Connect with us

DAKSHINA KANNADA

ಮಂಗಳೂರು: ಪ್ರಧಾನಿ ಮೋದಿ ರೋಡ್ ಶೋ ಗೆ ಕ್ಷಣಗಣನೆ

Published

on

ಲೋಕಸಭಾ ಚುನಾವಣೆಯ ಪ್ರಚಾರದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಂಗಳೂರಿಗೆ ಆಗಮಿಸಿ, ರಾತ್ರಿ ರೋಡ್​ ಶೋ ನಡೆಸಲಿದ್ದು, ಈ ಕಾರ್ಯಕ್ರಮಕ್ಕೆ ಮಂಗಳೂರು ನಗರದಲ್ಲಿ ಸಿದ್ಧತೆಗಳು ಪೂರ್ಣಗೊಂಡಿವೆ.

ಮೈಸೂರಿನ ಕಾರ್ಯಕ್ರಮ ಮುಗಿಸಿ ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ‌ ಆಗಮಿಸುವ ಪ್ರಧಾನಿ ಮೋದಿ ಅವರು ಕೆಂಜಾರಿನಿಂದ ನೇರವಾಗಿ ಲೇಡಿಹಿಲ್ ಜಂಕ್ಷನಿಗೆ ಆಗಮಿಸಿ ಅಲ್ಲಿನ ವೃತ್ತದಲ್ಲಿರುವ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಬಳಿಕ ರಾತ್ರಿ 7.45 ಕ್ಕೆ ರೋಡ್ ಶೋ ಆರಂಭವಾಗಲಿದೆ. ಲಾಲ್ ಭಾಗ್, ಬಲ್ಲಾಳ್ ಭಾಗ್, ಪಿವಿಎಸ್ ಜಂಕ್ಷನ್‌ ಮೂಲಕ ರೋಡ್ ಶೋ ಬಂದು ನವಭಾರತ ವೃತ್ತದಲ್ಲಿ ಮುಕ್ತಾಯಗೊಳ್ಳಲಿದೆ. ಅಲ್ಲಿಂದ ಪ್ರಧಾನಿ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ನಿರ್ಗಮಿಸಿ ವಿಶೇಷ ವಿಮಾನ ಮೂಲಕ ಕೊಚ್ಚಿಗೆ ಪ್ರಯಾಣ ಬೆಳೆಸುವರು. ಮೋದಿ ರೋಡ್ ಶೋಗಾಗಿ ಭರ್ಜರಿ ಸಿದ್ಧತೆಗಳು ನಡೆದಿವೆ.

ಬಿಜೆಪಿ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನನ್ನು ಕಣ್ತುಂಬಿಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದಾರೆ. ರೋಡ್ ಶೋ ಹಿನ್ನೆಲೆಯಲ್ಲಿ ಬಿಗಿ ಭದ್ರತೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಹೊರ ಜಿಲ್ಲೆಗಳ ಪೊಲೀಸರನ್ನು ನಿಯೋಜಿಸಲಾಗಿದೆ. ಭದ್ರತೆ ಹೊಣೆ ಹೊತ್ತ ಎಸ್‌ಪಿಜಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ ಮಾಡಿದೆ. ಮೋದಿ ರೋಡ್ ಶೋ ನಡೆಸುವ ರಸ್ತೆಯುದ್ದಕ್ಕೂ ಬ್ಯಾರಿಕೇಡ್​ ಅಳವಡಿಸಲಾಗಿದೆ. ರಸ್ತೆಯ ಬದಿಯಲ್ಲಿನ ತ್ಯಾಜ್ಯಗಳನ್ನು ತೆರವು ಮಾಡಿ  ಸ್ವಚ್ಛಗೊಳಿಸಲಾಗಿದೆ.

