು ನಿಮ್ಮ ಕಡೆಯಿಂದ ಆಗಿರುವ ನಿರ್ಲಕ್ಷ್ಯವಾಗಿದೆ ಎಂದು ಹೇಳಿದೆ. ಅಲ್ಲದೆ, ಮಂಗಳಾ ಅವರಿಗೆ ಸೀರೆಯ ವೆಚ್ಚ, ಹಾನಿಯಾಗಿರುವುದು ಹಾಗೂ ದಾವೆಯ ವೆಚ್ಚ ಪಾವತಿ ಮಾಡುವಂತೆ ಸೂಚಿಸಿದೆ.
ಕೊಟ್ಟಿದ್ದ ದುಬಾರಿ ಬೆಲೆಯ ಮೈಸೂರು ಸಿಲ್ಕ್ ಸೀರೆಗೆ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ನಿವೃತ್ತ ಜಿಲ್ಲಾ ನ್ಯಾಯಾಧೀಶನ ಪತ್ನಿ ಕೋರ್ಟ್ ಮೆಟ್ಟಿಲೇರಿದ್ದು,
ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ 31,975 ರೂಪಾಯಿ ಹಾನಿ ಮತ್ತು ವ್ಯಾಜ್ಯದ ವೆಚ್ಚವನ್ನು ಭರಿಸುವಂತೆ ಅಂಗಡಿ ಮಾಲೀಕರಿಗೆ ಸೂಚನೆ ನೀಡಿರುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ.
ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಂ.ಎಸ್. ಈವಾನಿ ಅವರ ಪತ್ನಿ ಮಂಗಳಾ ಅವರ ಸೀರೆಯ ಬೆಲೆ 21,975 ರೂಪಾಯಿ ಆಗಿದ್ದು ಅದನ್ನು ಹಾನಿಗೊಳಿಸಿದ್ದಕ್ಕೆ ರೂ.5000,
ಹಾಗೂ ದಾವೆ ವೆಚ್ಚ ರೂ.5000 ಸೇರಿದಂತೆ ಒಟ್ಟು 31,975 ಪಾವತಿ ಮಾಡುವಂತೆ ಆಯೋಗವು ದಿವೇನ ಕೌಚರ್’ ನ ಎನ್.ಸಿ.ದಿವ್ಯಾ ಅವರಿಗೆ ಸೂಚನೆ ನೀಡಿದೆ.
ವಿಚಾರಣೆ ವೇಳೆ ನ್ಯಾಯಧೀಶರ ಪತ್ನಿ 2019ರ ಆಗಸ್ಟ್ ತಿಂಗಳಿನಲ್ಲಿ ಸೀರೆ ಖರೀದಿ ಮಾಡಿದ್ದ 21975 ರೂಪಾಯಿ ಮೊತ್ತದ ರಶೀದಿಯನ್ನು
ಹಾಗೂ 2019ರ ಅಕ್ಟೋಬರ್ ತಿಂಗಳಿನಲ್ಲಿ ಸೀರೆಯ ಬಾರ್ಡರ್ ಹೊಲಿಯಲು ಹಾಕಿದ್ದ ರಶೀದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಆದರೆ, ದಿವ್ಯಾ ಅವರು ದೂರುದಾರರಿಂದ ರೇಷ್ಮೆ ಸೀರೆ ಪಡೆದುಕೊಂಡಿದ್ದು, ಬಿಡುವಿಲ್ಲದ ಕಾರಣ ಅದನ್ನು ತೆರೆಯದೆ ಬೇರೆ ಬಟ್ಟೆಯೊಂದಿಗೆ ಇಡಲಾಗಿತ್ತು.
ಹೊಲಿಯಲು ತೆಗೆದಾಗ ಸೀರೆಯಲ್ಲಿ ಬೆಂಕಿ ಬಿದ್ದಿರುವ ಚುಕ್ಕೆಗಳು ಕಂಡು ಬಂದಿತ್ತು. ಕೂಡಲೇ ಸಿಬ್ಬಂದಿ ಮಂಗಳಾ ಅವರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದರು ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ಮಾತನಾಡಿದ ಆಯೋಗದ ಅಧ್ಯಕ್ಷ ಎಚ್.ಆರ್.ಶ್ರೀನಿವಾಸ್ ಮತ್ತು ಸದಸ್ಯೆ ಎಸ್.ಎಂ.ಶರಾವತಿ “ಎರಡೂವರೆ ತಿಂಗಳ ಅಂತರದಲ್ಲಿ ಸೀರೆಯನ್ನು ನೀಡಲಾಗಿದೆ.
