Connect with us

    LATEST NEWS

    ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ದೇಶದ ಗೌರವಕ್ಕೆ ಧಕ್ಕೆ: ರಮಾನಾಥ ರೈ

    Published

    on

    ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಬಿಜೆಪಿ ಸರಕಾರದ ಕುಮ್ಮಕ್ಕಿನಿಂದ ನಡೆಯುತ್ತಿರುವ ಅನಿಯಂತ್ರಿತ ಜನಾಂಗೀಯ ದ್ವೇಷದ ಗಲಭೆಯನ್ನು ಖಂಡಿಸಿ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆಯ ವತಿಯಿಂದ ನಗರದ ಕ್ಲಾಕ್ ಟವರ್ ಮುಂಭಾಗ ಬೃಹತ್ ಪ್ರತಿಭಟನೆ ನಡೆಯಿತು.

    ಮಂಗಳೂರು: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಬಿಜೆಪಿ ಸರಕಾರದ ಕುಮ್ಮಕ್ಕಿನಿಂದ ನಡೆಯುತ್ತಿರುವ ಅನಿಯಂತ್ರಿತ ಜನಾಂಗೀಯ ದ್ವೇಷದ ಗಲಭೆಯನ್ನು ಖಂಡಿಸಿ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆಯ ವತಿಯಿಂದ ನಗರದ ಕ್ಲಾಕ್ ಟವರ್ ಮುಂಭಾಗ ಬೃಹತ್ ಪ್ರತಿಭಟನೆ ನಡೆಯಿತು.

    ಜಾತ್ಯಾತೀತ ಪಕ್ಷಗಳು ಮತ್ತು ಸಂಘಟನೆಗಳ ಜಂಟಿ ವೇದಿಕೆಯ ಅಧ್ಯಕ್ಷ ಮಾಜಿ ಸಚಿವ ಬಿ ರಮಾನಾಥ ರೈ ಪ್ರತಿಭಟನಾ ಸಭೆಯನ್ನು ಉದ್ಘಾಟಿಸಿ, ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗ ದ್ವೇಷದ ಗಲಭೆಯಿಂದ ದೇಶದ ಗೌರವಕ್ಕೆ ಧಕ್ಕೆಯಾಗಿದೆ.

    ಮತೀಯ ದ್ವೇಷವನ್ನು ಜನರ ತಲೆಗೆ ವ್ಯವಸ್ಥಿತವಾಗಿ ತುಂಬಿಸಿದರ ಪರಿಣಾಮ ಇಂದು ದೇಶದಲ್ಲಿ ಕಾಣಿಸುತ್ತಿದೆ.

    ಗುಜರಾತ್ ನಲ್ಲಿ ಬಿಲ್ಕಿಸ್ ಬಾನು ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮೋದಿ ಸರಕಾರ ನಿರ್ಲಜ್ಜವಾಗಿ ನಡೆದುಕೊಂಡಿತ್ತು.

    ಈಗ ಮಣಿಪುರದಲ್ಲಿ ಅದು ಮರುಕಳಿಸಿದೆ. ಮಣಿಪುರದ ಜನತೆಗೆ ನ್ಯಾಯ ಒದಗಿಸಲು, ಶಾಂತಿ ನೆಲೆಗೊಳಿಸಲು ಎಲ್ಲರೂ ಒಂದಾಗಿ ನಿಲ್ಲಬೇಕಿದೆ.

    ಕರ್ನಾಟಕದಲ್ಲಿ ಬಿಜೆಪಿ ಸರಕಾರವನ್ನು ಸೋಲಿಸಿದಂತೆ ಲೋಕಸಭೆ ಚುನಾವಣೆಯಲ್ಲಿಯೂ ನರೇಂದ್ರ ಮೋದಿ ಸರಕಾರವನ್ನು ಸೋಲಿಸಿ ಸರಿಯಾದ ಪಾಠ ಕಲಿಸಬೇಕಿದೆ ಎಂದರು.

    ಮದರ್ ಥೆರೆಸಾ ವಿಚಾರ ವೇದಿಕೆಯ ಅಧ್ಯಕ್ಷರಾದ ರಾಯ್ ಕ್ಯಾಸ್ಟಲಿನೋ ಮಾತನಾಡಿ, ಮಹಿಳೆಯರ ಬೆತ್ತಲೆ ಮೆರವಣಿಗೆಯಿಂದ ನಾವೆಲ್ಲರೂ ನಾಚಿ ತಲೆತಗ್ಗಿಸುವಂತಾಗಿದೆ.

    ಗಲಭೆ ಶುರುವಾಗಿ ಎಪ್ಪತ್ತಾರು ದಿನಗಳಾದರೂ ಪ್ರಧಾನಿಗಳು ಬಾಯಿ ಬಿಚ್ಚಿರಲಿಲ್ಲ.

    ಈಗ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ಮೇಲೆ, ದೇಶಾದ್ಯಂತ ಆಕ್ರೋಶ ವ್ಯಕ್ತವಾದ ಮೇಲೆ ಮೂವತ್ತು ಸೆಕೆಂಡ್ ನ ಪ್ರತಿಕ್ರಿಯೆ ನೀಡಿ ಮೊಸಳೆ ಕಣ್ಣೀರು ಸುರಿಸಿದ್ದಾರೆ.

    ದೇಶದ ಜನತೆ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

    ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ರೈತ ಸಂಘದ ಸನ್ನಿ ಡಿಸೋಜ, ಕೆಥೋಲಿಕ್ ವುಮನ್ಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಗ್ರೆಟ್ಟಾ ಪಿಂಟೊ, ಸಿಪಿಐ ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ ಶೇಖರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಾಲೆಟ್ ಪಿಂಟೋ ಸಭೆಯನ್ನುದ್ದೇಶಿಸಿ ಮಾತನಾಡಿದರು.

    ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರಾದ ಪುರುಷೋತ್ತಮ ಚಿತ್ರಾಪುರ, ಕವಿತಾ ಸನಿಲ್, ಅಪ್ಪಿ,ಕವಿತಾ ವಾಸು, ಸಿಪಿಐಎಂ ಮುಖಂಡರಾದ ಕೆ ಯಾದವ ಶೆಟ್ಟಿ,ಸುಕುಮಾರ್, ಸಿಪಿಐ ನಾಯಕರಾದ ಸೀತಾರಾಮ ಬೇರಿಂಜಾ, ವಿ.ಕುಕ್ಯಾನ್, ಕಾರ್ಮಿಕ ನಾಯಕರಾದ ಸುನಿಲ್ ಕುಮಾರ್ ಬಜಾಲ್, ವಸಂತ ಆಚಾರಿ, ಜೆ.ಬಾಲಕೃಷ್ಣ ಶೆಟ್ಟಿ, ಯೋಗೀಶ್ ಜಪ್ಪಿನಮೋಗರು, ರೋಹಿದಾಸ್ ತೊಕ್ಕೊಟ್ಟು, ತಿಮ್ಮಪ್ಪ ಕಾವೂರು, ಯುವಜನ ಮುಖಂಡರಾದ ಮನೋಜ್ ವಾಮಂಜೂರು ಮುಂತಾದವರು ಉಪಸ್ಥಿತರಿದ್ದರು.

    ಪ್ರತಿಭಟನೆಯಲ್ಲಿ ಭಾರೀ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡಿದ್ದರು.

    LATEST NEWS

    ಸುಳ್ಯ: ಅಂಗಡಿ ಮತ್ತು ಹೋಟೆಲ್‌ನ ಬೀಗ ಮುರಿದು ಕಳ್ಳತನ- ನಗದು ಹಣ ಕಳವು

    Published

    on

    ಸುಳ್ಯ: ಅಂಗಡಿ ಮತ್ತು ಹೋಟೆಲ್ ಗೆ ಬೀಗ ಮುರಿದು ಒಳ ನುಗ್ಗಿದ ಕಳ್ಳರು ನಗದು ಹಣ ಕಳವುಗೈದ ಘಟನೆ ಕನಕಮಜಲು ಗ್ರಾಮದ ಕೋಡಿಯಲ್ಲಿ ನ.25ರಂದು ರಾತ್ರಿ ವರದಿಯಾಗಿದೆ.

