Connect with us

DAKSHINA KANNADA

ನಮ್ಮ ಕುಡ್ಲ ದಸರಾ ಸಂಭ್ರಮ :ಕಲೆ, ಸಂಸ್ಕೃತಿ, ಆಚಾರ ವಿಚಾರಗಳ ತವರೂರು – ಕೆನರಾಬ್ಯಾಂಕ್ ಜಿಎಂ ಯೋಗೀಶ್ ಆಚಾರ್ಯ

Published

on

ನಮ್ಮ ಕುಡ್ಲ ದಸರಾ ಸಂಭ್ರಮ :ಕಲೆ, ಸಂಸ್ಕೃತಿ, ಆಚಾರ ವಿಚಾರಗಳ ತವರೂರು – ಕೆನರಾಬ್ಯಾಂಕ್ ಜಿಎಂ ಯೋಗೀಶ್ ಆಚಾರ್ಯ

ಮಂಗಳೂರು : ಇಡೀ ಜಗತ್ತಿಗೆ ಸಂಸ್ಕೃತಿಯ ಪಾಠವನ್ನು ಕಲಿಸಿಕೊಟ್ಟಿರುವುದು ಭಾರತ ದೇಶ. ಅಂಥಾದ್ದರಲ್ಲಿ. ಇಡೀ ಕರ್ನಾಟಕ ಅದಕ್ಕೆ ಮೂಲವಾಗಿದೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆ ಕಲೆ, ಸಂಸ್ಕೃತಿಯ ತವರೂರು ಆಗಿದ್ದು, ಇಲ್ಲಿನ ಸಂಸ್ಕೃತಿಯನ್ನು ಇಲ್ಲಿನ ಕಲಾವಿದರು ಅತ್ಯುನ್ನತ ಮಟ್ಟಕ್ಕೆ ಕೊಂಡೊಯ್ದಿದ್ದಾರೆ ಎಂದು ಕೆನರಾ ಬ್ಯಾಂಕಿನ ಜನರಲ್ ಮ್ಯಾನೇಜರ್ ಯೋಗಿಶ್ ಆಚಾರ್ಯ ನುಡಿದರು.

ಅವರು ನಮ್ಮ ಕುಡ್ಲ ವಾಹಿನಿಯ ದಶದಿನಗಳ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ವಾಹಿನಿಗಳು ಕೇವಲ ಸುದ್ದಿಗಳಿಗೆ ಮಾತ್ರ ಆದ್ಯತೆ ನೀಡದೇ ಕಲೆ , ಸಾಹಿತ್ಯಕ್ಕೂ ಪ್ರೋತ್ಸಾಹ ನೀಡಿ ಅವರನ್ನು ಗೌರವಿಸಬೇಕು. ನಮ್ಮ ಕುಡ್ಲ ಆ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಕೆಲಸ ಎಂದರು.

ಎಲ್ಲಿ ನಾರಿಯರು ಪೂಜಿಸಲ್ಪಡುತ್ತಾರೋ ಅಲ್ಲಿ ದೇವತೆಯರು ಕೂಡಾ ಹರ್ಷಚಿತ್ತರಾಗುತ್ತಾರೆ. ನವರಾತ್ರಿ ಸಂದರ್ಭದಲ್ಲಿ ದೇವಿಯರ ಆರಾಧನೆ ಮೂಲಕ ಸಮಾಜದಲ್ಲಿ ಹೆಣ್ಣು ಗೌರವದ ಪೂಜನೀಯ ಸ್ಥಾನ ಪಡೆದುಕೊಳ್ಳುತ್ತಾರೆ ಎಂದು ಜಯಲಕ್ಷ್ಮೀ ಸಿಲ್ಕ್ಸ್ ಉದ್ಯಾವರ ಇದರ ಅಪರ್ಣಾ ಹೆಗ್ಡೆ ಅಭಿಪ್ರಾಯಪಟ್ಟರು.

ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ನವರಂಗ್ ಅನ್ನೋದು ಕೇವಲ ಒಂದು ಸ್ಪರ್ಧೆ ಅಲ್ಲ. ನವರಂಗ್ ದಿನ ಒಂಭತ್ತು ದಿನಗಳ ಕಾಲ ಉಡುವ ಬಣ್ಣಬಣ್ಣದ ಸೀರೆಗಳ ಮೂಲಕ ನಾವು ನವದೇವಿಯರ ಮೂಲಕ ನಮ್ಮೊಳಗಿನ ಧನಾತ್ಮಕ ಶಕ್ತಿಯನ್ನು ಗೋಚರ ಮಾಡುವ ಕಾಲವಿದು ಎಂದು ವಿಶ್ಲೇಷಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮಗಳ ಮುನ್ನೋಟಕ್ಕೆ ಮಾವಿನ ಕಟ್ಟೆ ಯಜಮಾನ ಇಂಡಸ್ಟ್ರೀಸ್‌ನ ವರದರಾಜ ಪೈ ಚಾಲನೆ ನೀಡಿ, ನಮ್ಮ ಕುಡ್ಲ ವಾಹಿನಿಗೆ ಶುಭ ಹಾರೈಸಿದರು. ನಮ್ಮ ಕುಡ್ಲ ವಾಹಿನಿಯ ಜೊತೆಗೆ ತಮ್ಮ ಸಂಸ್ಥೆಯ ಒಡನಾಟವನ್ನು ವಿವರಿಸಿದರು.
ಸಾಯಿರಾಧ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಮನೋಹರ ಶೆಟ್ಟಿ, ನಮ್ಮ ಕರಾವಳಿಯ ಉದ್ಯಮ, ಶಿಕ್ಷಣ, ಬ್ಯಾಂಕಿಂಗ್ ಕ್ಷೇತ್ರ, ಪ್ರವಾಸೋದ್ಯಮ ಹೀಗೆ ಎಲ್ಲವೂ ಇಲ್ಲಿ ಒಂದಕ್ಕೊಂದು ಪೂರಕವಾಗಿದ್ದು, ಇವುಗಳ ಮೂಲಕ ನಾವು ಅಭಿವೃದ್ಧಿ ಸಾಧಿಸಿ ಸಾಕಷ್ಟು ಉದ್ಯೋಗಾವಕಾಶವನ್ನು ಸೃಷ್ಟಿಸಲು ಅವಕಾಶವಿದೆ ಎಂದರು.
ಜಗತ್ತಿನಲ್ಲಿ ಅಸುರೀ ಶಕ್ತಿ ಹೆಚ್ಚಾದಾಗ ದೇವಿ ಇನ್ನೊಂದು ರೂಪದಲ್ಲಿ ಅದನ್ನು ಮಟ್ಟಹಾಕಿದ ವಿಚಾರ ನಮಗೆಲ್ಲರಿಗೂ ಗೊತ್ತಿದೆ. ಭೂಮಿಯಲ್ಲಿ ಅಧರ್ಮ ಹೆಚ್ಚಾದಾಗ ದೇವರೇ ಅದನ್ನು ಸರಿಪಡಿಸಲು ಮುಂದಾಗಲು ಆಚರಿಸುವುದೇ ಈ ನವರಾತ್ರಿ ಉತ್ಸವದ ಅಗತ್ಯತೆ ಎಂದು ಬಿಜೆಪಿ ನಾಯಕ, ಉದ್ಯಮಿ ಜಿತೇಂದ್ರ ಕೊಟ್ಟಾರಿ ನುಡಿದರು.

ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ, ಜೆಡಿಎಸ್ ಮುಖಂಡ ಜೀವನ್ ಶೆಟ್ಟಿ ಉಪಸ್ಥಿತರಿದ್ದರು. ನಮ್ಮಕುಡ್ಲ ವಾಹಿನಿ ನಿರ್ದೇಶಕ ಲೀಲಾಕ್ಷ ಕರ್ಕೇರಾ ಸ್ವಾಗತಿಸಿದರು. ನಿತಿನ್ ಕಾರ್ಯಕ್ರಮ ನಿರೂಪಿಸಿದರು.

Click to comment

Leave a Reply

Your email address will not be published. Required fields are marked *

DAKSHINA KANNADA

‘ನಾಟು ನಾಟು’ ರೀತಿಯ ಸಾಂಗ್‌..! ಕುತೂಹಲ ಮೂಡಿಸಿದ ‘ವಾರ್ 2’

Published

on

2019 ರಲ್ಲಿ ಸೂಪರ್ ಹಿಟ್ ಆಗಿದ್ದ ‘ವಾರ್’ ಸಿನೆಮಾದ ಸೆಕಂಡ್ ವರ್ಷನ್‌ ‘ವಾರ್ 2’ ತೆರೆ ಮೇಲೆ ಬರಲು ಭರದ ಸಿದ್ಧತೆ ನಡೆಸಿದೆ. ‘ವಾರ್’ ಸಿನೆಮಾದಲ್ಲಿ ‘ ಜೈ ಜೈ ಶಿವಶಂಕರ್’ ಹಾಡು ಸುಪರ್ ಹಿಟ್ ಆಗಿದ್ದು ಫ್ಯಾನ್ಸ್‌ಗಳು ಹಾಡಿಗೆ ಫಿದಾ ಆಗಿದ್ರು. ಟೈಗರ್ ಶ್ರಾಫ್ ಹಾಗೂ ಹೃತಿಕ್ ರೋಷನ್ ನಟನೆಯ ‘ವಾರ್’ ಸಿನೆಮಾ ಬಳಿಕ ಈಗ ‘ವಾರ್‌ 2’ ರೆಡಿ ಆಗ್ತಾ ಇದೆ. ಇದರಲ್ಲಿ ಹೃತಿಕ್ ರೋಷನ್ ಹಾಗೂ ಜ್ಯೂನಿಯರ್ ಎನ್‌ಟಿಆರ್ ಜೊತೆಯಾಗಿದ್ದಾರೆ.

