Friday, June 2, 2023

ಕೇಂದ್ರ ಗೃಹ ಸಚಿವರನ್ನು ಭೇಟಿಯಾದ ಸಂಸದ ನಳಿನ್

ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ಇವರು ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ರವರನ್ನು ಭೇಟಿ ಮಾಡಿ ಇತ್ತೀಚೆಗೆ ಹತ್ಯೆಗೊಳಗಾದ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಇವರ ಪ್ರಕರಣವನ್ನು ಎನ್ ಐ ಎ ವಹಿಸಿಕೊಂಡಿರುವುದಕ್ಕೆ ಧನ್ಯವಾದ ಸಮರ್ಪಿಸಿ, ಈ ಪ್ರಕರಣದ ತನಿಖೆಯಲ್ಲಿ ವಿಶೇಷ ಕಾಳಜಿ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುವಂತೆ ವಿನಂತಿಸಿದರು.


ಈ ಸಂದರ್ಭದಲ್ಲಿ ಮಾನ್ಯ ಗೃಹ ಸಚಿವರು ರಾಜ್ಯದಲ್ಲಿ ಎನ್ ಐ ಎ ಯನ್ನು ಬಲಗೊಳಿಸುವುದರೊಂದಿಗೆ ಎನ್ ಐ ಎ ಗೆ ವಹಿಸಿರುವ ಪ್ರಕರಣಗಳ ತನಿಖೆಯನ್ನು ಶೀಘ್ರವಾಗಿ ಕೈಗೊಂಡು ಅಪರಾಧ ಕೃತ್ಯ ಎಸಗುವವರಿಗೆ ಕಠಿಣ ಸಂದೇಶವನ್ನು ನೀಡಲಾಗುವುದು ಮತ್ತು ಎನ್ ಐ ಎ ಅಧಿಕಾರಿಗಳಿಗೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸುವುದಾಗಿ ಭರವಸೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics