Connect with us

LATEST NEWS

ನಾರಾಯಣ ಗುರು ಟ್ಯಾಬ್ಲೋ ವಿವಾದ: ಪಿಣರಾಯಿ ಅವರಿಂದ ಮೋದಿ ಕಲಿಯಬೇಕಾಗಿಲ್ಲ ಎಂದ ರಾಜ್ಯಾಧ್ಯಕ್ಷ ನಳಿನ್‌

Published

on

ಮಂಗಳೂರು: ಬ್ರಹ್ಮರ್ಷಿ ನಾರಾಯಣ ಗುರು ಅವರ ಟ್ಯಾಬ್ಲೋ ರಾಜಕೀಯ ತಿರುವು ಪಡೆದುಕೊಂಡಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಟ್ವೀಟ್‌ ಮಾಡಿದ್ದಾರೆ.


ಈ ಬಗ್ಗೆ ಅಧಿಕೃತ ಟ್ವಿಟ್ವರ್‌ ಮೂಲಕ ಟ್ವೀಟ್‌ ಮಾಡಿದ ಅವರು, ಗುಜರಾತ್ ಸಿಎಂ ಆಗಿರುವಾಗ ಮೊದಲ ಬಾರಿ, ಪ್ರಧಾನಿಯಾದ ಬಳಿಕ ಮತ್ತೊಮ್ಮೆ ನರೇಂದ್ರ ಮೋದಿ ಅವರು ಕೇರಳದ ಶಿವಗಿರಿಯ ನಾರಾಯಣ ಮಠಕ್ಕೆ ಭೇಟಿ ನೀಡಿದ್ದಾರೆ.

ಪ್ರಧಾನಿ ಕೊಲ್ಲಂಗೂ ಭೇಟಿ ನೀಡಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶಗಳನ್ನು ಪಾಲಿಸುತ್ತಿರುವ ಮೋದಿಜಿಯವರು ಪಿಣರಾಯಿ ವಿಜಯನ್‌ ಅವರಿಂದ ಕಲಿಯಬೇಕಾಗಿಲ್ಲ.

LATEST NEWS

ಶಾಲಾ ಆವರಣದಲ್ಲೇ ವಿದ್ಯಾರ್ಥಿನಿಯ ಮೇಲೆ ಹ*ಲ್ಲೆ..! ಮುಖಕ್ಕೆ ಬ್ಲೇಡ್‌ನಿಂದ ಕೊಯ್ದು ಕೃ*ತ್ಯ..!!

Published

on

ದೆಹಲಿ: ಶಾಲಾ ಆವರಣದಲ್ಲೇ ವಿದ್ಯಾರ್ಥಿನಿಯ ಕೆನ್ನೆ ಮೇಲೆ ಬ್ಲೇಡ್‌ನಿಂದ ಹಲ್ಲೆಗೈದಿರುವ ಘೋರ ಘಟನೆ ದೆಹಲಿಯಲ್ಲಿ ನಡೆದಿದೆ. ಘಟನೆಯಿಂದ ವಿದ್ಯಾರ್ಥಿನಿಯ ಕೆನ್ನೆಯಿಂದ ರಕ್ತ ಹರಿಯುತ್ತಿದ್ದು, ನೋವು ತಾಳಲಾರದೇ ಹುಡುಗಿ ಕಿರುಚಾಡುತ್ತಿದ್ದಾಳೆ. ಈ ಘಟನೆ ನಡೆದಿರುವುದು ದೆಹಲಿಯ ಗುಲಾಬಿ ಬಾಗ್ ಟೈಪ್-1 CO-ED ಸರ್ವೋದಯ ವಿದ್ಯಾಲಯದಲ್ಲಿ ಎಂದು ಹೇಳಲಾಗುತ್ತಿದೆ.