ಸೀರೆ ದುಬಾರಿ ಬೆಲೆ ಹಾಗೂ ಬ್ರಾಂಡೆಡ್ ಸೀರೆಯಾಗಿದ್ದು, ಎರಡು ಸ್ಥಳಗಳಲ್ಲಿ ಸೀರೆ ಸುಟ್ಟಿದ್ದರೆ, ಅದನ್ನು ಧರಿಸಲಾಗುವುದಿಲ್ಲ ಮತ್ತು ಅದು ನಿಷ್ಪ್ರಯೋಜಕವಾಗಿರುತ್ತದೆ.
ಹೀಗಾಗಿ ದೂರುದಾರರಿಗೆ ಪರಿಹಾರ ನೀಡಬೇಕು” ಎಂದು ಅವರು ಆದೇಶಿಸಿದರು.
ಅದೇ ರೀತಿ ಆಯೋಗವು ಕೂಡ ಹೊಲಿಯಲು ಸ್ವೀಕರಿಸಿದ ವಸ್ತುಗಳ ಸ್ಥಿತಿಯನ್ನು ಪರಿಶೀಲಿಸುವುದು ದಿವ್ಯಾ ಅವರ ಕರ್ತವ್ಯವಾಗಿತ್ತು.
ಆ ಸಮಯದಲ್ಲಿ ಹಾನಿಯ ಬಗ್ಗೆ ಗಮನ ಹರಿಸದಿರುವುದು ನಿಮ್ಮ ಕಡೆಯಿಂದ ಆಗಿರುವ ನಿರ್ಲಕ್ಷ್ಯವಾಗಿದೆ ಎಂದು ಹೇಳಿದೆ.
ಅಲ್ಲದೆ, ಮಂಗಳಾ ಅವರಿಗೆ ಸೀರೆಯ ವೆಚ್ಚ, ಹಾನಿಯಾಗಿರುವುದು ಹಾಗೂ ದಾವೆಯ ವೆಚ್ಚ ಪಾವತಿ ಮಾಡುವಂತೆ ಸೂಚಿಸಿದೆ.
ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
bangalore
ಮಂಜುಮ್ಮೆಲ್ ಬಾಯ್ಸ್ ಸಿನಿಮಾ ರೀತಿಯ ಘಟನೆ; ಸೆಲ್ಫಿ ಹುಚ್ಚಿಗೆ ಬಲಿಯಾಗಬೇಕಿದ್ದ ಯುವತಿ ರೋಚಕ ಪಾರು !
Published
4 weeks agoon
28/10/2024ಕೊಚ್ಚಿಯಿಂದ ಹತ್ತು ಜನ ಸ್ನೇಹಿತರು ಕೊಡೈಕೆನಾಲ್‌ಗೆ ಹೋಗುತ್ತಾರೆ. ಕಮಲ್ ಹಾಸನ್ ಅಭಿನಯದ ಗುಣ ಚಿತ್ರದಲ್ಲಿನ ಗುಹೆಗಳನ್ನು ನೋಡಲೆಂದು ತೆರಳುತ್ತಾರೆ. ನಿರ್ಬಂಧಿತ ಪ್ರದೇಶ ಎಂದು ಗೊತ್ತಿದ್ದರೂ ಆಳವಾದ ಗುಹೆಗಳನ್ನು ಪ್ರವೇಶಿಸುತ್ತಾರೆ. ಆದರೆ, ಸ್ನೇಹಿತನೊಬ್ಬ ಆಕಸ್ಮಿಕವಾಗಿ ಆಳವಾದ ಕಣಿವೆಯಲ್ಲಿ ಬೀಳುತ್ತಾನೆ. ಉಳಿದ ಸ್ನೇಹಿತರು ಅವನನ್ನು ಹೇಗೆ ಹೊರಗೆ ಕರೆತಂದರು ಎಂಬುದೇ ಮಂಜುಮ್ಮೆಲ್ ಬಾಯ್ಸ್ ಸಿನಿಮಾದ ಕತೆ.
