Connect with us

DAKSHINA KANNADA

‘ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ’ದ ಅಧ್ಯಕ್ಷ ಸ್ಥಾನ ನಿರಾಕರಿಸಿದ ನರೇಂದ್ರ ರೈ ದೇರ್ಲ

Published

on

ಮಂಗಳೂರು: ಕರ್ನಾಟಕ ಸರಕಾರ ಹಲವು ಹಲವು ಟ್ರಸ್ಟ್‌-ಪ್ರತಿಷ್ಠಾನಗಳಿಗೆ ಅಧ್ಯಕ್ಷ ಹಾಗೂ ಸದಸ್ಯರನ್ನು ನೇಮಕಗೊಳಿಸಿದೆ. ಆದರೆ ‘ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ’ ಅಧ್ಯಕ್ಷರಾಗಿ ನೇಮಕಗೊಂಡ ಹಿರಿಯ ಲೇಖಕ ನರೇಂದ್ರ ರೈ ದೇರ್ಲ ಅಧ್ಯಕ್ಷ ಸ್ಥಾನವನ್ನು ತಿರಸ್ಕರಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸ್ಪಷ್ಟನೆಯನ್ನೂ ನೀಡಿದ್ದಾರೆ. ಇದೇ ಪ್ರತಿಷ್ಠಾನಕ್ಕೆ ಕಳೆದ ವರ್ಷ ನಿಧನ ಹೊಂದಿದ ತೇಜ್ವಸಿ ಪತ್ನಿ ರಾಜೇಶ್ವರಿ ಪೂರ್ಣ ಚಂದ್ರ ತೇಜಸ್ವಿಯವನ್ನು ನೇಮಕಗೊಳಿಸಿ ಎಡವಟ್ಟು ಮಾಡಿಕೊಂಡಿತ್ತು.

“ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ‘ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ’ದ ಅಧ್ಯಕ್ಷನನ್ನಾಗಿ ನನ್ನನ್ನು ನೇಮಕ ಮಾಡಿದ ಸುದ್ದಿ ಮಾಧ್ಯಮಗಳ ಮೂಲಕ ನನಗೆ ತಿಳಿಯಿತು. ತೇಜಸ್ವಿ ಅವರ ಒಡನಾಟ ಮತ್ತು ಅವರ ಕುರಿತು ಒಂದಷ್ಟು ಬರವಣಿಗೆ ಅವರ ಪತ್ರಗಳ ಸಂಪಾದನೆಯನ್ನು ನಾನು ಮಾಡಿರುವುದು ನಿಜ. ಈ ಕಾರಣಕ್ಕಾಗಿಯೇ ಸರಕಾರ ನನ್ನನ್ನು ಆಯ್ಕೆ ಮಾಡಿದೆ ಎಂದು ಅನೇಕ ಸ್ನೇಹಿತರು, ಬಂಧುಗಳು, ತೇಜಸ್ವಿ ಓದುಗರು ಅಭಿನಂದಿಸಿ ನನಗೆ ಸಂದೇಶ ಕಳಿಸಿದ್ದಾರೆ.

ಈ ಕುರಿತು ಘನ ಸರಕಾರಕ್ಕೂ ನನ್ನ ಧನ್ಯವಾದಗಳು .ಆದರೆ ವೈಯಕ್ತಿಕ ಕಾರಣಗಳಿಂದಾಗಿ ಸಂಬಂಧಿಸಿದ ಜವಾಬ್ದಾರಿಯನ್ನು ನಾನು ಸ್ವೀಕರಿಸುವುದಿಲ್ಲ .ಈ ಕುರಿತು ಸಂಬಂಧಿಸಿದ ಯಾವುದೇ ಇಲಾಖೆಯ ವ್ಯಕ್ತಿಗಳು, ಅಧಿಕಾರಿಗಳು ನನ್ನನ್ನು ಈವರೆಗೆ ಸಂಪರ್ಕಿಸಿಯೂ ಇಲ್ಲ .ಅಂತಹ ಪತ್ರ- ಆದೇಶ ನನಗೆ ಬಂದಿಲ್ಲ.

