Connect with us

    bengaluru

    ಮುಂದಿನ ಚುನಾವಣೆಯಲ್ಲಿ ನಳಿನ್‌ಕುಮಾರ್ ಕಟೀಲು ಅವರನ್ನು ಗೆಲ್ಲಿಸಿ-ರಾಜ್ಯಾಧ್ಯಕ್ಷ ವಿಜಯೇಂದ್ರ

    Published

    on

    ಮಂಗಳೂರು: ಇಂದು ಇಡೀ ರಾಜ್ಯದಲ್ಲಿ ಬಿಜೆಪಿಗೆ ಭದ್ರ ಬುನಾದಿಯನ್ನು ಹಾಕಿರುವ ಜಿಲ್ಲೆ ಅಂದರೆ ಅದು ದಕ್ಷಿಣ ಕನ್ನಡ ಜಿಲ್ಲೆ. ಇಡೀ ರಾಜ್ಯದಲ್ಲಿನ ಜನ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಹಾಗೂ ಬಿಜೆಪಿಯನ್ನು ನೆನಪು ಮಾಡುತ್ತಾರೆ. ಹೀಗಾಗಿ ಇಲ್ಲಿನ ನಾಯಕರೇ ನನಗೆ ಸ್ಪೂರ್ತಿಯಾಗಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ನಳಿನ್‌ ಕುಮಾರ್ ಕಟೀಲು ಅವರನ್ನು ಗೆಲ್ಲಿಸಲು ಪಕ್ಷದ ಕಾರ್ಯಕರ್ತರು ಶ್ರಮವಹಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿಕೊಂಡು ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಬಿ ವೈ ವಿಜಯೇಂದ್ರ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.


    ಮಂಗಳೂರಿನ ಸಿವಿ ನಾಯಕ್ ಸಭಾಂಗಣದಲ್ಲಿ ಆಯೋಜನೆ ಮಾಡಲಾಗಿದ್ದ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ಒಂದು ಸುಳ್ಳನ್ನು ನೂರು ಬಾರಿ ಹೇಳಿ ನಮ್ಮ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದರು. ಅದನ್ನೇ ನಂಬಿದ ಮತದಾರರು ಒಂದು ಕ್ಷಣ ಮೈಮರೆತ ಕಾರಣ ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿದೆ. ನಾವೂ ಕೂಡಾ ಬಹಳಷ್ಟು ನಿರೀಕ್ಷೆಯಲ್ಲಿದ್ದೆವು.

    ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಎಲ್ಲಾ ನಿರೀಕ್ಷೆಗಳೂ ಇಂದು ಹುಸಿಯಾಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಅಭಿವೃದ್ಧಿಯಲ್ಲಿ ಮುನ್ನಡೆಯುತ್ತಿದೆ. ಆದರೆ ಮುಂದಿನ ದಿನಗಳಲ್ಲಿ ಮೋದಿ ಪ್ರಧಾನಿ ಆಗದಂತೆ ತಡೆಯಬೇಕು ಎಂದು ಐಎನ್‌ಡಿ ಮೂಲಕ ಒಟ್ಟಾಗಿದ್ದಾರೆ. ಆದರೆ ರಾಹುಲ್‌ ಗಾಂಧಿ ಕಾಂಗ್ರೆಸ್‌ಗೆ ಶನಿಯಾಗಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೋದಿ ಮತ್ತೊಮ್ಮೆ ಮೂರನೇ ಬಾರಿಗೆ ಪ್ರಧಾನಿ ಆಗಿ ಬರುವುದಕ್ಕೆ ಯಾವುದೇ ದುಷ್ಟ ಶಕ್ತಿಯಿಂದಲೂ ತಡೆಯಲು ಸಾಧ್ಯವಿಲ್ಲ ಎಂದರು.

