Connect with us

LATEST NEWS

ನೈಜೀರಿಯಾ ಮೂಲದ ಡ್ರಗ್ ಪ್ಲೆಡ್ಲರ್ಸ್‍ಗಳ ಬಂಧನ : 65 ಲಕ್ಷ ಮೌಲ್ಯದ ಮಾದಕ ವಶ..!

Published

on

ಬೆಂಗಳೂರು : ಬ್ಯುಸಿನೆಸ್ ಮತ್ತು ಟೂರಿಸ್ಟ್ ವೀಸಾ ಅಡಿ ಭಾರತಕ್ಕೆ ಬಂದು ವೀಸಾ ನಿಯಮಗಳನ್ನು ಉಲ್ಲಂಘಿಸಿ ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾಗಿ ಮಾದಕ ವಸ್ತುಗಳ ಮಾರಾಟ ಜಾಲದಲ್ಲಿ ತೊಡಗಿಕೊಂಡಿದ್ದ ನೈಜೀರಿಯಾದ ಇಬ್ಬರು ಡ್ರಗ್ ಪೆಡ್ಲರ್ಸ್‍ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಜೋಚುಕ್ವ್ಯು ಮಾರ್ಕ್‍ಮಾರೈಸ್ ಬಟ್ವಾಂಗ್ವಾನ್ (38) ಮತ್ತು ಜೋಸೆಫ್ ನಡುಕ್ವೆ ಒಕಾಫಾರ್ (38) ಬಂಧಿತ ಡ್ರಗ್ಸ್ ಪೆಡ್ಲರ್ ಗಳು.ಬಂಧಿತ ಡ್ರಗ್ ಪೆಡ್ಲರ್ಸ್‍ಗಳಿಂದ 65 ಲಕ್ಷ ರೂ. ಬೆಲೆಯ ಮಾದಕ ವಸ್ತುಗಳು, ಹಣ, ಮೊಬೈಲ್‍ಗಳನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸಂಪಿಗೆಹಳ್ಳಿಪೊಲೀಸ್ ಠಾಣೆ ವ್ಯಾಪ್ತಿಯ ಯಲಹಂಕದ ಜಕ್ಕೂರು ಚೊಕ್ಕನಹಳ್ಳಿಯಲ್ಲಿರುವ ತಿರುಮಲ ಶ್ರೀ ವೆಂಕಟೇಶ್ವರ ದೇವಸ್ಥಾನದ ಬಳಿ ಇರುವ ಕಟ್ಟಡದ ಎರಡನೆ ಮಹಡಿಯಲ್ಲಿ ವಾಸವಾಗಿದ್ದ ಡ್ರಗ್ ಪೆಡ್ಲರ್ ಜೋಸೆಫ್ ಟೂರಿಸ್ಟ್ ವೀಸಾ ಅಡಿ ಭಾರತಕ್ಕೆ ಬಂದು ಭಾರತ ದೇಶದ ಕಾನೂನಿಗೆ ಗೌರವ ಕೊಡದೆ ಪಾಸ್‍ಫೋರ್ಟ್ ಮತ್ತು ವೀಸಾ ನಿಯಮಗಳನ್ನು ಉಲ್ಲಂಘಿಸಿ ಮಾದಕ ವಸ್ತುಗಳ ಮಾರಾಟ ಜಾಲದಲ್ಲಿ ತೊಡಗಿದ್ದನು.

ಈತ ತನ್ನ ಸಹಚರನಾದ ಹುಸ್ಮಾನ್ ಮಹಮ್ಮದ್ ಅಲಿಯಾಸ್ ಮೂಸಾ ಅಲಿಯಾಸ್ ಇಚ್ಚಿ ಎಂಬುವವನಿಂದ ಮಾದಕ ವಸ್ತುಗಳನ್ನು ಖರೀದಿಸಿ ಬೆಂಗಳೂರಿನಲ್ಲಿ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆ ಮಾಡುವ ವೃತ್ತಿಗತ ಆರೋಪಿಯಾಗಿದ್ದಾನೆ.

ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿ ತಂಡ ಡ್ರಗ್ ಪೆಡ್ಲರ್‍ಗಳ ವಿರುದ್ಧ ಸಮರ ಮುಂದುವರಿಸಿದ್ದು, ಮಾದಕ ವಸ್ತು ಮಾರಾಟ ಜಾಲದಲ್ಲಿ ತೊಡಗಿದ್ದ ಈತನನ್ನು ಬಂಧಿಸಿ 15 ಲಕ್ಷ ರೂ. ಬೆಲೆಬಾಳುವ 65 ಗ್ರಾಂ ಕೊಕೈನ್, 50 ಎಕ್ಸ್‍ಟೆಸ್ ಮಾತ್ರೆಗಳು, 56 ಎಲ್‍ಎಸ್‍ಡಿ ಸ್ಟ್ರಿಪ್ಸ್‍ಗಳು, 10 ಗ್ರಾಂ ಎಂಡಿಎಂಎ ಕ್ರಿಸ್ಟೆಲ್, 2 ಮೊಬೈಲ್ ಫೋನ್‍ಗಳು ಮತ್ತು ಒಂದು ತೂಕದ ಯಂತ್ರ ವಶಪಡಿಸಿಕೊಂಡಿದ್ದಾರೆ.

