Connect with us

    LATEST NEWS

    ನೆಲದ ಕಾನೂನಿಗೆ ಗೌರವ ಕೊಡದ ಕಾಂಗ್ರೆಸ್‌ನಿಂದ ಪಾದಯಾತ್ರೆ ಡ್ರಾಮಾ: ಕಟೀಲ್ ವಾಗ್ದಾಳಿ

    Published

    on

    ಮಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿರುವುದರಿಂದ ಸರಕಾರ ಜನರ ಆರೋಗ್ಯದೃಷ್ಟಿಯಿಂದ ಕೈಗೊಂಡಿರುವ ಕಾನೂನುಗಳಿಗೆ ಕಾಂಗ್ರೆಸ್ ಗೌರವ ನೀಡದೆ, ಕೇವಲ ನಾಯಕತ್ವಕ್ಕಾಗಿ ಡಿಕೆಶಿ ಮೇಕೆದಾಟು ಪಾದಯಾತ್ರೆ ಎಂಬ ಡ್ರಾಮಾ ನಡೆಸುತ್ತಿದ್ದಾರೆ.

    ರಾಜ್ಯದ ನಾಗರಿಕರು ಎಲ್ಲವನ್ನು ಗಮನಿಸುತ್ತಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಸೂಕ್ತ ಉತ್ತರವನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


    ಮೇಕೆದಾಟು ಯೋಜನೆಯ ವಿರುದ್ಧ ಕೋರ್ಟ್ಲ್ಲಿರುವ ದಾವೆ ಇತ್ಯರ್ಥವಾದ ತಕ್ಷಣ ರಾಜ್ಯ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಜನರ ಬಗ್ಗೆ ಕಾಳಜಿ ಇದ್ದರೆ ತಮಿಳುನಾಡಿನಲ್ಲಿರುವ ತಮ್ಮವರ ಜತೆ ಮಾತುಕತೆ ನಡೆಸಿ ವಿವಾದ ಇತ್ಯಾರ್ಥ್ಯ ಪಡಿಸಿಬಹುದಲ್ವಾ? ವಿವಾದ ಕೋರ್ಟ್ನಲ್ಲಿರುವ ವಿಷಯ ಗೊತ್ತಿದ್ದರೂ,

    ಜನತೆಗೆ ತಪ್ಪು ಸಂದೇಶ ನೀಡಲು ಪ್ರಯತ್ನಿಸುವ ನಿಮ್ಮ ರಾಜಕೀಯ ಉದ್ದೇಶದ ಅರಿವು ಜನತೆಗಿದೆ. ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಇದ್ದ ಸಂದರ್ಭ 2014ರಿಂದ 2018ರ ವರೆಗೆ ಯೋಜನೆಯ ಡಿಪಿಆರ್‌ನ್ನು ಯಾಕೆ ಸುಮ್ಮನೆ ಇಟ್ಟುಕೊಂಡಿದ್ದೀರಿ?. ರಾಜ್ಯದ ಜನತೆಗೆ ಈ ಬಗ್ಗೆ ಡಿಕೆಶಿ ಉತ್ತರಿಸಲಿ.
    ನೆಲದ ಕಾನೂನಿನ ಬಗ್ಗೆ ಗೌರವವಿಲ್ಲ
    ಕೊರೊನಾ ಸೋಂಕು ವ್ಯಾಪಕವಾಗಿ ಹರಡದಂತೆ ಹಾಗೂ ಜನರು ಇನ್ನಷ್ಟು ಸಂಕಷ್ಟಕ್ಕೆ ಒಳಗಾಗದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ನಾನಾ ಕಾನೂನುಗಳನ್ನು ಜಾರಿಗೊಳಿಸಲಾಗಿದೆ. ಈ ಹಿಂದೆ ರಾಜ್ಯವನ್ನು ಆಡಳಿತ ನಡೆಸಿದ ನಾಯಕರೇ ಈ ನೆಲದ ಕಾನೂನನ್ನು ಉಲ್ಲಂಘಿಸಿ ಕಾನೂನಿಗೆ ಗೌರವ ನೀಡದೆ,

    ಗೂಂಡಾಗಿರಿ, ದರ್ಪ ಪ್ರದರ್ಶಿಸುತ್ತಿರುವುದು ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ. ಜನರ ಆರೋಗ್ಯದ ಬಗ್ಗೆ, ಹಿತಾಸಕ್ತಿಯ ಬಗ್ಗೆ ಕೊಂಚವು ಕಾಳಜಿ ಇಲ್ಲದ ಕಾಂಗ್ರೆಸ್ ಮುಂದೆ ರಾಜ್ಯದಲ್ಲಿ ನಿರ್ನಾಮವಾಗುವುದರಲ್ಲಿ ಸಂಶಯವಿಲ್ಲ.

    ರಾಜ್ಯದ ಹಿತದೃಷ್ಟಿ, ಇಲ್ಲಿನ ನಾಗರಿಕರ ಬಗ್ಗೆ ಕಾಳಜಿ ಇದ್ದರೆ ಕೊರೊನಾ ನಿಯಂತ್ರಣಕ್ಕೆ ಪೂರಕವಾಗಿ ವರ್ತಿಸಲಿ. ಬದಲಾಗಿ ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ಹೆಸರಿನಲ್ಲಿ ಜನಸೇರಿಸಿ ಕೊರೊನಾ ವ್ಯಾಪಕವಾಗಿ ಹರಡುವಂತೆ ಮಾಡಿದರೆ, ಅದಕ್ಕೆ ಕಾಂಗ್ರೆಸ್ ಪಕ್ಷ ದೊಡ್ಡ ಬೆಲೆ ತೆರಬೇಕಾಗುತ್ತದೆ.

    FILM

    ಸಮಂತಾಗೆ ಪಿತೃ ವಿಯೋಗ; ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ನಟಿ

    Published

    on

    ಮಂಗಳೂರು/ಹೈದರಾಬಾದ್ : ನಟಿ ಸಮಂತಾ ರುತ್ ಪ್ರಭು ತಂದೆ ಜೋಸೆಫ್ ಪ್ರಭು(72) ಇಹಲೋಕ ತ್ಯಜಿಸಿದ್ದಾರೆ. ಹಲವು ದಿನಗಳಿಂದ ಜೋಸೆಫ್ ಪ್ರಭು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ನಿ*ಧನಕ್ಕೆ ಹಲವರು ಸಂ*ತಾಪ ಸೂಚಿಸಿದ್ದಾರೆ.

    ಸ್ಯಾಮ್ ಭಾವುಕ ಪೋಸ್ಟ್ :

    ಇತ್ತೀಚಿಗಷ್ಟೇ ಸಿಟಾಡೆಲ್  ವೆಬ್ ಸೀರೀಸ್​ ಮೂಲಕ ಮತ್ತೆ ಬಣ್ಣದ ಲೋಕಕ್ಕೆ ಬಂದಿದ್ದರು ಸಮಂತಾ.  ಸಿಟಾಡೆಲ್ ಸಕ್ಸಸ್ ಖುಷಿಯಲ್ಲಿದ್ದ ಅವರಿಗೆ ತಂದೆಯ ಸಾ*ವು ಬರಸಿಡಿಲು ಬಡಿದಂತಾಗಿದೆ.

    ಈ ನೋವಿನಲ್ಲಿರುವ ಸಮಂತಾ ತನ್ನ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ.  ‘ಮತ್ತೆ ಭೇಟಿಯಾಗೋಣ ಡ್ಯಾಡ್’ ಎಂದು ಸಮಂತಾ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಪೋಸ್ಟ್ ಮಾಡಿದ್ದಾರೆ. ಜೊತೆಗೆ, ಒಡೆದ ಹೃದಯದ ಎಮೋಜಿ ಹಾಕಿದ್ದಾರೆ.

    ಸಿಟಾಡೆಲ್​ ಹನಿಬನ್ನಿ ವೆಬ್ ಸೀರೀಸ್ ನವೆಂಬರ್ 7 ರಿಂದ ಅಮೆಜಾನ್ ಪ್ರೈಮ್ ನಲ್ಲಿ ಸ್ಟ್ರೀಮ್ ಆಗುತ್ತಿದೆ. ಸಮಂತಾ ಹಾಗೂ ವರುಣ್ ಧವನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ರಾಜ್ ಮತ್ತು ಡಿಕೆ ನಿರ್ದೇಶಿಸಿದ ಈ ಸೀರಿಸ್​ ಜನಮನ ಗೆದ್ದಿದೆ.
    ಇದನ್ನೂ ಓದಿ : ‘ಕಲ್ಟ್’ ಚಿತ್ರದ ಟೆಕ್ನಿಷಿಯನ್ ಆತ್ಮಹ*ತ್ಯೆ ಯತ್ನ; ಸಚಿವ ಜಮೀರ್ ಪುತ್ರ ಜೈದ್ ಖಾನ್ ವಿರುದ್ಧ ಗಂಭೀರ ಆರೋಪ

    ಈ ಯಶಸ್ಸಿನ ಸಂಭ್ರಮವಾಗಿ ಮುಂಬೈನಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ನವೆಂಬರ್ 28 ರ ರಾತ್ರಿ ಸಮಂತಾ ಸಿಟಾಡೆಲ್​ ಸಕ್ಸಸ್​ ಪಾರ್ಟಿಯಲ್ಲಿ ವರುಣ್ ಧವನ್ ಜೊತೆ  ಡ್ಯಾನ್ಸ್ ಮಾಡಿದ್ದರು. ಈ ವೀಡಿಯೋ ವೈರಲ್ ಕೂಡ ಆಗಿತ್ತು.  ಪಾರ್ಟಿಯಲ್ಲಿ ಪಾಲ್ಗೊಂಡು ಮನೆಗೆ ಹೋಗ್ತಿದ್ದಂತೆ ಸ್ಯಾಮ್‌ಗೆ ದೊಡ್ಡ ಶಾ*ಕ್​ ಎದುರಾಗಿತ್ತು. ಒಂದೆಡೆ ಸ್ಯಾಮ್ ಮಾಜಿ ಪತಿಯ ಮದುವೆಯ ಶಾಸ್ತ್ರ ಸಂಭ್ರಮ ನಡೆಯುತ್ತಿದ್ದರೆ, ಇನ್ನೊಂದೆಡೆ  ಸಮಂತಾ ಮನೆಯಲ್ಲಿ ದುಃಖ ಆವರಿಸಿದೆ.

    Continue Reading

    LATEST NEWS

    ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ: ಸರ್ಕಾರದ ಮಹತ್ವದ ಯೋಜನೆ

    Published

    on

    2025 ರ ಜನವರಿಯಿಂದ ಕರ್ನಾಟಕ ಆರೋಗ್ಯ ಇಲಾಖೆ ರಾಜ್ಯದ ಪ್ರತಿ ಮನೆಗೂ ಭೇಟಿ ನೀಡಿ ಮಾನಸಿಕ ಮತ್ತು ದೈಹಿಕ ಆರೋಗ್ಯ ತಪಾಸಣೆ ನಡೆಸುವ ಯೋಜನೆ ಹಮ್ಮಿಕೊಂಡಿದೆ. ಗೃಹ ಆರೋಗ್ಯ ಯೋಜನೆಯ ಭಾಗವಾಗಿ, ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಿ ಉಚಿತ ಚಿಕಿತ್ಸೆ ಮತ್ತು ಔಷಧಿಗಳನ್ನು ಒದಗಿಸಲಾಗುವುದು. ಗ್ರಾಮೀಣ ಪ್ರದೇಶಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.

    ಮನೆ ಮನೆಗೆ ತೆರಳಿ ಚಿಕಿತ್ಸೆ ಜೊತೆ ಉಚಿತ ಔಷಧಿ ನೀಡುವ ‘ಗೃಹ ಆರೋಗ್ಯ’ ಯೋಜನೆ ಆರಂಭಿಸಿರುವ ಕರ್ನಾಟಕ ಆರೋಗ್ಯ ಇಲಾಖೆ ಇದೀಗ ಮತ್ತೊಂದು ಮಹತ್ವದ ಯೋಜನೆ ಹಮ್ಮಿಕೊಂಡಿದೆ. 2025ರ ಜನವರಿಯಿಂದ ರಾಜ್ಯದ ಪ್ರತಿ ಮನೆಯ ಸದಸ್ಯರ ಮಾನಸಿಕ ಆರೋಗ್ಯ ತಪಾಸಣೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಗೃಹ ಆರೋಗ್ಯ ಯೋಜನೆ ಅಂಗವಾಗಿ ಜನವರಿಯಿಂದ ಆರೋಗ್ಯ ಇಲಾಖೆ ಸಿಬ್ಬಂದಿ ರಾಜ್ಯದ ಪ್ರತಿ ಮನೆಗೂ ತೆರಳಿ ಮಾನಸಿಕ ಆರೋಗ್ಯ ಸಮಸ್ಯೆಗಳು, ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ ಮಾಡಲಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

    ಡಿಮೆನ್ಶಿಯಾ ಇಂಡಿಯಾ ಅಲಯನ್ಸ್ (DIA) ನಡೆಸಿದ DemCon’24, ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್, ತರಬೇತಿ ಪಡೆದ ಆರೋಗ್ಯ ಕಾರ್ಯಕರ್ತರು ರಾಜ್ಯದಾದ್ಯಂತ ಮನೆಗಳಿಗೆ ಭೇಟಿ ನೀಡಲಿದ್ದಾರೆ. ಅಧಿಕ ರಕ್ತದೊತ್ತಡ ಅಥವಾ ಮಧುಮೇಹದಿಂದ ಬಳಲುತ್ತಿರುವ ಜನರು ನಿರಂತರ ಔಷಧಿಗಳನ್ನು ಪಡೆಯುತ್ತಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ತಪಾಸಣೆ ನಡೆಸಲಿದ್ದಾರೆ. ಅನೇಕ ರೋಗಿಗಳು, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ, ಅಲ್ಪಾವಧಿಯ ನಂತರ ವೈದ್ಯರು ಸೂಚಿಸಿದ ಚಿಕಿತ್ಸೆ, ಔಷಧ ತೆಗೆದುಕೊಳ್ಳುವುದನ್ನು ನಿಲ್ಲಿಸುತ್ತಾರೆ. ಇದಕ್ಕಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.

    ಗ್ರಾಮೀಣ ಪ್ರದೇಶಗಳ ಮೇಲೆ ಕಾಳಜಿ :

    ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ತಪಾಸಣೆಯ ಜೊತೆಗೆ, ಗೃಹ ಆರೋಗ್ಯ ಯೋಜನೆಯಡಿ ಮಾನಸಿಕ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಲಾಗುವುದು. ಖಿನ್ನತೆಯಂತಹ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಕಡೆಗಣಿಸಲಾಗುತ್ತದೆ. ಅಲ್ಲಿ ಮೆಮೊರಿ ನಷ್ಟದಂತಹ ಪರಿಸ್ಥಿತಿಗಳನ್ನು ಸಾಮಾನ್ಯವಾಗಿ ತಪ್ಪಾಗಿ ಅರ್ಥೈಸಲಾಗುತ್ತದೆ. ಇದರ ನಿವಾರಣೆಗೆ ಮಾನಸಿಕ ಆರೋಗ್ಯ ತಪಾಸಣೆ, ಚಿಕಿತ್ಸೆ ಯೋಜನೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

    ಆರೋಗ್ಯ ಕಾರ್ಯಕರ್ತರಿಗೆ ವಿಶೇಷ ತರಬೇತಿ :

    ಯೋಜನೆಯ ಭಾಗವಾಗಿ, ಮಾನಸಿಕ ಆರೋಗ್ಯ ಸಮಸ್ಯೆಗಳ ಆರಂಭಿಕ ಚಿಹ್ನೆಗಳನ್ನು ಗುರುತಿಸಲು ಮತ್ತು ಅಗತ್ಯ ಬೆಂಬಲವನ್ನು ಒದಗಿಸಲು ಆರೋಗ್ಯ ಕಾರ್ಯಕರ್ತರಿಗೆ ತರಬೇತಿ ನೀಡಲಾಗುತ್ತಿದೆ. ತರಬೇತಿ ಪಡೆದ ಆರೋಗ್ಯ ಕಾರ್ಯಕರ್ತರಿಂದ ವ್ಯಕ್ತಿಗಳು ಅವರಿಗೆ ಅಗತ್ಯವಿರುವ ಆರೈಕೆಯನ್ನು ಪಡೆಯಲಿದ್ದಾರೆ ಎಂದು ಗುಂಡೂರಾವ್ ತಿಳಿಸಿದ್ದಾರೆ. ಆರೋಗ್ಯ ಯೋಜನೆಯನ್ನು ಮೊದಲಿಗೆ ಕೋಲಾರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗಿತ್ತು. ಇದೀಗ ರಾಜ್ಯದಾದ್ಯಂತ ಸುಮಾರು 30,000 ರೋಗಿಗಳನ್ನು ತಪಾಸಣೆ ನಡೆಸಲಾಗಿದೆ. ಗ್ರಾಮೀಣ ಪ್ರದೇಶಗಳಿಗೆ ನಿಯಮಿತವಾಗಿ ಭೇಟಿ ನೀಡುವ ಸ್ಥಳೀಯ ಆರೋಗ್ಯ ಕಾರ್ಯಕರ್ತರಿಗೆ ಜಾಗೃತಿ ಮತ್ತು ತರಬೇತಿ ನೀಡಲಾಗುತ್ತಿದೆ. ಅವರು ಆರಂಭಿಕ ಹಂತದಲ್ಲಿ ಆರೋಗ್ಯ ಸಮಸ್ಯೆಗಳನ್ನು ಗುರುತಿಸುತ್ತಾರೆ ಮತ್ತು ಪರಿಹರಿಸುತ್ತಾರೆ ಎಂದು ಸಚಿವರು ತಿಳಿಸಿದ್ದಾರೆ.

