Tuesday, October 19, 2021

ಬಿಎಸ್‌ ವೈ 2 ವರ್ಷದ ಸಾಧನೆಯನ್ನು ಕೊಂಡಾಡಿದ ನಳಿನ್ ಕುಮಾರ್ ಕಟೀಲ್..!

ಮಂಗಳೂರು :  ಮುಖ್ಯಮಂತ್ರಿ ‌ಬದಲಾವಣೆ ಬಗ್ಗೆ ನನಗೆ ಈವರೆಗೆ ಯಾವುದೇ ಮಾಹಿತಿ ಇಲ್ಲ. ಹಾಗಾಗಿ ಈ ಬಗ್ಗೆ ನಾನು ಹೆಚ್ಚು ಏನನೂ ಉಲ್ಲೇಖ ಮಾಡಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಮಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು  ಮುಖ್ಯಮಂತ್ರಿಗಳು ಕಾದು ನೋಡಿ ಅಂತ ಯಾವ ಭಾವನೆಯಲ್ಲಿ ಹೇಳಿದ್ದಾರೆ ಗೊತ್ತಿಲ್ಲ.

ಇದನ್ನ ಯಾವ ಅರ್ಥದಲ್ಲಿ ಹೇಳಿದ್ದಾರೆ ಅನ್ನೋದು ನನ್ನ ಗಮನದಲ್ಲಿ ಇಲ್ಲ. ಎರಡನೇ ವರ್ಷವನ್ನ ಮುಖ್ಯಮಂತ್ರಿಗಳು ಪೂರೈಸಿದ್ದಾರೆ ಮತ್ತು  ಬಹಳ ಒಳ್ಳೆಯ ಆಡಳಿತ ಕೊಟ್ಟಿದ್ದಾರೆ, ನೆರೆ, ಕೋವಿಡ್ ಎಲ್ಲವನ್ನೂ ಚೆನ್ನಾಗಿ ನಿಭಾಯಿಸಿದ್ದಾರೆ.

ಆರ್ಥಿಕ ಹೊಡೆತದ ಮಧ್ಯೆಯೂ ಒಳ್ಳೆಯ ಯೋಜನೆಗಳು ಪ್ರಕಟವಾಗಿದೆ ಮತ್ತು ಇದಕ್ಕಾಗಿ  ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದ ಅವರು ಯಡಿಯೂರಪ್ಪನವರು ಒಬ್ಬ ಕಾರ್ಯಕರ್ತರಿಗೆ ಆದರ್ಶರಾಗಿದ್ದಾರೆ.

ಪಕ್ಷ ಹೇಳುವುದನ್ನ ಪಾಲಿಸ್ತೇನೆ ಎನ್ನುವ ಅವರು ನಮಗೆಲ್ಲಾ ಆದರ್ಶವಾಗಿದ್ದಾರೆ. ರಾಷ್ಟ್ರ ಮತ್ತು ಪಕ್ಷದ ಮಾತಿಗೆ ಗೌರವ ಕೊಟ್ಟು ನಡೆದುಕೊಂಡು ಹೋಗೋದು ಕಾರ್ಯಕರ್ತರಿಗೆ ಪ್ರೇರಣೆಯಾಗಿದ್ದಾರೆ,

ಈ ದೃಷ್ಟಿಯಿಂದ ಪಕ್ಷ ಹೇಳಿದ್ರೆ ಯಾವುದಕ್ಕೂ ಸಿದ್ದ ಅಂತ ಹೇಳಿದ್ದಾರೆ. ಇದು ಯಡಿಯೂರಪ್ಪನವರ ಮಾತು ಮತ್ತು ನಮ್ಮ ಮಾತು ಕೂಡ ಇದೆ ಆಗಿದೆ.

ನಾನು ನಾಳೆ ಅಧಿವೇಶನದ ಹಿನ್ನೆಲೆ ದೆಹಲಿಗೆ ಹೋಗ್ತಾ ಇದೇನೆ, ಅವರಿಗೆ ಎರಡು ವರ್ಷ ಪೂರೈಸಿದ್ದಕ್ಕೆ ಅಭಿನಂದನೆ ಸಲ್ಲಿಸ್ತೇನೆ ಎಂದು ಕಟೀಲ್ ಅವರು ಪ್ರತಿಕ್ರೀಯಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...