    ಕೋಡಿಯಲ್ಲಿರುವ ಜಗನ್ನಾಥ ಅವರ ಅಂಗಡಿ ಹಾಗೂ ಅದರ ಹಿಂಬದಿಯಲ್ಲಿರುವ ಮೋಹನ ಅವರ ಮಾಲಕತ್ವದ ಶ್ರೀರಾಮ್ ಹೋಟೆಲಿಗೆ ಕಳ್ಳರು ನುಗ್ಗಿದ್ದು ಹಣ ಕಳವುಗೈದಿರುವುದಾಗಿ ತಿಳಿದುಬಂದಿದೆ .

    ಬೆಳಿಗ್ಗೆ ಹೋಟೆಲ್ ಮಾಲಕ ಮೋಹನ ಹಾಗೂ ಜಗನ್ನಾಥ ಅವರು ಬಂದಾಗ ಘಟನೆ ಬೆಳಕಿಗೆ ಬಂದಿದೆ.ಕನಕಮಜಲ್ಲಿ ಕಳೆದ ಕೆಲವು ತಿಂಗಳಿನಿಂದ ಕಳ್ಳತ ಹಾವಳಿ ಜಾಸ್ತಿಯಾಗಿದ್ದು ಅವರನ್ನು ಮಟ್ಟ ಹಾಕಲು ಸಂಬಂಧಪಟ್ಟ ಇಲಾಖೆ ವಿಫಲವಾಗಿದೆ ಎಂದು ಸ್ಥಳೀಯ ಜನರು ದೂರಿದ್ದಾರೆ.

    Continue Reading

    BIG BOSS

    ಬಿಗ್ ಬಾಸ್ ಮನೆಯಲ್ಲಿ ಉಗ್ರಂ ಮಂಜು ಆಡಳಿತ !

    Published

    on

    ಮಂಗಳೂರು/ಬೆಂಗಳೂರು: ‘ಕನ್ನಡದ ಬಿಗ್ ಬಾಸ್ ಸೀಸನ್ 11’ ಈಗ, 9ನೇ ವಾರಕ್ಕೆ ಕಾಲಿಟ್ಟಿದೆ. ಈ ವಾರದ ಹೊಸ ಟಾಸ್ಕ್ ಗೆ ಸ್ಪರ್ಧಿಗಳು ಬೆಚ್ಚಿಬಿದ್ದಿದ್ದಾರೆ. ಅದುವೇ ಬಿಗ್ ಬಾಸ್ ಸಾಮ್ರಾಜ್ಯ. ಈ ಸಾಮ್ರಾಜ್ಯದಲ್ಲಿ ಉಗ್ರಂ ಮಂಜು ಅವತಾರಕ್ಕೆ, ಇನ್ನುಳಿದ ಸ್ಪರ್ಧಿಗಳು ಸುಸ್ತಾಗಿದ್ದಾರೆ.


    ಮಹಾರಾಜನಾಗಿರುವ ಉಗ್ರಂ ಮಂಜು ಆಸ್ಥಾನದಲ್ಲಿ, ಪ್ರಜೆಗಳೆಲ್ಲರೂ ಕಕ್ಕಾಬಿಕ್ಕಿಯಾಗಿದ್ದಾರೆ. ಈ ವಾರ ಮಂಜು ಮನೆಯ ಕ್ಯಾಪ್ಟನ್ ಆಗಿದ್ದಾರೆ. ಈಗಾಗೀ ಮಹಾರಾಜನಾಗಿ ಮೆರೆಯುವ ಅವಕಾಶ ಸಿಕ್ಕಿದೆ. ಮಂಜು ಅವರ ಸಾಮ್ರಾಜ್ಯದಲ್ಲಿ ತಪ್ಪು ಮಾಡಿದವರಿಗೆ ಸರಿಯಾದ ಶಿಕ್ಷೆಯನ್ನು ನೀಡುತ್ತಿದ್ದಾರೆ.