    Continue Reading

    FILM

    ‘ಕಲ್ಟ್’ ಚಿತ್ರದ ಟೆಕ್ನಿಷಿಯನ್ ಆತ್ಮಹ*ತ್ಯೆ ಯತ್ನ; ಸಚಿವ ಜಮೀರ್ ಪುತ್ರ ಜೈದ್ ಖಾನ್ ವಿರುದ್ಧ ಗಂಭೀರ ಆರೋಪ

    Published

    on

    ಮಂಗಳೂರು/ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಪುತ್ರ ಜೈದ್ ಖಾನ್ ನಟಿಸಿ, ನಿರ್ಮಿಸುತ್ತಿರುವ ‘ಕಲ್ಟ್’ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ. ಈ ಚಿತ್ರದ  ಟೆಕ್ನಿಷಿಯನ್ ಸಂತೋಷ್ ಆತ್ಮಹ*ತ್ಯೆಗೆ ಯತ್ನಿಸಿದ್ದು, ಜೈದ್ ಖಾನ್ ಸೇರಿದಂತೆ ಚಿತ್ರತಂಡದ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಕಲ್ಟ್ ಸಿನಿಮಾದ ಡ್ರೋನ್ ಉಸ್ತುವಾರಿಯನ್ನು ಸಂತೋಷ್ ಎಂಬವರು ವಹಿಸಿಕೊಂಡಿದ್ದರು. ಚಿತ್ರತಂಡದ ತಪ್ಪಿನಿಂದಾಗಿ ಇದೀಗ ಆತ್ಮಹ*ತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.


    ಮಾರ್ಟಿನ್, ಯುವ ಚಿತ್ರಗಳಿಗೆ ಕೆಲಸ ಮಾಡಿರುವ ಸಂತೋಷ್ ದಿನಕ್ಕೆ 25 ಸಾವಿರ ರೂಪಾಯಿ ನಿಗದಿ ಮಾಡಿ ಕಲ್ಟ್ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದರು. ನ.25 ರಂದು ಚಿತ್ರದುರ್ಗದಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿತ್ತು. ಶೂಟಿಂಗ್ ಸಂದರ್ಭ ವಿಂಡ್ ಫ್ಯಾನ್‌ಗೆ ಟಚ್ ಆಗಿ ಡ್ರೋನ್ ತುಂಡಾಗಿತ್ತು. ಆದರೆ, ಚಿತ್ರತಂಡ ನಷ್ಟ ತುಂಬಿಸಿಲ್ಲ ಎಂಬುದು ಸಂತೋಷ್ ಆರೋಪ.

    ಇದನ್ನೂ ಓದಿ : ಪತ್ನಿಯನ್ನು ಹನಿಮುನ್‌ಗೆ ಕರೆದೊಯ್ದು ಮಾರಿದ ಪಾ*ಪಿ ಪತಿ !! ಮುಂದೇನಾಯ್ತು…..

    ಚಿತ್ರತಂಡದ ಬಳಿ ಕೇಳಿದರೂ ಪ್ರಯೋಜನವಾಗಿಲ್ಲ. ನಷ್ಟ ಪರಿಹಾರ ನೀಡದೆ ಒಂದುವರೆ ಲಕ್ಷ ರೂಪಾಯಿ ಬೆಲೆಯ ಮೆಮೊರಿ ಕಾರ್ಡ್ ಕಿತ್ತುಕೊಂಡಿರುವ ಆರೋಪ ಕೇಳಿ ಬಂದಿದೆ. ಇದರಿಂದ ಸಂತೋಷ್ ಆತ್ಮಹ*ತ್ಯೆಗೆ ಯತ್ನಿಸಿದ್ದಾರೆ. ಸದ್ಯ ಸಂತೋಷ್ ಸಹೋದರಿ ಮಾಗಡಿ ರೋಡ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    LATEST NEWS

    Trending