ಆರೋಪಿ ವಿರುದ್ಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎನ್‍ಡಿಪಿಎಸ್ ಕಾಯ್ದೆ ಮತ್ತು ವಿದೇಶಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.

ಅಮೃತಹಳ್ಳಿ: ಮತ್ತೊಂದು ಪ್ರಕರಣದಲ್ಲಿ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ಜಕ್ಕೂರಿನ ನವ್ಯಾ ನಗರದ ಶ್ರೀರಕ್ಷಾ ಮೆಡಿಕಲ್ಸ್ ಹತ್ತಿರ ಹರೀಶ್‍ರೆಡ್ಡಿ ಎಂಬುವವರ ಕಟ್ಟಡದ ಮೂರನೆ ಮಹಡಿಯಲ್ಲಿ ವಾಸವಾಗಿದ್ದ ಡ್ರಗ್ ಪೆಡ್ಲರ್ ಬಗ್ಗೆ ಸಿಸಿಬಿ ಪೊಲೀಸರು ಖಚಿತ ಮಾಹಿತಿ ಸಂಗ್ರಹಿಸಿ ಮನೆ ಮೇಲೆ ದಾಳಿ ಮಾಡಿ ಆರೋಪಿ ಜೋಚುಕ್ವ್ಯು ಮಾರ್ಕ್‍ಮಾರೈಸ್ ಬಟ್ವಾಂಗ್ವಾನ್‍ನನ್ನು ಬಂಧಿಸಿದ್ದಾರೆ.

ಈತನಿಂದ 50 ಲಕ್ಷ ರೂ. ಬೆಲೆಬಾಳುವ 500 ಗ್ರಾಂ. ಮಾದಕ ವಸ್ತು ಎಂಡಿಎಂಎ, 91 ಎಕ್ಸೆಟೆಸಿ ಮಾತ್ರೆಗಳು, 56 ಎಲ್‍ಎಸ್‍ಡಿ ಸ್ಟ್ರಿಪ್ಸ್‍ಗಳು, 5 ಸಾವಿರ ಹಣ, 3 ಮೊಬೈಲ್ ಮತ್ತು ಒಂದು ಹೋಂಡಾ ಸಿಟಿ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಈತ ಬ್ಯುಸಿನೆಸ್ ವೀಸಾ ಅಡಿ ಭಾರತಕ್ಕೆ ಬಂದು ವೀಸಾ ನಿಯಮ ಉಲ್ಲಂಘಿಸಿ ಮಾದಕ ವಸ್ತು ಮಾರಾಟ ಜಾಲದಲ್ಲಿ ತೊಡಗಿರುವುದು ವಿಚಾರಣೆಯಿಂದ ತಿಳಿದುಬಂದಿದೆ.ಈತನ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಸಿಬಿ ಸಹಾಯಕ ಪೊಲೀಸ್ ಆಯುಕ್ತ ಕೆ.ಸಿ.ಗೌತಮ್ ಅವರ ನೇತೃತ್ವದಲ್ಲಿ ಇನ್ಸ್‍ಪೆಕ್ಟರ್ ಳಾದ ಅಶೋಕ್, ಲಕ್ಷ್ಮಿಕಾಂತಯ್ಯ ಮತ್ತು ಸಿಬ್ಬಂದಿ ತಂಡ ಈ ಕಾರ್ಯಾಚರಣೆ ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ. ಇವರ ಕಾರ್ಯವನ್ನು ನಗರ ಪೊಲೀಸ್ ಆಯುಕ್ತರು ಮತ್ತು ಜಂಟಿ ಪೊಲೀಸ್ ಆಯುಕ್ತರು ಪ್ರಶಂಸಿಸಿದ್ದಾರೆ.

DAKSHINA KANNADA

ಹೊತ್ತಿ ಉರಿದು ಭಸ್ಮ*ವಾದ ಸ್ವೀಟ್ ಕಾರ್ನ್ ಸ್ಟಾಲ್‌..!! ಓಡಿ ಜೀವ ಉಳಿಸಿಕೊಂಡ ಸ್ಟಾಲ್ ಮಾಲೀಕ, ಗ್ರಾಹಕರು

Published

on

ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿ*ಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ.

sweet corn burn

ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ ಅಂಗಡಿ ಮಾಲೀಕ ಹಾಗೂ ಸ್ವೀಟ್ ಕಾರ್ನ ತಿನ್ನಲು ಬಂದಿದ್ದ ಗ್ರಾಹಕರು ಓಡಿ ತಪ್ಪಿಸಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಮರಳು ಹಾಗೂ ನೀರನ್ನ ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಸ್ಟಾಲ್ ಉರಿದು ಭಸ್ಮವಾಗಿ ಹೋಗಿದೆ.

