Wednesday, September 28, 2022

ಕಾಂಗ್ರೆಸಿಗರ ವ್ಯಕ್ತಿತ್ವದಲ್ಲಿಯೇ ರೌಡಿತನ ಕಾಣಿಸುತ್ತದೆ: ನಳಿನ್‌ ಕುಮಾರ್‌ ಕಟೀಲು

ಮಂಗಳೂರು: ಕಾಂಗ್ರೆಸಿಗರ ವ್ಯಕ್ತಿತ್ವದಲ್ಲಿಯೇ ರೌಡಿತನ ಕಾಣಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು​ ಪ್ರಶ್ನಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಅವರು ಕಾರ್ಯಕರ್ತರೋರ್ವರಿಗೆ ಕಪಾಳಮೋಕ್ಷ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಈ ಪ್ರತಿಕ್ರಿಯೆ ನೀಡಿದರು.

ದೇವಾಲಯದ ಪ್ರತೀಕದಂತಿರುವ ವಿಧಾನಸೌಧಕ್ಕೆ ಅಗೌರವ ತೋರಿರುವ ಕಾಂಗ್ರೆಸಿಗರು, ಕಾರ್ಯಕರ್ತರಿಗೆ ಗೌರವ ತೋರುತ್ತಾರಾ ಎಂದು ಪ್ರಶ್ನಿಸಿದರು. ರಾಜಕಾರಣಿಗಳು ಯಾರೇ ಆಗಲಿ ಎಲ್ಲೆ ಮೀರಿ ವರ್ತಿಸಬಾರದು. ಇದು ಸರಿಯಾದ ನಡತೆಯಲ್ಲ. ಕಾಂಗ್ರೆಸಿಗರ ಸಂಸ್ಕೃತಿಯನ್ನು ಇದು ಬಿಂಬಿಸುತ್ತದೆ. ಕಾಂಗ್ರೆಸಿಗರು ಹಲ್ಲೆ ಮಾಡಿರೋದು ಇದು ಮೊದಲೇನಲ್ಲ. ವಿಧಾನಸೌಧಕ್ಕೆ ಸಿದ್ದರಾಮಯ್ಯ ಹೇಗೆ ಪ್ರವೇಶಿಸಿದ್ದಾರೆಂದು ಎಲ್ಲರಿಗೆ ಗೊತ್ತಿದೆ. ಕೈಚಾಚಿ, ಯುದ್ಧಕ್ಕೆ ಕರೆದು, ತೊಡೆತಟ್ಟಿ ಒಳಹೊಕ್ಕಿದ್ದಾರೆ‌ ಎಂದು ಟೀಕಿಸಿದರು. ಅವರ ಇತಿಹಾಸ ತೆಗೆದು ನೋಡಿದರೆ, ರೌಡಿ ಮಾತ್ರವಲ್ಲ ಈ ದೇಶದಲ್ಲಿ ಎಲ್ಲಾ ಕೆಟ್ಟಚಾಳಿಗಳಿಗೆ ಪ್ರೇರಣೆ ಅವರೇ.

LEAVE A REPLY

Please enter your comment!
Please enter your name here

Hot Topics

PFIನ್ನು ಕರ್ನಾಟಕದಲ್ಲಿ ಪೋಷಿಸಿದ್ದು ಕಾಂಗ್ರೆಸ್‌-ಸಚಿವ ಸುನಿಲ್ ವಾಗ್ದಾಳಿ

ಉಡುಪಿ: 'ಪಿಎಫ್‌ಐ ಸಂಘಟನೆಯ ಕಾರ್ಯಕರ್ತರನ್ನು ಕಾಂಗ್ರೆಸ್ ಪೋಷಿಸಿದ್ದೆ ಪಿಎಫ್ ಐ ಇಷ್ಟು ದೊಡ್ಡ ಪ್ರ‌ಮಾಣದಲ್ಲಿ ಕರ್ನಾಟಕದಲ್ಲಿ ಬೆಳೆಯಲು ಕಾರಣವಾಗಿತ್ತು. 175 ಜನರ ಮೇಲೆ ಇದ್ದ ಕೇಸ್ ಅನ್ನು ಸಿದ್ದರಾಮಯ್ಯ ಕಾಲದಲ್ಲಿ ವಾಪಾಸ್ ಪಡೆದಿತ್ತು....

PFI ಬ್ಯಾನ್‌ಗೆ ಕೇಂದ್ರ ಕೊಟ್ಟ ಕಾರಣಗಳೇನು ಗೊತ್ತಾ…?

ಹೊಸದಿಲ್ಲಿ: ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಹಾಗೂ ಅದರ ಸಹ ಸಂಘಟನೆಗಳ ಮೇಲೆ ಐದು ವರ್ಷಗಳ ಕಾಲ ನಿಷೇಧ ಹೇರಿ ಇಂದು ಬೆಳಿಗ್ಗೆ ಆದೇಶ ಹೊರಡಿಸಿದ ಬೆನ್ನಲ್ಲೇ ಪಿಎಫ್‌ಐ ಬ್ಯಾನ್‌ಗೆ...

ಸುಳ್ಯ: ಮಾಡರ್ನ್‌ಯುಗಕ್ಕೆ ಹೊಂದಿಕೊಂಡ ಕಾಗೆ ತನ್ನ ಗೂಡು ಹೆಣೆದಿದ್ದು ಕಬ್ಬಿಣದ ತಂತಿಯಲ್ಲಿ..!

ಸುಳ್ಯ: ಕಾಗೆಯೊಂದು ಕಬ್ಬಿಣದ ತಂತಿಗಳನ್ನೇ ಬಳಸಿ ಗೂಡು ಹೆಣೆದಿರುವ ಅದ್ಭುತ ಘಟನೆ ಸುಳ್ಯದ ಚೊಕ್ಕಾಡಿಯಲ್ಲಿ ನಡೆದಿದೆ.ಚೊಕ್ಕಾಡಿಯ ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರದ ಆವರಣದಲ್ಲಿ ಸ್ವಚ್ಚತೆ ಕಾರ್ಯ ಕೈಗೊಂಡ ವೇಳೆ ಮರವೊಂದರ ಕೊಂಬೆಯಲ್ಲಿ ಈ...