ನಿನ್ನೆ (ಅ.27) ತುಮಕೂರು ನಗರದ ಸಮೀಪದ ಮಂದಾರಗಿರಿ ಬೆಟ್ಟದ ತಪ್ಪಲಿನಲ್ಲಿರುವ ಮೈದಾಳ ಕೆರೆ ಕೋಡಿಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋದ ವಿದ್ಯಾರ್ಥಿನಿ ಹಂಸ (20) ಕೆಳಕ್ಕೆ ಬಿದ್ದು ಕಾಣೆಯಾಗಿದ್ದಳು. ಸಂಜೆಯಾದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಪಾಯಕ್ಕೆ ಸಿಲುಕಿರುವ ಸಾಧ್ಯತೆಯಿದೆ ಎನ್ನಲಾಗಿತ್ತು. ಅಲ್ಲದೆ, ಒಂದು ಹಂತದಲ್ಲಿ ಹಂಸ ಸತ್ತೇ ಹೋಗಿದ್ದಾಳೆ ಎಂದು ಭಾವಿಸಲಾಗಿತ್ತು. ಆದರೆ, ಅದೃಷ್ಟವಶಾತ್ ಹಂಸ ಬದುಕಿದ್ದಾಳೆ. ಪೊಟರೆಯಲ್ಲಿ ಸಿಲುಕಿಕೊಂಡಿದ್ದ ಆಕೆಯನ್ನು ಇದೀಗ ರಕ್ಷಣೆ ಮಾಡಲಾಗಿದೆ.
ಗುಬ್ಬಿ ತಾಲೂಕಿನ ಶಿವಪುರದ ಸೋಮನಾಥ್ ಎಂಬುವವರ ಪುತ್ರಿ ಹಂಸ ಸ್ನೇಹಿತರೊಂದಿಗೆ ಮೈದಾಳ ಕೆರೆ ನೋಡಲು ತೆರಳಿದ್ದರು. ಈ ವೇಳೆ ಕೋಡಿಯಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದಿದ್ದರು. ನೀರಿನಲ್ಲಿ ಜಾರಿ ಕಲ್ಲಿನ ಪೊಟರೆಯಲ್ಲಿ ಸಿಲುಕಿದ್ದರು.
bangalore
ಅತ್ತಿಗೆ ಮೇಲೆ ಸ್ನೇಹಿತನ ಕಣ್ಣು ; ವಾರ್ನ್ ಮಾಡಿದ್ದಕ್ಕೆ ಬರ್ಬರ ಹ*ತ್ಯೆ
Published
4 weeks agoon
27/10/2024ಮಂಗಳೂರು/ಬೆಂಗಳುರು : ನಿನ್ನೆ (ಅ.26) ತಡರಾತ್ರಿ ಸುಲ್ತಾನ್ ತಿಪ್ಪಸಂದ್ರದ ಅಮ್ಜಾದ್ ಎಂಬಾತ ರೋಹಿದ್ ಅಲಿಯಾಸ್ ಅರ್ಬಾಜ್ನನ್ನು ಕೊ*ಲೆ ಮಾಡಿರುವ ಘಟನೆ ಜಮಾಲ್ ಷಾ ನಗರದಲ್ಲಿ ನಡೆದಿದೆ.
ರೋಹಿದ್ ಅಲಿಯಾಸ್ ಅರ್ಬಾಜ್(26) ಮೃ*ತ ವ್ಯಕ್ತಿ.
ಘಟನೆ ಹಿನ್ನಲೆ :
ರೋಹಿದ್ ಮತ್ತು ಅಮ್ಜಾದ್ ದೂರದ ಸಂಬಂಧಿಗಳು ಮತ್ತು ಸ್ನೇಹಿತರಾಗಿದ್ದರು. ಹೀಗಿರುವಾಗ ಅಮ್ಜಾದ್ ಆಗಾಗ ರೋಹಿದ್ ಮನೆಗೆ ಬರುತ್ತಿದ್ದ. ಈ ವೇಳೆ ರೋಹಿದ್ ಅಣ್ಣನ ಹೆಂಡತಿ ಅಂದರೆ ಅತ್ತಿಗೆ ಮೇಲೆ ಕಣ್ಣು ಹಾಕಿದ್ದಾನೆ. ರೋಹಿದ್‌ಗೆ ತಿಳಿಯದಂತೆ ತನ್ನ ಅತ್ತಿಗೆ ಮೊಬೈಲ್ ನಂಬರ್ ಪಡೆದುಕೊಂಡು ಆಗ್ಗಾಗ ಫೋನ್ ಹಾಗೂ ವಿಡಿಯೋ ಕಾಲ್ ಮಾಡಿ ರೋಹಿದ್ ಅತ್ತಿಗೆಗೆ ಪಿಡಿಸುತ್ತಿದ್ದ ವಿಷಯ ತಿಳಿದ ರೋಹಿದ್ ಮತ್ತು ಸಂಬಂಧಿಕರು ಕಳೆದ ಎರಡು ತಿಂಗಳ ಹಿಂದೆ ಅಮ್ಜಾದ್ ಮನೆ ಬಳಿ ಹೋಗಿ ಗಲಾಟೆ ಮಾಡಿ ಎಚ್ಚರಿಕೆ ಕೊಟ್ಟು ಬಂದಿದ್ದರು.