ಬ್ಯಾನರ್​ಗಳು, ಇಂಟರ್‌ನೆಟ್ ಕೇಬಲ್‌ಗಳನ್ನೂ ತೆರವುಗೊಳಿಸಲಾಗಿದೆ. ಆದರೆ ರಸ್ತೆ ಬದಿಯ ಬ್ಯಾರಿಕೇಡ್‌ಗಳುದ್ದಕ್ಕೂ ಬಿಜೆಪಿ ಬಂಟಿಂಗ್ಸ್‌ ಕಟ್ಟಲಾಗಿದೆ. ರೋಡ್‌ ಶೋ ನಡೆಯುವ ರಸ್ತೆಯಲ್ಲಿ ಮಧ್ಯಾಹ್ನ 3 ಗಂಟೆ ಬಳಿಕ ವಾಹನಗಳ ಪಾರ್ಕಿಂಗ್‌ ಮತ್ತು ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. 60 ಮಂದಿ ಶಸ್ತ್ರಸಜ್ಜಿತ ಅಧಿಕಾರಿಗಳು ಮೋದಿಗೆ ಬೆಂಗಾವಲಾಗಿ ಇರಲಿದ್ದಾರೆ. ರೋಡ್​ ಶೋ ಪ್ರದೇಶವನ್ನು ಏರಿಯಲ್​ ವ್ಯೂ ಮೂಲಕ ಪರಿಶೀಲನೆ ನಡೆಸಲಾಗಿದೆ‌.

ಶನಿವಾರ ರಾತ್ರಿ ವೇಳೆ ಎಸ್‌ಪಿಜಿ ನೇತೃತ್ವದಲ್ಲಿ ಪೊಲೀಸರು ರಿಹರ್ಸಲ್, ಅಣಕು ರೋಡ್‌ ಶೋ ನಡೆಸಿದರು. ಈ ಸಂದರ್ಭ ಕೆಂಜಾರು ವಿಮಾನ ನಿಲ್ದಾಣದಿಂದ ಮೋದಿಯವರು ಆಗಮಿಸಿ ನವಭಾರತ ವೃತ್ತದವರೆಗೆ ರೋಡ್​ ಶೋ ನಡೆಸುವುದನ್ನು ರಿಯಲ್ ಟೈಂ ರೀತಿಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದ ಪ್ರಯುಕ್ತ ನಿನ್ನೆ ರಾತ್ರಿ ವೇಳೆ ವಿದ್ಯುತ್ ಸರಬರಾಜಿನಲ್ಲಿಯೂ ಏರುಪೇರಾಗಿತ್ತು. ಪ್ರಧಾನಿ ಮೋದಿ ಈ ಹಿಂದೆ 9 ಬಾರಿ ಮಂಗಳೂರಿಗೆ ಭೇಟಿ ನೀಡಿದ್ದು, ಇದು ಅವರ 10 ನೇ ಭೇಟಿಯಾಗಿದೆ.

DAKSHINA KANNADA

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿ ಹೆಸರು ಉಲ್ಲೇಖಿಸಿದ್ದ ವರ..! ವರನ ಮೇಲೆ ದೂರು ದಾಖಲು..!

Published

on

ಕಡಬ: ವ್ಯಕ್ತಿಯೊಬ್ಬರು  ತಮ್ಮ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿಯ ಕುರಿತಾಗಿ ಉಲ್ಲೇಖಿಸಿದ್ದು ಇದೀಗ ಇಕ್ಕಟ್ಟಿಗೆ ಸಿಲುಕಿರುವ ಘಟನೆ ನಡೆದಿದೆ.  ಕಡಬ ತಾಲೂಕಿನ ಆಲಂತಾಯ ನಿವಾಸಿ ಶಿವಪ್ರಸಾದ್ ಎಂಬವರು ತಮ್ಮ ಮದುವೆಯ ಆಮಂತ್ರನ ಪತ್ರಿಕೆಯಲ್ಲಿ ಪ್ರಧಾನಿ ಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುವುದು ನಮಗೆ ನೀವು ನೀಡುವ ಉಡುಗೊರೆ ಎಂದು ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉಲ್ಲೇಖಿಸಿದ್ದರು.