    ಅಧಿಕಾರದ ಅಮಲಿನಲ್ಲಿ ನಡೆಯುವ ಕಾಂಗ್ರೆಸ್‌ಗೆ ಎಚ್ಚರಿಕೆ ನೀಡುತ್ತೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನದಲ್ಲೂ ನಾವು ಬಿಜೆಪಿ ನಾಯಕರನ್ನು ಆಯ್ಕೆ ಮಾಡಿ ಕಳುಹಿಸಲಿದ್ದೇವೆ ಎಂದರು. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಲೋಕಸಭಾ ಚುನಾವಣೆ ನಮ್ಮ ಮುಂದಿದೆ. ರಾಜ್ಯ ಸರಕಾರದ ವಿರುದ್ಧ ಹೋರಾಟ ಮಾಡಬೇಕಾಗಿದೆ. ಹೀಗಾಗಿ ಮುಂಬರುವ ದಿನಗಳಲ್ಲಿ ನಳಿನ್‌ ಕುಮಾರ್ ಕಟೀಲು ಅವರನ್ನು ಗೆಲ್ಲಿಸುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದರು.

    ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲು ಮಾತನಾಡಿ, ಇಂದು ನೂತನ ರಾಜ್ಯಾಧ್ಯಕ್ಷರಾಗಿರುವ ವಿಜಯೇಂದ್ರ ಅವರ ಸಾರಥ್ಯದಲ್ಲಿ ಈ ರಾಜ್ಯದಲ್ಲಿ ಮತ್ತೆ ನಾವು ಬಿಜೆಪಿ ಸರಕಾರ ಸ್ಥಾಪಿಸಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಳಿಸಿಕೊಳ್ಳಲಿದ್ದೇವೆ. ಇದರಲ್ಲಿ ಸಂದೇಹವಿಲ್ಲ. ಒಬ್ಬ ಯುವ ನಾಯಕ ಬಂದಾಗ ಟೀಕೆ, ಟಿಪ್ಪಣಿ ಬರುವುದು ಸಹಜ. ಅದನ್ನು ನಾವು ಮೆಟ್ಟಿ ನಿಲ್ಲಬೇಕಾಗಿದೆ. ನಮಗೆ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಗೆಲುವು ಖಂಡಿತಾ. ನಾವೆಲ್ಲರೂ ಒಂದೇ ಸಂಕಲ್ಪ ಮಾಡಿ ಈ ರಾಜ್ಯದಲ್ಲಿ ಬಿಜೆಪಿ ಗೆಲ್ಲಿಸುವ ಸಂಕಲ್ಪವನ್ನು ಮಾಡೋಣ ಎಂದರು. ವೇದಿಕೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್‌ ಮೂಡುಬಿದಿರೆ, ಶಾಸಕ ವೇದವ್ಯಾಸ ಕಾಮತ್‌, ಭರತ್‌ ಶೆಟ್ಟಿ, ಉಮಾನಾಥ ಕೋಟ್ಯಾನ್, ಹರೀಶ್ ಪೂಂಜಾ, ಭಾಗೀರಥಿ ಮುರುಳ್ಯ, ರಾಜೇಶ್ ನಾಯ್ಕ್‌ ಮೊದಲಾದವರಿದ್ದರು. ಇದೇ ವೇಳೆ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ, ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರನ್ನು ಪೇಟ ತೊಡಿಸಿ ಸನ್ಮಾನಿಸಲಾಯಿತು.

    Click to comment

    Leave a Reply

    Your email address will not be published. Required fields are marked *

    bengaluru

    ಪಟಾಕಿ ದುರಂತ: ಡಬ್ಬದ ಮೇಲೆ ಯುವಕನನ್ನು ಕೂರಿಸಿ ಬಾಂಬ್​ ಸಿಡಿಸಿದ್ರು; ಸ್ಥಳದಲ್ಲೇ ಸಾ*ವು!

