Monday, May 23, 2022

ನ.19ರಂದು ಬಿಜೆಪಿ ಘಟಾನುಘಟಿ ನಾಯಕರು ಮಂಗಳೂರಿಗೆ: ಅಡ್ಯಾರ್‌ ಗಾರ್ಡನ್‌ನಲ್ಲಿ ‘ಜನ ಸ್ವರಾಜ್‌’ ಸಮಾವೇಶ

ಮಂಗಳೂರು: ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ನ.19ರಂದು ಮಧ್ಯಾಹ್ನ 2.30ಕ್ಕೆ ಅಡ್ಯಾರ್‌ ಗಾರ್ಡನ್‌ನಲ್ಲಿ ‘ಜನ ಸ್ವರಾಜ್‌’ ಸಮಾವೇಶ ಏರ್ಪಡಿಸಲಾಗಿದೆ.


ಬಹುತೇಕ ಕೋಟ ಶ್ರೀನಿವಾಸ ಪೂಜಾರಿ ದಕ್ಷಿಣ ಕನ್ನಡ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ. ಆದರೆ ಅಧಿಕೃತ ಘೋಷಣೆ ಬಾಕಿ ಇದೆ.

ಎರಡು ಮೂರು ದಿನಗಳಲ್ಲಿ ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆ ಇದೆ.
ರಾಜ್ಯಾದ್ಯಂತ ಈ ಸಮಾವೇಶ ನಾಲ್ಕು ತಂಡಗಳ ಉಸ್ತುವಾರಿಯಲ್ಲಿ ನಡೆಯುತ್ತಿದೆ.

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಮಾವೇಶ ರಾಜ್ಯ ನಾಯಕರಾಗಿರುವ ಈಶ್ವರಪ್ಪ ಅವರ ನೇತೃತ್ವದ ತಂಡದ ಉಸ್ತುವಾರಿಯಲ್ಲಿ ನಡೆಯಲಿದೆ.

ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವರಾದ ಆರ್‌.ಅಶೋಕ್‌, ಎಸ್‌.ಟಿ.ಸೋಮಶೇಖರ್‌,

ಎಸ್‌.ಅಂಗಾರ, ಮುಖಂಡ ಅರವಿಂದ ಲಿಂಬಾವಳಿ ಸಹಿತ ಅನೇಕರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಲಿವೆ.

LEAVE A REPLY

Please enter your comment!
Please enter your name here

Hot Topics

ಉಡುಪಿ: ಭಾರಿ ಅಲೆಗೆ ದೋಣಿ ಮುಳುಗಡೆ-ಐವರು ಮೀನುಗಾರರ ರಕ್ಷಣೆ

ಉಡುಪಿ: ಭಾರಿ ಗಾತ್ರದ ಅಲೆಗೆ ದೋಣಿಯೊಂದು ಮುಳುಗಡೆಯಾದ ಘಟನೆ ಉಡುಪಿ ಜಿಲ್ಲೆಯ ಶಿರೂರಿನ ಕಡಲ ತೀರದಲ್ಲಿ ನಡೆದಿದೆ. ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಕಡಲ ತೀರದಿಂದ ಆಳ...

ಆಟೋ ರಿಕ್ಷಾ- ಪಿಕಪ್ ಢಿಕ್ಕಿ: ಓರ್ವನಿಗೆ ಗಾಯ

ಬಂಟ್ವಾಳ: ಆಟೋ ರಿಕ್ಷಾ ಮತ್ತು ಪಿಕಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನ ಎಂಬಲ್ಲಿ ನಿನ್ನೆ ನಡೆದಿದೆ.ಅಪಘಾತದಿಂದಾಗಿ ಆಟೋ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು...

ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣ ನಿರ್ಬಂಧ ಹೇರಿದ ಸೌದಿ ಅರೇಬಿಯಾ

ಜೆದ್ದಾ: ಸೌದಿ ಅರೇಬಿಯಾದಲ್ಲಿ ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕು ಮತ್ತೆ ಏರಿಕೆ ಕಂಡುಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ದೇಶದ ನಾಗರಿಕರು ಭಾರತ ಸೇರಿದಂತೆ ಹದಿನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ.ಲೆಬನಾನ್, ಸಿರಿಯಾ, ಟರ್ಕಿ,...