Connect with us

LATEST NEWS

Mysuru: ದೇವನೂರು ಮಠದ ಸ್ವಾಮೀಜಿ ನದಿಗೆ ಹಾರಿ ಆತ್ಮಹತ್ಯೆ..!

Published

on

ಟಿ.ನರಸೀಪುರ ತಾಲೂಕಿನ ಮೂಡುಕೊತೊರೆಯ ಸಮೀಪದ ಕಾವೇರಿ ನದಿಗೆ ದೇವನೂರು ಮಠದ ಸ್ವಾಮೀಜಿಯ ಶಿಷ್ಯರೊಬ್ಬರು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೈಸೂರು: ಟಿ.ನರಸೀಪುರ ತಾಲೂಕಿನ ಮೂಡುಕೊತೊರೆಯ ಸಮೀಪದ ಕಾವೇರಿ ನದಿಗೆ ದೇವನೂರು ಮಠದ ಸ್ವಾಮೀಜಿಯ ಶಿಷ್ಯರೊಬ್ಬರು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನಂಜನಗೂಡಿನ ದೇವನೂರು ಮಠದ ಸ್ವಾಮೀಜಿ ಶಿಷ್ಯರಾಗಿದ್ದ ಶಿವಪ್ಪ ದೇವರು (60) ಆತ್ಮಹತ್ಯೆ ಮಾಡಿಕೊಂಡವರು.

ಶಿವಪ್ಪ ದೇವರು ಸ್ವಾಮೀಜಿ ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದರು.

ಅವರು ಅನಾರೋಗ್ಯ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ‌.

ಮಠ ಹಾಗೂ ಮಠದ ಭಕ್ತರಲ್ಲಿ ಉತ್ತಮ ಹೆಸರು ಹೊಂದಿದ್ದ ಸ್ವಾಮೀಜಿ ಅವರು ಮೂಲತಃ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಕಲಿವೂರು ಗ್ರಾಮದವರು.

ಕಳೆದ 45 ವರ್ಷಗಳಿಂದ ದೇವನೂರು ಮಠದಲ್ಲಿ ಸೇವೆ ಮಾಡಿಕೊಂಡಿದ್ದರು.

ಘಟನಾ ಸ್ಥಳಕ್ಕೆ ತಲಕಾಡು ಪೊಲೀಸರು ಭೇಟಿ ನೀಡಿ, ತನಿಖೆ ನಡೆಸಿದ್ದಾರೆ.

 

Click to comment

Leave a Reply

Your email address will not be published. Required fields are marked *

DAKSHINA KANNADA

ಮಂಗಳೂರು : ‘ಮಹೇಶ್’ ಬಸ್ ಮಾಲೀಕ ಆತ್ಮಹತ್ಯೆ..!

Published

on

ಮಂಗಳೂರು: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತರನ್ನು ಮಹೇಶ್ ಬಸ್ ಮಾಲೀಕ  ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು ಕದ್ರಿ ಕಂಬಳ ಸಮೀಪ ಇರುವ ಅಪಾರ್ಟ್ ಮೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಹೇಶ್ ಹೆಸರಿನಲ್ಲಿ ಹಲವಾರು ಸಿಟಿ ಬಸ್ ಗಳು ದಿನನಿತ್ಯ ಸಂಚರಿಸುತ್ತಿದ್ದು, ಜನಮನ್ನಣೆ ಪಡೆದಿದೆ.

ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ.  ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

ಬೈಕ್‌ ಅಪಘಾತ: ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಲೆ ಹರಿದ ಲಾರಿ- ಮೂವರು ಸ್ಥಳದಲ್ಲೇ ಸಾವು..!

Published

on

ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.

ಹಳೆ ಜಂಬರಗಟ್ಟ ನಿವಾಸಿ ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು.

ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಸವಾರರ ರಸ್ತೆ ಮೇಲೆ ಬಿದ್ದಿದ್ದಾರೆ.

ಇದೇ ವೇಳೆ ರಭಸವಾಗಿ ಬಂದ ಲಾರಿ ಆ ವ್ಯಕ್ತಿಗಳ ಮೇಲೆ ಹರಿದಿದೆ.

ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

FILM

ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!

Published

on

ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ​ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.

‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು  ಮನವಿ ಮಾಡಿದ್ದಾರೆ.

ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Continue Reading

LATEST NEWS

Trending