Sunday, November 27, 2022

ಮಂಗಳೂರು: ಗೆಳೆಯನ ಸಾವಿಗೆ ಕಾರಣವಾದ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ-ಯುವಕನ ಏಕಾಂಗಿ ಪ್ರತಿಭಟನೆ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಹಾಗೂ ನಗರದೊಳಗಿನ ರಸ್ತೆಗಳಲ್ಲಿರುವ ಯಮಗಾತ್ರದ ಗುಂಡಿಗಳ ಅವ್ಯವಸ್ಥೆಯಿಂದ ತನ್ನ ಗೆಳೆಯ ಮೃತಪಟ್ಟಿದ್ದು, ಈ ಹಿನ್ನಲೆ ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿ ಮಂಗಳೂರು ಮಹಾನಗರ ಪಾಲಿಕೆ ಮುಂಭಾಗ ಏಕಾಂಗಿ ಪ್ರತಿಭಟನೆ ನಡೆಸಿದ ಯುವಕ ಲಿಖಿತ್‌ ರೈ ಇದೀಗ ಮತ್ತೆ ತನ್ನ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.


ಇಂದು ರಾಷ್ಟ್ರೀಯ ಹೆದ್ದಾರಿ 73ರ ಅವ್ಯವಸ್ಥೆ ವಿರುದ್ಧ ಮಂಗಳೂರಿನ ನಂತೂರು ವೃತ್ತದ ಬಳಿ ಪ್ಲೇಕಾರ್ಡ್‌ ಹಿಡಿದು ವಿಭಿನ್ನ ರೀತಿಯಲ್ಲಿ ಮುಂಜಾನೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೈಯಲ್ಲಿ ಪ್ಲೇಕಾರ್ಡ್‌ ಹಿಡಿದಿರುವ ಲಿಖಿತ್‌ ಅದರಲ್ಲಿ ಮೋದಿ ಮಂಗಳೂರಿಗೆ ಮರಳಿ ಬನ್ನಿ..ಮೋದಿ ಇದ್ದರೆ ರಸ್ತೆ ದುರಸ್ತಿ ಕಷ್ಟಸಾಧ್ಯವೇ..। ಎಂದು ಬರೆದು ಪ್ರದರ್ಶಿಸಿದ್ದಾರೆ.


ಲಿಖಿತ್ ಮಿತ್ರನಾಗಿದ್ದ ಆತಿಷ್ ನಂತೂರ್‌ನಲ್ಲಿ ರಸ್ತೆಯಲ್ಲಿದ್ದ ಹೊಂಡ ತಪ್ಪಿಸುವ ಭರದಲ್ಲಿ ಬೈಕ್‌ನಿಂದ ಬಿದ್ದು, ತಲೆಗೆ ಏಟಾಗಿ ಸಾವನ್ನಪ್ಪಿದ್ದರು.

ಹಾಗಂತ ಇದು ಅಪಘಾತವಲ್ಲ, ಇದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಡೆಸಿದ ಕೊಲೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದರು.


ಎಲ್ಲೆಡೆ ಉತ್ತಮ ರಸ್ತೆ ನಿರ್ಮಿಸುವ ಮೂಲಕ ಆತಿಷ್ ಸಾವಿಗೆ ನ್ಯಾಯ ಕೊಡಬೇಕೆಂದು ಅವರು ಆಗ್ರಹಿಸಿ ಮತ್ತೆ ಪ್ರತಿಭಟನೆ ನಿರತರಾಗಿದ್ದಾರೆ.

ಇದರ ಜೊತೆಗೆ ಲಿಖಿತ್ ಸಹಿತ ಆತನ ಗೆಳೆಯರು ಜಸ್ಟೀಸ್ ಫಾರ್ ಆತಿಷ್ ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನವನ್ನೂ ನಡೆಸಿದ್ದರು.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳದಲ್ಲಿ ಪಿಕಪ್ ವಾಹನಕ್ಕೆ ಗುದ್ದಿದ ಕಾರು..

ಬಂಟ್ವಾಳ: ವಿರುದ್ಧ ದಿಕ್ಕಿನಲ್ಲಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿ ಬಳಿಕ ಪಿಕಪ್ ವಾಹನ ರಸ್ತೆಯ ಬದಿಯಲ್ಲಿರುವ ಮನೆಗೆ ನುಗ್ಗಿ ಗೋಡೆ ಜರಿದು ಬಿದ್ದಂತಹ ಘಟನೆ ದಕ್ಷಿಣ ಕನ್ನಡ...

ನಂತೂರಿನಲ್ಲಿ ಜೋಡಿ ಮೇಲೆ ದಾಳಿ-ಮೂವರು ಹಿಂದೂ ಕಾರ್ಯಕರ್ತರು ಅರೆಸ್ಟ್

ಮಂಗಳೂರು:ಮಂಗಳೂರಿನ ನಂತೂರು ಸರ್ಕಲ್‌ ಬಳಿ ಗುರುವಾರ ಸಂಜೆ ಭಿನ್ನ ಕೋಮಿನ ಜೋಡಿ ಮೇಲೆ ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.ಸುರತ್ಕಲ್‌ ನಿವಾಸಿ ಮುತ್ತು(18), ಪ್ರಕಾಶ್‌(21) ಮತ್ತು ಅಸೈಗೋಳಿ...

ಸುಳ್ಯ: ಸಚಿವ ಅಂಗಾರ ಅವರಿಗೆ ಡೆಂಗ್ಯೂ ದೃಢ-ಆಸ್ಪತ್ರೆಗೆ ದಾಖಲು

ಸುಳ್ಯ: ಶಾಸಕ, ಬಂದರು, ಮೀನುಗಾರಿಕೆ ಹಾಗೂ ಒಳ ನಾಡು ಜಲ ಸಾರಿಗೆ ಸಚಿವ ಎಸ್‌. ಅಂಗಾರ ಅವರಿಗೆ ಡೆಂಗ್ಯೂ ದೃಢಪಟ್ಟ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.  ಈ ಹಿನ್ನೆಲೆ ಅವರು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಾಗಿರುವುದಾಗಿ...