Connect with us

LATEST NEWS

ಸುರತ್ಕಲ್ ಟೋಲ್‌ ಗೇಟ್‌ನಲ್ಲಿ ಸ್ಥಳೀಯರಿಗೆ ಫಾಸ್ಟ್ಯಾಗ್‌ ಖಡ್ಡಾಯ ಬೇಡ..!

Published

on

ಸುರತ್ಕಲ್ ಟೋಲ್‌ ಗೇಟ್‌ನಲ್ಲಿ ಸ್ಥಳೀಯರಿಗೆ ಫಾಸ್ಟ್ಯಾಗ್‌ ಖಡ್ಡಾಯ ಬೇಡ!ಸ್ಥಳೀಯರ ಆಗ್ರಹ 

Natives don’t need fastag at Surathkal toll gate!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಟೋಲ್‍ನಲ್ಲಿ ಫಾಸ್ಟ್ ಟ್ಯಾಗ್ ಕಡ್ಡಾಯ ಹೆಸರಿನಲ್ಲಿ ಸ್ಥಳೀಯ ವಾಹನ ಸವಾರರಿಂದ ಟೋಲ್ ವಸೂಲು ಮಾಡಬಾರದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುರತ್ಕಲ್‌ ಟೋಲ್‌ಗೇಟ್‌ ಈಗಾಗಲೇ ತಾತ್ಕಾಲಿಕ ನೆಲೆಯಲ್ಲಿ ಕಾರ್ಯಾಚರಿಸುತ್ತಿರುವ ಟೋಲ್‌ಗೇಟ್‌ ಆಗಿದ್ದು, ಇದನ್ನು ರದ್ದುಪಡಿಸಬೇಕೆನ್ನುವುದು ನಮ್ಮ ಆಗ್ರಹವಾಗಿತ್ತು. ಆದರೂ ಅದನ್ನು ಮುಂದುರಿಸಿಕೊಂಡು ಬರಲಾಗಿದೆ. ಈ ನಡುವೆ ಫೆ.15ರಿಂದ ರಾಜ್ಯದ ಎಲ್ಲ ಟೋಲ್ ಗೇಟ್‍ಗಳಲ್ಲಿ ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡಲಾಗಿದ್ದು,

ಸುರತ್ಕಲ್‌ ಟೋಲ್‌ಗೇಟ್‌ನಲ್ಲಿ ಸ್ಥಳೀಯರಿಗೆ ಇದರಿಂದ ವಿನಾಯಿತಿ ನೀಡಬೇಕು. ಈ ಹಿಂದಿನ ವ್ಯವಸ್ಥೆಯನ್ನೇ ಮುಂದುವರಿಸಬೇಕು ಎಂದು ಮುನೀರ್ ಆಗ್ರಹಿಸಿದರು.

ಸುರತ್ಕಲ್‌ ಟೋಲ್‌ಗೇಟ್‌ ಹೆಜಮಾಡಿ ಟೋಲ್ ಗೇಟ್ ಜೊತೆ  ವಿಲೀನ  ಮಾಡಬೇಕು ಎನ್ನುವ ನಿರ್ಧಾರವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಹಿಂದೆಯೇ ಮಾಡಿತ್ತು.ಅದಕ್ಕೆ ಸರಕಾರ ಕೂಡ ಅನುಮೋದನೆ ನೀಡಿತ್ತು. ಸುರತ್ಕಲ್‌ ಟೋಲ್‌ಗೇಟ್‌ ರದ್ದುಪಡಿಸಬೇಕೆನ್ನುವುದೇ ನಮ್ಮ ಆಗ್ರಹ. ಅದನ್ನೂ ಮೀರಿ ಸ್ಥಳೀಯರಿಂದ ಟೋಲ್‌ ವಸೂಲಿ ಮಾಡಿದರೆ ನಾವು ಹೊರಾಟಕ್ಕೆ ಇಳಿಯುವುದು ಖಂಡಿತಾ ಎಂದು ಎಚ್ಚರಿಸಿದರು.

Click to comment

Leave a Reply

Your email address will not be published. Required fields are marked *

LATEST NEWS

60ನೇ ವಯಸ್ಸಿಗೆ “ಮಿಸ್ ಯುನಿವರ್ಸ್” ಕಿರೀಟ ಮುಡಿಗೇರಿಸಿಕೊಂಡ ಈಕೆ ಯಾರು ಗೊತ್ತಾ? ಈಕೆಯ ಸೌಂದರ್ಯಕ್ಕೆ ಬೆರಗಾದ್ರು ಜನ..!!

Published

on

ಹೆಚ್ಚಾಗಿ ಮಿಸ್​ ವರ್ಲ್ಡ್​​​, ಮಿಸ್​​ ಯುನಿವರ್ಸ್ ಇನ್ನೂ ಮುಂತಾದ ಸೌಂದರ್ಯ ಸ್ಪರ್ಧೆಯಲ್ಲಿ ಹದಿಹರೆಯದ ಸುಂದರಿಯರೇ ಭಾಗವಹಿಸುತ್ತಾರೆ. ಆದರೆ ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ ಎಂಬ ಮಹಿಳೆ ತನ್ನ 60ನೇ ವಯಸ್ಸಿನಲ್ಲಿ ಮಿಸ್ ಯುನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾಳೆ.

ವೃತ್ತಿಯಲ್ಲಿ ವಕೀಲ ಮತ್ತು ಪತ್ರಕರ್ತೆಯಾಗಿರೋ ಅಲೆಜಾಂಡ್ರಾ ಅವರು 60ನೇ ವಯಸ್ಸಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಮೊದಲ ಮಹಿಳೆ ಎಂಬ ದಾಖಲೆ ಪಡೆದುಕೊಂಡಿದ್ದಾರೆ. ಅರ್ಜೆಂಟೀನಾದ ಬ್ಯೂನಸ್ ಐರಿಸ್​​ನ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್‌ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ ಗೆದ್ದು ಇಡೀ ಜಗತ್ತೆ ತಿರುಗಿ ನೋಡುವಂತೆ ಮಾಡಿದ್ದಾಳೆ.

ಇನ್ನೂ 60ನೇ ವಯಸ್ಸಿನಲ್ಲಿಯೂ ಈಕೆಯ ಸೌಂದರ್ಯ ಕಂಡು ನೆಟ್ಟಿಗರು ಫುಲ್​ ಶಾಕ್​ ಆಗಿದ್ದಾರೆ. ಅನೇಕರು ಆಕೆ ಮಿಸ್​​ ಯುನಿವರ್ಸ್​​ ಕಿರೀಟ ಪಡೆದುಕೊಂಡಿರೋದಕ್ಕೆ ಶುಭಾಶಯ ತಿಳಿಸುತ್ತಿದ್ದು ಇನ್ನೂ ಕೆಲವರು ಕಮೆಂಟ್ಸ್‌ಗಳನ್ನು ಹಾಕುತ್ತಿದ್ದಾರೆ.

Continue Reading

LATEST NEWS

ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

Published

on

ಪುತ್ತೂರು :  ಬೊಳ್ವಾರ್ ಬಸ್ ತಂಗುದಾಣದ ಪಕ್ಕದಲ್ಲಿದ್ದ ಬೃಹದಾಕಾರದ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಹಲವು ವಾಹನಗಳು ಜಖಂಗೊಂಡಿವೆ. ವಾಹನ ಮಾಲಕರು ವಾಹನಗಳನ್ನು ಹೊರತೆಗೆಯಲು ಹರಸಾಹಸ ಪಡುವಂತಾಯಿತು.

ಬಿದ್ದ ಮರದಲ್ಲಿದ್ದ ಮಾವಿನಕಾಯಿಗಳನ್ನು ಕೊಯ್ಯಲು ಜನ ಮುಗಿಬಿದ್ದ ಘಟನೆಯೂ ನಡೆಯಿತು. ಬಳಿಕ ಸ್ಥಳೀಯರು ಮರದ ಕೊಂಬೆಗಳನ್ನು ಕಡಿದು ತೆರವುಗೊಳಿಸಿದರು.

ಮರ ಬೀಳುವ ಸಂದರ್ಭ ಯಾರೂ ಇಲ್ಲದ ಪರಿಣಾಮ ಭಾರೀ ದುರಂತವೊಂದು ತಪ್ಪಿದೆ.

ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!

Continue Reading

LATEST NEWS

ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!

Published

on

ಕುಂದಾಪುರ: ಇನೋವಾ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಡೆದಿದೆ. ಬೆಂಗಳೂರಿನ ಫೋನ್ ಪೇ ಖಾಸಗಿ ಕಂಪೆನಿಯ ಉದ್ಯೋಗಿ 25 ವರ್ಷದ ಕೀರ್ತಿ ಮೃತ ಯುವತಿ. ಘಟನೆಯಲ್ಲಿ ಬೆಂಗಳೂರು ಮೂಲದ ವಿಘ್ನೇಶ್ (28), ಚೇತನ್ (28), ಐಶ್ವರ್ಯಾ (27), ಲತಾ (26) ಗಂಭೀರವಾಗಿ ಗಾಯಗೊಂಡಿದ್ದಾರೆ.

ಮುಂದೆ ಓದಿ..; ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

ಧರ್ಮಸ್ಥಳದಿಂದ ಮುರುಡೇಶ್ವರಕ್ಕೆ ಹೊರಟಿದ್ದ ಇನೋವಾ ಕಾರು ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಿಯಂತ್ರಣ ತಪ್ಪಿ ಮರದ ದಿಮ್ಮಿಗೆ ಡಿಕ್ಕಿ ಹೊಡೆದಿದೆ. ಬಳಿಕ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಸ್ನೇಹಿತರು ಖಾಸಗಿ ಕಂಪೆನಿಯ ಉದ್ಯೋಗಿಗಳಾಗಿದ್ದು, ಎಲ್ಲರೂ ಒಟ್ಟಾಗಿ ಮುರ್ಡೇಶ್ವರ, ಗೋಕರ್ಣಕ್ಕೆ ವೀಕೆಂಡ್ ಪ್ರವಾಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

accident

Continue Reading

LATEST NEWS

Trending