Connect with us

BELTHANGADY

ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಘಾತದಿಂದ ನಿಧನ..!

Published

on

ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಬೆಳ್ತಂಗಡಿ: ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮೃತರಾದ ಸಾಲಿಯತ್ (24) ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೇ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಸಾಲಿಯತ್ ಪಡಗಂಡಿ ಪೊಯ್ಯೋಗುಡ್ಡೆ ನಿವಾಸಿಯಾಗಿದ್ದು, ಇವರು ಮದುವೆಯಾಗಿ ಒಂದು ವರ್ಷವಷ್ಟೇ ಆಗಿತ್ತು ಎನ್ನಲಾಗಿದೆ.

ಚಿಕ್ಕಮಗಳೂರು ಪತಿ ಮನೆಯಲ್ಲಿದ್ದ ಅವರಿಗೆ ಹೃದಯ ನೋವು ಕಾಣಿಸಿಕೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಸಾಲಿಯತ್ ಅವರು ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.\

ಕ್ರೀಡಾಸಾಧಕಿ
ಪಡಂಗಡಿಯಲ್ಲಿ ಪ್ರಾಥಮಿಕ, ಎಸ್‌ಡಿಎಂ ಅನುದಾನಿತ ಪ್ರೌಢ ಶಾಲೆ ಉಜಿರೆಯಲ್ಲಿ 9ನೇ ತರಗತಿ, ಮುಂಡಾಜೆಯಲ್ಲಿ 10ನೇ ತರಗತಿ ಶಿಕ್ಷಣ ಪೂರ್ಣಗೊಳಿಸಿದ ಅವರು, ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಪಡೆದರು.

ಆಗಿನಿಂದಲೇ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದರು. ಹೈದರ್ ಪಡಂಗಡಿ ಅವರ ಮಾರ್ಗದರ್ಶನದಲ್ಲಿ ಆರಂಭದ ತರಬೇತಿಯನ್ನು ಪಡೆದ ಸಾಲಿಯತ್, ಮುಂದೆ ಮುಂಡಾಜೆ ಶಿಕ್ಷಣ ಸಂಸ್ಥೆಯಲ್ಲಿ ಪ್ರೌಢ ಶಿಕ್ಷಣವನ್ನು ಪಡೆದರು.

ಆ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಗುಣಪಾಲ್ ಎಂಎಸ್ ಅವರ ಮಾರ್ಗದರ್ಶನದಲ್ಲಿ ವಾಲಿಬಾಲ್ ಆಟದಲ್ಲಿ ಅತ್ಯಂತ ಉತ್ಕೃಷ್ಟ ಪ್ರದರ್ಶನ ನೀಡಿದರು.

ಉತ್ತರ ಪ್ರದೇಶದ ಅಲಹಾಬಾದ್‌ನಲ್ಲಿ ನಡೆದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭ, ಕರ್ನಾಟಕ ರಾಜ್ಯ ತಂಡಕ್ಕೆ ದ್ವಿತೀಯ ಸ್ಥಾನ ತರುವಲ್ಲಿ ಇವರ ಕೊಡುಗೆ ಅಪಾರ.ಮುಂದೆ ಪದವಿಪೂರ್ವ ಹಾಗೂ ಪದವಿ ಶಿಕ್ಷಣವನ್ನು ಎಸ್‌ಡಿಎಂ ಕಾಲೇಜು ಉಜಿರೆಯಲ್ಲಿ ಮಾಡುತ್ತಿದ್ದ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಬಹುಬೇಡಿಕೆಯ ವಾಲಿಬಾಲ್ ಆಟಗಾರ್ತಿಯಾಗಿ ಮನ್ನಣೆ ಗಳಿಸಿದ್ದರು.

ತರಬೇತುದಾರರಾದ ಉಜಿರೆ ಎಸ್‌ಡಿಎಂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಮಾರ್ಗದರ್ಶನದಲ್ಲಿ ರಾಜ್ಯ ತಂಡದ ಆಟಗಾರ್ತಿಯಾಗಿ ಮಿಂಚಿದ್ದರು.

ರಾಷ್ಟ್ರಮಟ್ಟದ ವಾಲಿಬಾಲ್‌ನಲ್ಲಿ ಬೆಳ್ಳಿ ಪದಕ, ಸೀನಿಯರ್ ನ್ಯಾಷನಲ್ ದಕ್ಷಿಣ ವಲಯದಲ್ಲಿ ಚಿನ್ನದ ಪದಕ, ಜ್ಯೂನಿಯರ್ ನ್ಯಾಷನಲ್‌ನಲ್ಲಿ ತೃತೀಯ ಸ್ಥಾನ ಗಳಿಸಿರುವುದು ಇವರ ಸಾಧನೆಯ ಪಟ್ಟಿಯಲ್ಲಿ ಸೇರಿದೆ.

ಅವರ ಸಾಧನೆಯನ್ನು ಮೆಚ್ಚಿ ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರೂ ಆದ ಡಾ.ಡಿ ವೀರೇಂದ್ರ ಹೆಗ್ಗಡೆ ಪ್ರಶಂಸಿಸಿ ಗೌರವಿಸಿದ್ದರು.

Click to comment

Leave a Reply

Your email address will not be published. Required fields are marked *

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

BELTHANGADY

ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾ*ವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ

Published

on

ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮ‌ಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ.

bison

ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!

ಈ ಕೆರೆಗೆ ಸುತ್ತ ಕಾಂಕ್ರೀಟ್ ರಿಂಗ್ ಅಳವಡಿಸಿದ್ದು ನೀರು ಕುಡಿಯಲು ಬಂದ ಕಾಡುಕೋಣ ಮೂರ್ನಾಲ್ಕು ದಿನಗಳ ಹಿಂದೆಯೇ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಹೆಚ್ಚೂ ಕಮ್ಮಿ 10 ಕ್ವಿಂಟಾಲ್ ತೂಕ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಕೊಳೆತು ವಾಸನೆ ಬೀರುತ್ತಿತ್ತು. ಶೌರ್ಯ ವಿಪತ್ತು ತಂಡಕ್ಕೆ ಬಂದ ಮಾಹಿತಿಯಂತೆ ಉಜಿರೆ- ಬೆಳಾಲು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು, ಮುಳುಗು ಪರಿಣತ ಹರೀಶ ಕೂಡುಗೆ, ಮುಹಮ್ಮದ್ ಶರೀಫ್ ಬೆಳಾಲು, ಅವಿನಾಶ್ ಭಿಡೆ ಅರಸಿಮನಕ್ಕಿ, ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಅನಿಲ್ ಚಾರ್ಮಾಡಿ, ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ಧರ್ಮಸ್ಥಳ, ನಳಿನ್ ಕುಮಾರ್ ಧರ್ಮಸ್ಥಳ ಮೊದಲಾದವರು ಸಾರ್ವಜನಿಕರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಕಾಡುಕೋಣದ ಕಳೇಬರವನ್ನು ಮೇಲೆತ್ತಿದ್ದಾರೆ. ಬಳಿಕ ಪಶುವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ನಡೆಸಿದ್ದು, ತೋಟದಲ್ಲೇ ಹೊಂಡ ತೋಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.

Continue Reading

LATEST NEWS

Trending