Wednesday, September 28, 2022

‘ವಾಹನಗಳಲ್ಲಿ ರಾಷ್ಟ್ರಧ್ವಜ ಹಾಕುವಂತಿಲ್ಲ-ಎಲ್ಲೆಂದರಲ್ಲಿ ಬಿಸಾಡಿದ್ರೆ ಜೈಲೇ ಗತಿ’

ಮಂಗಳೂರು: ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲ. ಅದೇ ರೀತಿ ಎಲ್ಲಿಯೂ ಕೂಡಾ ಪ್ಲಾಸ್ಟಿಕ್ ಧ್ವಜ ಹಾರಾಟಕ್ಕೂ ಅಸ್ಪದವಿಲ್ಲ. ಈ ಧ್ವಜಸಂಹಿತೆಯನ್ನು ಪಾಲಿಸದಿದ್ದರೆ ಪ್ರಕರಣ ದಾಖಲಿಸಲಾಗುವುದು ಎಂದು ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹೇಳಿದರು.


ಈ ಬಗ್ಗೆ ಮಾತನಾಡಿರುವ ಅವರು ‘ಎಲ್ಲರೂ ಮನೆಗಳಲ್ಲಿ ಹಾಗೂ ಕಟ್ಟಡಗಳಲ್ಲಿ ಧ್ವಜ ಹಾರಿಸುವುದಕ್ಕೆ ತೊಂದರೆ ಇಲ್ಲ.

ಆದರೆ ನಿಯಮವನ್ನು ಮೀರಿದರೆ ಮಾತ್ರ ಜೈಲುಶಿಕ್ಷೆ ಅಷ್ಟೇ ಅಲ್ಲದೆ ರಾಷ್ಟ್ರಧ್ವಜಕ್ಕೆ ಅಗೌರವ, ನಾಶ, ಅಪಕೀರ್ತಿ, ಹರಿದು ಹಾಕಿದರೆ ಕ್ರಿಮಿನಲ್ ಕೇಸು ದಾಖಲಿಸಲು ಅವಕಾಶವಿದೆ.

ಇದಕ್ಕೆ ಯಾರ ಅನುಮತಿಯೂ ಬೇಕಾಗಿಲ್ಲ. ಯಾರೇ ನಾಗರಿಕ ದೂರು ನೀಡಿದರೂ ಸಾಕಾಗುತ್ತದೆ. ಪೊಲೀಸರು ಕ್ರಿಮಿನಲ್ ಕೇಸು ದಾಖಲಿಸಿ ಜೈಲಿಗೆ ಅಟ್ಟಲು ಅವಕಾಶವಿದೆ. ಕನಿಷ್ಠ 3 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಹಾಗಾಗಿ ಆ.13ರಿಂದ 15ರವರೆಗೆ ಧ್ವಜಾರೋಹಣ ನಡೆಸಿ ಇಳಿಸಿದ ಬಳಿಕ ಧ್ವಜವನ್ನು ಎಸೆಯದೆ, ಜೋಪಾನವಾಗಿ ಮನೆಯಲ್ಲೇ ಇರಿಸಬೇಕು’ ಎಂದು ಹೇಳಿದರು.

ಸರ್ಕಾರದ ನಿಯಮದಂತೆ ಅತಿ ಗಣ್ಯರ ವಾಹನಗಳಲ್ಲಿ ಮಾತ್ರ ಎದುರು ಭಾಗದಲ್ಲಿ ಧ್ವಜ ಹಾಕಬಹುದು. ಆದರೆ ವಾಹನದ ಒಳಭಾಗದಲ್ಲಿ ಸ್ಟೇರಿಂಗ್ ಎದುರು ಮಾತ್ರ ಪುಟ್ಟ ಧ್ವಜ ಹಾಕಲು ಅಡ್ಡಿ ಇಲ್ಲ. ಕೈಮಗ್ಗ, ಖಾದಿ, ಉಣ್ಣೆ, ಪಾಲಿಸ್ಟರ್ ಧ್ವಜ ಹಾಕಲು ಅವಕಾಶ ಇದೆ. ಇಲ್ಲಿ ಪಾಲಿಸ್ಟರ್ , ಖಾದಿ, ಕಾಟನ್ ಧ್ವಜ ನೀಡಲಾಗುತ್ತಿದೆ.

ರಾಷ್ಟ್ರಧ್ವಜ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿರುವುದರಿಂದ ಸ್ವಾತಂತ್ರ್ಯೋತ್ಸವದ ಅಮೃತೋತ್ಸವ ಸಂದರ್ಭ ರಾತ್ರಿಯೂ ಇಳಿಸದೆ ಧ್ವಜ ಹಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

Hot Topics

ಉಡುಪಿ: ರಸ್ತೆ ಅವ್ಯವಸ್ಥೆ-ಕೋಣಗಳ ಜೊತೆ ಕಾಂಗ್ರೆಸ್ ಕಾರ್ಯಕರ್ತರ ವಿನೂತನ ಪ್ರತಿಭಟನೆ

ಉಡುಪಿ: ಮಲ್ಪೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ಪ್ರವಾಸಿಗರ ಸಂಚಾರಕ್ಕೆ ತೊಡಕು ಉಂಟಾಗುತ್ತಿದೆ. ಸದ್ಯ ಪ್ರವಾಸಿಗರ ಸಂಖ್ಯೆ ಹೆಚ್ಚಳದಿಂದ ದಿನನಿತ್ಯ ಟ್ರಾಫಿಕ್ ಜಾಮ್ ಆಗುತ್ತಿದೆ. ಪ್ರವಾಸಿಗರು ಹಾಗೂ ಸ್ಥಳೀಯರು ಅನುಭವಿಸುತ್ತಿರುವ ಕಷ್ಟವನ್ನು...

ಅಪರಿಚಿತರಿಂದ ಕಾಲಿವುಡ್‌ ‘ಆ್ಯಕ್ಷನ್‌ ಸ್ಟಾರ್’ ವಿಶಾಲ್ ಮನೆಗೆ ಕಲ್ಲು ತೂರಾಟ

ಚೆನ್ನೈ: ಕಾಲಿವುಡ್‌ನ 'ಆ್ಯಕ್ಷನ್‌ ಸ್ಟಾರ್' ನಟ ವಿಶಾಲ್ ಅವರ ಮನೆಗೆ ಯಾರೋ ಅಪರಿಚಿತ ಗನ್‌ಮ್ಯಾನ್‌ಗಳು ನುಗ್ಗಿ ಆಕ್ರಮಣ ಮಾಡಿ ಕಲ್ಲುತೂರಾಟ ಮಾಡಿದ್ದಾರೆ. ಅದರ ಪರಿಣಾಮವಾಗಿ ಮನೆಯ ಕಿಟಕಿ ಗಾಜುಗಳು ಒಡೆದಿರುವ ಘಟನೆ ಚೆನ್ನೈಯಲ್ಲಿ...

‘ಪುರಾಣ ಜ್ಞಾನ ನೀಡುವ ಅದ್ಭುತವಾದ ಕಲೆ ಯಕ್ಷಗಾನ’

ಮಂಗಳೂರು: ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವದ 29 ನೆಯ ಸರಣಿ ಕಾರ್ಯಕ್ರಮದಲ್ಲಿ ಲೆಕ್ಕ ಪರಿಶೋಧಕ CA ಗಿರಿಧರ ಕಾಮತ್ ಯಕ್ಷಗಾನ ಕಲೆಯು ಪುರಾಣ ಜ್ಞಾನ ನೀಡುವಷ್ಟು ಬೇರೆ ಯಾವ ಮಾಧ್ಯಮವೂ...