    Published

    on

    ಬೆಂಗಳೂರು: ದೀಪಾವಳಿ ದಿನದಂದು ಸ್ನೇಹಿತರ ಪಟಾಕಿ ಸಿಡಿಸುವ ಹುಚ್ಚಾಟಕ್ಕೆ ಯುವಕ ಬ*ಲಿಯಾದ ಘಟನೆ ಬೆಳಕಿಗೆ ಬಂದಿದೆ. ಕೋಣನಕುಂಟೆಯ ವೀವರ್ಸ್ ಕಾಲೋನಿಯಲ್ಲಿ ಈ ದುರ್ಘಟನೆ ನಡೆದಿದೆ.

    ಪಟಾಕಿ ಅಪಾಯಕಾರಿ ಎಂಬುದು ಎಲ್ಲರಿಗೂ ಗೊತ್ತು. ಆದರೆ ಸ್ನೇಹಿತರು ಹುಡುಗಾಟ ಮಾಡಲು ಹೋಗಿ ಸ್ನೇಹಿತನನ್ನೇ ಕಳೆದುಕೊಂಡಿದ್ದಾರೆ. ಶಬರೀಶ್ ಎಂಬ ಯುವಕ ಸ್ನೇಹಿತರೊಂದಿಗೆ ಹುಚ್ಚಾಟ ಮಾಡಲು ಹೋಗಿ ಬ*ಲಿಯಾಗಿದ್ದಾನೆ.

    ದೀಪಾವಳಿ ದಿನದಂದು ಶಬರೀಶ್ ಹಾಗೂ ಸ್ನೇಹಿತರು ಪಟಾಕಿ ಹೊಡೆಯುತ್ತಿದ್ದರು. ಈ ವೇಳೆ ಪಟಾಕಿ ಇಟ್ಟು ಅದರ ಮೇಲೆ ಡಬ್ಬ ಇಟ್ಟು ಕೂರಲು ಚಾಲೆಂಜ್ ಹಾಕಿದ್ದರು. ಮದ್ಯಪಾನ‌ ಮಾಡಿದ್ದ ಶಬರೀಶ್ ಅದೇ ರೀತಿ ಮಾಡಿದ್ದಾನೆ. ಪಟಾಕಿ ಸಿಡಿದ ರಭಸಕ್ಕೆ ತೀವ್ರವಾಗಿ ಗಾಯಗೊಂಡಿದ್ದಾನೆ.

    ಗಾಯಾಳು ಶಬರೀಶನನ್ನು ಆಸ್ಪತ್ರೆಗೆ ದಾಖಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಶಬರೀಶ್ ಸಾ*ವನ್ನಪ್ಪಿದ್ದಾನೆ. ಸದ್ಯ ಈ ಘಟನೆ ಸಂಬಂಧ ಕೋಣನಕುಂಟೆ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.

    Continue Reading

    bangalore

    ಅಬ್ಬಬ್ಬಾ! ಖತರ್ನಾಕ್ ಗರ್ಲ್ ಫ್ರೆಂಡ್; ಪ್ರಿಯಕರನನ್ನೇ ರಾಬರಿ ಮಾಡಿಸಿದ ಯುವತಿ, ಯಾಕೆ ಗೊತ್ತಾ!?

    Published

    on

    ಮಂಗಳೂರು/ ಬೆಂಗಳೂರು: ಇತ್ತೀಚೆಗೆ ಕ್ರೈಂ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಕೆಲವೊಂದು ಪ್ರಕರಣಗಳು ವಿಚಿತ್ರವಾಗಿರುತ್ತವೆ. ಇಲ್ಲೊಬ್ಬಾಕೆ ಪ್ರಿಯತಮನ ಮೊಬೈಲ್‌ನಲ್ಲಿದ್ದ ತನ್ನ ಫೋಟೋ ಹಾಗೂ ವೀಡಿಯೊಗಳನ್ನು ಡಿಲೀಟ್ ಮಾಡಿಸಲೆಂದು ರಾಬರಿ ಮಾಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಸಿನಿಮೀಯ ರೀತಿ ಪ್ರಿಯತಮೆಯೇ ಪ್ರಿಯಕರನ ಮೇಲೆ ರಾಬರಿ ಮಾಡಿಸಿ ಸಿಕ್ಕಿಬಿದ್ದಿದ್ದಾಳೆ.

