Connect with us

    LATEST NEWS

    ತಾರ್ಕಿಕ ಅಂತ್ಯ ಕಂಡ ಮೈಸೂರು IAS ಜಟಾಪಟಿ : ಡಿಸಿ ರೋಹಿಣಿ ಸಿಂಧೂರಿ ಪಾಲಿಕೆ ಕಮಿಷನರ್ ಶಿಲ್ಪ ಎತ್ತಂಗಡಿ..!

    Published

    on

    ಮೈಸೂರು :  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೀದಿಗೆ ಬಂದ ಜಿಲ್ಲಾಧಿಕಾರಿ ಮತ್ತು ಪಾಲಿಕೆ ಆಯುಕ್ತರ ಜಗಳಕ್ಕೆ ಸರ್ಕಾರ ತಾರ್ಕಿಕ ಅಂತ್ಯ ಕಾಣಿಸಿದೆ.

    ನಿನ್ನೆ ತಡರಾತ್ರಿ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಡಾ. ಬಗಾದಿ ಗೌತಮ್ ಮತ್ತು ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಲಕ್ಷ್ಮೀಕಾಂತ್ ರೆಡ್ಡಿ ನೇಮಕ ಮಾಡಿ ಸರ್ಕಾರ ಆದೇಶಮಾಡಿದೆ.

    ರೋಹಿಣಿ ಸಿಂಧೂರಿಯನ್ನು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಹೆಚ್ಚುವರಿ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. 2020ರಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗುವ ಮೊದಲು ರೋಹಿಣಿ ಇದೇ ಇಲಾಖೆಯ ಆಯುಕ್ತರಾಗಿದ್ದರು.

    ಮೈಸೂರು ಮಹಾನಗರ ಪಾಲಿಕೆ ಆಯುಕ್ತೆಯಾಗಿದ್ದ ಶಿಲ್ಪಾನಾಗ್‌ರನ್ನು ಆರ್‌ಡಿ ಅಂಡ್ ಪಿಆರ್ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.

    ಮೈಸೂರು ಜಿಲ್ಲೆಯಲ್ಲಿ ಈ ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳ ನಡುವಿನ ಜಟಾಪಟಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಇಬ್ಬರು ಐಎಎಸ್​ ಅಧಿಕಾರಿಗಳ ನಡುವಿನ ಕಿತ್ತಾಟವನ್ನು ಶಮನಗೊಳಿಸುವ ನಿಟ್ಟಿನಲ್ಲಿ ಸರ್ಕಾರ ತ್ವರಿತ ಕ್ರಮ ಕೈಗೊಂಡಿದೆ.

    ಇತ್ತ ವರ್ಗಾವಣೆ ಆದೇಶ ಕೈ ಸೇರುತ್ತಿದ್ದಂತೆ ರೋಹಿಣಿ ಸಿಂಧೂರಿ ಅವರು ಇಂದು ಮುಂಜಾನೆ ಬೆಂಗಳೂರಿಗೆ ಆಗಮಿಸಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ.

    ಸಿಎಂ ಸರ್ಕಾರಿ ನಿವಾಸ ಕಾವೇರಿಗೆ ನಿವಾಸಕ್ಕೆ ಇಂದು ಬೆಳಗ್ಗೆ ತಮ್ಮ ಖಾಸಗಿ ವಾಹನದಲ್ಲಿ ಆಗಮಿಸಿದ ರೋಹಿಣಿ ಸಿಂಧೂರಿ ಅವರು ಸಿಎಂ ರನ್ನು ಭೇಟಿಯಾಗಿ ವರ್ಗವಾಣೆ ಆದೇಶವನ್ನು ಹಿಂಪಡೆಯುವಂತೆ ಮನವಿ ಮಾಡಿದ್ದಾರೆ.

    ಪ್ರಕರಣದಲ್ಲಿ ತನ್ನದೇನು ತಪ್ಪಿಲ್ಲ, ವರ್ಗಾವಣೆಯಾದರೆ ತನ್ನದೇ ತಪ್ಪು ಎಂದು ಬಿಂಬಿಸಿದಂತಾಗುತ್ತದೆ ಎಂದು ರೋಹಿಣಿ ಸಿಂಧೂರಿಯವರು ಹೇಳಿದ್ದಾರೆ ಎನ್ನಲಾಗಿದೆ. ರೋಹಿಣಿ ಸಿಂಧೂರಿಯವರು ಸುಮಾರು ಅರ್ಧ ಗಂಟೆಗಳ ಕಾಲ ಸಿಎಂ ನಿವಾಸದಲ್ಲಿದ್ದರು.

    ಆದರೆ ಯಾವುದೇ ಕಾರಣಕ್ಕೂ ವರ್ಗಾವಣೆಯನ್ನು ತಡೆಯಲು ಸಾಧ್ಯವಿಲ್ಲ ಎಂದು ಸಿಎಂ ಬಿಎಸ್ ವೈ ಹೇಳಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ನಿರಾಸೆಯಿಂದಲೇ ರೋಹಿಣಿ ಸಿಂಧೂರಿ ಸಿಎಂ ನಿವಾಸದಿಂದ ತೆರಳಿದ್ದಾರೆ.

    ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ 4ನೇ ಬಾರಿಗೆ ರೋಹಿಣಿ ಸಿಂಧೂರಿ ವರ್ಗಾವಣೆಯಾಗಿದೆ. 2020ರ ಸೆಪ್ಟೆಂಬರ್‌ನಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಕೆಲವೇ ದಿನಗಳು ಬಾಕಿ ಇದ್ದಾಗ ಜಿಲ್ಲಾಧಿಕಾರಿ ಶರತ್ ವರ್ಗಾವಣೆ ಮಾಡಿ ರೋಹಿಣಿ ಸಿಂಧೂರಿ ನೇಮಕ ಮಾಡಲಾಗಿತ್ತು.

    ಈಗ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಮತ್ತು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜಟಾಪಟಿ ಸರ್ಕಾರಕ್ಕೆ ತಲೆನೋವಾಗಿತ್ತು. ಆದ್ದರಿಂದ ಇಬ್ಬರನ್ನು ಸಹ ವರ್ಗಾವಣೆ ಮಾಡಲಾಗಿದೆ.

    LATEST NEWS

    ಆರ್‌ಬಿಐ ಗವರ್ನರ್‌ ಶಕ್ತಿದಾಸ್‌ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

    Published

    on

    ಚೆನ್ನೈ: ಭಾರತೀಯ ರಿಸರ್ವ್​ ಬ್ಯಾಂಕ್​ನ ಗವರ್ನರ್ ಶಕ್ತಿಕಾಂತ್​ ದಾಸ್​ಗೆ ಅನಾರೋಗ್ಯ ಉಂಟಾಗಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಶಕ್ತಿಕಾಂತ್ ದಾಸ್​ ಅವರಿಗೆ ಆ್ಯಸಿಡಿಟಿ ಸಮಸ್ಯೆಯಾಗಿದ್ದು, ಅವರು ಆರೋಗ್ಯವಾಗಿದ್ದಾರೆ, ಮುಂದಿನ 23 ಗಂಟೆಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

    1960 ರ ನಂತರ ಸುದೀರ್ಘ ಸೇವೆ ಸಲ್ಲಿಸಿದ RBI ಮುಖ್ಯಸ್ಥರೆಂಬ ಖ್ಯಾತಿ ಗಳಿಸಿದ್ದಾರೆ. ಅವರ ನಾಯಕತ್ವದಲ್ಲಿ, RBI ಹಣದುಬ್ಬರದ ಒತ್ತಡಗಳು ಮತ್ತು ಜಾಗತಿಕ ಆರ್ಥಿಕ ಅನಿಶ್ಚಿತತೆಗಳು ಸೇರಿದಂತೆ ವಿವಿಧ ಆರ್ಥಿಕ ಸವಾಲುಗಳನ್ನು ನ್ಯಾವಿಗೇಟ್ ಮಾಡಿದೆ.

    ಶಕ್ತಿಕಾಂತ್​ ದಾಸ್​ ಅವರನ್ನು RBI ಗವರ್ನರ್‌ ಆಗಿ ಮೂರು ವರ್ಷದ ಅವಧಿಗೆ ಕೇಂದ್ರ ಸರ್ಕಾರ 2021ರಲ್ಲಿ ಮರು ನೇಮಕ ಮಾಡಿತ್ತು.ಶಕ್ತಿಕಾಂತ ದಾಸ್‌ರವರು 2018ರ ಡಿಸೆಂಬರ್‌ನಲ್ಲಿ RBI ಗವರ್ನರ್‌ ಆಗಿ ನೇಮಕಗೊಂಡಿದ್ದರು. ಇದೇ ಡಿಸೆಂಬರ್‌ಗೆ ಅವರ ಅಧಿಕಾರವಧಿ ಮುಕ್ತಾಯವಾಗಲಿದ್ದ ಹಿನ್ನೆಲೆಯಲ್ಲಿ ಅವರನ್ನು ಮರುನೇಮಕ ಮಾಡಲಾಗಿತ್ತು.ಎನ್‌ಡಿಎ ಸರ್ಕಾರದಲ್ಲಿ ಎರಡನೇ ಬಾರಿಗೆ RBI ಗವರ್ನರ್‌ ಆಗಿ ನೇಮಕಗೊಂಡ ಮೊದಲ ವ್ಯಕ್ತಿ ಶಕ್ತಿಕಾಂತ ದಾಸ್ ಆಗಿದ್ದಾರೆ.

    Continue Reading

    LATEST NEWS

    ಮಧ್ಯಪ್ರದೇಶದಲ್ಲಿ ಸ್ಫೋಟ – 3 ಮನೆಗಳು ಕುಸಿದು ಇಬ್ಬರು ಸಾ*ವು

    Published

    on

    ಮೊರೆನಾ: ಮಧ್ಯಪ್ರದೇಶದ ಮೊರೆನಾ ನಗರದಲ್ಲಿ ಮಧ್ಯರಾತ್ರಿಯ ಸುಮಾರಿಗೆ ಮೂರು ಮನೆಗಳು ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ರಾಥೋಡ್ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಕೆಲವರು ಅವಶೇಷಗಳಡಿ ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಸ್ಫೋಟಕ್ಕೆ ಕಾರಣವೇನು ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಮೀರ್ ಸೌರಭ್ ಹೇಳಿದ್ದಾರೆ.

    ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸ್ಫೋಟದ ಕಾರಣವನ್ನು ಕಂಡುಹಿಡಿಯಲು ಫೋರೆನ್ಸಿಕ್ ತಂಡವೂ ಸ್ಥಳದಲ್ಲಿದೆ ಎಂದು ಅವರು ಹೇಳಿದ್ದಾರೆ.

    Continue Reading

    BIG BOSS

    BBK 11: ಮೋಕ್ಷಿತಾ ಎರಡು ತಲೆ ನಾಗರಹಾವು: ಗುಡುಗಿದ ತ್ರಿವಿಕ್ರಮ್

    Published

    on

    ದೊಡ್ಮನೆ ಇದೀಗ ಬಿಗ್ ಬಾಸ್ ಸಾಮ್ರಾಜ್ಯವಾಗಿ ಬದಲಾಗಿದೆ. ಉಗ್ರಂ ಮಂಜು ರಾಜನಾಗಿ ಮನೆಯನ್ನು ಆಳುತ್ತಿದ್ದಾರೆ. ಮಂಜು ಸಾಮ್ರಾಜ್ಯದಲ್ಲಿ ಬಿಗ್ ಬಾಸ್ ನಾಮಿನೇಷನ್ ವಿಭಿನ್ನವಾಗಿದೆ ನಡೆದಿದೆ. ಈ ವೇಳೆ, ಮೋಕ್ಷಿತಾಗೆ ತ್ರಿವಿಕ್ರಮ್ ಎರಡು ತಲೆ ನಾಗರಹಾವು ಎಂದು ಗುಡುಗಿದ್ದಾರೆ.

    ಬಿಗ್ ಬಾಸ್ ಮನೆಯಲ್ಲಿರುವ ಪ್ರಜೆಯ ಫೋಟೋವನ್ನು ಬಾಣದಿಂದ ಚುಚ್ಚಿ ಮನೆಯ ಮುಖ್ಯದ್ವಾರದಿಂದ ಹೊರಹೋಗುವಂತೆ ಹೊಡೆದು ನಾಮಿನೇಟ್ ಮಾಡಬೇಕು ಎಂದು ಬಿಗ್ ಬಾಸ್ ನಿಯಮ ಹೇಳಿರುತ್ತಾರೆ. ಅದರಂತೆ ಮೋಕ್ಷಿತಾ ಪೈ ಅವರು ನಾಮಿನೇಷನ್‌ಗೆ ಭವ್ಯ ಗೌಡ ಹಾಗೂ ತ್ರಿವಿಕ್ರಮ್ ಹೆಸರನ್ನು ಹೇಳುತ್ತಾರೆ. ಮಂಜು ಮುಂದೆ ತ್ರಿವಿಕ್ರಮ್ ಬಿಲ್ಡಪ್ ಕೊಡುತ್ತಾರೆ. ಆಚೆ ಬಂದ್ಮೇಲೆ ಅದೇ ಮಂಜು ಬಗ್ಗೆ ಏನೂ ಅಲ್ಲ ಎನ್ನುತ್ತಾರೆ ಎಂದು ಮೋಕ್ಷಿತಾ ಕಾರಣ ಹೇಳ್ತಾರೆ. ಅದಕ್ಕೆ, ಉಗ್ರಂ ಮಂಜು, ಅದು ನಂಬಿಕೆ ದ್ರೋಹ ಎಂದು ಕೂಗಾಡಿದ್ದಾರೆ.

    ನಂತರ ತ್ರಿವಿಕ್ರಮ್ ತಮ್ಮನ್ನು ಸಮರ್ಥಿಸಿಕೊಂಡು, ನಾನು ಇವರನ್ನು ಮ್ಯಾನಿಪುಲೇಟ್ ಮಾಡುತ್ತಿಲ್ಲ. ನಿಜವಾಗಿಯೂ ಮಾಡ್ತಿರೋದು ಇವರು. ಅದಕ್ಕೆ ಸಿಟ್ಟಿಗೆದ್ದ ಉಗ್ರಂ ಮಂಜು, ಮಾತು ಬರುತ್ತದೆ ಎಂದು ನೀವು ಮಾತನಾಡಬೇಡಿ ಎನ್ನುತ್ತಾರೆ. ಆಗ ನನ್ನನ್ನು ಗೋಮುಖ ವ್ಯಾಘ್ರ ಎನ್ನುತ್ತಾರೆ. ನಿಜವಾಗಿಯೂ ಇವರು ಎರಡು ತಲೆ ನಾಗರಹಾವು ಎಂದು ಮೋಕ್ಷಿತಾ ವಿರುದ್ಧ ತ್ರಿವಿಕ್ರಮ್ ರೊಚ್ಚಿಗೆದ್ದಿದ್ದಾರೆ.

    Continue Reading

    LATEST NEWS

    Trending