    ಇದನ್ನೂ ಓದಿ: ಮಹಿಳೆಯರಿಗೆ ಮಾತ್ರ ಎಂಟ್ರಿ ; ಪುರುಷರು ಈ ಪಬ್‌ಗೆ ಬರುವಂತಿಲ್ಲ  !! 
    ಇನ್ನೂ ದೊಡ್ಮನೆಯಲ್ಲಿ ಯಾವಾಗಲೂ ಸೌಂಡ್ ಮಾಡುತ್ತಿದ್ದ ಚೈತ್ರಾ ಅವರ ಬಾಯಿಗೆ ಆಲೂಗಡ್ಡೆ ತುರುಕುವಂತೆ ಮಹಾರಾಜರು ಆದೇಶಿಸಿದ್ದಾರೆ. ಮಹಾರಾಜರ ಅಪ್ಪನೆಯಂತೆ ಬಾಯಲ್ಲಿ ಆಲೂಗಡ್ಡೆ ಇಟ್ಟುಕೊಂಡಿದ್ದ ಚೈತ್ರಾ ಕೆಲಹೊತ್ತು ಸುಮ್ಮನೆ ಕೂತಿದ್ದರು. ನಂತರ ಇದನ್ನು ನಾನು ಖಂಡಿಸುತ್ತೇನೆ ಎಂದು ಸೌಂಡ್ ಮಾಡೋಕೆ ಪ್ರಾರಂಭಿಸಿದರು.
    ಒಟ್ಟಿನಲ್ಲಿ ಮಂಜು ಅವರ ಆಡಳಿತಕ್ಕೆ ಪ್ರಜೆಗಳು ಉಸಿರಾಡುವುದಕ್ಕೂ ಭಯ ಪಡುತ್ತಿದ್ದಾರೆ. ಅಷ್ಟಕ್ಕೂ ಮಂಜು ಆಡಳಿತ ಇಂದಿನ ಸಂಚಿಕೆಯಲ್ಲಿ ನೋಡಬಹುದು.

    Continue Reading

    DAKSHINA KANNADA

    ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ; 166 ಜೊತೆ ಕೋಣಗಳು ಭಾಗಿ

    Published

    on

    ಮಂಗಳೂರು : ಈ ವರ್ಷದ ಕಂಬಳ ಸೀಸನ್ ನ ಮೊದಲ ಕಂಬಳ ನವೆಂಬರ್‌ 22 ಮತ್ತು 23  ರಂದು ಸಿದ್ದಕಟ್ಟೆಯಲ್ಲಿ ನಡೆಯಿತು. ಇದು ಎರಡನೇ ವರ್ಷದ ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ ಆಗಿದ್ದು, ಬರೋಬ್ಬರಿ 166 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ 6 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 15 ಜೊತೆ, ನೇಗಿಲು ಹಿರಿಯ 34 ಜೊತೆ, ಹಗ್ಗ ಕಿರಿಯ 27 ಜೊತೆ, ನೇಗಿಲು ಕಿರಿಯ 78 ಜೊತೆ ಕೋಣಗಳು ಪಾಲ್ಗೊಂಡಿದ್ದವು.

    ಪ್ರಶಸ್ತಿ ವಿವರ :

    ಕನೆಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ ಪ್ರಥಮ, ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್‌ ಚಂದ್ರ ಆಳ್ವ ದ್ವಿತೀಯ ಸ್ಥಾನ ಪಡೆದರು. ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ಪ್ರಥಮ ಹಾಗೂ ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ ‘ಬಿ’ ಅವರು ದ್ವಿತೀಯ ಸ್ಥಾನಿಯಾದರು.

    ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ‘ಎ’ ಕೋಣಗಳು ಪ್ರಥಮ ಹಾಗೂ ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ದ್ವಿತೀಯ ಸ್ಥಾನ ಪಡೆದರು. ಹಗ್ಗ ಕಿರಿಯ ವಿಭಾಗದಲ್ಲಿ ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ ಪ್ರಥಮ, ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ ‘ಎ’ ಕೋಣಗಳು ದ್ವಿತೀಯ  ಸ್ಥಾನ ಪಡೆದಿವೆ.

    ಇದನ್ನೂ ಓದಿ: WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ

    ನೇಗಿಲು ಹಿರಿಯ ವಿಭಾಗದಲ್ಲಿ ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ ಪ್ರಥಮ ಹಾಗೂ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ ದ್ವಿತೀಯ ಸ್ಥಾನ ಗೆದ್ದಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಪ್ರಥಮ ಹಾಗೂ ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.

    Continue Reading

    LATEST NEWS

    Trending