    ಬೆಳ್ಳಂದೂರು ಪೊಲೀಸರು ಟೆಕ್ಕಿ ಶ್ರುತಿ ಸೇರಿ ಮೂವರನ್ನು ಬಂಧಿಸಿದ್ದಾರೆ.

    ಆ್ಯಕ್ಸಿಡೆಂಟ್ – ಡ್ರಾಮಾ :
    ಕಳೆದ ಸೆಪ್ಟೆಂಬರ್ 20 ರಂದು ಪ್ರಿಯಕರ ವಂಶಿಕೃಷ್ಣರೆಡ್ಡಿ ಎಂಬಾತ ಶ್ರುತಿ ಭೇಟಿಗೆ ತೆರಳಿದ್ದ. ಭೇಟಿಯಾಗಿ ಹೊರಬರುತ್ತಿದ್ದಂತೆ ಸ್ವಿಫ್ಟ್ ಕಾರಿನಲ್ಲಿ ಬಂದ ಅಪರಿಚಿತರು ವಂಶಿಕೃಷ್ಣರೆಡ್ಡಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದರು. ಈ ವೇಳೆ ಜಗಳ ತೆಗೆದ ಅಪರಿಚಿತರು ಆತನ ಬಳಿಯಿದ್ದ ಮೊಬೈಲ್ ಕಸಿದಿದ್ದರು. ಅಲ್ಲದೇ, ವಂಶಿ ಜತೆಯಲ್ಲಿಯೇ ಇದ್ದ ಶ್ರುತಿಯ ಮೊಬೈಲ್‌ ಅನ್ನು ಕಸಿದುಕೊಂಡಿದ್ದರು. ಬಳಿಕ ದೂರು ಕೊಡುವುದು ಬೇಡ ಮೊಬೈಲ್ ಹೋದರೆ ಹೋಯಿತು ಎಂದು ಬಾಯ್‌ಫ್ರೆಂಡ್‌ ವಂಶಿ ಮುಂದೆ ಶ್ರುತಿ ನಾಟಕವಾಡಿದ್ದಾಳೆ.
    ಆದರೆ, ಇಷ್ಟಕ್ಕೆ ಸುಮ್ಮನಾಗದ ವಂಶಿಕೃಷ್ಣ ಬೆಳ್ಳಂದೂರು ಠಾಣೆಗೆ ತೆರಳಿ ಕಾರಿನ ನಂಬರ್ ಸಮೇತ ದೂರು ನೀಡಿದ್ದರು.
    ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.

    ಇದನ್ನು ಓದಿ:ಪುತ್ತೂರು ಕಾಂಗ್ರೆಸ್‌ ಮುಖಂಡನ ಅಶ್ಲೀ*ಲ ವೀಡಿಯೋ ವೈರಲ್‌..!

    ಬೇಡವಾಗಿದ್ದ ಬಾಯ್ ಫ್ರೆಂಡ್ :

    ಇತ್ತೀಚೆಗೆ ಪ್ರಿಯತಮ ವಂಶಿಕೃಷ್ಣನಿಂದ ದೂರವಾಗಲು ಶ್ರುತಿ ಯತ್ನಿಸಿದ್ದಳು. ಆದರೆ, ವಂಶಿಕೃಷ್ಣನ ಮೊಬೈಲ್‌ನಲ್ಲಿ ಶ್ರುತಿಯ ಫೋಟೋಗಳಿದ್ದವು. ನೇರವಾಗಿ ಹೇಳಿದರೆ ಎಲ್ಲಿ ವಂಶಿಕೃಷ್ಣ ವಿರೋಧ ವ್ಯಕ್ತಪಡಿಸುತ್ತಾನೋ ಎಂಬ ಭಯದಿಂದ ಶ್ರುತಿ ಮೊಬೈಲ್ ರಾಬರಿ ಮಾಡುವ ಯೋಜನೆ ರೂಪಿಸಿದ್ದಾರೆ. ಸದ್ಯ ಆರೋಪಿ ಟೆಕ್ಕಿ ಶ್ರುತಿಯನ್ನು ಬಂಧಿಸಿರುವ ಪೊಲೀಸರು ಜೈಲಿಗಟ್ಟಿದ್ದು, ಈ ಬಗ್ಗೆ ಬೆಳ್ಳಂದೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