ಒಂದು ವೇಳೆ ಅದು ಬಂದಾಗಲೂ ನನ್ನ ಈ ಅಭಿಪ್ರಾಯ ಬದಲಾಗುವುದಿಲ್ಲ. ದಯವಿಟ್ಟ ಯಾರೂ ಕೂಡಾ ಇದನ್ನು ನನ್ನ ಅಹಂ, ಉದ್ದಟತನವೆಂದು ಭಾವಿಸಬಾರದು .ಇಂಥ ಸರಳ ಸೌಜನ್ಯ- ನಿರಾಕರಣೆಗೆ ನನಗೆ ತೇಜಸ್ವಿ ಅವರೇ ಸ್ಪೂರ್ತಿ. ಸರಕಾರ ಮುಂದೆ ಯಾರನ್ನೇ ಬೇಕಾದರೂ ಆಯ್ಕೆ ಮಾಡಲಿ, ತೇಜಸ್ವಿಯ ವಿಚಾರದಲ್ಲಿ ಅವರಿಗೆ ನನ್ನ ಸಹಾಯ ಇದ್ದೇ ಇದೆ.

ಆದರೆ ಇಂಥ ಪ್ರತಿಷ್ಠಾನ ಪ್ರಾಧಿಕಾರ ಅಕಾಡೆಮಿಗಳಿಗೆ ನೇಮಕ ಮಾಡುವಾಗ ಸೌಜನ್ಯಕ್ಕಾದರೂ ಅವರನ್ನು ಸಂಪರ್ಕಿಸಿ ಪೂರ್ವಾನುಮತಿಯನ್ನು ಪಡೆಯುವುದು ಹೆಚ್ಚು ಸೂಕ್ತ. ಆಗ ಇಂತಹ ಅನಪೇಕ್ಷಿತ ಮುಜುಗರವೂ ತಪ್ಪುತ್ತದೆ .ದಯವಿಟ್ಟು ಸಂಸ್ಕೃತಿ ಇಲಾಖೆ ಇದನ್ನು ಗಮನಿಸಬೇಕೆಂದು ವಿನಮ್ರ ಕೋರಿಕೆ” ಎಂದು ನರೇಂದ್ರ ರೈ ದೇರ್ಲ ಬರೆದುಕೊಂಡಿದ್ದಾರೆ.

DAKSHINA KANNADA

ಈ 7 ರೈಲು ನಿಲ್ದಾಣಗಳಲ್ಲಿ ಸಿಗುತ್ತೆ ಅತೀ ಕಡಿಮೆ ಬೆಲೆಗೆ ತಿಂಡಿ, ಊಟ

Published

on

ಮಂಗಳೂರು: ಭಾರತೀಯ ರೈಲ್ವೆ ಮಂಡಳಿಯು ಕರ್ನಾಟಕದ ಏಳು ನಿಲ್ದಾಣಗಳು ಸೇರಿದಂತೆ ದೇಶದ 100ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ ಸಾಮಾನ್ಯ ಕಂಪಾರ್ಟ್ಮೆಂಟ್ ಕೋಚ್‌ಗಳ ಬಳಿ ಕಡಿಮೆ ದರದಲ್ಲಿ ಉತ್ತಮ ಆಹಾರವನ್ನು ಒದಗಿಸುವ ಕೌಂಟರ್‌ಗಳನ್ನು ತೆರೆದಿದೆ.

ಕರ್ನಾಟಕದಲ್ಲಿ ದಕ್ಷಿಣ ರೈಲ್ವೆ ಅಡಿಯಲ್ಲಿ ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ರೈಲ್ವೆ ವಿಭಾಗಗಳಲ್ಲಿ ಸಬ್ಸಿಡಿ ಆಹಾರ ಕೌಂಟರ್‌ಗಳನ್ನು ತೆರೆಯಲಾಗಿದೆ. ಹಾಗೆಯೇ ನೈರುತ್ಯ ರೈಲ್ವೆಯ ಅಡಿಯಲ್ಲಿ ಕೆಎಸ್ಆರ್ ಬೆಂಗಳೂರು, ಯಶವಂತಪುರ, ಮೈಸೂರು, ವಿಜಯಪುರ ಮತ್ತು ಬಳ್ಳಾರಿ ರೈಲು ನಿಲ್ದಾಣಗಳಲ್ಲಿ ಈ ಆಹಾರ ಕೌಂಟರ್‌ಗಳನ್ನು ತೆರೆಯಲಾಗಿದೆ.