ಮುಂದೆ ಓದಿ..; ಮಕ್ಕಳ ಮುಂದೆಯೇ ದಾಂಪತ್ಯಕ್ಕೆ ಕಾಲಿಟ್ಟ ವೃದ್ದರು..!! ಅಚ್ಚರಿಯಾದ್ರು ಇದು ಸತ್ಯ..!!

marriage

ಮದುವೆ ನಡೆದ ಬಳಿಕ ವರನ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರನ್ನು ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ.  ಮಾರ್ಚ್‌1 ರಂದು ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಿ ಶಿವಪ್ರಸಾದ್‌ರವರು ಹಂಚಿದ್ದರು. ನೀತಿ ಸಂಹಿತಿ ಘೋಷಣೆಗೆ ಮೊದಲೇ ಈ ಆಮಂತ್ರಣ ಪತ್ರಿಕೆ ಮುದ್ರಣಗೊಂಡಿತ್ತಾದರೂ ಇದೀಗ ಚುನಾವಣಾ ಅಧಿಕಾರಿಗಳಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Continue Reading

DAKSHINA KANNADA

ಮೇ 3 ರಂದು ಗಬ್ಬರ್ ಸಿಂಗ್ ತುಳು ಸಿನಿಮಾ ತೆರೆಗೆ

Published

on

ಮಂಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಸತೀಶ್ ಬಾರ್ಕೂರು ನಿರ್ಮಾಣದ ಗಬ್ಬರ್ ಸಿಂಗ್ ತುಳು ಚಲನ ಚಿತ್ರ ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.

ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಗಬ್ಬರ್ ಸಿಂಗ್ ತುಳು ಸಿನಿಮಾ ಕಥೆಯನ್ನು ಹೆಣೆಯಲಾಗಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಈ ಚಿತ್ರವನ್ನುಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ನಾಯಕ ನಟನಾಗಿ ಶರಣ್ ಶೆಟ್ಟಿ ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಗಬ್ಬರ್ ಸಿಂಗ್ ಸಿನಿಮಾ ಈಗಾಗಲೇ ಮಸ್ಕತ್ ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.

“ಗಬ್ಬರ್ ಸಿಂಗ್” ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ. ಈ ಸಿನಿಮಾದ ಕಥೆ, ಚಿತ್ರಕಥೆ, ನಿರ್ಮಾಪಕರು ಸತೀಶ್ ಪೂಜಾರಿ ಬಾರ್ಕೂರ್ , ನಿರ್ದೇಶನದ ಜವಾಬ್ದಾರಿಯನ್ನು ಪ್ರದೀಪ್ ವಹಿಸಿದ್ದಾರೆ. ಮಧು ಸುರತ್ಕಲ್ ಸಂಭಾಷಣೆ ರಚಿಸಿದ್ದಾರೆ.

ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ, ಕಿರಣ್ ಮಲ್ಪೆ, ಪೂರ್ಣಿಮಾ ಶೆಟ್ಟಿ, ಪವಿತ್ರ ಶೆಟ್ಟಿ,ಚಂದ್ರಹಾಸ ಶೆಟ್ಟಿ ಮಾಣಿ, ಸಂಪತ್ ಲೋಬೋ, ಆಶಾ ಶೆಟ್ಟಿ ಶಿಬರೂರು, ಲಹರಿ ಶೆಟ್ಟಿ ಪಡ್ರೆ, ಶಿಲ್ಪಾ ಶೆಟ್ಟಿ, ಭವ್ಯಾ ಶೆಟ್ಟಿ ಸುರತ್ಕಲ್ ಸಂತೋಷ್, ಚಂದ್ರಹಾಸ ಶೆಟ್ಟಿ ಕಪ್ಪೆಟ್ಟು, ಫ್ರಾಂಕಿ ಕೊಳಲಗಿರಿ, ಉಮೇಶ್ ಶೆಟ್ಟಿ ಹಾವಂಜೆ, ಬೇಬಿ ಆಧ್ಯಾ ಉಡುಪಿ ಮೊದಲಾದವರಿದ್ದಾರೆ.