    Continue Reading

    bengaluru

    ಜೈಲಿನಲ್ಲೇ ಮೊಬೈಲ್‌ ಬಳಕೆ !

    Published

    on

    ಮಂಗಳೂರು/ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಆತಿಥ್ಯ ಪ್ರಕರಣ ನಡೆದ ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸರು ಸೆಂಟ್ರಲ್ ಜೈಲ್ಗೆ ಮೊಬೈಲ್ ರವಾನೆ ಮಾಡುತ್ತಿದ್ದ ಖೈದಿಯೊಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.


    ಕೋಲಾರದ ಕೆಜಿಎಫ್ ನ ವಿಜಯ್ನನ್ನು ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಹಾಕಲಾಗಿದೆ. ಆಗ್ನೇಯ ವಿಭಾಗದ ಪೊಲೀಸರು ಆತನನ್ನು ಸೆರೆ ಹಿಡಿದಿದ್ದರು.
    ಜೈಲಿನೊಳಗೆ ವಿಜಯ್ ಸಿಬ್ಬಂದಿಯೊಬ್ಬರ ನೆರವು ಪಡೆದು ಸ್ಮಾರ್ಟ್ ಫೋನ್ಗಳನ್ನು ಹೊರಗಿನಿಂದ ಖರೀದಿಸಿಕೊಂಡು ಅವುಗಳನ್ನು ಜೈಲಿನಲ್ಲಿರುವ ಇತರ ಖೈದಿಗಳಿಗೆ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ವಿಜಯ್ ಮೊಬೈಲ್ ಪೂರೈಸುವುದಕ್ಕೆ ಸಾಕ್ಷ್ಯಗಳು ಸಿಕ್ಕ ಬೆನ್ನಲ್ಲೇ ಆತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
    ಕಸ್ಟಡಿಯಲ್ಲಿದ್ದ ವಿಲ್ಸನ್ ಗಾರ್ಡನ್ ನಾಗ ಅಲಿಯಾಸ್ ನಾಗರಾಜ್ ಹಾಗೂ ವೇಲು ಅವರ ವಿಚಾರಣೆಯೂ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ವಿಜಯ್ ಜೈಲು ಅಧಿಕಾರಿಗಳ ಸಹಾಯದಿಂದಲೇ ಮೊಬೈಲ್ ಗಳನ್ನು ಮಾರಾಟ ಮಾಡುತ್ತಿದ್ದ. ರೌಡಿ ಶೀಟರ್ಗಳು ಸಾವಿರಾರು ಹಣ ಕೊಟ್ಟು ಈತನಿಂದ ಮೊಬೈಲ್ ಖರೀದಿಸುತ್ತಿದ್ದರು ಎಂಬ ವಿಚಾರದ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
    ಸೆ. 15 ರಂದು ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ 26 ಮೊಬೈಲ್ ಪತ್ತೆಯಾಗಿದ್ದವು. ಇನ್ನಷ್ಟು ತನಿಖೆ ನಡೆಸಿದಾಗ ವಿಜಯ್ ಮೊಬೈಲ್ ಪೂರೈಸುತ್ತಿದ್ದ ಎಂಬುವುದು ಖಚಿತವಾಗಿದೆ ಎಂದು ವರದಿಯಾಗಿದೆ

    Continue Reading

    LATEST NEWS

    Trending