ನಿನ್ನೆ (ಅ.26) ಬೆಂಗಳೂರಿಗೆ ಕೆಲಸದ ಮೇಲೆ ಹೋಗಿದ್ದ ರೋಹಿದ್ ರಾತ್ರಿ ವಾಸಪ್ ಬರುತ್ತಿದ್ದಂತೆ ‘ನಿನ್ನ ಜೊತೆಗೆ ಮಾತನಾಡಬೇಕು ಬಾ’ ಎಂದು ಅಮ್ಜಾದ್ ಜಮಾಲ್ ಷಾ ನಗರದ ಹೊರಗೆ ಕರೆದಿದ್ದಾನೆ. ಅಮ್ಜಾದ್ ಕರೆದ ಜಾಗಕ್ಕೆ ರೋಹಿದ್ ಹೋಗಿದ್ದಾನೆ. ಈ ವೇಳೆ ಜಗಳ ತೆಗೆದು ರೋಹಿದ್ ಎದೆಗೆ ಚಾಕು*ವಿನಿಂದ ಇ*ರಿದು ಅಲ್ಲಿಂದ ಅಮ್ಜಾದ್ ಪರಾರಿಯಾಗಿದ್ದಾನೆ.
ಆರೋಪಿ ಬಂಧನ :
ಇನ್ನು ವಿಷಯ ತಿಳಿಯುತ್ತಿದ್ದಂತೆ ಕೋಲಾರ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಕ್ಷಿಪ್ರಕಾರ್ಯಾಚರಣೆ ನಡೆಸಿ ಕೊ*ಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಅಮ್ಜದ್ನನ್ನು ಬಂಧಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಕಲೆ*ಹಾಕುತ್ತಿದ್ದಾರೆ. ಇತ್ತ ಮಾಡಿದ ತಪ್ಪನ್ನು ಪ್ರಶ್ನೆ ಮಾಡಿದ್ದಕ್ಕೆ ರೋಹಿದ್ ಕುಟುಂಬ ಇವತ್ತು ಅನಾಥವಾಗಿ ಕಣ್ಣೀಕು ಹಾಕುವಂತಾಗಿದೆ.
LATEST NEWS
ಪತ್ನಿಗೆ ಬೆಂ*ಕಿ ಹಚ್ಚಿ ತಲೆಮರೆಸಿಕೊಂಡಿದ್ದ ವ್ಯಕ್ತಿ 12 ವರ್ಷಗಳ ಬಳಿಕ ಅರೆಸ್ಟ್
ಯಶ್ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ ಖ್ಯಾತ ಕ್ರಿಕೆಟಿಗನ ಪತ್ನಿ
ಬಿಗ್ಬಾಸ್ ಮನೆಯಲ್ಲಿನ ಸ್ಪರ್ಧಿಗಳ ವಯಸ್ಸೆಷ್ಟು ಗೊತ್ತಾ..?
ಮಂಗಳೂರಲ್ಲಿ ಸಮುದ್ರಕ್ಕೆ ಜಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆಗೆ ಯತ್ನ
ಚಲಿಸುತ್ತಿರುವ ಬಸ್ಸಿನಲ್ಲಿ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟ ಯುವಕ
ನಿದ್ದೆಯಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ: ನಿಮಗೆ ಗೊತ್ತಾ!
Trending
- LATEST NEWS4 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- Baindooru3 days ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LIFE STYLE AND FASHION4 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- LATEST NEWS6 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!