ಛಾಯಾಗ್ರಹಣ: ರವಿ ಸುವರ್ಣ, ಸಂಕಲನ: ಪ್ರಜ್ವಲ್ ಸುವರ್ಣ, ಕಲೆ: ವೆಂಕಟೇಶ್ ಬೆಂಗಳೂರು, ಸಂಗೀತ: ಡೊಲ್ಪಿನ್ ಕೊಳಲಗಿರಿ. ಹಿನ್ನಲೆ ಸಂಗೀತ: ಕಾರ್ತಿಕ್ ಮುಲ್ಕಿ, ಸಾಹಸ: ಅಲ್ಟಿಮೆಟ್ ಶಿವ್ ನೃತ್ಯ: ಅವಿನಾಶ್ ಬಂಗೇರ, ಶುಭಕಿರಣ್, ಮೇಕಪ್ ಪ್ರದೀಪ್, ವಸ್ತ್ರಾಲಂಕಾರ : ಶರತ್ ಬರ್ಕೆ, ಸಹ ನಿರ್ದೇಶನ: ಪುಷ್ಪರಾಜ ರೈ, ಜಯರಾಜ್, ಸಹಾಯ: ಭಾಗ್ಯರಾಜ್ ಮಾಡಿದ್ದಾರೆ.

ಪ್ರೀಮಿಯರ್ ಶೋ

ಈಗಾಗಲೇ ಮಸ್ಕತ್, ಕತಾರ್ ಉಡುಪಿ, ಸುರತ್ಕಲ್ ನಲ್ಲಿ ಗಬ್ನರ್ ಸಿಂಗ್ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಸಾಂಸಾರಿಕ ಕತೆಯ ಜೊತೆ ಇಲ್ಲಿ ಹಾಸ್ಯವೂ ಚೆನ್ನಾಗಿ ವಕ್೯ಹೌಟ್ ಆಗಿದೆ. ನವೀನ್ ಪಡೀಲ್, ಬೋಜರಾಜ್ ವಾಮಂಜೂರು, ಅರವಿಂದ ಬೋಳಾರ್, ಸಾಯಿಕೃಷ್ಣ, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು, ರವಿರಾಮ ಕುಂಜ ಇವರ ಹಾಸ್ಯ ಸಕ್ಕತ್ತಾಗಿದೆ. ಜೊತೆಗೆ ಗಿರೀಶ್ ಶೆಟ್ಟಿ ಕಟೀಲು, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್ ಮೊದಲಾದವರ ಪಾತ್ರಗಳೂ ಕೂಡಾ ಇಲ್ಲಿ ಪ್ರಾಮುಖ್ಯತೆಯನ್ನು ಪಡೆದಿದೆ ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು, ನಟ ಭೋಜರಾಜ ವಾಮಂಜೂರು, ಮಧು ಸುರತ್ಕಲ್, ಚಂದ್ರ ಶೇಖರ ನಾನಿಲ್ ಹಳೆಯಂಗಡಿ, ನಟ ಶರಣ್ ಶೆಟ್ಟಿ
ನಟಿ ವೆನ್ಸಿಟಾ ಇದ್ದರು.

Continue Reading

DAKSHINA KANNADA

ಸಾವಿನಲ್ಲೂ ಒಂದಾದ ಸಹೋದರರು! ಅಣ್ಣನ ನಿಧನದ ಸುದ್ದಿ ಕೇಳಿ ಇಹಲೋಕ ತ್ಯಜಿಸಿದ ತಮ್ಮ

Published

on

ಸುಳ್ಯ :  ಸಹೋದರರಿಬ್ಬರು ಸಾ*ವಿನಲ್ಲೂ ಒಂದಾದ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ. ಅರಂತೋಡು ಗ್ರಾಮದ 82 ವರ್ಷದ ಎಸ್. ಇ. ಅಬ್ದುಲ್ಲಾ ಹಾಗೂ ಮಹಮ್ಮದ್ ಎಸ್. ಇ  ಮೃ*ತ ಸಹೋದರರು.

ಅಬ್ದುಲ್ಲಾ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧ*ನರಾಗಿದ್ದಾರೆ. ಈ ವಿಚಾರ ತಿಳಿದ ಅವರ ಸಹೋದರ ಮಹಮ್ಮದ್ ಕುಸಿದು ಬಿದ್ದು ಸಾ*ವನ್ನಪ್ಪಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮ ಬೀರಲಿದೆ; ಸತ್ಯ ಒಪ್ಪಿಕೊಂಡ ಆಸ್ಟ್ರಾಜೆನಿಕಾ! ಏನಿದರ ಪರಿಣಾಮ?

ಇಬ್ಬರನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.

Continue Reading

LATEST NEWS

Trending