ಮುಂದೆ ಓದಿ..; ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

ಶಾಲಾ ಆವರಣದಲ್ಲಿ ವಿದ್ಯಾರ್ಥಿನಿಯ ಕೆನ್ನೆಗೆ ಬ್ಲೇಡ್‌ನಿಂದ ಕೊಯ್ದಿದ್ದು ರಕ್ತ ಹೋಗುತ್ತಲೇ ಇದೆ. ಇದರಿಂದ ಜೊತೆಗಿದ್ದ ಗೆಳತಿಯರೂ ಕೂಡ ಗಾಬರಿಗೊಂಡಿದ್ದಾರೆ. ಆದರೆ ಈ ಕೃತ್ಯ ಎಸಗಿರುವುದು ಯಾರು ಎಂದು ಇನ್ನೂ ತಿಳಿದು ಬಂದಿಲ್ಲ. ಸದ್ಯ ಈ ದೃಶ್ಯವನ್ನು ಅಲ್ಲೇ ಇದ್ದ ಮಹಿಳೆಯೋರ್ವರು ವೀಡಿಯೋ ಮಾಡಿದ್ದಾರೆ ಎಂದು ಹೇಳಲಾಗಿದೆ. ಇದೀಗ ಈ ವಿಡೀಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

 

 

Continue Reading

BELTHANGADY

ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

Published

on

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.

gangadhar

ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

gangadhar

ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು  ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

Continue Reading

LATEST NEWS

ಮುಂದಿನ 5 ದಿನ ರಾಜ್ಯದ 25 ಜಿಲ್ಲೆಗಳಲ್ಲಿ ಬಿಸಿ ಗಾಳಿ ಸಾಧ್ಯತೆ; ಎಲ್ಲೆಲ್ಲಿ?

Published

on

ಮಂಗಳೂರು : ರಾಜ್ಯದಲ್ಲಿ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಲಿದ್ದು, ಬಿಸಿಲಾಘಾತದಿಂದ ಜನ, ಜಾನುವಾರು ಮತ್ತು ಪಕ್ಷಿ ಸಂಕುಲ ತತ್ತರಿಸಿದೆ. ನೀರಿಗೆ ತತ್ವಾರ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೇ ಇದೀಗ ಹವಾಮಾನ ಇಲಾಖೆಯು ರಾಜ್ಯದ 25 ಜಿಲ್ಲೆಗಳಿಗೆ ಶಾಖಾಘಾತದ ಮುನ್ಸೂಚನೆ ನೀಡಿದೆ. ಇಂದಿನಿಂದ 5 ದಿನಗಳ ಕಾಲ ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.

ಯಾವ ಜಿಲ್ಲೆಗಳಿಗೆ ಬಿಸಿಲಾಘಾತ?

ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಮೇ 5 ರವರೆಗೂ ಇದೇ ಪರಿಸ್ಥಿತಿ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಮೇ 4 ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣವಿರುವ ಸಂಭವವಿದೆ.

ಮಳೆಯಾಗುವ ಸಾಧ್ಯತೆ :

ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಯ ಕೆಲವೆಡೆ ಬುಧವಾರ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ನಾಲ್ಕುದಿನ ಒಣಹವೆ ಇರಲಿದೆ.
ಮೇ 6 ರಿಂದ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ : ಮಂಗಳೂರು ವಿಮಾನ ನಿಲ್ದಾಣವಿನ್ನು ನಿಶ್ಶಬ್ದ ವಲಯ!

ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ :

ಇಂದಿನಿಂದ(ಮೇ 1 ರಿಂದ) ಮುಂದಿನ ಐದು ದಿನಗಳು ಬಾಗಲಕೋಟೆ, ಕಲಬುರಗಿ ಹಾಗೂ ಕೊಪ್ಪಳದಲ್ಲಿ ರಾತ್ರಿಯ ಅವಧಿಯೂ ಬಿಸಿ ವಾತಾವರಣದಿಂದ ಕೂಡಿರುವ ಸಾಧ್ಯತೆಯಿದೆ. ಮಂಗಳವಾರ ಬೆಳಿಗ್ಗೆ 8.30 ರಿಂದ ಬುಧವಾರ ಬೆಳಗ್ಗಿನ ತನಕದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42.8 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 38.2 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಮೂರು ದಿನ 38 ಡಿಗ್ರಿ ಸೆಲ್ಸಿಯಸ್ ದಾಟಿದೆ.

Continue Reading

LATEST NEWS

Trending