ಅದ್ಧೂರಿಯಾಗಿ ನಿರ್ಮಾಣ ಆಗ್ತಾ ಇರೋ ‘ವಾರ್ 2’ ಸಿನೆಮಾಗೆ ದೊಡ್ಡ ಮಟ್ಟದಲ್ಲಿ ಹೂಡಿಕೆ ಮಾಡಲಾಗ್ತಾ ಇದೆ. ಯಶ್‌ ರಾಜ್ ಫಿಲಂಸ್‌ ಸಂಸ್ಥೆ ಈ ‘ವಾರ್ 2’ ಸಿನೆಮಾಗೆ ಬಂಡವಾಳ ಹಾಕುತ್ತಿದೆ. ‘ವಾರ್’ ಸಿನೆಮಾದಂತೆ ಈ ಸಿನೆಮಾದಲ್ಲೂ ವಿಶೇಷ ಹಾಡನ್ನ ಸಿನೆಮಾ ತಂಡ ಪ್ಲ್ಯಾನ್ ಮಾಡಿದೆ. ಜೂನಿಯರ್ ಎನ್‌ಟಿಆರ್ ಅವರ ಆಸ್ಕರ್ ಅವಾರ್ಡ್‌ ವಿನ್ ಆಗಿದ್ದ ‘ನಾಟು ನಾಟು” ಹಾಡಿನಂತೆ ಇರೋ ಹಾಡಿಗೆ ಹೃತಿಕ್ ಹಾಗೂ ಜ್ಯೂನಿಯರ್ ಎನ್‌ಟಿಆರ್‌ ಹೆಜ್ಜೆ ಹಾಕಲಿದ್ದಾರೆ ಎನ್ನಲಾಗಿದೆ. ‘ನಾಟು ನಾಟು’ ರೀತಿಯ ಹಾಡು ಹಾಗೂ ಡ್ಯಾನ್ಸ್‌ ‘ವಾರ್ 2’ ಸಿಎನಮಾದ ಹೈಲೈಟ್ ಆಗಲಿದೆ ಎಂದು ಬಾಲಿವುಡ್ ಹಂಗಾಮ ವರದಿ ಮಾಡಿದೆ.


ಈಗಾಗಲೇ ‘ವಾರ್ 2’ ಚಿತ್ರದ ಶೂಟಿಂಗ್ ಆರಂಭವಾಗಿದೆ. ಚಿತ್ರದ ಸೆಟ್​ ಫೋಟೋಗಳು ಕೂಡಾ ಲೀಕ್ ಆಗಿವೆ. ಅಯಾನ್ ಮುಖರ್ಜಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಆದಿತ್ಯ ಚೋಪ್ರಾ ಅವರು ದೊಡ್ಡ ಬಜೆಟ್​ನಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ‘ವಾರ್ 2’ ಚಿತ್ರದಲ್ಲಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ. ಈ ಸಿನಿಮಾ 2025ರಲ್ಲಿ ಆಗಸ್ಟ್ 14ರಂದು ರಿಲೀಸ್ ಆಗಲಿದೆ.

Continue Reading

DAKSHINA KANNADA

ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!

Published

on

ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.

ಅಸ್ಥಿಪಂಜರ

ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.

Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!

ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್‌:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್

Published

on

ಬಂಟ್ವಾಳ : ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಪೋರೇಟರ್‌ ಆಗಿ ಮೇಯರ್ ಆಗಿದ್ದ ಕವಿತಾ ಸನಿಲ್ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದ ಕವಿತಾ ಸನಿಲ್‌ ವಿಧಾನ ಸಭಾ ಚುನಾವಣೆಯಲ್ಲೂ ಸಾಕಷ್ಟು ಪ್ರಚಾರ ಮಾಡಿದ್ರು. ಸಿಎಂ ಸಿದ್ದರಾಮಯ್ಯ ಅವರಿಗೂ ಉತ್ತಮ ಒಡನಾಟ ಇಟ್ಟುಕೊಂಡಿದ್ದ ಕವಿತಾ ಸನಿಲ್ ಸದ್ಯ ಪಕ್ಷದ ನಾಯಕರ ಬಗ್ಗೆ ಅಸಮಾಧಾನಗೊಂಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ತನಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದರು. ಯಾವುದಾದರು ಒಂದು ನಿಗಮ ಸಿಗಬಹುದು ಎಂಬ ಅವರ ನಿರೀಕ್ಷೆ ಹುಸಿಯಾದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಂಟ್ವಾಳಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಂದ ಬಿಜೆಪಿ ಬಾವುಟ ಪಡೆದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ : ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!

Continue Reading

LATEST NEWS

Trending