ಈ ಯೋಜನೆಯು ಭಾರತೀಯ ರೈಲ್ವೆಯ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಮತ್ತು ಭಾರತೀಯ ರೈಲ್ವೆಯ ಜಂಟಿ ಉಪಕ್ರಮವಾಗಿದೆ. ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಆರೋಗ್ಯಕರ ಆಹಾರವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಹಿಂದೆ ಜನತಾ ಊಟದ ಸೇವೆಯ ಅಡಿಯಲ್ಲಿ ರೈಲ್ವೆ ನಿಲ್ದಾಣದ ರೆಸ್ಟೋರೆಂಟ್‌ಗಳಲ್ಲಿ ಕಡಿಮೆ ದರದ ಆಹಾರ ಲಭ್ಯವಿತ್ತು. ಈಗ ಕೌಂಟರ್‌ಗಳು ನೇರವಾಗಿ ಪ್ಲಾಟ್‌ಫಾರ್ಮ್‌ಗಳಲ್ಲಿ ಈ ಸೇವೆಯನ್ನು ಆರಂಭಿಸಲಾಗಿದೆ.

ಪ್ರಸ್ತುತ 100 ರೈಲು ನಿಲ್ದಾಣಗಳಲ್ಲಿ 150 ಪ್ಲಾಟ್ಫಾರ್ಮ್ಗಳು ಈ ಸೌಲಭ್ಯವನ್ನು ನೀಡುತ್ತವೆ. ಬೆಳಗಿನ ಉಪಹಾರ 20 ರೂ., ಲಘು ಊಟ 50 ರೂ., 3 ರೂ.ಗೆ 200 ಎಂಎಲ್ ನೀರು ನೀಡಲಾಗುತ್ತದೆ. ಈ ಮಾಹಿತಿಯನ್ನು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಒಟ್ಟಾರೆ ಈ ಯೋಜನೆಯು ರೈಲು ಪ್ರಯಾಣಿಕರ ಆಹಾರ ಸಮಸ್ಯೆಯನ್ನು ಪರಿಹರಿಸಲಿದೆ ಎಂಬ ನಿರೀಕ್ಷೆ ಗರಿಗೆದರಿದೆ.

Continue Reading

DAKSHINA KANNADA

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮೇ 19, 20ರಂದು ಆರೆಂಜ್ ಅಲರ್ಟ್‌

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18 ರಿಂದ 21 ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20 ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಆರೆಂಜ್ ಅಲರ್ಟ್‌ ಇರುವ ದಿನಗಳಲ್ಲಿ ಮಿಂಚು, ಗುಡುಗು, ಸಿಡಿಲುಗಳಿಂದ ಕೂಡಿದ ಭಾರಿ ಮಳೆಯಾಗಲಿದೆ. ಜಿಲ್ಲೆಯ ಕೆಲವೆಡೆ 11.55 ಸೆಂ.ಮೀ ನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇದೇ 18 ಮತ್ತು 21ರಂದು ಜಿಲ್ಲೆಯಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಕೆಲವೆಡೆ 6.45 ಸೆಂ.ಮೀ ನಿಂದ 11.55 ಸೆಂ.ಮೀವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading

DAKSHINA KANNADA

ಕಾರಿನಲ್ಲಿ ಮಗುವನ್ನು ಮರೆತು ಹೋದ ತಾಯಿ..! ಕಾರಿನಲ್ಲೇ ಮಗುವಿನ ಅಂತ್ಯ…!

