ಮಂಗಳೂರು ರೈಲ್ವೆ ನಿಲ್ದಾಣಕ್ಕೆ ನಾರಾಯಣ ಗುರು, ಬಂದರಿಗೆ ಅಬ್ಬಕ್ಕ ಹೆಸರಿಡಲು ಶಾಸಕ ಖಾದರ್ ಒತ್ತಾಯ..!
ಮಂಗಳೂರು : ಮಂಗಳೂರು ಕೇಂದ್ರ ರೈಲ್ವೆ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಮಂಗಳೂರು ಬಂದರಿಗೆ ವೀರರಾಣಿ ಅಬ್ಬಕ್ಕ ಹೆಸರಿಡಬೇಕೆಂದು ಶಾಸಕ ಯು. ಟಿ. ಖಾದರ್ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ವಿಧಾನಸಭೆಯ ಅಧಿವೇಶನದಲ್ಲಿ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಖಾದರ್ ಅವರು, ಬ್ರಹ್ಮಶ್ರೀ ನಾರಾಯಣ ಗುರುಗಳು ದಕ್ಷಿಣ ಕನ್ನಡಕ್ಕೆ ಮಾತ್ರವಲ್ಲ, ಇಡೀ ನಾಡಿಗೆ ದೊಡ್ಡ ಆಧ್ಯಾತ್ಮಿಕ ಗುರುಗಳು.
ನಾರಾಯಣ ಗುರುಗಳು ಕೇರಳದಿಂದ ಮಂಗಳೂರಿಗೆ ಮೊದಲು ಬಂದಿಳಿದದ್ದು ಈಗಿನ ರೈಲ್ವೆ ನಿಲ್ದಾಣ ಇರುವ ಜಾಗದಲ್ಲಿ.
ಹೀಗಾಗಿ ನಾರಾಯಣ ಗುರುಗಳ ಹೆಸರನ್ನು ರೈಲ್ವೆ ನಿಲ್ದಾಣಕ್ಕೆ ನಾಮಕರಣ ಮಾಡುವುದು ಸೂಕ್ತ ಎಂದು ಅಭಿಪ್ರಾಯ ಮಂಡಿಸಿದರು.
ಅದೇ ರೀತಿ ಮಂಗಳೂರು ವಿಶ್ವವಿದ್ಯಾಲಯಕ್ಕೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಮತ್ತು ಮಂಗಳೂರು ಬಂದರಿಗೆ ವೀರರಾಣಿ ಅಬ್ಬಕ್ಕ ಹೆಸರಿಡಬೇಕೆಂದೂ ಇದೇ ವೇಳೆ ಖಾದರ್ ಆಗ್ರಹಿಸಿದರು.
ಇನ್ನು ಈ ಬಗ್ಗೆ ಪ್ರತಿಕ್ರೀಯಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಈ ವಿಷಯವನ್ನು ಸರ್ಕಾರದ ಮಟ್ಟದಲ್ಲಿ ಪರಿಶೀಲಿಸುವುದಾಗಿ ಸದನಕ್ಕೆ ತಿಳಿಸಿದರು.