Read More..; ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ

sweet corn burn 2

Continue Reading

LATEST NEWS

ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ

Published

on

ಬೆಳಗಾವಿ: 25 ರಿಂದ 30 ವರ್ಷದ ಯುವತಿಯೊಬ್ಬಳನ್ನು ಬರ್ಬರವಾಗಿ ಹ*ತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ನಡೆದಿದೆ. ಇಲ್ಲಿನ ಗ್ರಾಮೀಣ ಪೊಲೀಸ್ ಠಾಣ ವ್ಯಾಪ್ತಿಯ ಮಮದಾಪುರ ಗ್ರಾಮದಲ್ಲಿ ಈ ಕೃತ್ಯ ನಡೆದಿದ್ದು ಕೊ*ಲೆ ಮಾಡಿದವರಾರು? ಹ*ತ್ಯೆ ಆದವಳು ಯಾರು? ಎಂಬುದಾಗಲಿ ಗೊತ್ತಾಗಿಲ್ಲ. ನಿನ್ನೆ(ಎ.18) ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಾಲುವೆ ಪಕ್ಕದಲ್ಲಿ ಹೊಗೆಯಾಡುತ್ತಿರುವುದನ್ನು ಜನರು ಗಮನಿಸಿದ್ದಾರೆ. ಬಿಸಿಲಿನ ತಾಪಕ್ಕೆ ಹುಲ್ಲು ಇರುವ ಜಾಗಕ್ಕೆ ಬೆಂಕಿ ಬಿದ್ದಿರಬಹುದು ಎಂದು ಕೆಲವರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಯುವತಿಯ ಮೃತದೇಹ ಕಂಡು ಬಂದಿದೆ.

murder

ಯುವತಿಯ ಕತ್ತು ಕೊಯ್ದು ಬಳಿಕ ಆಕೆಯ ಗುರುತು ಪತ್ತೆಯಾಗದಂತೆ ಸುಟ್ಟು ಹಾಕಿರಬೇಕು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ವಿಧಿ ವಿಜ್ಞಾನ ತಂಡ ಹಾಗೂ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಯುವತಿಯನ್ನು ಬೇರೆಡೆ ಕೊಲೆ ಮಾಡಿ ಇಲ್ಲಿ ತಂದು ಸುಟ್ಟು ಹಾಕುವ ಪ್ರಯತ್ನ ನಡೆದಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಆದರೆ ಈ ಯುವತಿ ಯಾರು ಹಾಗೂ ಯಾರು ಕೊಲೆ ಮಾಡಿದ್ದಾರೆ ಅನ್ನೋದು ತನಿಖೆಯಿಂದ ಗೊತ್ತಾಗಬೇಕಾಗಿದೆ.

Read More..: ಉಡುಪಿಯಲ್ಲಿ ಭೀಕರ ಅಪಘಾ*ತ; ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವು

Continue Reading

LATEST NEWS

ಉಡುಪಿಯಲ್ಲಿ ಭೀಕರ ಅಪಘಾ*ತ; ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವು

Published

on

ಉಡುಪಿ : ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವನ್ನಪ್ಪಿರುವ ಘಟನೆ ಉಡುಪಿಯ ಹೇರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕೃಷ್ಣ ಗಾಣಿಗ ಮೃ*ತ ದುರ್ದೈವಿ. ಉಡುಪಿ ನಗರ ಸಭೆಯಲ್ಲಿ ಎಲೆಕ್ಟ್ರಿಷನ್ ಆಗಿ ಕೃಷ್ಣ ಕೆಲಸ ಮಾಡುತ್ತಿದ್ದರು. ಸಂತೆಕಟ್ಟೆ ಮಾರ್ಗವಾಗಿ ಬ್ರಹ್ಮಾವರದ ಕಡೆಗೆ ಸಾಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಲಾರಿ ಅಡಿಗೆ ಸಿಲುಕಿ ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ.

ಲಾರಿ ಕೃಷ್ಣ ಅವನ್ನು ಕೆಲ ದೂರ ಎಳೆದೊಯ್ದಿದೆ ಎಂದು ತಿಳಿದು ಬಂದಿದೆ. ಘಟನೆ ಬಳಿಕ ರಸ್ತೆಯಲ್ಲಿ ಕೆಲ ಕಾಲ ಸಂಚಾರ ದಟ್ಟನೆ ಉಂಟಾಗಿತ್ತು.

ಬ್ರಹ್ಮಾವರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Continue Reading

LATEST NEWS

Trending