Published

on

ಮಂಗಳೂರು ( ರಾಜಸ್ಥಾನ ) :  ಮಕ್ಕಳ ಬಗ್ಗೆ ಪೋಷಕರು ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳಬೇಕು. ಆದ್ರೆ, ತಂದೆ ಮತ್ತು ತಾಯಿಯ ನಿರ್ಲಕ್ಷಕ್ಕೆ ಮೂರು ವರ್ಷದ ಬಾಲಕಿ ಅಸುನೀಗಿದ್ದಾಳೆ. ಹೌದು, ಮಗು ಕಾರಿನಲ್ಲಿ ಉಸಿರುಗಟ್ಟಿ ಸಾ*ವನಪ್ಪಿದ ಘಟನೆ ರಾಜಸ್ಥಾನದ ಕೋಟದಲ್ಲಿ ನಡೆದಿದೆ. ಮೃ*ತ ಮಗುವನ್ನು ಕೋಟಾದ ಇಂದ್ರ ಕಾಲೋನಿಯ ನಿವಾಸಿ ಪ್ರದೀಪ್ ಅವರ ಮಗಳು ಗರ್ವಿ (3) ಎಂದು ಗುರುತಿಸಲಾಗಿದೆ.

ಮದುವೆ ಸಂಭ್ರಮದಲ್ಲಿ ಕಳೆದುಹೋದ ದಂಪತಿ :

ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಾಲಕಿ ತನ್ನ ಪೋಷಕರೊಂದಿಗೆ ಕಾರಿನಲ್ಲಿ ಬಂದಿದ್ದರು. ಈ ವೇಳೆ ತಾಯಿ ತನ್ನ ಇನ್ನೊಬ್ಬ ಮಗಳ ಜೊತೆ ಕಾರಿನಿಂದ ಇಳಿದಿದ್ದಾರೆ. ಆದರೆ, ಬಾಲಕಿ ಗರ್ವಿ ಮಾತ್ರ ಕಾರಿನಲ್ಲೇ ಇದ್ದಳು. ಇತ್ತ ತಂದೆ ಕಾರನ್ನು ಪಾರ್ಕ್ ಮಾಡಿ, ಮಗು ಗರ್ವಿ ಕೂಡ ಅವಳ ತಾಯಿಯ ಜೊತೆಗಿದ್ದಾಳೆ ಎಂದು ಭಾವಿಸಿ, ಕಾರನ್ನು ಲಾಕ್ ಮಾಡಿ ತೆರಳಿದ್ದರು.

ಮದುವೆ ಸಮಾರಂಭದಲ್ಲಿ ಗಂಡ ಹೆಂಡತಿ ಇಬ್ಬರು ಮೈಮರೆತಿದ್ದರು. ಬ್ಯುಸಿಯಲ್ಲಿ ಯಾರೂ ತಮ್ಮ ಇನ್ನೊಂದು ಮಗುವಿನ ಬಗ್ಗೆ ಆಲೋಚಿಸಲೇ ಇದೆ. ಸುಮಾರು ಎರಡು ಗಂಟೆಗಳ ಬಳಿಕ ಪೋಷಕರಿಗೆ ಮಗು ಇಲ್ಲದ ಬಗ್ಗೆ ತಿಳಿದು ಬಂದಿದೆ. ಈ ವೇಳೆ ಇಡೀ ಮದುವೆ ಸಭಾಂಗಣ ಹುಡುಕಾಡಿದ್ದಾರೆ. ಬಳಿಕ ಕಾರಿನ ಬಳಿ ಬಂದಾಗ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಮಗು ಅಷ್ಟರಲ್ಲೇ ಸಾ*ವನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ. ತಮ್ಮ ಸಂಭ್ರಮದಲ್ಲಿ ಮೈಮರೆತ ತಂದೆ – ತಾಯಿಯಿಂದಾಗಿ ಪುಟ್ಟ ಜೀವವೊಂದು ಬ*ಲಿಯಾಗಿದೆ.

Continue Reading

LATEST NEWS

Trending