90 ರ ದಶಕದಲ್ಲಿ ಪಡ್ಡೆ ಹುಡುಗರ ಹೃದಯಕ್ಕೆ ಕಚಕುಳಿ ಇಟ್ಟಿದ್ದ ಬಾಲಿವುಡ್ ಹಾಟ್ ಕ್ವೀನ್ ಮಮತಾ ಕುಲಕರ್ಣಿ ಈಗ ನಾಗಾಸಾದ್ವಿಯಾಗಿ (ಮಾಹಾಮಂಡಲೇಶ್ವರಿಯಾಗಿ)ದೀಕ್ಷೆ ಸ್ವೀಕರಿಸಿದ್ದಾರೆ. ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಕಿನ್ನರ ಅಖಾಡದಲ್ಲಿ ಈ ದೀಕ್ಷೆ ಸ್ವೀಕರಿಸುವ ಮೂಲಕ ಮಮತಾ ನಂದಗಿರಿ ಮಹಾಮಂಡಲೇಶ್ವರಿಯಾಗಿ ಬದಲಾಗಿದ್ದಾರೆ.
1993 ರಲ್ಲಿ ಬಾಲಿವುಡ್ ಸಿನೆಮಾಗೆ ಎಂಟ್ರಿಕೊಟ್ಟಿದ್ದ ಮಮತಾ ಕುಲಕರ್ಣಿ ಬ್ರಾಹ್ಮಣ ಕುಟುಂಬದಿಂದ ಬಂದವರು. ಮಾಡೆಲಿಂಗ್ ಮೂಲಕ ಸಿನೆಮಾ ಇಂಡಸ್ಟ್ರಿ ಪ್ರವೇಶಿಸಿದ ಮಮತಾ ಕುಲಕರ್ಣಿ ಹತ್ತಕ್ಕೂ ಹೆಚ್ಚು ಹಿಟ್ ಸಿನೆಮಾಗಳನ್ನು ನೀಡಿದ್ದಾರೆ. ಅಕ್ಷಯ್ ಕುಮಾರ್, ಗೋವಿಂದ್, ಅಮಿರ್ ಖಾನ್ ಸೇರಿದಂತೆ ಹಲವು ನಾಯಕರ ಜೊತೆ ನಟಿಸಿದ್ದಾರೆ. ಅಂದಿನ ಕಾಲದಲ್ಲೇ ಮೈ ಚಳಿ ಬಿಟ್ಟು ಡ್ಯಾನ್ಸ್ ಮಾಡುತ್ತಿದ್ದ ಮಮತಾ ಕುಲಕರ್ಣಿ ಬಾಲಿವುಡ್‌ನಲ್ಲಿ ಹಾಟ್ ಸ್ಟಾರ್ ಆಗಿಯೇ ಗುರುತಿಸಿಕೊಂಡಿದ್ದರು. 2000ನೇ ಇಸವಿಯಲ್ಲಿ ಸಿನೆಮಾ ಇಂಡಸ್ಟ್ರಿಯಿಂದ ದೂರ ಉಳಿಯಲು ಬಯಸಿದ್ದರಾದ್ರೂ 2001 ರಲ್ಲಿ ಕೊನೆಯ ಸಿನೆಮಾದಲ್ಲಿ ನಟಿಸಿ ಚಿತ್ರರಂಗಕ್ಕೆ ವಿದಾಯ ಹೇಳಿದ್ದರು.
ಸಿನೆಮಾ ಇಂಡಸ್ಟ್ರಿ ಬಿಟ್ಟು ಆಧ್ಯಾತ್ಮದತ್ತ ಒಲವು ತೋರಿದ ಮಮತಾ ಕುಲಕರ್ಣಿ, ಬೋರಿವಿಲಿಯಲ್ಲಿನ ಶ್ರೀ ಚೈತನ್ಯ ಗಗನಗಿರಿ ನಾಥ ಸ್ವಾಮಿ ಬಳಿ ಸನ್ಯಾಸತ್ವ ಸ್ವೀಕರಿಸಿದ್ದರು ಎಂದು ಸ್ವತಹ ಅವರೇ ಹೇಳಿಕೊಂಡಿದ್ದಾರೆ. ಕಳೆದ 20 ವರ್ಷಗಳಿಂದ ಸನ್ಯಾಸಿಯಂತೆ ಜೀವನ ಮಾಡುತ್ತಿದ್ದ 52 ವರ್ಷದ ಮಮತಾ ಕುಲಕರ್ಣಿ ಇದೀಗ ಕುಂಭ ಮೇಳಕ್ಕೆ ಆಗಮಿಸಿದ್ದಾರೆ. ಕುಂಭ ಮೇಳದಲ್ಲಿ ಕಿನ್ನರ ಅಖಾಡದ ಆಚಾರ್ಯ ಮಾಹಾಮಂಡಲೇಶ್ವರ್ ಲಕ್ಷ್ಮೀನಾರಾಯಣ ತ್ರಿಪಾಠಿ ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ.
