Connect with us

LATEST NEWS

ನಾರಾಯಣ ಗುರುಗಳ ಹೆಸರಿನಲ್ಲಿ ರಾಜಕೀಯ ಸೃಷ್ಟಿಸಬೇಡಿ: ಬಿರುವೆರ್ ಕುಡ್ಲ

Published

on

ಮಂಗಳೂರು: ಒಂದೇ ಜಾತಿ, ಒಂದೇ ಮತ, ಹಾಗೂ ಒಂದೇ ದೇವರು ಎಂದು ಬೋಧಿಸಿದ ಶ್ರೀನಾರಾಯಣ ಗುರುಗಳ ಹೆಸರನ್ನು ಮುಂದಿಟ್ಟುಕೊಂಡು, ರಾಜಕೀಯ ಉದ್ದೇಶಕ್ಕಾಗಿ ಕೆಲವು ಪಕ್ಷಗಳು ಜನರಲ್ಲಿ ಗೊಂದಲ ಸೃಷ್ಟಿಸುತ್ತಿರುವುದು ವಿಷಾದನೀಯ.

ನಾರಾಯಣ ಗುರುಗಳ ಹೆಸರಿನಲ್ಲಿ ರಾಜಕೀಯ ಸೃಷ್ಟಿಸಬೇಡಿ ಎಂಬುದಾಗಿ ನಗರದ ಖಾಸಗಿ ಹೊಟೇಲ್‌ವೊಂದರಲ್ಲಿ ಬಿರುವೆರ್ ಕುಡ್ಲ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಸಹನಾ ಕುಂದರ್ ಮನವಿ ಮಾಡಿದ್ದಾರೆ.

ಶ್ರೀನಾರಾಯಣ ಗುರುಗಳು ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿನ ವಿರುದ್ಧ ಹೋರಾಟ ನಡೆಸಿದವರು.

ಗುರುಗಳು ಸಮಾಜದ ಸುಧಾರಕರಾಗಿ ಸಮಾಜದ ತಾರತಮ್ಯಗಳನ್ನು ನಿವಾರಿಸುವ ಜೊತೆಗೆ ಧರ್ಮ, ಆಧ್ಯಾತ್ಮ ಜಾಗೃತಿಯನ್ನೂ ಮೂಡಿಸಿದ ಮಹಾತ್ಮರು.

ಗಣರಾಜ್ಯೋತ್ಸವಕ್ಕಾಗಿ ಕೇರಳ ಸರಕಾರ ಕಳುಹಿಸಿದ ಇವರ ಸ್ತಬ್ಧಚಿತ್ರವನ್ನು ಕೇಂದ್ರ ಸರಕಾರ ಕಡೆಗಣಿಸಿದೆ ಎಂಬ ಆರೋಪದ ಮೂಲಕ

ವಿವಾದ ಸೃಷ್ಟಿಸಿ ಹೇಗಾದರೂ ಮಾಡಿ ಅಧಿಕಾರ ಪಡೆಯಬೇಕೆಂಬ ಉದ್ದೇಶದಿಂದ ಇರುವ ಪಕ್ಷಗಳು ಜನರ ಮನಸ್ಸಿನಲ್ಲಿ ಗೊಂದಲ ಉಂಟು ಮಾಡಲೆತ್ನಿಸುತ್ತಿರುವುದು ಖಂಡನೀಯ.

ಸುಳ್ಳು ಪ್ರಚಾರದ ಮೂಲಕ ಜನರ ನಡುವೆ ಒಡಕನ್ನುಂಟು ಮಾಡಲು ಮುಂದಾಗಿರುವುದು ಖೇದಕರ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದು, ಇಂತಹ ಹುನ್ನಾರಗಳ ವಿರುದ್ಧ ಜನತೆ ಎಚ್ಚರಿಕೆಯಿಂದ ಇರಬೇಕು.

ಕೇಂದ್ರ ಕಳುಹಿಸಿದ ಮಾರ್ಗಸೂಚಿಯನ್ನು ಪಾಲಿಸಿಲ್ಲ ಎಂಬ ಕೂಗು ಕೇಳಿಬರುತ್ತಿದೆ. ಆದರೆ ಆ ಪಾಲಿಸದೆ ಇರುವ ನಿಯಮ ಯಾವುದು ಎಂಬುದರ ಬಗ್ಗೆ ಸರ್ಕಾರ ಸ್ಪಷ್ಟನೆ ಕೊಟ್ಟರೆ ಜನಸಾಮಾನ್ಯರಿಗೂ ಇರುವ ಗೊಂದಲ ಪರಿಹಾರವಾಗುತ್ತದೆ,

ಗಣರಾಜ್ಯೋತ್ಸವದಂದು ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರದ ಮೆರವಣಿಗೆಗೆ ನಮ್ಮೆಲ್ಲರ ಬೆಂಬಲವಿದೆ.

ಈ ಮೂಲಕ ಶ್ರೀನಾರಾಯಣ ಗುರುಗಳ ಮೇಲೆ ಇಟ್ಟಿರುವ ಅಭಿಮಾನ, ಭಕ್ತಿ ಪ್ರಪಂಚಕ್ಕೆ ಮಾದರಿಯಾಗುವಂತೆ ಆಗಲಿ ಎಂಬುವುದು ನಮ್ಮ ಉದ್ದೇಶ ಎಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಬಿರುವೆರ್ ಕುಡ್ಲದ ಸಹನಾ ಕುಂದರ್, ವಿದ್ಯಾ ರಾಕೇಶ್, ರಾಕೇಶ್ ಸಾಲ್ಯಾನ್, ಲಕ್ಷ್ಮೀಶ್ ಸುವರ್ಣ, ಕಿಶೋರ್ ಬಾಬು, ಪ್ರಾಣೇಶ್ ಬಂಗೇರ ಹಾಗೂ ಕಿರಣ್, ರಕ್ಷಿತ್ ಸುವರ್ಣ ಉಪಸ್ಥಿತರಿದ್ದರು.

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

LATEST NEWS

60ನೇ ವಯಸ್ಸಿಗೆ “ಮಿಸ್ ಯುನಿವರ್ಸ್” ಕಿರೀಟ ಮುಡಿಗೇರಿಸಿಕೊಂಡ ಈಕೆ ಯಾರು ಗೊತ್ತಾ? ಈಕೆಯ ಸೌಂದರ್ಯಕ್ಕೆ ಬೆರಗಾದ್ರು ಜನ..!!

Published

on

ಹೆಚ್ಚಾಗಿ ಮಿಸ್​ ವರ್ಲ್ಡ್​​​, ಮಿಸ್​​ ಯುನಿವರ್ಸ್ ಇನ್ನೂ ಮುಂತಾದ ಸೌಂದರ್ಯ ಸ್ಪರ್ಧೆಯಲ್ಲಿ ಹದಿಹರೆಯದ ಸುಂದರಿಯರೇ ಭಾಗವಹಿಸುತ್ತಾರೆ. ಆದರೆ ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ ಎಂಬ ಮಹಿಳೆ ತನ್ನ 60ನೇ ವಯಸ್ಸಿನಲ್ಲಿ ಮಿಸ್ ಯುನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾಳೆ.

ವೃತ್ತಿಯಲ್ಲಿ ವಕೀಲ ಮತ್ತು ಪತ್ರಕರ್ತೆಯಾಗಿರೋ ಅಲೆಜಾಂಡ್ರಾ ಅವರು 60ನೇ ವಯಸ್ಸಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಮೊದಲ ಮಹಿಳೆ ಎಂಬ ದಾಖಲೆ ಪಡೆದುಕೊಂಡಿದ್ದಾರೆ. ಅರ್ಜೆಂಟೀನಾದ ಬ್ಯೂನಸ್ ಐರಿಸ್​​ನ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್‌ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ ಗೆದ್ದು ಇಡೀ ಜಗತ್ತೆ ತಿರುಗಿ ನೋಡುವಂತೆ ಮಾಡಿದ್ದಾಳೆ.

ಇನ್ನೂ 60ನೇ ವಯಸ್ಸಿನಲ್ಲಿಯೂ ಈಕೆಯ ಸೌಂದರ್ಯ ಕಂಡು ನೆಟ್ಟಿಗರು ಫುಲ್​ ಶಾಕ್​ ಆಗಿದ್ದಾರೆ. ಅನೇಕರು ಆಕೆ ಮಿಸ್​​ ಯುನಿವರ್ಸ್​​ ಕಿರೀಟ ಪಡೆದುಕೊಂಡಿರೋದಕ್ಕೆ ಶುಭಾಶಯ ತಿಳಿಸುತ್ತಿದ್ದು ಇನ್ನೂ ಕೆಲವರು ಕಮೆಂಟ್ಸ್‌ಗಳನ್ನು ಹಾಕುತ್ತಿದ್ದಾರೆ.

Continue Reading

LATEST NEWS

ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

Published

on

ಪುತ್ತೂರು :  ಬೊಳ್ವಾರ್ ಬಸ್ ತಂಗುದಾಣದ ಪಕ್ಕದಲ್ಲಿದ್ದ ಬೃಹದಾಕಾರದ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಹಲವು ವಾಹನಗಳು ಜಖಂಗೊಂಡಿವೆ. ವಾಹನ ಮಾಲಕರು ವಾಹನಗಳನ್ನು ಹೊರತೆಗೆಯಲು ಹರಸಾಹಸ ಪಡುವಂತಾಯಿತು.

ಬಿದ್ದ ಮರದಲ್ಲಿದ್ದ ಮಾವಿನಕಾಯಿಗಳನ್ನು ಕೊಯ್ಯಲು ಜನ ಮುಗಿಬಿದ್ದ ಘಟನೆಯೂ ನಡೆಯಿತು. ಬಳಿಕ ಸ್ಥಳೀಯರು ಮರದ ಕೊಂಬೆಗಳನ್ನು ಕಡಿದು ತೆರವುಗೊಳಿಸಿದರು.

ಮರ ಬೀಳುವ ಸಂದರ್ಭ ಯಾರೂ ಇಲ್ಲದ ಪರಿಣಾಮ ಭಾರೀ ದುರಂತವೊಂದು ತಪ್ಪಿದೆ.

ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!

Continue Reading

LATEST NEWS

Trending