Wednesday, February 1, 2023

ಕುಂಬ್ಳೆ ಸುಂದರ್ ರಾವ್ ನಿಧನಕ್ಕೆ ನಳಿನ್ ಕುಮಾರ್ ಕಟೀಲ್ ಸಂತಾಪ..!

ಮಂಗಳೂರು :  ಐದು ದಶಕಗಳ ಕಾಲ ಯಕ್ಷಗಾನ ಕ್ಷೇತ್ರಕ್ಕೆ ಅಪ್ರತಿಮ ಸೇವೆ ಸಲ್ಲಿಸಿದ ಕುಂಬ್ಳೆ ಸುಂದರ ರಾವ್ ಅವರ ಅಗಲುವಿಕೆಯಿಂದ ಯಕ್ಷರಂಗ ಮಹಾನ್ ಕಲಾವಿದನನ್ನು ಕಳೆದುಕೊಂಡಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ , ಸಂಸದ ನಳಿನ್ ಕುಮಾರ್ ಕಟೀಲ್, ಸಂತಾಪ ವ್ಯಕ್ತಪಡಿಸಿದ್ದಾರೆ.


1994 ರಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಸುರತ್ಕಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿ ಐದು ವರ್ಷಗಳ ಕಾಲ ಜನಪರ ಕಾರ್ಯಗಳನ್ನು ಮಾಡಿ ಜನಮನ್ನಣೆಯನ್ನು ಪಡೆದಿದ್ದರು.

ಕರಾವಳಿಯಲ್ಲಿ ಬಿಜೆಪಿಯ ಬಲವರ್ಧನೆಗೆ ಮಾರ್ಗದರ್ಶನ ನೀಡಿದವರು. ಸ್ಪೂರ್ತಿಯುತ ಭಾಷಣದಿಂದ ಪಕ್ಷದ ಕಾರ್ಯಕರ್ತರಿಗೆ ಶಕ್ತಿ ತುಂಬಿದವರು.

ವಿಧಾನ ಸೌಧದಯಲ್ಲಿಯೂ ಯಕ್ಷಗಾನ ಆಯೋಜಿಸಿದ ಕೀರ್ತಿ ಅವರದಾಗಿತ್ತು. ಬಹುಭಾಷೆಗಳಲ್ಲಿ ಪಾಂಡಿತ್ಯವನ್ನು ಹೊಂದಿದ್ದ ಕುಂಬ್ಳೆ ಸುಂದರ ರಾಯರು ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಅನುಪಮ ಸೇವೆ ಸಲ್ಲಿಸಿದ್ದರು.

ಅತ್ಯುತ್ತಮ ವಾಗ್ಮಿಯಾಗಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತಮ್ಮ ಜೀವನ ಸವೆಸಿದ್ದ ಕುಂಬ್ಳೆ ಸುಂದರ ರಾಯರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ ಯಕ್ಷರಂಗಕ್ಕೆ ಹಾಗೂ ಸಮಾಜಕ್ಕೆ ಕುಂಬ್ಳೆ ಅವರು ಸಲ್ಲಿಸಿದ ಸೇವೆ ಸದಾ ಸ್ಮರಣೀಯ ಎಂದು ನಳಿನ್ ಕುಮಾರ್ ಕಟೀಲ್ ಅವರು ಸಂತಾಪದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ರಾಜ್ಯ, ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಬಜೆಟ್: ನಳಿನ್‍ ಕುಮಾರ್ ಕಟೀಲ್ ಸ್ವಾಗತ..!

ಬೆಂಗಳೂರು: ಭಾರತವು ಜಗದ್ವಂದ್ಯ ರಾಷ್ಟ್ರವಾಗಿ ಹೊರಹೊಮ್ಮುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೇಂದ್ರದ ನೂತನ ಬಜೆಟ್‍ನಲ್ಲಿ ಪ್ರಕಟಿಸಲಾಗಿದೆ. ಇದು ಕರ್ನಾಟಕ ಮತ್ತು ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಹೊಂದಿದ ಬಜೆಟ್ ಎಂದು ಬಿಜೆಪಿ...

ಪುತ್ತೂರು ಕಂಬಳದಲ್ಲಿ ನಟಿಯೊಂದಿಗೆ ಅಸಭ್ಯ ವರ್ತನೆ ಆರೋಪಕ್ಕೆ ದೇವರ ಮೊರೆ ಹೋದ ಸಮಿತಿ – “ಮಹಾಲಿಂಗೇಶ್ವರನ ಮಣ್ಣಿನಲ್ಲಾದ ಘಟನೆ ದೇವರೇ ನೋಡಿಕೊಳ್ಳಲಿ”..!

ಪುತ್ತೂರು: ಪುತ್ತೂರಿನಲ್ಲಿ ಜ.28ರ ಕಂಬಳದಲ್ಲಿ ನಡೆದಿದೆ ಎನ್ನಲಾದ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದ ಕಂಬಳ ಸಮಿತಿಯವರು ಶ್ರೀ ಮಹಾಲಿಂಗೇಶ್ವರ ದೇವರ ಮೊರೆ ಹೋಗಿದ್ದು, ದೇವರ ನಡೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಏಕಾದಶ ರುದ್ರ...

ಮನೆಯ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಲ್ಯಾಬ್ ಟೆಕ್ನಿಷಿಯನ್ ವಿದ್ಯಾರ್ಥಿನಿ..!

ಕಾಸರಗೋಡು : ಲ್ಯಾಬ್ ಟೆಕ್ನಿಷಿಯನ್ ವಿದ್ಯಾರ್ಥಿನಿಯೊಬ್ಬಳು ತನ್ನ ಮನೆಯ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಘಟನೆ ಕೇರಳದ ಕಾಞಂಗಾಡ್ ನಲ್ಲಿ ನಡೆದಿದೆ.ಮೃತಳನ್ನು ರಾವಣೇಶ್ವರಂನ ಪೊಡಿಪಲ್ಲಂ ನಿವಾಸಿ ಕುಂಜಿಕಣ್ಣನ್ ಮತ್ತು ಲೀಲಾ ದಂಪತಿಯ ಪುತ್ರಿ ಜಿಸಿನಾ...