ಬಳಿಕ ಮಹಾಮಂಡಲೇಶ್ವರಿ ದೀಕ್ಷೆ ಪಡೆಯುವ ಇಚ್ಚೆ ವ್ಯಕ್ತಪಡಿಸಿದ್ದು, ಅಖಿಲ ಭಾರತೀಯ ಅಖಾಡದ ಅಧ್ಯಕ್ಷ ರವೀಂದ್ರ ಪುರಿ ಅವರ ಜೊತೆ ಚರ್ಚೆ ನಡೆಸಿದ ಬಳಿಕ ಮಮತಾ ಕುಲಕರ್ಣಿಗೆ ದೀಕ್ಷೆ ನೀಡಲಾಗಿದೆ.
ಮಂಗಳೂರು/ನವದೆಹಲಿ : ರೇಣುಕಾಸ್ವಾಮಿ ಕೊ*ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್, ಪವಿತ್ರಾ ಹಾಗೂ ಇತರೆ ಐದು ಜನರಿಗೆ ನೀಡಲಾದ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಆದರೆ, ರಾಜ್ಯಸರ್ಕಾರ ಸಲ್ಲಿಸಿರುವ ಆಕ್ಷೇಪಣೆ ಅರ್ಜಿಯನ್ನು ಪರಿಶೀಲಿಸುವುದಾಗಿ ತಿಳಿಸಿದೆ.
ಈ ವೇಳೆ ಕರ್ನಾಟಕ ಹೈಕೋರ್ಟ್‌ನ ಜಾಮೀನು ಆದೇಶದ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ಕುರಿತು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲ ಮತ್ತು ಆರ್.ಮಹಾದೇವನ್ ಅವರನ್ನೊಳಗೊಂಡ ಪೀಠವು ದರ್ಶನ್ ಮತ್ತು ಇತರರಿಗೆ ನೋಟೀಸ್ ಜಾರಿ ಮಾಡಿದೆ.
ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾಸ್ವಾಮಿ ಅಶ್ಲೀ*ಲ ಸಂದೇಶಗಳನ್ನು ಕಳುಹಿಸಿದ್ದ. ಇದರಿಂದ ರೊಚ್ಚಿಗೆದ್ದ ದರ್ಶನ್ ಹಾಗೂ ಸಂಗಡಿಗರು ರೇಣುಕಾಸ್ವಾಮಿಯ ಹ*ತ್ಯೆ ಮಾಡಿದ್ದಾರೆಂಬ ಆರೋಪದಡಿ 7 ಮಂದಿಯನ್ನು ಬಂಧಿಸಲಾಗಿತ್ತು. ಜೂ.9 ರಂದು ರೇಣುಕಾಸ್ವಾಮಿ ಮೃ*ತದೇಹ ಬೆಂಗಳೂರಿನ ಮೋರಿಯೊಂದರಲ್ಲಿ ಪತ್ತೆಯಾಗಿತ್ತು. ಹೈಕೋರ್ಟ್ ಅಕ್ಟೋಬರ್ 30ರಂದು ದರ್ಶನ್‌ಗೆ ತೀವ್ರ ನೋವಿದೆ ಎಂಬ ಕಾರಣಕ್ಕೆ ವೈದ್ಯಕೀಯ ಆಧಾರದ ಮೇಲೆ ಆರು ವಾರಗಳ ಮಧ್ಯಂತರ ಜಾಮೀನು ನೀಡಿತ್ತು. ಬಳಿಕ ಡಿಸೆಂಬರ್‌ನಲ್ಲಿ ಅವರಿಗೆ ಮತ್ತು ಇತರರಿಗೆ ನಿಯಮಿತ ಜಾಮೀನು ಮಂಜೂರಾಗಿತ್ತು.
ಬೆಂಗಳೂರು/ಮಂಗಳೂರು : ಕಾಂತಾರ ಚಾಪ್ಟರ್ 1 ಮತ್ತು ಟಾಕ್ಸಿಕ್ ಸಿನಿಮಾಗಳು ಮಾಡಿರುವ ಎಡವಟ್ಟಿನಿಂದಾಗಿ ಅರಣ್ಯ ನಾಶವಾಗಿದೆ. ಇದು ಅರಣ್ಯ ಇಲಾಖೆಯ ಕೆಂಗಣ್ಣಿಗೆ ಕಾರಣವಾಗಿದೆ. ಟಾಕ್ಸಿಕ್ ಚಿತ್ರತಂಡ ಮರ ಕಡಿದ ಆರೋಪ ಎದುರಿಸಿದ್ದು, ಕಾಂತಾರ ತಂಡ ಬಾಂ*ಬ್ ಸ್ಫೋ*ಟಿಸಿ ಅರಣ್ಯ ನಾಶ ಮಾಡಿರುವ ಬಗ್ಗೆ ಭಾರೀ ದಂಡ ತೆತ್ತಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಅರಣ್ಯದಲ್ಲಿ ಚಿತ್ರೀಕರಣ ಮಾಡುವವರಿಗೆ ಹೊಸ ನಿಯಮ ಜಾರಿಗೊಳಿಸಿದೆ.
ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಸಿನಿಮಾ, ಧಾರಾವಾಹಿ, ಸಾಕ್ಷ್ಯಚಿತ್ರ ಇತ್ಯಾದಿಗಳನ್ನು ಚಿತ್ರೀಕರಿಸಲು ಅನುಮತಿ ನೀಡಲಾಗುತ್ತಿದೆ. ಇದಲ್ಲದೆ, ಸ್ಥಳೀಯ ಮಟ್ಟದಲ್ಲೂ ಅಧಿಕಾರಿಗಳು ಅನುಮತಿ ನೀಡುತ್ತಿರುವುದರಿಂದ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿ ಹೊರ ಜಗತ್ತಿಗೆ ಲಭಿಸುವ ಸಂಭವ ಇರುತ್ತದೆ. ಇದು ಪರಿಸರ ಹಾಗೂ ಜೀವವೈವಿಧ್ಯಕ್ಕೂ ಧಕ್ಕೆ ತರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅರಣ್ಯ ಹಾಗೂ ವನ್ಯಜೀವಿಗಳನ್ನು ಸಂರಕ್ಷಿಸಿ. ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಅರಣ್ಯ ಹಾಗೂ ವನ್ಯ ಜೀವಿಗಳನ್ನು ಉಳಿಸುವ ಹಿತದೃಷ್ಟಿಯಿಂದ ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದ ಅನುಮತಿ ಪಡೆಯಬೇಕು ಎಂದು ಆದೇಶಿಸಲಾಗಿದೆ.
ಮಂಗಳೂರು/ಮುಂಬೈ : ತೆಲುಗು ಚಿತ್ರರಂಗದಲ್ಲಿ ವಿವಾದಗಳಿಗೆ ಕೇರಾಫ್ ಅಡ್ರೆಸ್ ರಾಮ್ ಗೋಪಾಲ್ ವರ್ಮಾ ಅಂದ್ರೆ ತಪ್ಪಾಗಲ್ಲ. ಹೆಚ್ಚಾಗಿ ಅಡಲ್ಟ್ ಸಿನಿಮಾಗಳನ್ನು ಮಾಡಿ ಯುವಜನತೆ ಗಮನಸೆಳೆದಿದ್ದರು. ಮೇಲಾಗಿ ಇವರ ಚಿತ್ರಗಳ ಮೂಲಕ ಹಲವು ನಾಯಕಿಯರು ಸ್ಟಾರ್ ಗಿರಿ ಪಡೆದಿದ್ದಾರೆ ಎನ್ನಬಹುದು. ವರ್ಮಾ ನಿರ್ದೇಶನದ ಒಂದೇ ಒಂದು ಚಿತ್ರ ಅವರ ವೃತ್ತಿಜೀವನವನ್ನು ಬದಲಾಯಿಸುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.
ಆರು ವರ್ಷಗಳ ಹಿಂದೆ ನಡೆದ ಘಟನೆಯೊಂದು ಇದೀಗ ರಾಮ್ ಗೋಪಾಲ್ ವರ್ಮಾರ ಕೊರಳಿಗೆ ಸುತ್ತಿಕೊಂಡಿದೆ. ಮುಂಬೈನ ಅಟಾರಿ ಮ್ಯಾಜಿಸ್ಟ್ರೇಟ್ ಕೋರ್ಟ್ ಇತ್ತೀಚೆಗೆ ಈ ಪ್ರಕರಣದಲ್ಲಿ ಸಂಚಲನಕಾರಿ ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ಆರ್‌ಜಿವಿ ತಪ್ಪಿತಸ್ಥರಾಗಿದ್ದು, ಮೂರು ತಿಂಗಳ ಜೈಲು ಶಿಕ್ಷೆಯ ನೀಡಿದೆ. ಮಂಗಳವಾರ (ಜ.21) ತೀರ್ಪು ಪ್ರಕಟವಾಗಿದೆ. ರಾಮ್‌ಗೋಪಾಲ್ ವರ್ಮಾ ಕೋರ್ಟ್‌ಗೆ ಹಾಜರಾಗಬೇಕಿತ್ತು ಆದರೆ ವರ್ಮಾ ಕೋರ್ಟ್‌ಗೆ ಹಾಜರಾಗಿಲ್ಲ. ಹೀಗಾಗಿ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ.
ಈ ಪ್ರಕರಣ ಕಳೆದ ಏಳು ವರ್ಷಗಳಿಂದ ನಡೆಯುತ್ತಿತ್ತು. ಆದರೆ ಆರ್‌ಜಿವಿಗೆ ನೋಟಿಸ್ ನೀಡಿದರೂ ಕೋರ್ಟ್‌ಗೆ ಹಾಜರಾಗಿಲ್ಲ. ಮುಂದಿನ ಮೂರು ತಿಂಗಳಲ್ಲಿ ದೂರುದಾರರಿಗೆ ಆರ್‌ಜಿವಿ ರೂ.3.72 ಲಕ್ಷ ಪರಿಹಾರ ನೀಡಲು ಕೋರ್ಟ್ ಆದೇಶ ನೀಡಿದೆ. ಪಾವತಿಸಲು ವಿಫಲವಾದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು 3 ತಿಂಗಳ ಸಾದಾ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ತಿಳಿಸಿದೆ.